Author: kannadanewsnow05

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಹೌದು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ತಮ್ಮ ವಕೀಲರ ಮೂಲಕ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಮೂರು ಪ್ರಕರಣಗಳಲ್ಲಿ ನಿರೀಕ್ಷಣ ಜಾಮೀನುಗೆ ಅರ್ಜಿ ಸಲ್ಲಿಸಿದ್ದಾರೆ. ಸಿಐಡಿ ಠಾಣೆ ಕ್ರೈಂ ನಂಬರ್ 20/2024 ಸೈಬರ್ ಕ್ರೈಂ ಠಾಣೆ ಕ್ರೈಂ ನಂಬರ್ 2/ 2024 ಹಾಗೂ ಹೊಳೆನರಸೀಪುರ ಠಾಣೆ ಕ್ರೈಂ ನಂಬರ್ 107/ 2024 ಸೇರಿದಂತೆ ಮೂರು ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ SIT ಅಧಿಕಾರಿಗಳು ಇಬ್ಬರು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನನ್ನು SIT ಅಧಿಕಾರಿಗಳು ಇಂದು ಕೋರ್ಟಿಗೆ ಹಾಜರುಪಡಿಸಿದರು. ಆರೋಪಿಗಳನ್ನು ಹಾಸನದ 5ನೇ ಹೆಚ್ಚುವರಿ ಸಿವಿಲ್, JMFC ಕೋರ್ಟಿಗೆ SIT ಅಧಿಕಾರಿಗಳು ಹಾಜರುಪಡಿಸಿದರು. ಆರೋಪಗಳಾದ ನವೀನ್ ಗೌಡ, ಚೇತನ್ ಎನ್ನುವವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಗಳನ್ನು ಹಂಚಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು.ಇದೀಗ ಆರೋಪಿಗಳನ್ನು ಬಂಧಿಸಿ ಇಂದು ಕೋರ್ಟಿಗೆ ಹಾಜರುಪಡಿಸಲಾಗಿದೆ. ಇನ್ನು ನಿನ್ನೆ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ ಐ ಟಿ ಅಧಿಕಾರಿಗಳು ಆರೋಪಿಗಳಾದ ನವೀನ್ ಗೌಡ ಹಾಗೂ ಚೇತನ್ ನನ್ನು ಬಂಧಿಸಿದ್ದರು.ಹೈಕೋರ್ಟಿಗೆ ಜಾಮೀನು ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇಂದು ಅವರು ಹೈಕೋರ್ಟಿಗೆ ಬಂದಿದ್ದರು. ಈ ಬವೇಳೆ ನವೀನ ಗೌಡ ಹಾಗೂ ಚೇತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಹೈಕೋರ್ಟ್ ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳು…

Read More

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ದಾಖಲಾಗುವ ಮುನ್ನ ವಿದೇಶ ಪ್ರವಾಸ ಹೋಗಿದ್ದರು. ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ವಾಪಸ್ ಆಗಲು ಪ್ರೈಟ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫೈಟ್ ಹತ್ತಲಿದ್ದಾರೆ. ಅವರು ಬೆಂಗಳೂರಿಗೆ ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಪ್ರಜ್ವಲ್ ಬಂಧನಕ್ಕೆ ಕಾಯುತ್ತಿದ್ದಾರೆ ಎನ್ನಲಾಗಿದೆ. ಲುಫ್ತಾನ್ನಾ ಏರ್‌ಲೈನ್ಸ್ ಮೂಲಕ ಫೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಇಲಾಖೆ ಸಚಿವ ಜಿ.ಪರಮೇಶ್ವ‌ರ್ ಹೇಳಿದ್ದಾರೆ. ಇದಕ್ಕಾಗಿ ಎಸ್​ಐಟಿ ಅಧಿಕಾರಿಗಳು ಕೆಂಪೇಗೌಡ ವಿಮಾನ…

Read More

ಬೆಂಗಳೂರು : ವಾಲ್ಮೀಕಿ ನಿಗಮದ ಖಾತೆಯಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನುವವರು ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಹೌದು 187.33 ನಿಗಮದ ಅಕೌಂಟಿಗೆ ವರ್ಗಾವಣೆ ಆಗಿದೆ. ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನುವವರು ಈ ಕುರಿತಂತೆ ದೂರು ನೀಡಿದ್ದಾರೆ. ನಿಗಮದ ಹೆಸರಿನಲ್ಲಿ ವಸಂತನಗರದಲ್ಲಿ ಇರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾತೆ ಇತ್ತು. ಫೆಬ್ರುವರಿ 19 ರಂದು ಖಾತೆಯನ್ನು ಎಂಜಿ ರೋಡ್ ಬ್ರಾಂಚ್ ಗೆ ವರ್ಗಾವಣೆ ಮಾಡಲಾಯಿತು. ಫೆಬ್ರವರಿ 26ರಂದು ನಿಗಮದ ಎಂಡಿ ಲೆಕ್ಕಾಧಿಕಾರಿಗಳು ಸಹಿ ಪಡೆದುಕೊಂಡಿದ್ದಾರೆ.ಬ್ಯಾಂಕ್ ನವರು ನಿಗಮದ ಎಂಡಿ ಲೆಕ್ಕಾಧಿಕಾರಿಗಳು ಸಹಿ ಪಡೆದುಕೊಂಡಿದ್ದಾರೆ. ಬಳಿಕ ಸದರಿ ಖಾತೆಯಿಂದ ಮಾರ್ಚ್ 4ರಂದು 25 ಕೋಟಿ, ಮಾರ್ಚ್ 6ರಂದು 25 ಕೋಟಿ, ಮಾರ್ಚ್ 21 ರಂದು 44 ಕೋಟಿ ಹಣ ವರ್ಗಾವಣೆ ಆಗಿದೆ. ಅಲ್ಲದೆ ಮೇ 21ರಂದು 50…

Read More

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಡೆತ್ ನೋಟ್ ಬರೆದಿಟ್ಟು ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಈ ಒಂದು ಹಣ ವರ್ಗಾವಣೆ ಆಗಿದ್ದಾದರೂ ಎಲ್ಲಿ ಎಂಬುದರ ಕುರಿತು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಲ್ಲಿದ್ದ ಹಣವನ್ನು ಸಾಫ್ಟ್‌ವೇರ್‌ ಕಂಪನಿಯೊಂದರ ಬ್ಯಾಂಕ್ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸ್ಫೋಟಕವಾದ ಅಂತಹ ಮಾಹಿತಿ ಬಹಿರಂಗವಾಗಿದೆ. ಹೌದು 87 ಕೋಟಿ ರೂ.ಗಳನ್ನು ಐಟಿ ಕಂಪನಿಯೊಂದರ 14 ಬೇರೆ ಬೇರೆ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ನಿಗಮದ ಖಾತೆಯಲ್ಲಿರುವ ಇನ್ನೂ 100 ಕೋಟಿ ರೂ. ವರ್ಗಾಯಿಸುವ ಪ್ರಯತ್ನಗಳೂ ನಡೆದಿದ್ದವು. ಈ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಮತ್ತು ಬ್ಯಾಂಕ್‌ ಅಧಿಕಾರಿಗಳ ಮಧ್ಯೆ ಅಸಮಾಧಾನ ಉಂಟಾಗಿತ್ತು.ಇದರಿಂದಾಗಿ 100 ಕೋಟಿ ರೂ. ವರ್ಗಾವಣೆ ಯತ್ನಕ್ಕೆ ಹಿನ್ನಡೆಯಾಗಿತ್ತು ಎನ್ನಲಾಗಿದೆ. ಅವ್ಯವಹಾರ…

Read More

ಶಿವಮೊಗ್ಗ : ವಾಲ್ಮೀಕಿ ನಿಗಮ ಮಂಡಳಿ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಐಡಿ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿನೋಬನಗರದಲ್ಲಿರುವ ಅವರ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್‌ಪಿ ಮೊಹಮ್ಮದ್‌ ರಫಿ ನೇತೃತ್ವದ ಆರು ಮಂದಿ ತಂಡ ಭೇಟಿ ನೀಡಿ, ಮೃತ ಅಧಿಕಾರಿ ಚಂದ್ರಶೇಖರನ್ ಪತ್ನಿ ಕವಿತಾರಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಚಂದ್ರಶೇಖರ ನಿವಾಸದಲ್ಲಿ ಬೆಳಿಗ್ಗೆಯಿಂದ CID ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ. ಇದೀಗ ಚಂದ್ರಶೇಖರ ನಿವಾಸದಿಂದ ತೆರಳಿದ್ದಾರೆ. ಸಿಐಡಿ ಅಧಿಕಾರಿಗಳು ಬೆಳಗ್ಗೆ 10:30ಕ್ಕೆ ಸಿಐಡಿ ತಂಡ ಚಂದ್ರಶೇಖರ ನಿವಾಸಕ್ಕೆ ಆಗಮಿಸಿತ್ತು. ಸುಮಾರು ಎರಡುವರೆ ಗಂಟೆ ಸಿಐಡಿ ಅಧಿಕಾರಿಗಳು ಪತ್ನಿ ಕವಿತಾ ಅವರನ್ನ ವಿಚಾರಣೆ ನಡೆಸಿದರು. ಈ ವೇಳೆ ಚಂದ್ರಶೇಖರ್ ಗೆ ಸೇರಿದ ಲ್ಯಾಪ್ಟಾಪ್ ಪ್ರಿಂಟರ್ ಕೊಂಡವಿದೆ ಸಿಐಡಿ ವಿಚಾರಣೆ ನಡೆಸಿ ಚಂದ್ರಶೇಖರ್ ಮನೆಯಿಂದ ಸಿಐಡಿ ತಂಡ ತೆರಳಿದೆ. ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್…

Read More

ಬಳ್ಳಾರಿ : ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಎಂಎಲ್‌ಸಿ ರವಿಕುಮಾರ್ ಮಾತನಾಡಿ, ಈ ಒಂದು ಆತ್ಮಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಗಾರರಾಗಿದ್ದು ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಎಂಎಲ್ಸಿ ಎನ್ ರವಿ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಮುಖಂಡರ ಧರಣಿ ನಡೆಯುತ್ತಿದೆ. ಸಚಿವ ಬಿ.ನಾಗೇಂದ್ರ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.ಆ ಅಧಿಕಾರಿ ಸಾವಿಗೆ ನೇರ ಕಾರಣ ಸಚಿವ ಬಿ ನಾಗೇಂದ್ರ.ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆಯಿತು ಆದರೆ ಸಿಎಂ, ಡಿಸಿಎಂ ದೆಹಲಿಯಲ್ಲಿ ಮಜಾ ಮಾಡುತ್ತಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಉಗ್ರ ಹೋರಾಟ ಮಾಡುತ್ತೇವೆ.ನೈತಿಕ ಶಿವರಾಜ ನಾನು ಕೊಡಬೇಕು ಬಳ್ಳಾರಿ ಎಂ ಎಲ್ ಸಿ ಎಂ…

Read More

ಉಡುಪಿ : ರಾಜ್ಯದಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿನಿಗೆ ಅಂದಿನ ಸ್ಥಳೀಯ ಶಾಸಕ ರಘುಪತಿ ಭಟ್ ಅವರು ವಿರೋಧಿಸಿ ಅವಕಾಶ ಕೊಡದೇ ಪರೀಕ್ಷೆ ಬರೆಯುವುದರಿಂದ ಉಚ್ಛಾಟನೆ ಮಾಡಿದ್ದರು. ಇದಕ್ಕೆ ಎರಡು ವರ್ಷಗಳ ಬಳಿಕ ವಿದ್ಯಾರ್ಥಿನಿ ಅಲಿಯಾ ಅಸಾದಿ ‘ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ ಇತ್ತು. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿನಿ, ಇಂದು ನೀವು ಉಚ್ಚಾಟಿತ ವ್ಯಕ್ತಿ’ ಎಂದು ತಿರುಗೇಟು ಕೊಟ್ಟಿದ್ದಾಳೆ. ಟ್ವೀಟ್ ನಲ್ಲಿ ಅಂದು ನಾನು ಉಚ್ಚಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಚಾಟಿತ ವ್ಯಕ್ತಿ. ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು. ವಾರ್ಷಿಕ ಪರೀಕ್ಷೆಗೆ ಇನ್ನೇನು 60 ದಿನಗಳಿರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿ ತೋರಿಸಿದರಲ್ಲವೇ, ಆದರೆ ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು ಎಂದು…

Read More

ಕೋಲಾರ : ಬಸ್ ಟಿಕೆಟ್ ತೆಗೆದುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಹಾಗೂ ಹೋಂ ಗಾರ್ಡ್ ನಡುವೆ ಗಲಾಟೆ ಏರ್ಪಟ್ಟಿದೆ.ಈ ವೇಳೆ ಹೋಂ ಗಾರ್ಡ್ ಹಾಗೂ ಆತನ ಸಹೋದರ ಇಬ್ಬರು ಸೇರಿ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅರಗ ಗ್ರಾಮದಲ್ಲಿ ನಡೆದಿದೆ. ಟಿಕೆಟ್​ ತೆಗೆದುಕೊಳ್ಳುವಂತೆ ಹೇಳಿದ್ದಕ್ಕೆ ಕಂಡಕ್ಟರ್​ ನಾಗರಾಜಪ್ಪನ ಮೇಲೆ ಹಲ್ಲೆ ನಡೆಸಿದ ಹಿನ್ನಲೆ ಹೋಂಗಾರ್ಡ್​ ಅನುದೀಪ್​ ಹಾಗೂ ಆತನ ಸೋದರ ಪ್ರದೀಪ್ ಅವರನ್ನು​ ಬಂಧಿಸಿ, ಮುಳಬಾಗಿಲು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಈ ಹಲ್ಲೆಯ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

Read More

ಉಡುಪಿ : ವಿಧಾನ ಪರಿಷತ್ ಟಿಕೆಟ್ ನೀಡಿಲ್ಲವೆಂದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಜೊತೆ ಗುರುತಿಸಿಕೊಂಡಿದ್ದ ನಾಲ್ವರು ನಾಯಕರಿಗೆ ಇದೀಗ ಬಿಜೆಪಿ ನೋಟಿಸ್ ನೀಡಿದೆ. ಬಿಜೆಪಿಯ ನಾಲ್ವರು ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹೇಶ ಠಾಕೂರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್, ಬಿಜೆಪಿ ಯುವ ಮೋರ್ಚ ಉಪಾಧ್ಯಕ್ಷ ರೋಶನ್ ಶೆಟ್ಟಿ ಹಾಗೂ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜುಲೈಗೆ ನೋಟಿಸ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಅಕ್ಷಮ್ಯ ಅಪರಾಧ.ಪಕ್ಷದ ಉಲ್ಲಂಘಿಸಿದ್ದಕ್ಕೆ 48 ಗಂಟೆಗಳ ಒಳಗೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಮುಂದೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ರಘುಪತಿ ಭಟ್ ಜೊತೆ ಗುರುತಿಸಿಕೊಂಡ ಬಿಜೆಪಿ ನಾಯಕರಿಗೆ ನೋಟಿಸ್ ನೀಡಲಾಗಿದೆ. ರಘುಪತಿ ಭಟ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದಾರೆ.

Read More