Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ತಾಯಿಗೆ ಬೈಯ್ದಿದ್ದಕ್ಕೆ ಸ್ವಂತ ಅಣ್ಣನನ್ನೇ ತಮ್ಮನೊಬ್ಬ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಯಾರಬ್ ನಗರದಲ್ಲಿ ನಡೆದಿದೆ. ಮಹಮ್ಮದ್ ಮುಜಾಹಿದ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮುಜಾಹೀದ್ ತಮ್ಮ ಮೊಹಮ್ಮದ್ ಮುಸೆದ್ ಸ್ವಂತ ಅಣ್ಣನನ್ನೇ ಕೊಲೆ ಮಾಡಿದ್ದಾನೆ. ತಾಯಿಗೆ ಬೈದ ಎನ್ನುವ ವಿಚಾರಕ್ಕೆ ಅಣ್ಣತಮ್ಮ ನಡುವೆ ಹೊಡೆದಾಟ ಆಗಿದೆ.ಮನೆಯಲ್ಲಿ ಇದ್ದಂತಹ ವಸ್ತುಗಳಿಂದ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದಲ್ಲಿ ಮುಜಾಹಿದ್ನನ್ನು ಮುಸೆದ್ ಹತ್ಯೆಗೈದಿದ್ದಾನೆ. ಗಾಯಗೊಂಡ ಮುಸೆದ್ ನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ಸರ್ಕಾರಿ ಬಸ್ ಹಾಗೂ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರೆ. ಇನ್ನು ಮೂವರಿಗೆ ಗಂಭೀರವಾದ ಗಾಯಗಳಾಗಿವೆ. ಕಲ್ಬುರ್ಗಿ ಸಂಚಾರಿ ಪೊಲೀಸ್ ಠಾಣೆ ಒಂದರ ವ್ಯಾಪ್ತಿಯಲ್ಲಿ ಈ ಒಂದು ಸರಣಿ ಅಪಘಾತ ಸಂಭವಿಸಿದೆ ಸಾರಿಗೆ ಬಸ್ಗೆ ಕಮಾಂಡರ್ ಜೀಪ್ ಡಿಕ್ಕಿ ಆಗಿದೆ ನಿಂತಿದ್ದ ಸಾರಿಗೆ ಬಸ್ಗೆ ಇನ್ನೊಂದು ಬಸ್ ಡಿಕ್ಕಿ ಹೊಡೆದಿದೆ ಘಟನೆಯಲ್ಲಿ ಜೀಪ್ನಲ್ಲಿ ಇದ್ದಂತಹ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮಧ್ಯೆ ಇಬ್ಬರು ಸಾವನ್ನಪ್ಪಿದ್ದರೆ. ಗಾಯಗೊಂಡ ಉಳಿದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಲ್ಲಾ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ 2% ಉದ್ಯೋಗ ಮೀಸಲಾತಿ ನೀಡಲಾಗುತ್ತದೆ ಅಂತ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜ ಪ್ರಶ್ನೆ ಕೇಳಿದ್ರು. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳು ಕೊಡಬೇಕು. ಈವರೆಗೂ 13 ಜನಕ್ಕೆ ಮಾತ್ರ ಹುದ್ದೆ ನೀಡಲಾಗಿದೆ. ನೇರ ನೇಮಕಾತಿಯಲ್ಲಿ 3% ಹುದ್ದೆ ಕ್ರೀಡಾಪಟುಗಳಿಗೆ ಮೀಸಲು ಇಡಬೇಕು. ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಪ್ರೋತ್ಸಾಹ ಕೊಡಲು ಒಂದು ಪಾಲಿಸಿ ತರಬೇಕು. ಕಬಡ್ಡಿಗೂ ಪ್ರೋತ್ಸಾಹ ಕೊಡಬೇಕು ಮನವಿ ಮಾಡಿದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿ, ಈವರೆಗೂ 13 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಕೊಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಏಷ್ಯನ್ ಗೇಮ್ಸ್ ಗೆದ್ದವರಿಗೆ ಹುದ್ದೆ ಕೊಡ್ತೀವಿ. ಪೊಲೀಸ್ ಇಲಾಖೆಯಲ್ಲಿ, ಅರಣ್ಯ ಇಲಾಖೆಯಲ್ಲಿ 3% ಮೀಸಲಾತಿ ಮಾಡಿದ್ದೇವೆ. ಉಳಿದ ಇಲಾಖೆಯಲ್ಲಿ 2% ಮೀಸಲಾತಿ ನೀಡಲು ನಿರ್ಧಾರ ಮಾಡಿದ್ದೇವೆ. ಆದಷ್ಟೂ ಬೇಗ ಆದೇಶ ಮಾಡ್ತಿವಿ.ಕಬಡ್ಡಿಗೂ ಪ್ರೋತ್ಸಾಹ ಕೊಡಲು…
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಕೋಟ್ಯಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಿಜ್ ಮಾಡಿದ್ದು ಅಲ್ಲದೆ ಹಲವು ವಿದೇಶಿ ಡ್ರಗ್ಸ್ ಹೆಡ್ಲರ್ ಗಳು ಸೇರಿದಂತೆ ಹಲವರನ್ನು ಅರೆಸ್ಟ್ ಮಾಡಿದ್ದಾರೆ. ಇದೀಗ ಈ ವಿಚಾರವಾಗಿ ಪೊಲೀಸ್ ಇಲಾಖೆಯಲ್ಲಿದ್ದುಕೊಂಡು ಮಾದಕವಸ್ತು ಮಾರಾಟಕ್ಕೆ ಉತ್ತೇಜನ ನೀಡುವ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಸೇವೆಯಿಂದಲೇ ವಜಾ ಮಾಡುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಡ್ರಗ್ಸ್ ಮುಕ್ತ ಕರ್ನಾಟಕ ಮಾಡಲು ಪಣ ತೊಡಲಾಗಿದ್ದು, ಈಗಾಗಲೇ ಪಿಡುಗಿನ ವಿರುದ್ಧ ಸಮರ ಸಾರಲಾಗಿದೆ. ಹಿಂದೆಂದಿಗಿಂತಲೂ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ ಸಾವಿರಾರು ಕೆ.ಜಿ. ತರಹೇವಾರಿ ಡ್ರಗ್ಸ್ ಜಪ್ತಿ ಮಾಡಿ, ನಾಶಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎಎನ್ ಟಿಎಫ್) ಪಡೆ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಈ…
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾರೂ ಕೂಡ ಬಾಯಿ ಬಿಡಬಾರದು ಎಂದು ಹೈಕಮಾಂಡ್ ಕಾಂಗ್ರೆಸ್ ಶಾಸಕರಿಗೆ ಸಚಿವರುಗಳಿಗೆ ಖಡಕ್ ಸಂದೇಶ ನೀಡಿತ್ತು. ಆದರೂ ಕೂಡ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ಇಲ್ಲ ಅಂತ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ಯತೀಂದ್ರ ಹೇಳಿಕೆ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಹೈಕಮಾಂಡ್ ಪ್ರತಿಯೊಬ್ಬರಿಗೂ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಬೇಡಿ ಎಂದು ಖಡಕ್ ಸೂಚನೆ ಕೊಟ್ಟಿದ್ದಾರೆ. ಆದರೆ ಯತೀಂದ್ರ ಅವರಿಗೆ ಯಾಕೆ ಏನು ಹೇಳುತ್ತಿಲ್ಲ ಅಂತ ಕಿಡಿ ಕಾರಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಯತೀಂದ್ರ ಅವರನ್ನು ಬೆಳಗಾವಿಯ ಸರ್ಕ್ಯೂಟ್ ಹೌಸ್ ಗೆ ಬುಲಾವ್ ನೀಡಿದ್ದಾರೆ. ಹಾಗಾಗಿ ಯತಿಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಸರ್ಕ್ಯೂಟ್ ಹೌಸ್ ಗೆ ತೆರಳಿದ್ದು ಕಳೆದ ಒಂದು ಗಂಟೆಯಿಂದ ಸುದೀರ್ಘವಾಗಿ ತಂದೆ ಹಾಗೂ ಮಗನ ನಡುವೆ ಈ ವಿಚಾರವಾಗಿ ಚರ್ಚೆ ನಡೆಯುತ್ತಿದೆ…
ಬೆಂಗಳೂರು : ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ. ಡೆತ್ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್ನೋಟ್ನಲ್ಲಿ ಮೃತ ವಿದ್ಯಾರ್ಥಿ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವಿಡಿಯೋ ಕಾಲ್ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಜೊತೆಗೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಳಗಾವಿ : ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿ : ಇತ್ತೀಚಿಗೆ ಎಂಎಲ್ಸಿ ಯತೀಂದ್ರ ಸಿದ್ಧರಾಮಯ್ಯ ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಈ ವಿಚಾರವಾಗಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ ಎಂದು ಹೇಳಿಕೆ ನೀಡಿದರು. ಇವರ ಒಂದು ಹೇಳಿಕೆಗೆ ಸ್ವಪಕ್ಷದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಎಚ್ಎಸ್ ಬಾಲಕೃಷ್ಣ ಅವರು ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಬೆಳಗಾವಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚಿಸಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬೆಳಗಾವಿಯಲ್ಲಿ ಯತಿಂದ್ರ ಸಿದ್ಧರಾಮಯ್ಯ ಮತ್ತೆ ಪುನರುಚ್ಚಿಸಿದ್ದಾರೆ. ಹೈಕಮಾಂಡ್ ಕೂಡ ಈ ವಿಚಾರವಾಗಿ ಸ್ಪಷ್ಟವಾಗಿ ಹೇಳಿದೆ ನಾಯಕತ್ವ ವಿಚಾರದಲ್ಲಿ ಯಾವುದೇ ಜಗಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮತ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ : 2026ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಐಪಿಎಲ್ ಪಂದ್ಯ ನಡಿಯಲ್ಲ ಎಂದು ತಿಳಿದುಬಂದಿತು. ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ IPL ಪಂದ್ಯಗಳನ್ನು ನಡೆಸಿ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ ಬೆನ್ನಲ್ಲೇ ಇಂದು ಸಚಿವ ಸಂಪುಟದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ಸಿಬಿ ಪಂದ್ಯ ನಡೆಸಲು ಅನುಮತಿ ಕುರಿತಂತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಹೌದು ಕ್ರಿಕೆಟ್ ಅಭಿಮಾನಿಗಳಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ನೀಡುತ್ತಾ ಎನ್ನುವ ಕುತೂಹಲ ಮೂಡಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಪಂದ್ಯಾವಳಿಗೆ ಅನುಮತಿಯ ಬಗ್ಗೆ ಚರ್ಚೆ ನಡೆಯುತ್ತದೆ. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ ನಿನ್ನೆ ಸರ್ಕಾರಕ್ಕೆ KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಈ ವಿಚಾರವಾಗಿ ಮನವಿ ಸಲ್ಲಿಸಿದ್ದಾರೆ. ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಡಿಸಿಎಂ ಸ್ಪಂದನೆ ನೀಡಿದ್ದು ಇವತ್ತು ಕ್ಯಾಬಿನೆಟ್ ನಲ್ಲಿ ಸಚಿವರ ಜೊತೆ ಸಿದ್ದರಾಮಯ್ಯ ಚರ್ಚೆ ಮಾಡುತ್ತಾರೆ ಎಂದು ತಿಳಿದುಬಂದಿದೆ. ಈ…
ಬೆಂಗಳೂರು : ಇಂಡಿಗೋ ವಿಮಾನ ಹಾರಾಟ ಸಮಸ್ಯೆ ಮುಂದುವರೆದಿದ್ದು, ಇಂದು ಸಹ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 60 ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ತರಳಬೇಕಿದ್ದ 28 ವಿಮಾನಗಳು ಮತ್ತು ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ್ದ 32 ವಿಮಾನಗಳ ಹಾರಾಟ ರದ್ದು ಆಗಿದೆ. ವಿಮಾನಗಳ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಸಂದೇಶ ರವಾನಿಸಲಾಗಿತ್ತು. ನಿನ್ನೆ 58 ವಿಮಾನಗಳನ್ನು ಕ್ಯಾನ್ಸಲ್ ಮಾಡಲಾಗಿತ್ತು. ಇಂದು ಮತ್ತೆ 60 ವಿಮಾನಗಳ ಹಾರಾಟ ರದ್ದು ಆಗಿದೆ. ವಿಮಾನಗಳು ರದ್ದು ಆಗಿದ್ದು ಏರ್ಪೋರ್ಟ್ಗೆ ಪ್ರಯಾಣಿಕರು ಬರಬೇಡಿ ಎಂದು ವಿಮಾನ ಪ್ರಯಾಣಿಕರಿಗೆ ಇಂಡಿಗೋ ಏರ್ಲೈನ್ಸ್ ಸಂದೇಶ ರವಾನಿಸಿದೆ.














