Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿರುದ್ಧ ಹೀನಾಯವಾಗಿ ಸೋತಿದ್ದಾರೆ. ಇದೀಗ ಅವರ ವಿರುದ್ಧ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ನನ್ನು ಕಾಂಗ್ರೆಸ್ ಕಾರ್ಯಕರ್ತರು ಹೊತ್ತು ಸಂಭ್ರಮಾಚರಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಹಾಗೂ ಎನ್.ಡಿ.ಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಇದೀಗ ಫಲಿತಾಂಶ ಹೊರ ಬಿದ್ದಿದ್ದು ಶ್ರೇಯಸ್ ಪಟೇಲ್ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ಮಾಜಿ ಕಾರ್ ಚಾಲಕ ಕಾರ್ತಿಕ್ ಹಾಗೂ ಪುಟ್ಟರಾಜು ಅವರೊಂದಿಗೆ ಸಂಭ್ರಮಾಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಅತ್ಯಂತ ಜಿದ್ದಾಜಿದ್ದಿನ ಕ್ಷೇತ್ರ ಎಂದರೆ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾಗಿತ್ತು.ಇದೀಗ ಈ ಒಂದು ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರ ಬಿದ್ದಿದ್ದು, ವೈದ್ಯರಾಗಿರುವ ಡಾ. ಸಿಎನ್ ಮಂಜುನಾಥ್ ಅವರು ಭಾರಿ ಅಂತರದಿಂದ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಿಕೆ ಸುರೇಶ್ ಅವರು ಹ್ಯಾಟ್ರಿಕ್ ಗೆಲುವಿನ ಬಳಿಕ ಇದೀಗ 4ನೇ ಬಾರಿ ಸೋತಿದ್ದಾರೆ. ಫಲಿತಾಂಶ ಹೊರಬೀಳುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ಗೆಲುವು ಖಚಿತವಾಗುತ್ತಿದ್ದಂತೆಯೇ ಸುರೇಶ್ ಪ್ರತಿಕ್ರಿಯೆ ನೀಡಿ, ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ.ಸೋಲು ಗೆಲುವನ್ನು ಸಮಾನವಾಗಿ…
ನವದೆಹಲಿ : ಲೋಕಸಭೆ ಚುನಾವಣೆ ಪ್ರಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಬಾರಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದರು. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆಯದೇ ಇದೀಗ ನಿರಾಸೆ ಅನುಭವಿಸಿದೆ. ಈ ಒಂದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ರೀಚ್ ಆಗದ ಹಿನ್ನಲೆಯಲ್ಲಿ ಮುಂದಿನ ಸರ್ಕಾರದ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಹೌದು ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಂದ್ರಬಾಬು ನಾಯ್ದು ತಾವು ಎನ್‌ಡಿಎ ಭಾಗವಾಗಿಯೇ ಇರುವುದಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ವರದಿ ಮಾಡಿದೆ.
ಬೆಂಗಳೂರು : ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ ಹತ್ತು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ವಿಶ್ವವಿದ್ಯಾಲಯದ ಬಿ ಸಿ ಎಂ ಹಾಸ್ಟೆಲ್ ನ ವಿದ್ಯಾರ್ಥಿಗಳು ಇದೀಗ ಆಹಾರ ಸೇವಿಸಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಇಂದು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಈ ಒಂದು ಹಾಸ್ಟೆಲ್ ಒಳಪಡುತ್ತದೆ. ಇವಳೇ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಊಟ ಸರಿ ಇಲ್ಲವೆಂದು ಆರೋಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದಾರೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾಗಿದ್ದಾರೆ.ಜ್ಞಾನಭಾರತಿ ಠಾಣೆ ಪೋಲಿಸರು ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ ನಂತರ ಸಂಚಾರ ಸಹ ಸ್ಥಿತಿಗೆ ಮರಳಿತು.
ಬೆಂಗಳೂರು : ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರಿನ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆಗೊಳಿಸಿ ಬಿಗ್ ರಿಲೀಫ್ ನೀಡಿದೆ. ಹೌದು 2014ರ ಮಾರ್ಚ್‍ನಲ್ಲಿ, 24 ಜನರ ವಿರುದ್ಧ ಮನಿ ಲಾಂಡರಿಂಗ್ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಐಡಿಬಿಯ 360 ಎಕರೆಯ ಡಿನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಇ.ಡಿ ಪ್ರಕರಣ ದಾಖಲಿಸಿತ್ತು. ಖಾಸಗಿ ಕಂಪೆನಿ ಮುಖಾಂತರ ಶೋಭಾ ಕರಂದ್ಲಾಜೆ ಅವರ ಖಾತೆಗೆ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಒಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 24ನೇ ಆರೋಪಿಯಾಗಿದ್ದ ಅವರು, ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ. ಪ್ರಕರಣದಿಂದ ಬಿಡುಗಡೆಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸಹ ಸೇರಿದ್ದಾರೆ. ಶೋಭಾ ಕರಂದ್ಲಾಜೆಯವರ ವಿರುದ್ಧ 44 ಕೋಟಿ ರೂ.ಗಳ ಹಗರಣದ…
ಮೈಸೂರು : ತನ್ನದಲ್ಲದ ತಪ್ಪಿಗೆ ಮನನೊಂದು ಕಳ್ಳತನ ಆರೋಪ ಹೊರೆಸಿದ್ದಾರೆಂದು ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಹೌದು ಮೈಸೂರು ಜಿಲ್ಲೆಯ ನಂಜನಗೂಡು ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲ್ಮಲಿ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡಾಗಿ ಕಾರ್ಯನಿರ್ವಹಿಸುತ್ತಿದ್ದ ನಂಜೇಶ್ ಎಂಬಾತ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ ಶರಣಾಗಿದ್ದಾನೆ. ನಂಜೇಶ್ ನಂಜನಗೂಡಿನ ಮಹದೇವ ನಗರದ ನಿವಾಸಿ ಎಂದು ಹೇಳಲಾಗುತ್ತಿದೆ. ನಂಜೇಶ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ನಂಜೇಶ್ ಸೆಕ್ಯೂರಿಟಿ ಗಾರ್ಡಾಗಿ ಕೆಲಸ ಮಾಡುತ್ತಿದ್ದ ಫ್ಯಾಕ್ಟರಿ ಆವರಣದಲ್ಲಿ ಇದೀಗ ನೇಣಿಗೆ ಶರಣಾಗಿದ್ದಾನೆ. ಘಟನೆ ಕುರಿತಂತೆ ನಂಜನಗೂಡಿನ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ದೂ ಪೊಲೀಸರು ತನಿಖೆ ನಡೆಸಿದ್ದಾರೆ.
ಬೆಂಗಳೂರು : ರಾಜ್ಯಕ್ಕೆ ನೈರುತ್ಯ ಮಾನ್ಸೂನ್ ಪ್ರವೇಶಿಸಿದ್ದು, ಮುಂಗಾರು ಮಾರುತಗಳು ರಾಜ್ಯದ ಬಹುತೇಕ ಜಿಲ್ಲೆಗಳನ್ನು ಆವರಿಸಿದ್ದು ಇದೀಗ ನಿರಂತರ ಗುಡುಗು ಸಹಿತ ಮಳೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.ಅಲ್ಲದೆ 133 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಂದಿನ 24 ಗಂಟೆಗಳ ಕಾಲ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶವಿರಲಿದೆ. ಬಹುತೇಕ ಕಡೆ ಭಾರೀ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ…
ಚಿಕ್ಕಬಳ್ಳಾಪುರ : ಚುನಾವಣೆಯ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ನಲ್ಲಿ ವ್ಯವಹಾರ ನಡೆಸಿದ್ದು, ಹಾಗೂ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಇದೀಗ ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿರುವ ಡಾ. ಕೆ ಸುಧಾಕರ್ ಅವರ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣೆ ವೇಳೆ ರಾಜ್ಯ ಸರ್ಕಾರದ ಚಿನ್ಹೆಯನ್ನು ಬಳಸಿ ಚುನಾವಣಾ ಆಯುಕ್ತರು ಬೆಂಗಳೂರು ವಿಭಾಗಕ್ಕೆ ಸುಧಾಕರ್ ಅವರು ಪತ್ರ ಬರೆದಿದ್ದರು. ಅಲ್ಲದೆ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಅಡಿ ಇದೀಗ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್ನಲ್ಲಿ ಚುನಾವಣಾ ಆಯುಕ್ತರು ಮತ್ತು ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಕ್ಕೆ ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಕೊಡಗು : ಮೀಸಲಾತಿ ವಿಚಾರದಲ್ಲಿ ಸಿದ್ದರಾಮಯ್ಯ ಮೀನಾಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್ಟಿ ಒಳ ಮೀಸಲಾತಿಗೆ ಕಮಿಷನ್ ರಚನೆ ಮಾಡಬೇಕು. ಈ ಮೂಲಕ ಎಸ್ಟಿ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದು ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಕೊಡಗಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದರಾಮಯ್ಯ ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ, ಆದರೆ ಎಸ್ ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ, ಸಿಎಂ ಬೊಮ್ಮಾಯಿ ಒಳಮೀಸಲಾತಿಗೆ ಆಯೋಗ ರಚಿಸಿದರು, ಈಗಿನ ಸರಕಾರ ಎಲ್ಲಾವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿ ಜನಗಣತಿ ಹೊರಗೆ ಬರಬೇಕು ಎಂದು ನಟ ಚೇತನ್ ಆಗ್ರಹಿಸಿದರು. ಇನ್ನು ಅಲೆಮಾರಿ ಜನಾಂಗದ ಅಭಿವೃದ್ಧಿ ಕುರಿತಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ ನಟ ಚೇತನ್ ಅವರು ಸಿಎಂ ಸಿದ್ದರಾಮಯ್ಯ ಅವರು ಅಹಿಂದ ಪರ ಕೆಲಸ ಮಾಡುತ್ತಿಲ್ಲ ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ ನೀಡಿರುವ ಹಣವನ್ನು ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ನೀಡಿ ಎಂದು ನಟ ಚೇತನ್ ಆಗ್ರಪಡಿಸಿದರು.
ಬೆಂಗಳೂರು : ಕಳೆದ ಮೇ 20 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಜಿ ಆರ್ ಫಾರ್ಮ್ ಹೌಸ್ ನಲ್ಲಿ ರೇವ್ ಪಾರ್ಟಿ ಆಯೋಜನೆ ಮಾಡಿಲಾಗಿತ್ತು. ಈ ಒಂದು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ಒಂದು ಪ್ರಕರಣದಲ್ಲಿ ತೆಲುಗು ನಟಿ ಹೇಮಾ ಕೂಡ ಭಾಗಿಯಾಗಿದ್ದು ಇದೀಗ ಸಿಸಿಬಿ ವಿಚಾರಣೆಗೆ ಹೇಮಾ ಅವರು ಹಾಜರಾಗಿದ್ದು ಅವರನ್ನು ಬಂಧಿಸಿದ್ದಾರೆ ಎಂದು ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಅವರು ಹೊರಗಡೆ ಬಂದು ವಿಡಿಯೋ ರೆಕಾರ್ಡ್ ಮಾಡಿ ಪ್ರಕರಣದ ದಿಕ್ಕನ್ನು ತಪ್ಪಿಸುವ ಪ್ರಯತ್ನ ಮಾಡಿದರು. ಅಲ್ಲದೆ ಸಿಸಿಬಿ ವಿಚಾರಣೆಗೆ ಹಾಜರಾಗಿ ಎಂದು ಎರಡು ಬಾರಿ ನೋಟಿಸ್ ನೀಡಿದರೂ ಕೂಡ ಹೇಮಾ ಅವರು ಅದಕ್ಕೆ ಕ್ಯಾರೆ ಅನ್ನದೆ ವಿಚಾರಣೆಗೆ ಗೈರಾಗಿದ್ದರು. ಇದೀಗ ತೆಲುಗು ನಟಿ ಹೇಮಾಳನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ನಟಿ ಹೇಮಾ ಅವರು ಬುರ್ಖಾಹಾಕಿಕೊಂಡು ವಿಚಾರಣೆಗೆ ಬಂದಿದ್ದರು ಪಾರ್ಟಿಯಲ್ಲಿ ಹೇಮಾ ಡ್ರಗ್ಸ್…













