Author: kannadanewsnow05

ಬೆಂಗಳೂರು : ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ ನಡೆಸಲು ಆದೇಶಿಸಲಾಗಿದೆ. ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿದೆ.ರಾಜ್ಯದ ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ನಿರ್ದೇಶನದ ಪ್ರಕಾರ, ಶಾಲೆಗಳು ಈಗ ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45 ರವರೆಗೆ ಕಾರ್ಯನಿರ್ವಹಿಸುತ್ತವೆ. ಇದು ರಂಜಾನ್ ಆರಂಭದಿಂದ ಮಾರ್ಚ್ 20 ರವರೆಗೆ ಜಾರಿಯಲ್ಲಿರುತ್ತದೆ ಎನ್ನಲಾಗಿದೆ. 2002ರಲ್ಲಿ ಹೊರಡಿಸಲಾದ ಹಿಂದಿನ ಸರ್ಕಾರಿ ಆದೇಶವನ್ನು ಪರಿಶೀಲಿಸಿದ ನಂತರ ಮತ್ತು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಾತಿನಿಧ್ಯಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನಿಗದಿತ ಪಠ್ಯಕ್ರಮ ಪೂರ್ಣಗೊಳಿಸಲು ಇತರ ಕೆಲಸದ ದಿನಗಳು ಅಥವಾ ರಜಾದಿನಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅವಕಾಶವಿದೆ ಎಂದು…

Read More

ಬೆಂಗಳೂರು : ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇದರಲ್ಲಿ ಸರ್ಕಾರ ಅಥವಾ ಇಲಾಖೆಯ ಯಾವುದೇ ತಪ್ಪಿಲ್ಲ. ಗೃಹಲಕ್ಷ್ಮೀ ಯೋಜನೆ ನಿರಂತರ ಪ್ರಕ್ರಿಯೆ, ಈಗಲೂ ಅರ್ಜಿ ಸಲ್ಲಿಸಿದವರಿಗೆ ಹಣ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ವಿಧಾನ ಪರಿಷತ್‌ ಜಿಎಸ್‌ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂಬ ಕಾರಣದಿಂದ ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, ಉಳಿದವರ ಸಮಸ್ಯೆ ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು. ಬಿಜೆಪಿಯ ಪಿ.ಎಚ್.ಪೂಜಾರ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಸುಮಾರು 1.26 ಕೋಟಿ ಗೃಹಲಕ್ಷ್ಮೀ ಫಲಾನುಭವಿಗಳಿದ್ದು, ಕೆಲ ಫಲಾನುಭವಿಗಳು ಕೆಲ ವೊಂದುವ್ಯವಹಾರನಡೆಸುವಾಗಜಿಎಸ್‌ಟಿ, ಆದಾಯತೆರಿಗೆವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮೀ ಯೋಜನೆ ಸಂಬಂಧ ರೂಪಿಸಿರುವ ಸಾಫ್ಟ್‌ವೇರ್‌ನಲ್ಲಿ ಜಿಎಸ್‌ಟಿ, ಆದಾಯ…

Read More

ಬೆಂಗಳೂರು : ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇಟ್ಟಿದ್ದು ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ರಾಜ್ಯ ಸರ್ಕಾರ ಇದೀಗ ಆಡಳಿತಾತ್ಮಕ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರ ಪುರಸ್ಕೃತ ಕಾರ್ಯಕ್ರಮ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಅನುಮೋದನೆ ದೊರಕಿರುವ ರಾಜ್ಯದ 3862 ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕೆಜಿಬಿವಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಂ ಸ್ಥಾಪಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಮಗ್ರ ಶಿಕ್ಷಣ ಕರ್ನಾಟಕದಲ್ಲಿ 2022-23ನೇಸಾಲಿನಲ್ಲಿ 1631 ಹಿರಿಯ ಪ್ರಾಥಮಿಕ ಶಾಲೆ, 2024-25ರಲ್ಲಿ 95 ಶಾಲೆ, 2025-26 1326 & 2, 810 ಪ್ರೌಢ ಶಾಲೆ ಸೇರಿ ಒಟ್ಟಾರೆ 3,862 ಶಾಲೆಗಳಲ್ಲಿ ಪ್ರತಿ ತರ ಗತಿಗೆ 2.4 ಲಕ್ಷ ರು. ಘಟಕ ವೆಚ್ಚದಂತೆ ಒಟ್ಟು 91.54 ಕೋಟಿ ರು. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್‌ರೂಂ ಅನ್ನು ಸ್ಥಾಪಿಸಲು ಸಮಗ್ರ ಶಿಕ್ಷಣ ಇಲಾಖೆ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಕೋರಿದ್ದರು.

Read More

ಬೆಂಗಳೂರು : ಈಗಾಗಲೇ ಹಲವು ರಾಜ್ಯಗಳಲ್ಲಿ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಬಾವಲಿಗಳು, ಹಂದಿಗಳು ಮತ್ತು ಮನುಷ್ಯರಿಂದ ಮನುಷ್ಯರಿಗೆ ಹರಡುವ ಈ ವೈರಸ್‌ನಿಂದ ಮರಣ ಪ್ರಮಾಣ ಹೆಚ್ಚಿರುವ ಕಾರಣ, ಆರೋಗ್ಯ ಇಲಾಖೆ ಸಾರ್ವಜನಿಕರಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೌದು ಮನುಷ್ಯರಿಂದ ಮನುಷ್ಯರಿಗೂ ಕೆಲವವೊಮ್ಮೆ ಇದು ವರ್ಗಾವಣೆ ಆಗಬಹುದು ಎನ್ನಲಾಗಿದೆ. ಅತ್ಯಂತ ಭಯಾನಕ ಅಂಶವೆಂದರೆ ನಿಫಾ ವೈರಸ್ ಸೋಂಕಿತರ ಮರಣ ಪ್ರಮಾಣ ಶೇ. 60-75 ರಷ್ಟಿರುವ ಕಾರಣ, ಈ ವೈರಸ್​​ ರಾಜ್ಯದಲ್ಲಿ ಕಾಲಿಡದಂತೆ ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸಿದೆ. ಶಂಕಿತ ಪ್ರಕರಣಗಳ ಬಗ್ಗೆ ನಿಗಾ ವಹಿಸಲು ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಇನ್ನು ನಿಫಾ ವೈರಸ್​​ನ ರೋಗ ಲಕ್ಷಣಗಲು ತಕ್ಷಣಕ್ಕೆ ಗೋಚರಿಸುವುದಿಲ್ಲ. ಸಾಮಾನ್ಯವಾಗಿ 4 ರಿಂದ 14 ದಿನಗಳಲ್ಲಿ ಇವು ಗಮನಕ್ಕೆ ಬರಲಿದ್ದು, ಆರೋಗ್ಯ ಇಲಾಖೆಯ ಸಲಹೆ ಮತ್ತು ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ. ಸೋಂಕಿತರು ಕಂಡುಬಂದಲ್ಲಿ ಅಂತವರ ಚಿಕಿತ್ಸೆಗೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನಿಫಾ ವೈರಸ್…

Read More

ಬೆಂಗಳೂರು : ಕರ್ನಾಟಕ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮನಾಥ ಹಾಗೂ ನ್ಯಾಯಮೂರ್ತಿ ಎನ್. ವಿ ಅಂಜಾರಿಯ ಪೀಠ ತೀರ್ಪು ನೀಡಿತ್ತು. ಒಂದು ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ. ಕರ್ನಾಟಕ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿಲ್ಲ. ವಾದ ಮಂಡನೆ ವೇಳೆ ಕರ್ನಾಟಕ ಸರ್ಕಾರ ನ್ಯಾಯಾಧಿಕರಣ ರಚನೆ ಬೇಡ ಅಂತ ಹೇಳಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಅಂತ ಹೇಳಿತ್ತು. ಆದರೆ ತಮಿಳುನಾಡು ಸರ್ಕಾರ ನ್ಯಾಯಾಧೀಕರಣ ರಚಿಸುವಂತೆ ವಾದಿಸಿತ್ತು. ಆಗ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರದ ವಾದವನ್ನು ಪುರಸ್ಕರಿಸಿತ್ತು. ಕಳೆದ ಡಿಸೆಂಬರ್ ನಲ್ಲಿ ವಿಚಾರಣೆ ನಡೆಸಿ ತೀರ್ಪನ್ನು ಕಾಯ್ದಿರಿಸಿತ್ತು. ಪೆನ್ನರ್ ನದಿಯ ಉಪನದಿಯಾದ ಮಾರ್ಕಂಡೇಯ ನದಿ, ಕೋಲಾರ ಜಿಲ್ಲೆಯ ಯರಗೋಳ ಬಳಿ ಡ್ಯಾಮ್ ನಿರ್ಮಿಸುತ್ತಿರುವುದನ್ನು ತಮಿಳುನಾಡು ಆಕ್ಷೇಪಿಸಿತ್ತು. ಡ್ಯಾಮ್ ನಿಂದ ನೀರಿನ ಕೊರತೆ ಆಗುತ್ತೆ ಎಂದು ತಮಿಳುನಾಡು ಆಕ್ಷೇಪ ವ್ಯಕ್ತಪಡಿಸಿತ್ತು.

Read More

ಆಂಧ್ರಪ್ರದೇಶ : ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವೈಎಸ್ ಆರ್‌ಪಿಸಿ ನಾಯಕ ಅಂಬಟಿ ರಾಮಬಾಬುಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ ಕೇಳಿ ಬಂದಿದ್ದು ಶನಿವಾರ ತಡರಾತ್ರಿ ಗುಂಟೂರು ಪೊಲೀಸರು ಬಂಧಿಸಿದ ಮಾಜಿ ಸಚಿವ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಅಂಬಟಿ ರಾಂಬಾಬು ಅವರನ್ನು ಭಾನುವಾರ ಸಂಜೆಯವರೆಗೆ ನಲ್ಲಪಾಡು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ರಾಂಬಾಬು ಅವರನ್ನು ಅವರ ನಿವಾಸದಿಂದ ಪೊಲೀಸರು ಬಂಧಿಸಿದರು. ಮಾಜಿ ಸಚಿವರು ಮಾಡಿದ್ದ ಹೇಳಿಕೆಗಳಿಂದ ಕೋಪಗೊಂಡ ಟಿಡಿಪಿ ನಾಯಕರು ಮತ್ತು ಕಾರ್ಯಕರ್ತರು ರಾಂಬಾಬು ಅವರ ಮನೆಯನ್ನು ಮುತ್ತಿಗೆ ಹಾಕಿ, ಕಲ್ಲು…

Read More

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿ ಒಬ್ಬರು ಅಕ್ರಮ ಗಣಿಗಾರಿಕೆ ವಿರುದ್ಧ ಸಿಡಿದೆದ್ದಿದು, ಗಣಿಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ಹೊರಹಾಕಿದ್ದಾರೆ. ಅಕ್ರಮ ಗಣಿಗಾರಿಕೆ ನಿಲ್ಲಿಸಲಿದ್ದಕ್ಕೆ ಮಹಿಳಾ ಅಧಿಕಾರಿ ಆಕ್ರೋಶ ಹೊರಹಾಕಿದ್ದು ಜೆಸಿಬಿ ಕ್ಲಾಸಿಗೆ ಕಲ್ಲು ಎಸೆದು ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಕ್ರಮ ಗಣಿಗಾರಿಕೆ ನಡೀತಾ ಇತ್ತು. ಲ್ಯಾಟರೇಟ್ ಮಣ್ಣು ಗಣಿಗಾರಿಕೆ ಮಾಡುತ್ತಿದ್ದ ವೇಳೆ ರೆಡ್ ಮಾಡಿದ್ದಾರೆ. ಸಿಮೆಂಟ್ ಕಾರ್ಖಾನೆಗೆ ಲಾಟರಿಟ್ ಖನಿಜ ಬಳಕೆ ಮಾಡುತ್ತಿದ್ದರು. ಈ ಒಂದು ಅಕ್ರಮವಾಗಿ ನಡೆಯುತ್ತಿದ್ದ ಲಾಟರಿ ಖನಿಜ ಗಣಿಗಾರಿಕೆ ಮೇಲೆ ಮಹಿಳಾ ಅಧಿಕಾರಿ ರೆಡ್ ಮಾಡಿ ಗಣಿಗಾರಿಕೆ ನಿಲ್ಲಿಸಿದ್ದಕ್ಕೆ ಆಕ್ರೋಶ ಹೊರಹಾಕಿ ಜೆಸಿಬಿ ಗ್ಲಾಸ್ ಗೆ ಕಲ್ಲು ಎಸೆದು ಕಿಡಿ ಕರೆದಿದ್ದಾರೆ. ಅಕ್ರಮ ಗಣಿಗಾರಿಕೆ ನಡೆಸಿದಂತೆ ಹೇಳಿದರು ಕೂಡ ಮಹಿಳಾ ಅಧಿಕಾರಿ ಮನವಿಗೆ ಸ್ಪಂದಿಸದೆ ಗಣಿಗಾರಿಕೆ ಮುಂದುವರಿಸಿದ್ದರು ಈ ಹಿನ್ನೆಲೆ ಆಕ್ರೋಶಗೊಂಡು ಮಹಿಳಾ ಅಧಿಕಾರಿ ಜೆಸಿಬಿಗೆ ಕಲ್ಲು ಹೊಡೆದಿದ್ದಾರೆ.

Read More

ಗದಗ : ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಉತ್ಖನ ಬೆಳೆ ಇದುವರೆಗೂ ಹಲವಾರು ಪುರಾತನ ವಸ್ತುಗಳು ಶಿಲೆಗಳು ಪತ್ತೆಯಾಗಿದ್ದು ಇದೀಗ ರಾಜ್ಯ ಸರ್ಕಾರ ಚಿನ್ನ ಮತ್ತು ನಿಧಿ ಪತ್ತೆಗಾಗಿ ಹೆಲಿಕ್ಯಾಪ್ಟರ್ ಮೂಲಕ ಶೋಧಕ್ಕೆ ಮುಂದಾಗಿದೆ. ಹೌದು ಕಳೆದ 15 ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪುರಾತತ್ವ ಇಲಾಖೆ ಅಧಿಕಾರಿಗಳು ಬಿಡು ಬಿಟ್ಟು ನಿರಂತರವಾಗಿ ಚಿನ್ನ ನಿಧಿ ಶೋಧ ಕಾರ್ಯಕ್ಕೆ ತೊಡಗಿದೆ ಈ ವೇಳೆ ಗ್ರಾಮದಲ್ಲಿ ಹಲವಾರು ಪುರಾತನ ಕಾಲದ ವಸ್ತುಗಳು ಶಿಲೆಗಳು, ಈಶ್ವರ ದೇವಸ್ಥಾನ ಸೇರಿದಂತೆ ಕೆತ್ತನೆಗಳು ಸಹ ಪತ್ತೆಯಾಗಿವೆ. ಇದೀಗ ಸರ್ಕಾರ ಹೆಲಿಕ್ಯಾಪ್ಟರ್ ಮುಖಾಂತರ ಚಿನ್ನ, ನಿಧಿ ಪತ್ತೆಗೆ ಮುಂದಾಗಿದ್ದು ಗ್ರಾಮಸ್ಥರು ಹೆಲಿಕ್ಯಾಪ್ಟರ್ ನೋಡಲು ಮುಗಿಬಿದ್ದಿದ್ದಾರೆ.

Read More

ಚಾಮರಾಜನಗರ : ಫ್ಲೋರೈಡ್ ಮಿಶ್ರಿತ ನೀರು ಕುಡಿದು ಕಿಡ್ನಿ ಡ್ಯಾಮೇಜ್ ಆಗಿದ್ದು, ಚಾಮರಾಜನಗರದಲ್ಲಿ 47 ಜನರು ಕಿಡ್ನಿ ಕಳೆದುಕೊಂಡಿದ್ದಾರೆ. ಕಿಡ್ನಿ ವೈಫಲ್ಯ, ಥೈರಾಯ್ಡ್ ಹೈಪರ್ ಟೆನ್ಷನ್ ಚಿಂತೆ ಕಾಡುತ್ತಿದ್ದು, ಫ್ಲೋರೈಡ್ ಮಿಶ್ರಿ ನೀರಿನಿಂದ ಹಲ್ಲುಗಳೆಲ್ಲ ಹಳದಿ ಬಣ್ಣಕ್ಕೆ ತಿರುಗಿದೆ. ಮಾರ್ಟಳ್ಳಿ, ಸುಳ್ವಾಡಿ ಗ್ರಾಮಸ್ಥರ ಗೋಳು ಹೇಳ ತೀರದಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಈ ಹಳ್ಳಿಗಳ 47 ಜನ ಇದೀಗ ಕಿಡ್ನಿ ಕಳೆದುಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ ನಿರಂತರವಾಗಿ ಫ್ಲೋರೈಡ್ ನಿಶ್ಚಿತ ನೀರನ್ನೆ ಸೇವನೆ ಮಾಡುತ್ತಿದ್ದಾರೆ ಪಂಚಾಯಿತಿ ಪೂರೈಸುವ ನೀರು ಗ್ರಾಮಾಂತರ ಸೇವಿಸುತ್ತಿದ್ದು ಶುದ್ಧ ನೀರಿಗಾಗಿ ಮನವಿ ಮಾಡಿದರು ಕೂಡ ಜಿಲ್ಲಾಡಳಿತ ನಿರ್ಲಕ್ಷ ವಹಿಸಿದೆ ಎಂದು ಆರೋಪ ಕೇಳಿ ಬಂದಿದೆ.

Read More

ಉಡುಪಿ : ಉಡುಪಿಯಲ್ಲಿ ಕಾಂಗ್ರೆಸ್ ಯುವ ಮುಖಂಡನ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ಭೀಕರ ಮಾಡಿದ್ದಾರೆ. ತಲ್ವಾರ್ ಹಾಗೂ ಕಬ್ಬಿಣದ ಚೇರ್ನಿಂದ ಕಾಂಗ್ರೆಸ್ ಯುವ ಮುಖಂಡ ಶರತ್ ಕುಂದರ್ ಮೇಲೆ ಹಲ್ಲೆ ಮಾಡಿದ್ದಾರೆ. ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರಿಗೆ ಗಂಭೀರವಾದ ಗಾಯಗಳಾಗಿದ್ದು, ಮಾತುಕತೆಗೆ ಎಂದು ಕರೆಸಿ ಉಡುಪಿ ನಗರದ ಪಿಪಿಸಿ ಕ್ರಾಸ್ ಬಳಿ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಶರತ್ ಕುಂದರ ಮೇಲೆ ಆರರಿಂದ ಏಳು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ಸಂಭಂದ ಉಡುಪಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Read More