Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಸಲಾಗುತ್ತದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ. ಈ ಆರೋಪ ಸದ್ಯ ಎಲ್ಲೆಡೆ ಸಂಚಲನ ಮೂಡಿಸಿದೆ. ನಾಯ್ಡು ಹೇಳಿಕೆಗೆ ಇದೀಗ ಕರ್ನಾಟಕ ಹಾಲು ಒಕ್ಕೂಟದ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ ನೀಡಿದ್ದು, ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆಗೂ ನಮ್ಮ ನಂದಿನಿ ಬ್ರ್ಯಾಂಡ್ ಗು ಯಾವುದೇ ರೀತಿಯಾದ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 4 ವರ್ಷಗಳಿಂದ ನಂದಿನಿ ತುಪ್ಪ ಅಲ್ಲಿಗೆ ಹೋಗಿಲ್ಲ. ಈಗ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಮಾಡಲು ಶುರು ಮಾಡಿದ್ದೇವೆ. 2013-18ರ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ರಿಂದ 4 ಮೆಟ್ರಿಕ್ ಟನ್ ತುಪ್ಪ ಸರಬರಾಜು ಮಾಡಿದ್ದೇವೆ ಎಂದು ತಿಳಿಸಿದ್ದಾರೆ. 2019ರಲ್ಲಿ ಸಮ್ಮಿಶ್ರ ಸರ್ಕಾರ ಇತ್ತು. ಆ ವರ್ಷ 17 ಟನ್ ಸರಬರಾಜು ಮಾಡಿದ್ದೇವೆ. 2020-24ರವರೆಗೆ ಟಿಟಿಡಿನವರು ನಂದಿನಿ ತುಪ್ಪವನ್ನ ಸ್ಥಗಿತ ಮಾಡಿದ್ದರು. ಇಲ್ಲಿ…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ರೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೌದು ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ನನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ರಾಜ್ಯಾತೀಥ್ಯ ಸಂಬಂಧ ಒಟ್ಟು ಮೂರು ಕೇಸ್ ದಾಖಲಿಸಲಾಗಿತ್ತು. 2 ಕೇಸ್ ನಲ್ಲಿ ವಿಲ್ಸನ್ ಗಾರ್ಡನ್ ನಾಗ ಆರೋಪಿಯಾಗಿದ್ದಾನೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಇದೀಗ ತೀರ್ಮಾನಿಸಿದ್ದಾರೆ. ಬಳಿಕ ಮಧ್ಯಾಹ್ನ 3:30ಕ್ಕೆ ಜಡ್ಜ್ ಮುಂದೆ ಇಬ್ಬರನ್ನು ಹಾಜರುಪಡಿಸಲಿದ್ದಾರೆ.ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲು ತೀರ್ಮಾನಿಸಲಾಗಿದೆ. ಬೆಂಗಳೂರಿನ 8ನೇ ACMM ನ್ಯಾಯಾಲಯಕ್ಕೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದುಕೊಳ್ಳಲಿದ್ದಾರೆ.
ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಅಡಿಯಲ್ಲಿ ಈಗಾಗಲೇ ಬಿಜೆಪಿ ಶಾಸಕ ಮುನಿರತ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಮಹಿಳೆಯೊಬ್ಬರು ಮುನಿರತ್ನ ನನ್ನ ಮೇಲೆ ಅತ್ಯಾಚಾರ ಎಸಿಗಿದ್ದಾನೆ ಎಂದು ಆರೋಪಿಸಿ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ರಾಮನಗರ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದುಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಹೌದು ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಬಂಧಿಸಲು ರಾಮನಗರ ಪೊಲೀಸರಿಂದ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ರಾಮನಗರ ಪೊಲೀಸರ ತಂಡ ಭೇಟಿ ನೀಡಲಿದೆ. ಕೋರ್ಟ್ ಗೆ ಅರ್ಜಿ ಸಲ್ಲಿಸಿ, ಅತ್ಯಾಚಾರ ಕೇಸಲ್ಲಿ ಹೆಚ್ಚಿನ ವಿಚಾರಣೆಗಾಗಿ ಶಾಸಕ ಮುನಿರತ್ನರನ್ನು ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ ಇಂದು ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಲಿದ್ದು, ಈ ಒಂದು ಪ್ರಕರಣದಲ್ಲಿ ಅವರಿಗೆ ಜಾಮೀನು…
ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ವಿಚಿತ್ರವಾದಂತಹ ಘಟನೆಯೊಂದು ನಡೆದಿದ್ದು, ತಂದೆಯ ಜೊತೆಗೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಒಂದು ಯುವಕನಿಗೆ ಕಚ್ಚಿದೆ. ಈ ವೇಳೆ ಹಾವನ್ನು ಕೊಂದು, ಅದರ ಸಮೇತ ಯುವಕ ಕಿಮ್ಸ್ ಆಸ್ಪತ್ರೆಗೆ ಬಂದಿರುವ ಘಟನೆ ಹುಬ್ಬಳ್ಳಿಯ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ಹೌದು ಇಂಗಳಗಿ ಗ್ರಾಮದ ಫಕೀರಪ್ಪ ಅಣ್ಣಿಗೇರಿ ಹಾವು ಕಡಿತಕ್ಕೊಳಗಾದವ ಎಂದು ತಿಳಿದುಬಂದಿದೆ.ತಂದೆಯೊಂದಿಗೆ ಶೇಂಗಾ ಕೀಳಲು ಹೋಗಿದ್ದಾಗ ಯುವಕನಿಗೆ ಹಾವು ಕಚ್ಚಿದೆ. ಕೂಡಲೇ ಹಾವಿನ ತಲೆ ಜಜ್ಜಿ ಕೊಂದು ಹಾಕಿದ್ದಾನೆ. ನಂತರ ತಂದೆಯ ಜೊತೆ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಎಂದಿನಂತೆ ಹೊಲದಲ್ಲಿ ಕೆಲಸ ಮಾಡುವಾಗ ಮಗನಿಗೆ ಹಾವು ಕಚ್ಚಿತು. ಕೂಡಲೇ ಹಾವನ್ನು ಜಜ್ಜಿ ಹಾಕಿ ಕೊಂದು ಚೀಲದಲ್ಲಿ ಹಾಕಿಕೊಂಡು ಬಂದು ವೈದ್ಯರಿಗೆ ತೋರಿಸಿದ್ದಾನೆ. ಆಗ ವೈದ್ಯರು ಹೊರ ಹಾಕಲು ಹೇಳಿದರು. ಅದು ಚಿಣಗೇನ ಹಾವು. ಮಗ ವೈದ್ಯರಿಗೆ ಹಾವನ್ನು ತೋರಿಸಿ, ಇದೇ ಹಾವು ಕಚ್ಚಿದೆ, ಚಿಕಿತ್ಸೆ ಕೊಡಿ ಎಂದು ದಾಖಲಾಗಿದ್ದಾನೆ ಎಂದು ಫಕ್ಕಿರಪ್ಪ ತಂದೆ ತಿಳಿಸಿದರು.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು ಮೈಸೂರು ಮೂಲದ ಪಿ ಎಸ್ ನಟರಾಜ್ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ನಿಯಮ ಬಾಹಿರವಾಗಿ ಕಾಮಗಾರಿ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಹೌದು ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ಸಲ್ಲಿಕೆಯಾಗಿದ್ದು, ಮೈಸೂರು ಮೂಲದ ಪಿ ಎಸ್ ನಟರಾಜರಿಂದ ಇದೀಗ ದೂರು ದಾಖಲಾಗಿದೆ. ಕಳೆದ ತಿಂಗಳು ಆಗಸ್ಟ್ 27ರಂದು ನಟರಾಜ್ ದೂರು ನೀಡಿದ್ದರು ಎಂದು ಇದೀಗ ತಡವಾಗಿ ಬೆಳಕಿಗೆ ಬಂದಿದೆ. ದೂರಿನಲ್ಲಿ ನಿಯಮ ಬಾಹಿರವಾಗಿ ಕಾಮಗಾರಿ ಕೈಗೊಂಡ ಬಗ್ಗೆ ಆರೋಪ ಮಾಡಿ ದೂರು ನೀಡಿದ್ದರು. ವರುಣ ಹಾಗೂ ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿನ ಕಾಮಗಾರಿಯ ಕುರಿತು, ಸುಮಾರು 387 ಕೋಟಿಯ ಕಾಮಗಾರಿಗಳು ನಿಯಮಬಾಹಿರ ಆಗಿವೆ. ನಿಯಮಬಾಹಿರವಾಗಿ ಮುಡಾ ಕಾಮಗಾರಿಗಳನ್ನು ಕೈಗೊಂಡಿದೆ. ಸಿಎಂ ನಿರ್ದೇಶನದ ಅನ್ವಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಈ ಬಗ್ಗೆ ಸಿಬಿಐ ತನಿಖೆ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಟರಾಜ ಮನವಿ ಮಾಡಿದ್ದಾರೆ. ದೂರು ಸಲ್ಲಿಕೆಯಾದ…
ಬೆಂಗಳೂರು : ಸದ್ಯ ರಾಜ್ಯದಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆ ಆಗುತ್ತಿದ್ದು ಇದೀಗ ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಮುಡಾ ಸಂಬಂಧ ಸಲ್ಲಿಕೆಯಾಗಿರುವ ಮತ್ತೊಂದು ದೂರಿನ ಆಧಾರದಲ್ಲಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು ವಿವರ ಕೋರಿದ್ದಾರೆ. ಹೌದು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್ ನಟರಾಜ್ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ನಟರಾಜ್ ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ. ರಾಜ್ಯಪಾಲರ ಪತ್ರದಲ್ಲೇನಿದೆ? ಮೈಸೂರಿನ ಪಿಎಸ್ ನಳರಾಜ್ ಎಂಬವರು ದಿನಾಂಕ 27-08-2024 ರಂದು ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದ್ದು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿರುತ್ತಾರೆ. ಇದರಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಇಂದು ಹೈಕೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಪ್ರಜ್ವಲ್ ಪರ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ತಮ್ಮ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಅತ್ಯಾಚಾರ ಆರೋಪ ಸತ್ಯಕ್ಕೆ ದೂರವಾಗಿದೆ. ಘಟನೆ ನಡೆದಿದ್ದರೂ ನಾಲ್ಕು ವರ್ಷಗಳ ಬಳಿಕ ದೂರು ನೀಡಿದ್ದು ಇದೊಂದು ಒಪ್ಪಿತ ಲೈಂಗಿಕ ಕ್ರಿಯೆ ಎಂದರು. ಇಡೀ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದರೆ ಸಂತ್ರಸ್ತೆ ಮಹಿಳೆ ಮೊದಲು ಅರ್ಜಿದಾರರ ತಂದೆ HD ರೇವಣ್ಣ ವಿರುದ್ಧ ಅತ್ಯಾಚಾರ ಆರೋಪದಲ್ಲಿ ದೂರು ದಾಖಲಿಸಿದ್ದರು. ಬಳಿಕ ಅರ್ಜಿದಾರರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಅಷ್ಟಕ್ಕೂ ನಾಲ್ಕು ವರ್ಷಗಳ ಹಿಂದೆ 2020ರಲ್ಲಿ ನಡೆದಿರುವ ಘಟನೆ ಸಂಬಂಧಿಸಿದಂತೆ 2024ರಲ್ಲಿ ದೂರು…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಾದ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಮೂರನೇ ಮಹಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಹೌದು ಇಂದು ಮದ್ಯಾಹ್ನ 1 ಗಂಟೆ ಸುಮಾರಿಯೆ ಎಂ ಎಸ್ ರಾಮಯ್ಯ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಇದೀಗ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ರೋಗಿಗಳನ್ನು ಆಸ್ಪತ್ರೆಯ ಸಿಬ್ಬಂದಿಗಳು ಹೊರಗಡೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ. ಕಾರ್ಡಿಯಾಕ್ ಐಸಿ ವಾರ್ಡ್ ನ ACಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ನರ್ಸ್ಗಳ ಸಮಯ ಪ್ರಜ್ಞೆಯಿಂದ ಸುಮಾರು 7 ರೋಗಿಗಳು ಪಾರು ಮಾಡಿದ್ದಾರೆ. ಈ ವೇಳೆ ನರ್ಸ್ ಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.
ಬೆಂಗಳೂರು : ಸಂಸತ್ತಿನ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಇದೀಗ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಯತ್ನಾಳ್ ವಿರುದ್ಧ FIR ದಾಖಲಾಗಿದೆ. ಹೌದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಇದೀಗ FIR ದಾಖಲಾಗಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರಿನ ಮೇರೆಗೆ FIR ದಾಖಲಾಗಿದೆ. ರಾಹುಲ್ ಗಾಂಧಿ ಜನನದ ಬಗ್ಗೆ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಹಾಗಾಗಿ ಮನೋಹರ ಯತ್ನಾಳ್ ವಿರುದ್ಧ ದೂರು ಸಲ್ಲಿಸಿದ್ದಾರೆ.
ಬೆಂಗಳೂರು : ಕೇವಲ ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಜಗಳಗಳು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವಂತಹ ಅನೇಕ ಘಟನೆಗಳನ್ನು ನೋಡಿದ್ದೇವೆ. ಇದೀಗ ಇಂತಹದ್ದೇ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಕೇವಲ ಬಟ್ಟೆ ಒಗೆಯುವ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬ ಸ್ನೇಹಿತನ ತಲೆಯ ಮೇಲೆ ಕಲ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆನೇಕಲ್ ಭಾಗದ ಸಿದ್ದನಪಾಳ್ಯದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಬಿಹಾರ ಮೂಲದ ಗಯಾ ಜಿಲ್ಲೆ ನಿತೀಶ್ ಕುಮಾರ್ (23) ಎಂದು ತಿಳಿದುಬಂದಿದೆ. ಸಿದ್ದನಪಾಳ್ಯದ ಮದರ್ ಇಂಡಿಯಾ ಎನ್ನುವ ಜೆಸಿಬಿ ಬಿಡಿ ಭಾಗಗಳನ್ನು ತಯಾರಿಸುವ ಕಂಪನಿಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಎಂದು ಹೇಳಲಾಗುತ್ತಿದ್ದು, ಇನ್ನೊಬ್ಬ ಸ್ನೇಹಿತ ಸೋಮನಾಥ ರಾತ್ರಿ ಎಲ್ಲರೂ ಮಲಗಿದ್ದಂತಹ ಸಂದರ್ಭದಲ್ಲಿ ಪಕ್ಕದಲ್ಲೇ ಇದ್ದಂತಹ ಕಲ್ಲನ್ನು ಮಲಗಿದ್ದ ನಿತೀಶ್ ಕುಮಾರ್ ತಲೆ ಮೇಲೆ ಎತ್ತಿ ಹಾಕಿ ಪರಾರಿಯಾಗಿದ್ದ. ಭಾನುವಾರ ದಿವಸ ಕೊಲೆಯಾದ ವ್ಯಕ್ತಿ ಹಾಗೂ ಕೊಲೆ ಮಾಡಿದ ವ್ಯಕ್ತಿಗೆ ಬಟ್ಟೆ ಒಗೆಯುವ ವಿಚಾರಕ್ಕೆ ವಾಗ್ವಾದವಾಗಿದೆ. ರಾತ್ರಿ…













