Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಲ್ಲಿರುವ ಜಪಾನ್ ಇಸ್ರೇಲ್ ಹಾಗೂ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದಾರೆ. ಇಮೇಲ್‌ನಲ್ಲಿ ಕಚೇರಿಗಳಲ್ಲಿ RDX ಸೇರಿದಂತೆ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಚೇರಿ ಆವರಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಘಟನೆಯ ನಂತರ ಈ ಇಮೇಲ್‌ಗಳನ್ನು ಸೈಬರ್ ಕ್ರೈಂ ವಿಭಾಗಕ್ಕೆ ಕಳುಹಿಸಿ ತನಿಖೆ ಆರಂಭಿಸಲಾಗಿದೆ. ಕೆಲವು ಇಮೇಲ್‌ಗಳು ಒಂದೇ ಐಡಿಯಿಂದ ಕಳುಹಿಸಲ್ಪಟ್ಟಿರುವುದರಿಂದ ಇದರ ಹಿಂದೆ ಒಬ್ಬ ವ್ಯಕ್ತಿ ಅಥವಾ ಸಂಘಟಿತ ಗುಂಪಿನ ಕೈವಾಡವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಹೌದು ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಬೆಂಗಳೂರಿನ ಬಸವ ಭವನದಲ್ಲಿರುವ ಆಯೋಗದ ಕಚೇರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದ್ದು, 14 ಸೈನೈಡ್ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಮಧ್ಯಾಹ್ನ 1 ಗಂಟೆ ಒಳಗೆ ಬಾಂಬ್ ಸ್ಪೋಟವಾಗುತ್ತೆ ಎಂದು ಬೆದರಿಸಿದ್ದಾರೆ. ಅಡ್ಮಿನಿಸ್ಟ್ರೇಷನ್ ಆಫೀಸರ್ ಈ ಕುರಿತು ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಷ್ಟೇ ಕಠಿಣವಾದ ನಿಮ್ಮ ಕ್ರಮ ಕೈಗೊಂಡರು ಸಹ ಕೈದಿಗಳಿಗೆ ಗಾಂಜಾ ಸಪ್ಲೈ ಆಗುವುದು ನಿಲ್ಲುತ್ತಿಲ್ಲ. ಇದೀಗ ಜೈಲಿನ ವಾರ್ಡನ್ ಒಬ್ಬ ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ ಮಾಡುತಿದ್ದು ಇದೀಗಜೈಲಾಧಿಕಾರಿಗಳು ಆತನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳಉಡುಪಿನಲ್ಲಿ ಹಣ ಮತ್ತು ಕಪ್ಪು ಟೇಪ್‌ನಿಂದ ಸುತ್ತಿದ ಒಂದು ಪೊಟ್ಟಣ ಪತ್ತೆಯಾಯಿತು. ಅದನ್ನು ಪರಿಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಪ್ರಕಾಶ್ ಗಾವಡೆ ಕೆಎಸ್‌ಐಎಸ್‌ಎಫ್ ಸಿಬ್ಬಂದಿಯ ಕಣ್ಣು ತಪ್ಪಿಸಿ ಗಾಂಜಾ ಜೈಲಿನೊಳಗೆ ಸಾಗಿಸಲು ಯತ್ನಿಸುತ್ತಿದ್ದ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಳಿಕ ಅವನನ್ನು ವಶಕ್ಕೆ ಪಡೆದ ಜೈಲು ಅಧಿಕಾರಿಗಳು…
ಟೆಹ್ರಾನ್ : ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮುಜ್ತಬಾ ಖಮೇನಿ ಅವರ ಸುತ್ತ ಈಗ ಅಭೇದ್ಯ ಕೋಟೆಯೊಂದು ನಿರ್ಮಾಣವಾಗಿದೆ. ಇರಾನ್‌ನ ಅತ್ಯಂತ ಕ್ರೂರ ಮತ್ತು ಶಕ್ತಿಶಾಲಿ ಪಡೆಯೆಂದು ಕರೆಯಲ್ಪಡುವ ‘NOPO’ (ನೋಪೋ) ಪಡೆಯ ಕಾವಲು ಈಗ ಮುಜ್ತಬಾ ಅವರನ್ನ ಸುತ್ತುವರೆದಿದೆ. ಇದು ಇರಾನ್‌ನಲ್ಲಿ ಮುಂದಿನ ಅಧಿಕಾರ ಬದಲಾವಣೆಯ ದಿಕ್ಸೂಚಿಯೇ ಎಂಬ ಚರ್ಚೆ ಜಾಗತಿಕ ಮಟ್ಟದಲ್ಲಿ ಶುರುವಾಗಿದೆ. ಏನಿದು NOPO ರಹಸ್ಯ? NOPO ಅಂದರೆ ‘ನಿರುಯೆ ವಿಝೆ-ಯೆ ಪಾಸ್ಬನ್-ಎ ವೆಲಾಯತ್’ (Niruye Vizhe-ye Pasban-e Velayat). ಇದನ್ನು ಇಂಗ್ಲಿಷ್‌ನಲ್ಲಿ “Special Force of the Guardians of the Velayat” ಎಂದು ಕರೆಯಲಾಗುತ್ತದೆ. ಇವರನ್ನು ಸಾಮಾನ್ಯವಾಗಿ ಇರಾನ್‌ನ ‘ಬ್ಲ್ಯಾಕ್ ಸ್ಕ್ವಾಡ್’ (Black Squad) ಎಂದು ಗುರುತಿಸಲಾಗುತ್ತದೆ. * ಯಮದೂತರ ಕಾವಲು: ಇವರು ಸಂಪೂರ್ಣ ಕಪ್ಪು ಉಡುಪು ಧರಿಸಿ, ಮುಖವಾಡ ತೊಟ್ಟು ಕಾರ್ಯಾಚರಣೆ ನಡೆಸುತ್ತಾರೆ. ಇವರ ತರಬೇತಿ ಎಷ್ಟು ಕಠಿಣವಾಗಿರುತ್ತದೆ ಎಂದರೆ, ಇವರನ್ನು ಎದುರಿಸುವುದು ಸಾವಿಗೆ ಸವಾಲು ಹಾಕಿದಂತೆ…
ಬೀದರ್ : ವಿದ್ಯಾರ್ಥಿನಿಗೆ ಆಕೆಯ ಸಹಪಾಠಿಗೆ ನನ್ನನ್ನು ಪ್ರೀತಿಸು ಅಂತ ಕಿರುಕುಳ ನೀಡಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಶಾಲಾ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಕಾಮಗಾರಿ ಒಂದಕ್ಕೆ ಗುತ್ತಿಗೆದಾರನ ಬಳಿ 5 ಲಕ್ಷ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಉಲಮಾಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಜಾಮೀನು ಕೋರಿ ಚಂದ್ರು ಲಮಾಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೇ, 2 ಲಕ್ಷ ರು.ಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ, ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಯಗಳಿಗೆ ನೇರ ಅಥಾವ ಪರೋಕ್ಷವಾಗಿ ಸಂಪರ್ಕಿಸಬಾರದು. ಅವರ ಮೇಲೆ ಪ್ರಭಾವ ಬೀರುವುದಕ್ಕೆ ಮುಂದಾಗಬಾರದು. ಸಾಕ್ಷ್ಯಗಳ ನಾಶಕ್ಕೆ ಪ್ರಯತ್ನಿಸಬಾರದು. ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆಯದೇ ದೇಶ ತೊರೆಯಬಾರದು, ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಸ್ನೇಹಿತನ ಜೊತೆ ಎಣ್ಣೆ ಪಾರ್ಟಿಗೆ ಹೋದಾಗ ಯುವಕನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ದೊಡ್ಡಕೆರೆ ಬಳಿ ಈ ಒಂದು ಕೊಲೆ ನಡೆದಿದೆ ಕತ್ತು ಸೀಳಿದ ರೀತಿಯಲ್ಲಿ ನಂಜುಂಡಸ್ವಾಮಿ (22) ಎನ್ನುವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಸ್ನೇಹಿತನ ಜೊತೆಗೆ ನಂಜುಂಡಸ್ವಾಮಿ ಎಣ್ಣೆ ಪಾರ್ಟಿಗೆ ತೆರಳಿದ್ದಾನೆ ಗಾಂಜಾ ಮತ್ತಿನಲ್ಲಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಓರ್ವವನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಭಂದ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೆ ಸಾವು!
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ಕೃತಿಕ (21) ಸಾವನಪ್ಪಿದ್ದು, ಆಕೆಯ ಜೊತೆ ತೆರಳುತ್ತಿದ್ದ ಮತ್ತೋರ್ವ ಯುವತಿ ಹಂಸ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಆರ್ ಆರ್ ಮೆಡಿಕಲ್ ಕಾಲೇಜಿನಲ್ಲಿ ಕೃತಿಕಾ ವ್ಯಾಸಂಗ ಮಾಡುತ್ತಿದ್ದಳು. ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಇಬ್ಬರು ಬಿದ್ದಿದ್ದಾರೆ.ಈ ವೇಳೆ ಕೃತಿಕಾ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಂಸಗೆ ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೀದರ್ : ಬೀದರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಸಂತಪುರಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರಕ್ಕೆ ಸಾಗಿಸುವಾಗ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಮಂಡ್ಯ : ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಕೊಲೆಯಾದವರು. ಸಿದ್ದಲಿಂಗಪ್ಪನ ಪತ್ನಿ ಶಾಲಿನಿ (32), ಮರಳಗಾಲ ಗ್ರಾಮದ ಹರೀಶ (33), ಸಂತೋಷ್ ಕುಮಾರ್ (29) ಮತ್ತು ಗಣೇಶ ಬಿ.ಆರ್. ಬಿನ್ ಲೇಟ್ ರಾಮಸಿದ್ದು (29) ಕೊಲೆ ಪ್ರಕರಣದ ಬಂಧಿತ ಆರೋಪಿಗಳಾಗಿದ್ದಾರೆ. ಮಾ.6ರಂದು ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರು ಕೆ.ಶೆಟ್ಟಹಳ್ಳಿ ಗಣಪತಿ ದೇವಸ್ಥಾನಕ್ಕೆ ಪೂಜೆಗೆ ಹೋಗಿ ರಾತ್ರಿ ಮನೆಗೆ ಬಾರದೇ ಇದ್ದಾಗ ಮತ್ತು ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ರಾತ್ರಿ ಸಿಡಿಎಸ್ ಕಾಲುವೆಯ ತೂಬಿನ ಹತ್ತಿರದ ರಸ್ತೆಯಲ್ಲಿ ಆರ್ಚಕ ಸಿದ್ದಲಿಂಗಪ್ಪನ ಚಪ್ಪಲಿ ಮತ್ತು ಪಕ್ಕದ ಹುಲ್ಲಿನ ಮೇಲೆ ರಕ್ತ ಚೆಲ್ಲಿದ್ದು, ಅಕ್ಕಪಕ್ಕದಲ್ಲಿ ಅರ್ಚಕ ಧರಿಸುತ್ತಿದ್ದ ರುದ್ರಾಕ್ಷಿಮಣಿ ಸ್ಪಟಿಕಮಣಿ ಸರ, ಅದರಲ್ಲಿದ್ದ ಡಾಲರ್‌ಗಳು ಬಿದ್ದಿದ್ದವು. ಶಾಲಿನಿ ಹಾಗೂ…














