Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಕೇರಳದಲ್ಲಿ ನನ್ನ ಮೇಲೆ ದೊಡ್ಡ ಪ್ರಯೋಗ ನಡೆಯುತ್ತಿದೆ.ಯಾವ ಪೂಜೆ ಯಾರು ಮಾಡುತ್ತಿದ್ದಾರೆ ಎಲ್ಲವು ಗೊತ್ತಿದೆ. ನನ್ನ, ಸಿಎಂ ಹಾಗೂ ಸರ್ಕಾರದ ವಿರುದ್ಧ ಪೂಜೆ ನಡೆಯುತ್ತಿದೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ರಾಜರಾಜೇಶ್ವರಿ ದೇಗುಲದಲ್ಲಿ ಯಾಗ ನಡೆಯುತ್ತಿದೆ. ನನ್ನ ವಿರುದ್ಧ ಶತ್ರು ಭೈರವಿಯಾಗ ನಡೆಯುತ್ತಿದೆ. ಅಘೋರಿಗಳ ಮೂಲಕ ಈ ಒಂದು ಯಜ್ಞ ಮಾಡಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಪಂಚ ಬಲಿಕೊಡುತ್ತಿದ್ದಾರೆ. 21 ಮೇಕೆ, 3 ಎಮ್ಮೆ ಹಾಗೂ 21 ಕುರಿಗಳನ್ನು ಬಲಿಕೊಡುತ್ತಿದ್ದಾರೆ. ಅವರ ಪ್ರಯತ್ನ ನಡೆಯುತ್ತಿದೆ ನಡೀಲಿ ಆದರೆ ನಾವು ನಂಬಿರುವ ದೇವರು ನಮ್ಮನ್ನು ಕಾಪಾಡುತ್ತಾನೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ 3:30ಕ್ಕೆ ಅಲ್ಲಿಂದ ವಿಮಾನ ಟೆಕ್ ಆಫ್ ಅಗಲಿದ್ದು ಮಧ್ಯರಾತ್ರಿ 12:30 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಬಂದ ತಕ್ಷಣ ಅವರ ಬಂಧನಕ್ಕೆ ಎಸ್ಐಟಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ ಬರುತ್ತಿದ್ದಂತೆ ಬಂಧನ ಖಚಿತ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಇದೀಗ ಎಸ್ ಐ ಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಸ್ಐಟಿ ಅಧಿಕಾರಿಗಳು ಈಗಾಗಲೇ ಠಿಕಾಣಿ ಹೂಡಿದ್ದಾರೆ. ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಯಾಗಿದೆ. ಹಾಗಾಗಿ ಬೆಂಗಳೂರಿಗೆ ಬರುತ್ತಿದ್ದಂತೆ ಇಮಿಗ್ರೇಶನ್ ನಲ್ಲಿ ಪ್ರಜ್ವಲ್ ರನ್ನು ವಶಕ್ಕೆ ಪಡೆಯಲಾಗುತ್ತದೆ. ಅದಾದ ನಂತರ ಇಮಿಗ್ರೇಶನ್ ಅಧಿಕಾರಿಗಳು SIT ವಶಕ್ಕೆ ನೀಡಲಿದ್ದಾರೆ.ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಅದರ ಜೊತೆಗೆ ಬೆಂಗಳೂರಿನ…
ಬೆಳಗಾವಿ : ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಿನ್ನೆ ಬಾಳು ಮಾಮ ಜಾತ್ರೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಪ್ರಸಾದ ಸೇವಿಸಿದ ಜನರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿದ್ದರು. ಜಾತ್ರೆಯಲ್ಲಿ ಸಾವಿರಾರು ಜನರು ನಿನ್ನೆ ಪ್ರಸಾದವನ್ನು ಸೇವಿಸಿದ್ದರು ಎನ್ನಲಾಗಿದೆ. ಅಲ್ಲದೆ ಮಧ್ಯಾಹ್ನ ಕೂಡ ಉಳಿದಿದ್ದ ಅಡುಗೆಯನ್ನ ರಾತ್ರಿಯೂ ಜನರು ಸೇವಿಸಿದ್ದಾರೆ. ಇದೀಗ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 59ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ. ಇನ್ನು ಹಲವು ಜನರಿಗೆ ವಾಂತಿ ಭೇದಿ ಆಗುತ್ತಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಕೇಂದ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರುಪಾಯಿ ಹಾಗೂ ತಿಂಗಳಿಗೆ 8 ಸಾವಿರ ಖಾತೆಗೆ ಹಾಗಲಾಗುತ್ತದೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದಕ್ಕೆ ಟ್ವೀಟ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು. ಈಗ ಬಿವೈ ವಿಜಯೇಂದ್ರ ಟ್ವೀಟಿಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ ಎಂದಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಮಾನ್ಯ ಯಡಿಯೂರಪ್ಪನವರ ಪುತ್ರ ವಿಜಯೇಂದ್ರರವರೇ, ಜನ ಕಾಂಗ್ರೆಸ್ ಮೇಲೆ ಇಟ್ಟಿರುವ ನಂಬಿಕೆಯನ್ನು ನೋಡಿ ತಮಗೆ ಸಹಿಸಿಕೊಳ್ಳಲಾಗದಷ್ಟು ತಾಪಮಾನ ಏರುತ್ತಿದೆ! ಜನತೆಗೆ ಈಗಾಗಲೇ ನಾವು “ನುಡಿದಂತೆ ನಡೆಯುತ್ತೇವೆ“ ಎಂಬುದು ಖಾತ್ರಿಯಾಗಿದೆ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದೂ ಸಹ ಜನರಿಗೆ ಖಚಿತವಾಗಿದೆ. ಗೃಹಲಕ್ಷ್ಮಿಯಂತೆ ”ಮಹಾಲಕ್ಷ್ಮಿ” ಯೋಜನೆಯೂ ಜಾರಿ ಮಾಡುವುದರ ಬಗ್ಗೆ ಜನತೆಗೆ ಅನುಮಾನ ಉಳಿದಿಲ್ಲ, ಏಕೆಂದರೆ ಕಾಂಗ್ರೆಸ್ ಎಂದಿಗೂ “15 ಲಕ್ಷದ ಜುಮ್ಲಾ“ ಸುಳ್ಳುಗಳನ್ನು ಹೇಳಿಲ್ಲ! ಅಂದಹಾಗೆ ಬಿವೈ ವಿಜಯೇಂದ್ರ ಅವರೇ,…
ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚುತಲೆ ಇದೆ. ಇದೀಗ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಪ್ಲಾಸ್ಟಿಕ್ ಗಮ್ ಟೇಪ್ ತಯಾರಿಕಾ ಕಾರ್ಖಾನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಕಚ್ಚಾ ವಸ್ತುಗಳು ಸುಟ್ಟು ಕರಕಲಾಗಿವೆ. ಹೌದು ಇಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಹೊರವಲಯದ ಆನೇಕಲ್ ಬಳಿ ಇರುವ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಟೆಕ್ನೆವಾ ಟೇಪ್ಸ್ ಪ್ರೈ. ಲಿ. ಎಂಬ ಕಾರ್ಖಾನೆಯಲ್ಲಿ ಈ ಒಂದು ಅಗ್ನಿ ಅನಾಹುತ ಸಂಭವಿಸಿದೆ.ಭಾರಿ ಬೆಂಕಿ ಹಿನ್ನೆಲೆಯಲ್ಲಿ ಸಮೀಪದ ಕಾರ್ಖಾನೆಗಳ ಸಿಬ್ಬಂದಿಯೂ ಆತಂಕಗೊಂಡರು. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಅನಾಹುತ ತಡೆಯುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ಗಮ್ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಸುಲಭವಾಗಿ ಹೊತ್ತಿಕೊಳ್ಳುವ ರಾಸಾಯನಿಕ ಇರುವುದು ಬೆಂಕಿಯ ತೀವ್ರತೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಬೆಂಕಿಗೆ ಇಡೀ ಕಾರ್ಖಾನೆ ಆಹುತಿಯಾಗಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿತ್ತು. ಹತ್ತಿರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಆನೇಕಲ್ ಭಾಗದ ಅಗ್ನಿಶಾಮಕ…
ಬೀದರ್ : ಬೀದರ್ ನ ಜಿ ಎನ್ ಡಿ ಕಾಲೇಜು ಕಾರ್ಯಕ್ರಮದಲ್ಲಿ ಜೈ ಶ್ರೀ ರಾಮ್ ಹಾಡು ಹಾಕಿದ್ದಕ್ಕೆ ಹಿಂದೂ ಮತ್ತು ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಬೀದರ್ ನ ಗಾಂಧಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಇಂದು ಬೀದರ್ ನ ಮೈಲೂರು ಕ್ರಾಸ್ ಬಳಿ ಇರುವ ಜಿ ಏನ್ ಡಿ ಡಿಗ್ರಿ ಕಾಲೇಜಿನಲ್ಲಿ ಹಿಂದೂ ಮುಸ್ಲಿಂ ವಿದ್ಯಾರ್ಥಿಗಳ ಹೊಡೆದಾಟ ಸಂಬಂಧ ಇದೀಗ 17 ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲಾಗಿದೆ. ಎರಡು ಸಮುದಾಯದ ವಿದ್ಯಾರ್ಥಿಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ ಎಂದು ಬೀದರ್ ಎಸ್ ಪಿ ಚನ್ನಬಸವಣ್ಣ ರಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಬೀದರ್ ನ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗಾಯಗೊಂಡಿದ್ದ ವಿದ್ಯಾರ್ಥಿಗಳಿಬ್ಬರ ದೂರಿನ ಮೇರೆಗೆ ಇದೀಗ ಕೇಸ್ ದಾಖಲಾಗಿದೆ.ಹಲ್ಲೆ ಪ್ರಕರಣದಲ್ಲಿ ಭಾಗಿಯಾದ 17 ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ.ನಾಳೆ ಕಾಲೇಜಿನಲ್ಲಿ ಬಿಳ್ಕೊಡುಗೆ ಹಾಗೂ ಸ್ವಾಗತ ಕಾರ್ಯಕ್ರಮವನ್ನು ಇದೀಗ ಕಾಲೇಜು…
ದಾವಣಗೆರೆ : ಚೆನ್ನಗಿರಿ ಘಟನೆಯ ವೇಳೆ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ ಎಂದು ದಾವಣಗೆರೆ SP ಉಮಾ ಪ್ರಶಾಂತ್ ಸ್ಪಷ್ಟನೆ ನೀಡಿದ್ದಾರೆ. ಮೇ 24 ರಂದು ಚೆನ್ನಗಿರಿ ಠಾಣೆಯ ಮುಂದೆ ಪ್ರತಿಭಟನೆ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಈ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡುತ್ತಿದೆ.ಈ ಬಗ್ಗೆ ಪರಿಶೀಲಿಸಿದ್ದು ಪಾಕಿಸ್ತಾನ ಜಿಂದಾಬಾದ್ ಅಂತ ಯಾರು ಘೋಷಣೆ ಕೂಗಿಲ್ಲ. ಪರಿಶೀಲಿಸಲಾದ ವಿಡಿಯೋ ದಲ್ಲಿ ಪೊಲೀಸರಿಗೆ ಧಿಕ್ಕಾರ ಎಂದು ಕೂಗಿದ್ದಾರೆ ಎಂದು ಅವರು ತಿಳಿಸಿದರು. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ವಿಡಿಯೋ ಲಭ್ಯವಿದ್ದಲ್ಲಿ ಜಿಲ್ಲಾ ಪೊಲೀಸ್ ಕಚೇರಿ ಅಥವಾ ಸ್ಥಳೀಯ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತವಾದಂತೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಸ್ ಪಿ ಉಮಾ ಪ್ರಶಾಂತ್ ತಿಳಿಸಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಸುಳ್ಳು ಸುದ್ದಿಗಳನ್ನು ಹರಡಬಾರದು ಸಾರ್ವಜನಿಕರಿಗೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಸೂಚನೆ ನೀಡಿದರು. ಮಟ್ಕಾ…
ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯದು ನುಡಿದಂತೆ ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಗೊಳಿಸಿತು ಅದರಲ್ಲಿ ಪ್ರಮುಖವಾದದ್ದು ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಕೂಡ ಒಂದಾಗಿದೆ. ಇದೀಗ ಈ ಒಂದು ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಸೇರಿದಂತೆ ಔದ್ಯೋಗಿಕ ಕ್ಷೇತ್ರದಲ್ಲಿ ಮಹಿಳೆಯರ ಪಾಲುದಾರಿಕೆ ಹೆಚ್ಚಳವಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ರಾಮಲಿಂಗ ರೆಡ್ಡಿ, ಶಕ್ತಿ ಯೋಜನೆಯಿಂದ ಜಿಎಸ್‌ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ನಮ್ಮ ನಾಗರಿಕರ ಕಲ್ಯಾಣವನ್ನು ಹೆಚ್ಚಿಸಲು ಬದ್ಧವಾಗಿದೆ. ಅದರಲ್ಲೂ ವಿಶೇಷವಾಗಿ ತಮ್ಮ ಕುಟುಂಬಗಳನ್ನು ಕಾಳಜಿ ವಹಿಸುವ…
ಮಂಗಳೂರು : ಕುಟುಂಬ ರಾಜಕಾರಣದಿಂದ ಬಿಜೆಪಿಯನ್ನು ಶುದ್ಧೀಕರಣಗೊಳಿಸಲು ಈ ಬಾರಿಯ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ರಘುಪತಿ ಭಟ್ ಅವರನ್ನು ಬೆಂಬಲಿಸುವಂತೆ ಮಾಜಿ ಸಚಿವ ಈಶ್ವರಪ್ಪ ಅವರು ಪದವೀಧರ ಮತದಾರರನ್ನು ವಿನಂತಿಸಿದ್ದಾರೆ. ಮಂಗಳೂರಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಈಗ ಅಪ್ಪ, ಮಕ್ಕಳ ಪಕ್ಷವಾಗಿದೆ. ಪಕ್ಷದ ತತ್ವ, ಸಿದ್ಧಾಂತಕ್ಕಿಂತಲೂ ಕುಟುಂಬ ರಾಜಕಾರಣವೇ ಮೇಳೈಸುತ್ತಿದೆ. ಇದನ್ನು ನೋಡಿ ಬಿಜೆಪಿ ನಿಷ್ಠ ಕಾರ್ಯಕರ್ತರಿಗೆ ನೋವಾಗಿದೆ. ಕೇಂದ್ರ ನಾಯಕರೂ ಕೂಡ ಬಿಎಸ್‌ವೈ ಬಿಟ್ಟರೆ ಬೇರೆ ಯಾರೂ ಕರ್ನಾಟಕದಲ್ಲಿ ಇಲ್ಲ ಎನ್ನುವ ಭ್ರಮೆಯಲ್ಲಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಟ್ಟಿಲ್ಲವೆಂದು ಸಹಜವಾಗಿ ರಘುಪತಿ ಭಟ್ ಸಮಧಾನಗೊಂಡಿದ್ದರು. ಆದರೆ ಇದೀಗ ವಿಧಾನ ಪರಿಷತ್ ಚುನಾವಣೆಗೂ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಹೀಗಾಗಿ ಬಂಡಾಯದ ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಹೀಗಾಗಿ ಇವರನ್ನು ಬೆಂಬಲಿಸಿ ಎಂದು ಕೆ ಎಸ್ ಈಶ್ವರಪ್ಪ ಪದವೀಧರರಿಗೆ ಮನವಿ…
ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಎಂಬ ಗ್ರಾಮದಲ್ಲಿ ಬೈಕ್ ಟಚ್ ಆಗಿದ್ದನ್ನು ಪ್ರವೇಶಿಸಿದ್ದಕ್ಕೆ ಹಿಂದು ಯುವಕನ ಮೇಲೆ ಅನ್ಯಕೋಮಿನ ಇಬ್ಬರು ಯುವಕರಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹೌದು ಅನ್ಯ ಕೋವಿನ ಇಬ್ಬರು ಯುವಕರಿಂದ ಹಿಂದೂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬಿಲ್ಲಿನಕೋಟೆಯಲ್ಲಿ ಶ್ರೀನಿವಾಸಮೂರ್ತಿ ಎಂಬುವವರ ಮೇಲೆ ಹಲ್ಲೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ.ನದೀಮ್, ಇಮ್ರಾನ್ ಹಾಗೂ ಮತ್ತೊಬ್ಬನಿಂದ ಹಲ್ಲೆ ನಡೆದಿದೆ. ಅಲ್ಲದೆ ಅಂಗಡಿಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಶ್ರೀನಿವಾಸಮೂರ್ತಿಗೆ ದಾಬಸ್ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇದೀಗ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ್ ಬಾಲದಂಡಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











