Author: kannadanewsnow05

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕುಸಮಳಿ ಬಳಿ ತಾತ್ಕಾಲಿಕ ಸೇತುವೆ ಒಂದು ಕೊಚ್ಚಿಕೊಂಡು ಹೋಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕುಸುಮಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಾರಿ ಮಳೆಯಿಂದಾಗಿ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿರುವುದರಿಂದ ಬೆಳಗಾವಿ ಮತ್ತು ಗೋವಾ ರಸ್ತೆ ಸಂಚಾರ ಮತ್ತೆ ಬಂದ್ ಮಾಡಲಾಗಿದೆ. ಮಲಪ್ರಭಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣವಾಗುತ್ತಿತ್ತು. ಸೇತುವೆ ಪಕ್ಕ ವಾಹನ ಸಂಚಾರಕ್ಕೆ ತಾತ್ಕಾಲಿಕ ರಸ್ತೆ ನಿರ್ಮಾಣ ಸಹ ಮಾಡಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಸೇತುವೆ ಕೊಚ್ಚಿ ಹೋಗಿದ್ದು, ಪ್ರಯಾಣಿಕರು ಪರ್ಯಾಯ ಮಾರ್ಗದಲ್ಲಿ ಗೋವಾಗೆ ಪ್ರಯಾಣ ಬೆಳೆಸಬಹುದಾಗಿದೆ.

Read More

ಉತ್ತರಾಖಂಡ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಇದುವರೆಗೂ 274 ಜನರು ಸಾವನಪ್ಪಿದ್ದಾರೆ. ಈ ಒಂದು ಘಟನೆ ಮಾಸುವ ಮುನ್ನವೆ ಮತ್ತೊಂದು ದುರಂತ ಸಂಭವಿಸಿದ್ದು ಉತ್ತರಾಖಂಡ್ ನಲ್ಲಿ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಒಂದು ಪತನವಾಗಿದೆ. ಉತ್ತರಾಖಾಂಡನ ಕೇದಾರನಾಥದ ಬಳಿ ಗೌರಿ ಕೊಂಡ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಹೆಲಿಕ್ಯಾಪ್ಟರ್ ನಲ್ಲಿ ಪೈಲಟ್ ಓರ್ವ ಮಗು ಸೇರಿದಂತೆ 7 ಜನರು ಪ್ರಯಾಣಿಸುತ್ತಿದ್ದರು ಎಂದು ಮಾಹಿತಿ ತಿಳಿದು ಬಂದಿದೆ. ಘಟನೆಯಲ್ಲಿ ಎಲ್ಲರೂ ದುರ್ಮರಣ ಹೊಂದಿದ್ದಾರೆ ಎಂದು ತಿಳಿದುಬಂದಿದೆ ಘಟನೆ ಕುರಿತಂತೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಗದಗ : ಕಳೆದ 2024 ಡಿಸೆಂಬರ್ 16ರಂದು ಗದಗ ಜಿಲ್ಲೆಯಲ್ಲಿ ಯುವತಿಯ ಭೀಕರ ಕೊಲೆಯಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣವನ್ನು ಬೆಟಗೇರಿ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದು, ದೃಶ್ಯ ಸಿನಿಮಾ ಮಾದರಿಯಲ್ಲಿ ಯುವತಿಯ ಪ್ರಿಯಕರ ಸಾಕ್ಷಿ ನಾಶ ಮಾಡಿದ್ದ. ಆದರೆ ಕೇವಲ ಒಂದೇ ಒಂದು ಮೆಸೇಜಿನಿಂದ ಇದೀಗ ಆರೋಪಿ ಪ್ರಿಯಕರ ಪೊಲೀಸರ ಅತಿಥಿಯಾಗಿದ್ದಾನೆ. ಹೌದು ಮದುವೆಗೆ ಒತ್ತಾಯಿಸಿದ ಪ್ರೇಯಸಿಯನ್ನು ಪ್ರಿಯಕರ ಕೊಂದಿದ್ದ. ದೃಶ್ಯ ಸಿನಿಮಾ ಮಾದರಿ ಸಾಕ್ಷಿ ನಾಶ ಮಾಡುತ್ತಿದ್ದ. ಇದೀಗ ಒಂದೇ ಒಂದು ಮೆಸೇಜಿನಿಂದ ಕೊಲೆ ಆರೋಪಿ ಇದೀಗ ಅರೆಸ್ಟ್ ಆಗಿದ್ದಾನೆ. ಬೆಟಗೇರಿ ಬಡಾವಣೆ ಪೊಲೀಸ್ ಕಾರ್ಯಾಚರಣೆಗೆ ಆರೋಪಿ ಸಿಕ್ಕಿಬಿದ್ದಿದ್ದಾನೆ. ಕೊಲೆಯಾದ ಮಧುಶ್ರೀ ಪ್ರಿಯಕರ ಸತೀಶ್ ಗೆ ಮದುವೆಗೆ ಒತ್ತಾಯಿಸಿದ್ದಳು. ಹಾಗಾಗಿ ಬೆಂಗಳೂರಿಗೆ ಹೋಗೋಣ ಎಂದು 2024 ಡಿಸೆಂಬರ್ 16ರಂದು ಪ್ರಿಯಕರ ಯುವತಿಯನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿದ್ದ. ಇದೀಗ ಬೆಟಗೇರಿ ಬಡಾವಣೆ ಪೊಲೀಸ್ರು ಕೇವಲ ಒಂದೇ ಒಂದು ಮೆಸೇಜ್ ನಿಂದ ಪ್ರಕರಣವನ್ನು ಭೇಧಿಸಿದ್ದು ಪ್ರಿಯಕರ ತಾನೆ…

Read More

ಬೆಂಗಳೂರು : ಪಕ್ಷ ಸಂಘಟನೆಯ ಸಲುವಾಗಿ ಇಂದು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷವು ಜನರೊಂದಿಗೆ ಜನತಾದಳ ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹಾಗೂ ಕೇಂದ್ರ ಸಚಿವರಾದಂತಹ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಈ ಒಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಇಂದು ಜನರೊಂದಿಗೆ ಜನತಾದಳ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಹೆಚ್ ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಅಭಿಯಾನದ ಮೂಲಕ ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. 58 ದಿನಗಳ ಕಾಲ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸ ಮಾಡಲಿದ್ದಾರೆ. ಪಕ್ಷ ಸಂಘಟನೆಗಾಗಿ ಜನರೊಂದಿಗೆ ಜನತಾದಳ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Read More

ಯಾದಗಿರಿ : ರಾಜ್ಯದಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಳೆದ ಮೂರು ವರ್ಷದಲ್ಲಿ 13 ಸಾವಿರ ಕೋಟಿ ಅನುದಾನ ನೀಡಿದೆ. ಅಲ್ಲದೆ, ಮತ್ತೆ 5,000 ಕೋಟಿ ಅನುದಾನ ನೀಡಲು ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವಂತಹ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ. KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ…

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಾರತ್ತಹಳ್ಳಿಯ ನವ್ಯ ಶ್ರೀ ಹಾಗೂ ಸೃಜನ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಂದ ಒಂದು ಹೊಸ ಮೊಬೈಲ್ ಜಪ್ತಿ ಮಾಡಲಾಗಿದೆ.ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅ‍ವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೈಲಿನ ಮುಖ್ಯ ಪ್ರವೇಶ ದ್ವಾರದಲ್ಲಿ ಶುಕ್ರವಾರ ತಪಾಸಣೆ ವೇಳೆ ನವ್ಯಶ್ರೀ ಅ‍ವರು ಒಳ ಉಡುಪಿನಲ್ಲಿಟ್ಟಿದ್ದ ಹೊಸ ಮೊಬೈಲ್ ಪತ್ತೆಯಾಗಿದೆ. ಕೂಡಲೇ ಆಕೆಯನ್ನು ವಶಕ್ಕೆ ಪಡೆದು ಪೊಲೀಸರಿಗೆ ಕಾರಾಗೃಹದ ಭದ್ರತಾ ಸಿಬ್ಬಂದಿ ಒಪ್ಪಿಸಿದ್ದಾರೆ. ನಂತರ ನವ್ಯಶ್ರೀ ಅವರನ್ನು ವಿಚಾರಣೆಗೊಳಪಡಿಸಿದಾಗ ಮೊಬೈಲ್ ಸಾಗಾಣಿಕೆ ಕೃತ್ಯ ಬೆಳಕಿಗೆ…

Read More

ಬೆಂಗಳೂರು : ಸರ್ಕಾರಿ ನೌಕರರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್​ಸ್ಟೇಬಲ್ ಬಂಧಿಸಿರುವ ಲೋಕಾಯುಕ್ತ ಪೊಲೀಸರು ಜೂನ್ 16ರ ವರೆಗೆ ವಶಕ್ಕೆ ಪಡೆದು ವಿಚಾರಣೆ ಬಿಗಿಗೊಳಿಸಿದ್ದಾರೆ. ನಿಂಗಪ್ಪ ಅಲಿಯಾಸ್ ಸಾವಂತ್ ಬಂಧಿತ ಆರೋಪಿ. ಅಬಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳನ್ನು ಲೋಕಾಯುಕ್ತ ದಾಳಿ ಹೆಸರಿನಲ್ಲಿ ಬೆದರಿಸಿ ಅವರಿಂದ ತಿಂಗಳಿಗೆ ಲಕ್ಷಾಂತರ ರೂಪಾಯಿ ವಸೂಲಿ ಮಾಡುತ್ತಿದ್ದ ಆರೋಪ ಕೇಳಿಬಂದಿತ್ತು.‌ ಈತನ ವಿಚಾರಣೆ ವೇಳೆ ಲೋಕಾಯುಕ್ತ ಕೆಲ ಅಧಿಕಾರಿಗಳ ಕೈವಾಡ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ವರದಿಯಾಗಿದೆ. ಬಂಧಿತ ನಿಂಗಪ್ಪನಿಂದ ಮೊಬೈಲ್ ಜಪ್ತಿ ಮಾಡಿಕೊಂಡಿರುವ ಅಧಿಕಾರಿಗಳು ದೂರವಾಣಿ‌ ಕರೆಗಳ ವಿವರಗಳನ್ನು ಸಂಗ್ರಹಿಸಿದ್ದಾರೆ. ಯಾರ್ಯಾರ ಜೊತೆ ಸಂಪರ್ಕ ಹೊಂದಿದ್ದಾನೆ. ಸರ್ಕಾರಿ ಅಧಿಕಾರಿಗಳಿಂದ ಹೇಗೆ ಹಣ ವಸೂಲಿ ಮಾಡುತ್ತಿದ್ದ ಎಂಬುದರ ಬಗ್ಗೆ ತನಿಖೆ‌ ನಡೆಸುತ್ತಿದ್ದಾರೆ. ಲೋಕಾಯುಕ್ತ, ಎಡಿಜಿಪಿ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಸೇವ್ ಮಾಡಿಕೊಂಡಿದ್ದ ಆರೋಪಿಯು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಸೋಗಿನಲ್ಲಿ ಬೆದರಿಸುತ್ತಿದ್ದ.‌ ಕೈವಾಡದ ಹಿಂದೆ ಕೆಲ…

Read More

ನವದೆಹಲಿ : ಇಂದಿನಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ.ಇಂದಿನಿಂದ ಜೂನ್ 18 ರವರೆಗೆ ಒಟ್ಟು ಮೂರು ದೇಶಗಳ ಪ್ರವಾಸ ಮಾಡಲಿದ್ದಾರೆ. ಇಂದು ದ್ವಿಪ ರಾಷ್ಟ್ರ ಸೈಪ್ರಸ್ ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡಲಿದ್ದಾರೆ. ಸೈಪ್ರೆಸ್ ಅಧ್ಯಕ್ಷ ನಿಕೋಸ್ ಕ್ರಿಷ್ಟೋ ಅಹ್ವಾನದ ಮೇರೆಗೆ ನರೇಂದ್ರ ಮೋದಿಯವರು ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಹಲವು ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕಲಿದ್ದಾರೆ. ಸೈಪ್ರಸ್ ಭೇಟಿ ಬಳಿಕ ಪ್ರಧಾನಿ ಮೋದಿ ನಂತರ ಕೆನಡಾ ದೇಶಕ್ಕೆ ತೆರಳಲಿದ್ದಾರೆ. ನಾಳೆ ನಾಡಿದ್ದು ಪ್ರಧಾನಮಂತ್ರಿ ಕೆನಡಾ ದೇಶ ಪ್ರವಾಸ ಮಾಡಲಿದ್ದಾರೆ ಜಿ-7 ಶೃಂಗ ಸಭೆಯಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಕೆನಡಾ ಭೇಟಿ ನಂತರ ಜೂನ್ 18ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕ್ರೋಯೆಷಿಯಾಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

Read More

ಶಿವಮೊಗ್ಗ : ಕಾಂತರ ಚಾಪ್ಟರ್ 1 ರಲ್ಲಿ ಯಾಕೋ ಎಲ್ಲವು ಸರಿ ಇಲ್ಲ ಸಿನೆಮಾ ಸೆಟ್ ನಲ್ಲಿ ಒಂದಾದರೋಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಈಗಾಗಲೇ ಚಿತ್ರತಂಡ ಮೂವರು ಕಲಾವಿದರನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೆ ನಿನ್ನೆ ರಾತ್ರಿ ಮತ್ತೊಂದು ಅವಘಡ ಸಂಭವಿಸಿದೆ.ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದಂತ ಬೋಟ್ ಒಂದು ಮುಗುಚಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೌದು ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್​​ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್…

Read More

ಯಾದಗಿರಿ : ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಈ ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಿನ್ನೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಆಯೋಜಿಸಿದ್ದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಡಿ, ಈ ಪ್ರದೇಶದ 7 ಜಿಲ್ಲೆಗಳ ₹440.63 ಕೋಟಿಗಳ ವೆಚ್ಚದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಜಿಲ್ಲಾ ಬಂಜಾರಾ ಭವನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿ ಜೊತೆಗೆ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಡಾ। ಡಿ.ಎಂ.ನಂಜುಂಡಪ್ಪ ಅವರ ವರದಿ ನೀಡಿ ಎರಡು ದಶಕಗಳು ಕಳೆದಿದೆ. ಹಾಗಾಗಿ ಹಿಂದುಳಿದ ಪ್ರದೇಶಗಳ ಹೊಸ ಸೂಚ್ಯಂಕ ನಿಗದಿಪಡಿಸಲು ಆರ್ಥಿಕ ತಜ್ಞ…

Read More