Author: kannadanewsnow05

ಬೆಂಗಳೂರು : ಇರಾನ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಯುದ್ಧ ಹಿನ್ನೆಲೆಯಲ್ಲಿ ಇದೀಗ ದೇಶದಲ್ಲಿ ಸಿಲಿಂಡರ್ ಕೊರತೆ ಕಾಣುತ್ತಿದ್ದು ರಾಜ್ಯದಲ್ಲೂ ಇದರ ಪರಿಣಾಮ ಬೀರಿದೆ ಈ ವಿಚಾರವಾಗಿ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಮಾತನಾಡಿದ್ದು ಯಾವ ಡಿಸ್ಟ್ರಿಬ್ಯೂಟರ್ ಕೂಡ ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡೋದಕ್ಕೆ ಇಲ್ಲ ಅಂತ ಹೇಳುವ ಹಾಗಿಲ್ಲ. ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಲಿಂಡರ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ. ಮಧ್ಯಪ್ರದೇಶದಿಂದ ಹೆಚ್ಚಾಗಿ ಅನಿಲ ಆಮದು ಆಗುತ್ತಿತ್ತು. ಯುದ್ಧ ನಿಂತರೆ ಸಮಸ್ಯೆ ಇಲ್ಲ ಆದರೆ ಮುಂದುವರೆದರೆ ಕೊರತೆ ಉಂಟಾಗಲಿದೆ. ಅವಶ್ಯಕತೆ ಇರುವಾಗ ಮಾತ್ರ ಸಿಲಿಂಡರ್ ಬಳಸಬೇಕು ಒಂದು ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಹೇಳಿದೆ. ಸಿಲಿಂಡರ್ ವಿತರಕರು ಒಂದು ತಿಂಗಳಲ್ಲಿ ಒಂದು ಸಿಲಿಂಡರ್ ಕೊಡಲು ಇಲ್ಲ ಅಂತ ಹೇಳೋ ಹಾಗಿಲ್ಲ. ಬ್ಲಾಕ್ ಮಾರ್ಕೆಟ್ ಮಾಡಕ್ಕಾಗಲ್ಲ ಬ್ಲಾಕ್ ಮೇಲ್ ಮಾಡಿದರೂ ಕೂಡ ಅಂಥವರ ವಿರುದ್ಧ ಕ್ರಮ…

Read More

ಬೆಂಗಳೂರು : ಅಮೇರಿಕಾ ಇಸ್ರೇಲ್ ಹಾಗು ಇರಾನ್ ನಡುವೆ ಯುದ್ಧ ನಡೆಯುತ್ತಿದೆ. ಕಚ್ಚಾ ತೈಲ LPG ಮೇಲೆ ಯಾವ ರೀತಿ ಪರಿಣಾಮ ಆಗ್ತಿದೆ ಗೊತ್ತಿದೆ. ಪಿಎಂ ಮೋದಿ ಗ್ರಾಹಕರಿಗೆ ತೊಂದರೆ ಆಗದಂತೆ ಎಚ್ಚರ ವಹಿಸಿದ್ದಾರೆ ಕಾಂಗ್ರೆಸ್ ನವರಿಗೆ ಮಾನ ಮರ್ಯಾದೆ ಯಾವುದು ಇಲ್ಲ ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ನವರು ಪ್ರತಿಭಟನೆ ಮಾಡುತ್ತಾರೆ ಅಂದರೆ, ಅವರು ಬೌಧಿಕ ವಾಗಿ ಎಷ್ಟು ದಿವಾಳಿಯಾಗಿದ್ದಾರೆ ಗೊತ್ತಾಗುತ್ತೆ. ರಾಜ್ಯ ಸರ್ಕಾರ ಇನ್ನು ಪೊಲೀಸ್ ಬಂದಿದೆ ಸಂಬಳವನ್ನೇ ಕೊಟ್ಟಿಲ್ಲ. ಸಂಬಳ ನೀಡಿಲ್ಲ ಅಂದರೆ ರಾಜ್ಯದ ದಿವಾಳಿಯಾಗಿದೆ ಎಂದು ಗೊತ್ತಾಗಿದೆ. ಸಿಎಂ ಸಿದ್ದರಾಮಯ್ಯ ಎಲ್ಲವನ್ನು ಕುಳಿತಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Read More

ಬೆಂಗಳೂರು : ಹೆಣ್ಣುಭ್ರೂಣ ಹತ್ಯೆಯು ಸಾಂವಿಧಾನಾತ್ಮಕ ಮೌಲ್ಯಗಳಿಗೆ ಮಾಡುವ ಅವಮಾನ ಎಂದಿರುವ ಹೈಕೋರ್ಟ್​, ಲಿಂಗ ಪರೀಕ್ಷೆ ಬಳಿಕ ಗರ್ಭಪಾತ ಮಾಡಿದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದೆ.ಪ್ರಕರಣದಲ್ಲಿ ಆರೋಪಿಗಳಾಗಿದ್ದ ಶಾರದಮ್ಮ, ಅವರ ಪತಿ ದಾಸೇಗೌಡ ಮತ್ತು ಡಾ.ಶಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಹೆಣ್ಣು ಭ್ರೂಣ ಹತ್ಯೆ ಕೇವಲ ಕಾನೂನುಬಾಹಿರ ಅಪರಾಧವಲ್ಲದೇ, ನೈತಿಕ ಸಮಾಜದ ಮೇಲೆ ಬಿದ್ದ ಕಳಂಕವಾಗಿದ್ದು, ಸಂವಿಧಾನಾತ್ಮಕ ಮೌಲ್ಯಗಳನ್ನು ಅವಮಾನ ಮಾಡುವಂತದ್ದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಲಿಂಗ ಪರೀಕ್ಷೆ ನಡೆಸಿ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ಪ್ರಕರಣದ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಚನ್ನಕೇಶವ ಮತ್ತು ಅವರ ಪತ್ನಿ ಹರ್ಷಿತಾ ಮೂರನೇ ಮಗುವಿಗೆ ಗರ್ಭಿಣಿಯಾಗಿದ್ದರು. ಅವರಿಗೆ ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ, ಗರ್ಭದಲ್ಲಿರುವ ಮಗುವಿನ ಲಿಂಗ ತಿಳಿದುಕೊಳ್ಳಲು ಅವರು ಯತ್ನಿಸಿದರು. ಈಗಾಗಲೇ ಇಬ್ಬರು ಹೆಣ್ಣುಮಕ್ಕಳು ಇದ್ದ ಕಾರಣ ಸಂಬಂಧಿಕರಾದ ಶಾರದಮ್ಮ ಮತ್ತು ದಾಸೇಗೌಡ ಅವರ ಸಹಾಯದಿಂದ…

Read More

ಬೆಂಗಳೂರು : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ ಇಡೀ ಜಗತ್ತಿನಾದ್ಯಂತ ಬಹುದೊಡ್ಡ ಪರಿಣಾಮ ಬಿರಿದು ಅದರಲ್ಲೂ ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಗ್ಯಾಸ್ ಸಿಲಿಂಡರ್ ಕೂಡ ಇದೀಗ ಸಿಗುವುದು ಕಷ್ಟವಾಗಿದೆ. ಹೌದು ಈ ಒಂದು ಯುದ್ಧದ ಬಿಸಿ ರಾಜ್ಯದ ಹಲವು ಪ್ರಸಿದ್ಧ ದೇವಸ್ಥಾನಗಳಿಗೂ ತಟ್ಟಿದೆ. ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ರಾಜಧಾನಿ ಬೆಂಗಳೂರಿನ ಧಾರ್ಮಿಕ ಕೇಂದ್ರಗಳ ಮೇಲೂ ಪರಿಣಾಮ ಬೀರುವಂತಾಗಿದೆ. ಇದರ ಪರಿಣಾಮವಾಗಿ ದೇವಾಲಯಗಳಲ್ಲಿ ಭಕ್ತರಿಗೆ ವಿತರಿಸಲಾಗುತ್ತಿದ್ದ ಅನ್ನಪ್ರಸಾದ ಸೇವೆಯಲ್ಲೂ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ಅನ್ನಪ್ರಸಾದ ವಿತರಿಸುವ ವ್ಯವಸ್ಥೆ ಇದೆ. ಸಾಮಾನ್ಯ ದಿನಗಳಲ್ಲಿ ಸುಮಾರು 3 ಸಾವಿರದಿಂದ 4 ಸಾವಿರ ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ. ವಿಶೇಷವಾಗಿ ಶುಕ್ರವಾರ ಮತ್ತು ಮಂಗಳವಾರದಂದು ಭಕ್ತರ ಸಂಖ್ಯೆ ಹೆಚ್ಚಾಗಿ 4 ಸಾವಿರದಿಂದ 5 ಸಾವಿರದವರೆಗೆ ತಲುಪುತ್ತದೆ. ಭಕ್ತರಿಗಾಗಿ ದೇವಾಲಯದಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು…

Read More

ಗದಗ : ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ರಹಸ್ಯ ಇದೀಗ ಬಯಲಾಗಿದೆ. ಜನವರಿ 10 ರಂದು 465 ಗ್ರಾಂ ಚಿನ್ನದ ನಿಧಿ ಪತ್ತೆಯಾಗಿತ್ತು. ರಿತ್ತಿ ಕುಟುಂಬ ಮನೆಯ ಪಾಯ ತೆಗೆಯುವಾಗ ನಿಧಿ ಪತ್ತೆಯಾಗಿತ್ತು. ಪುರಾತನ ನಿಧಿ ದರ ಸುಮಾರು 8 ಕೋಟಿ ಮೌಲ್ಯದಾಗಿದೆ. ಈಗಿನ ಚಿನ್ನದ ದರಕ್ಕೆ ಹೋಲಿಸಿದರೆ 10ಪಟ್ಟು ಹೆಚ್ಚಳವಾಗಿದ್ದು ಕಲ್ಯಾಣ ಚಾಲುಕ್ಯರು ವಿಜಯನಗರ ಅರಸರ ಕಾಲದ ಆಭರಣಗಳು ಇವು ಎಂದು ಸರ್ಕಾರ ರಚಿಸಿದ್ದ ತಜ್ಞರ ತಂಡದಿಂದ ಇದೀಗ ನಿಧಿ ರಹಸ್ಯ ಬಯಲಾಗಿದೆ. ಆಭರಣಗಳಿಗೆ ಬೆಲೆ ಕಟ್ಟಲು ಆಗಲ್ಲ ಎಂದು ತಜ್ಞರು ತಿಳಿಸಿದ್ದು 500 ರಿಂದ 600 ವರ್ಷಗಳ ಹಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೆಣ್ಣು ದೇವರಿಗೆ ಹಾಕುವ ಚಿನ್ನದ ಆಭರಣಗಳು ಇವು ಎಂದು ತಜ್ಞರು ತಿಳಿಸಿದ್ದಾರೆ ಗದಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಜ್ಞರ ತಂಡ ಪರಿಶೀಲನೆ ನಡೆಸಿತ್ತು. ಎಂ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ತಜ್ಞರು ಪರಿಶೀಲನೆ ನಡೆಸಿದ್ದರು. ಎಂಎಸ್ ಕೃಷ್ಣಮೂರ್ತಿ ಪುರಾತತ್ವ ಶಾಸ್ತ್ರಜ್ಞ ಮತ್ತು ಸಮಿತಿಯ ಮುಖ್ಯಸ್ಥರಾಗಿದ್ದಾರೆ ಖಜಾನೆಯಲ್ಲಿ…

Read More

ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯ ಇಳಿಜಾರಿನ ತಿರುವಿನಲ್ಲಿ ಚಿರತೆ ತಡೆಗೋಡೆ ಪಕ್ಕದಲ್ಲಿ ಕೂತಿತ್ತು. ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆ ಇರುವ ದೃಶ್ಯ ಸೆರೆಯಾಗಿದೆ. ಶಿವರಾತ್ರಿ ಜಾತ್ರೆಯ ವೇಳೆ ಚಿರತೆ ಪಾದಯಾತ್ರೀಕನನ್ನು ಕೊಂದು ತಿಂದಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ.

Read More

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ ಬೆಂಗಳೂರಲ್ಲಿ ದೊಡ್ಡ ದೊಡ್ಡ ಹೋಟೆಲ್ ಗಳೆಲ್ಲ ಬಂದ್ ಆಗಿವೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪಾತ್ರ ಬರೆದಿದ್ದಾre ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ದೇಶೀಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಕುರಿತು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಆದೇಶದಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಹೋಟೆಲ್‌ಗಳು, ಮೆಸ್‌ಗಳು, ಹಾಸ್ಟೆಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳ ಕಾರ್ಯಚಟುವಟಿಕೆಗೆ ತೀವ್ರ ಅಡಚಣೆಯಾಗಿದೆ. ಆದ್ದರಿಂದ, ವಾಣಿಜ್ಯ ಎಲ್‌ಪಿಜಿಯ ಸಮರ್ಪಕ ಪೂರೈಕೆಯನ್ನು ಪುನಃಸ್ಥಾಪಿಸಲು ತುರ್ತಾಗಿ…

Read More

ಉಡುಪಿ: ಕುಡಿದ ಅಮಲಿನಲ್ಲಿ ನಡೆದ ಗಲಾಟೆಯು ವೃದ್ಧೆಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೋಮವಾರ (ಮಾ.09) ಉಡುಪಿ ತಾಲೂಕಿನ ಮಣಿಪುರ ಗ್ರಾಮದ ಕೆನರಾಡಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಕೊಲೆಯಾದ ದುರ್ದೈವಿ. ವಲೇರಿಯನ್ ಮೆಂಡೋನ್ಸಾ ಹಾಗೂ ಪ್ರವೀಣ್‌ ಮೆಂಡೋನ್ಸಾ ಬಂಧಿತ ಆರೋಪಿಗಳು. ಇವರಿಬ್ಬರು ಆಗಾಗ ವನಜಾ ಪೂಜಾರ್ತಿ ಅವರ ಜತೆ ಮದ್ಯ ಸೇವನೆ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಮೃತ ವನಜಾ ಪೂಜಾರ್ತಿ ಆರೋಪಿ ವಲೇರಿಯನ್ ಮೆಂಡೊನ್ಸಾ ಅವರ ಮನೆಯಲ್ಲಿ ಆಗಾಗ್ಗೆ ಮದ್ಯ ಸೇವನೆ ಮಾಡುತ್ತಿದ್ದರು. ಮಾರ್ಚ್ 9ರಂದು ಸಂಜೆಯಿಂದ ಮಾರ್ಚ್ 10ರ ಬೆಳಿಗ್ಗೆವರೆಗೂ ಎಂದಿನಂತೆ ಮದ್ಯ ಸೇವಿಸುತ್ತಿದ್ದಾಗ ಇವರ ನಡುವೆ ಯಾವುದೋ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಗಲಾಟೆ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆರೋಪಿಗಳು ಹರಿತವಾದ ಆಯುಧದಿಂದ ವನಜಾ ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮನೆ ಕಲಕುವಂತಹ ಘಟನೆ ಒಂದು ನಡೆದಿದ್ದು ಮೊಮ್ಮಗಳು ಬೇರೆ ಧರ್ಮದ ಯುವಕನ ಜೊತೆಗೆ ಮದುವೆಯಾಗಿದ್ದಕ್ಕೆ ಅದೇ ಸಿಟ್ಟಿನಲ್ಲಿ ಅಜ್ಜಿ ಆಕೆಯ 40 ದಿನದ ನವಜಾತ ಶಿಶುವನ್ನು ಕೊಲೆ ಮಾಡಿರುವ ಘೋರ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಕಳೆದ 2025 ಡಿಸೆಂಬರ್ 24ರಂದು ಚೇಳೂರು ಪಟ್ಟಣದಲ್ಲಿ ಮೆಹಮೂಬಿ ಎಂಬಾಕೆಯ ಮನೆಯಲ್ಲಿ ಈಕೆಯ ಮೊಮ್ಮಗಳ 40 ದಿನದ ಗಂಡು ಮಗು ಸಾವನ್ನಪ್ಪಿತ್ತು. ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಅಜ್ಜಿ ಮಣ್ಣು ಸಹ ಮಾಡಿಸಿಬಿಟ್ಟಿದ್ದಳು. ಆದರೆ ಅಜ್ಜಿಯ ಮೇಲೆ ಅನುಮಾನಗೊಂಡ ಮೊಮ್ಮಗಳು, ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೇರೆಗೆ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಎಫ್​ಎಸ್​ಎಲ್​ ವರದಿಗೆ ಕಳುಹಿಸಲಾಗಿತ್ತು. ಎಫ್​ಎಸ್​ಎಲ್​ ವರದಿಯಲ್ಲಿ ಮಗು ಉಸಿರುಗಟ್ಟಿಸಿ ಕೊಂದಿರುವುದಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಮಗುವಿನ ಅಜ್ಜಿಯೇ ಕೊಲೆ…

Read More