Author: kannadanewsnow05

ರಾಯಚೂರು : ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು. ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ. ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಯ ಭಾಗದಲ್ಲಿರುವ ಚೋರಘಾಟ್ ನಲ್ಲಿ ಕಳೆದ ಕೆಲವು ದಿನಗಳ ಹಿಂದೆ 400 ಕೋಟಿ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಈ ಒಂದು ದರೋಡೆಯ ಪ್ರಮುಖ ಆರೋಪಿ ಆಗಿರುವ ಕಿಶೋರ್ ಸಾಳ್ವೆ ನನ್ನು ಅರೆಸ್ಟ್ ಮಾಡಿದ್ದಾರೆ. ಕಿಶೋರ್ ಸಾಳ್ವೆ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ.ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಪ್ರಕರಣ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್ ಪ್ರದೇಶದಲ್ಲಿ 2025 ರ ಅಕ್ಟೋಬರ್ 25 ರಂದು ಎರಡು ಕಂಟೇನರ್‌ಗಳಲ್ಲಿದ್ದ ಸುಮಾರು 400 ಕೋಟಿ ರೂ. ಹಣವನ್ನು ದರೋಡೆ ಮಾಡಲಾಗಿತ್ತು ಎಂದು ಮಹಾರಾಷ್ಟ್ರದ ನಾಸಿಕ್ ಮೂಲದ ಉದ್ಯಮಿ ಸಂದೀಪ್ ದತ್ತಾ ಪಾಟೀಲ್ ಇತ್ತೀಚೆಗೆ ಮಹಾರಾಷ್ಟ್​ರ ಪೊಲೀಸರಿಗೆ ದೂರು ನೀಡಿದ್ದರು. ಅದರೊಂದಿಗೆ, ಪ್ರಕರಣ ಬೆಳಕಿಗೆ…

Read More

ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ತ್ರಿಬಲ್ ಮರ್ಡರ್ ಕೊಲೆ ಪ್ರಕರಣಕ್ಕೆ ಇದೀಗ ಸ್ಪೋಟಕ ಟ್ವಿಸ್ಟ್ ಸಿಕ್ಕಿದ್ದು ತನಿಖೆಯ ವೇಳೆ ಆರೋಪಿಯಾಗಿರುವ ಅಕ್ಷಯ್ ಪೊಲೀಸರ ಮುಂದೆ ಕೊಲೆ ಮಾಡುವುದಕ್ಕೆ ನಿಜವಾದ ಕಾರಣ ಬಾಯಿಬಿಟ್ಟಿದ್ದಾನೆ. ಆರೋಪಿ ಅಕ್ಷಯ್ ಕೊಲೆ ಮಾಡಿದ್ದು ಮೂವರನ್ನಲ್ಲ, ಬದಲಿಗೆ ನಾಲ್ವರನ್ನು ಎಂಬುದು ಬೆಳಕಿಗೆ ಬಂದಿದೆ. ಜತೆಗೆ, ಇದು ದ್ವೇಷದ ಕೊಲೆಯಲ್ಲ, ಮರ್ಯಾದಾ ಹತ್ಯೆ ಎಂಬುದೂ ಗೊತ್ತಾಗಿದೆ. ಹೌದು ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ ಮಾಡಿದ್ದಾನೆ. ಪೊಲೀಸರ ವಿಚಾರಣೆ ವೇಳೆ ಬಾಯ್ಬಿಟ್ಟಿರುವ ಅಕ್ಷಯ್, ಇದು ಕೇವಲ ದ್ವೇಷದ ಕೊಲೆಯಲ್ಲ, ಕುಟುಂಬದ ಗೌರವ ಉಳಿಸಿಕೊಳ್ಳಲು ಮಾಡಿದ ಕೃತ್ಯ ಎಂದು ಹೇಳಿಕೊಂಡಿದ್ದಾನೆ. ನಾಲ್ಕು ತಿಂಗಳ ಹಿಂದೆ ಅಕ್ಷಯ್ ತಂಗಿಯ ಮೊಬೈಲ್ ಪರಿಶೀಲಿಸಿದ ವೇಳೆ ಪಿಯುಸಿ ಓದುತ್ತಿದ್ದ ಯುವಕನೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿರುವುದು…

Read More

ಬೆಂಗಳೂರು : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐತಿಹಾಸಿಕ 9ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಈ ಕುರಿತು ಬಜೆಟ್‌ನಿಂದ ರಾಜ್ಯಕ್ಕೆ ಯಾವ ಅನುಕೂಲ ಆಗಿಲ್ಲ. ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ಯಾವುದೇ ದೊಡ್ಡ ಪಾಲು ಬಂದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾನು ಇಷ್ಟೊತ್ತು ಗಮನಿಸಿದೆ, ಈಗೇನೋ ಯಾವುದೋ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಟ್ಟಿದ್ದಾರೆ. ನಾವು ಮನರೇಗಾ ಹೆಸರಲ್ಲಿ ನಮ್ಮ ಕ್ಷೇತ್ರದಲ್ಲೇ ಮ್ಯಾರಥಾನ್ ಮಾಡಿದ್ದೇವೆ. ಮನರೇಗಾ ಬದಲಾವಣೆ ವಾಪಸ್ ತೆಗೆದುಕೊಳ್ಳಲಿ. ಹಿಂದೆ ಯಾವ ಸ್ಕೀಂ ಇತ್ತು ಅದೇ ಸ್ಕೀಂ ಮುಂದುವರೆಯಲಿ. 60:40 ಯಾವುದೇ ಕಾರಣಕ್ಕೂ ನಡೆಯಲ್ಲ. ಯಾವ ಸರ್ಕಾರವೂ ಬಂಡವಾಳ ಹಾಕಲು ಆಗಲ್ಲ ಎಂದರು. ಬೆಂಗಳೂರಿಗೆ ಹೈಸ್ಪೀಡ್ ರೈಲು ಘೋಷಣೆ ವಿಚಾರದ ಬಗ್ಗೆ ಮಾತನಾಡಿ, ಯಾವ ಹೈಸ್ಪೀಡ್ ರೈಲು ರೀ? ಯಾವ ಸ್ಪೀಡ್ ರೈಲೂ ಬರಲ್ಲ. 50:50 ಅನುಪಾತದಲ್ಲಿ ಮಾಡಲು ಆಗಲ್ಲ, ಬೇಕಿದ್ರೆ 90:10 ಕೊಡಲಿ. ಆಗ ನಾವು 10% ನಾವು ಕೊಡುತ್ತೇವೆ. ಬೇರೆ ರಾಜ್ಯಗಳಿಗೆ…

Read More

ನವದೆಹಲಿ : 2026ರ ಕೇಂದ್ರ ಸರ್ಕಾರದ ಬಜೆಟ್ ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. 2026 ಬಜೆಟ್ ಅಭಿವೃದ್ಧಿಗೆ ರಾಜ ಮಾರ್ಗ ಇದ್ದಂತೆ, ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ ಎಂದು ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಬಜೆಟ್ ದೇಶದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸುತ್ತದೆ, ಈ ಬಜೆಟ್ ದೇಶದ ಅಭಿವೃದ್ಧಿಗೆ ಹೊಸ ಸ್ಪರ್ಶ ಸಿಗಲಿದೆ. ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಇತಿಹಾಸ ನಿರ್ಮಿಸಿದ್ದಾರೆ ಅವರು ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ. ಇದು ಬಾರಿ ಅಭಿವೃದ್ಧಿ ಹೊಂದುವಂತಹ ಬಜೆಟ್ ಆಗಿದ್ದು ಆದಷ್ಟು ಬೇಗ ಭಾರತ ಮೂರನೇ ಆರ್ಥಿಕತೆ ರಾಷ್ಟ್ರವಾಗಲಿದೆ ಎಂದು ಪ್ರಧಾನ ಮಂತ್ರಿ ಮೋದಿ ತಿಳಿಸಿದರು. ಲೋಕಲ್ ಟು ಗ್ಲೋಬಲ್ ಗೆ ಬಜೆಟ್ ಸಹಕಾರಿ ಆಗಲಿದೆ. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ಸಹಕಾರಿಯಾಗಲಿದೆ. ಸೆಮಿಕಂಡಕ್ಟರ್, ವೈದ್ಯಕೀಯ ಕ್ಷೇತ್ರದಲ್ಲಿ ಅಭಿವೃದ್ಧಿ ವೈದ್ಯಕೀಯ ಕ್ಷೇತ್ರಕ್ಕೆ ಈ ಬಾರಿ ಬಜೆಟ್ ಸಹಕಾರಿ ಆಗಲಿದೆ ಎಂದು ಪ್ರಧಾನ ಮಂತ್ರಿ ಮೋದಿ ತಿಳಿಸಿದರು.

Read More

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಿಂದ ಪತ್ನಿ ಹಾಗೂ ಮಕ್ಕಳಿಗೆ ಹಸ್ತಾಂತರ ಮಾಡಲಾಗಿದ್ದು, ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರಾಂಡ್‌ನಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ. ಆಸ್ಪತ್ರೆ ಬಳಿ ರಾಯ್ ಪತ್ನಿ‌ ಮತ್ತು ಮಕ್ಕಳ ಆಕ್ರಂದನ‌ ಮುಗಿಲು ಮುಟ್ಟಿತ್ತು. ಆಸ್ಪತ್ರೆಯಿಂದ ಹೊರಟ ಆಂಬ್ಯುಲೆನ್ಸ್​ನ್ನು ರಾಯ್ ಅವರ ಕಾನ್ಫಿಡೆಂಟ್ ಕಚೇರಿ ಮುಂದೆ ಕೆಲಕಾಲ ನಿಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಶಾಸಕ ಎನ್.ಎ.ಹ್ಯಾರಿಸ್ ಅವರು ರಾಯ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಸಿ.ಜೆ.ರಾಯ್ ಅವರು‌ ಜನವರಿ 30ರಂದು ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅಶೋಕನಗರ ಠಾಣಾ ವ್ಯಾಪ್ತಿಯ ಲ್ಯಾಂಗ್ ಫೋರ್ಡ್ ಟೌನ್‌ನಲ್ಲಿರುವ ತಮ್ಮದೇ ಕಚೇರಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಸಿ.ಜೆ.ರಾಯ್, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದರು. ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಘಟನೆ ನಡೆದಿತ್ತು. ‘SIT’ ಇಂದ ತನಿಖೆ ಈಗಾಗಲೇ, ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ…

Read More

ನವದೆಹಲಿ : ಬಜೆಟ್ ಮಂಡನೆ ಬಳಿಕ ಚಿನ್ನ, ಬೆಳ್ಳಿ ದರ ಭಾರಿ ಇಳಿಕೆಯಾಗಿದೆ. ಇಂದು ಬಂಗಾರದ ದರದಲ್ಲಿ 6 ರಷ್ಟು ಇಳಿಕೆ ಆಗಿದ್ದರೆ ಬೆಳ್ಳಿಯಲ್ಲಿ ಶೇಕಡ 19 ರಷ್ಟು ಇಳಿಕೆಯಾಗಿದೆ. ಸದ್ಯ 27 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 9014 ರೂಪಾಯಿ ಕಂಡಿದ್ದು, ಸದ್ಯ 10 ಗ್ರಾಂ ಚಿನ್ನದ ಬೆಲೆ 1,43,25 ಆಗಿದೆ. ಇನ್ನು ಭಾರಿಯೇರಿಕೆ ಕಂಡಿದ್ದ ಬೆಳ್ಳಿಯಲ್ಲು ದೊರಕುಸಿತವಾಗಿದ್ದು ಬೆಳ್ಳಿಯಲ್ಲಿ ಶೇಕಡ 19 ರಷ್ಟು ಇಳಿಕೆಯಾಗಿದೆ ಸದ್ಯ ಕೆಜಿಗಳಿಗೆ 3,12,000 ಇಳಿದಿದೆ.

Read More

ದಾವಣಗೆರೆ : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್ ಅವರ ಆಪ್ತ ಅಯೂಬ್ ಪೈಲ್ವಾನ್ ಎಂಬವರ ಪುತ್ರ ಹಸೇನ್ ಹಾಗೂ ಆತನ ಸ್ನೇಹಿತನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಅಯೂಬ್ ಪೈಲ್ವಾನ್ ಅವರ ಇನ್ನೊಬ್ಬ ಪುತ್ರ ಹುಸೇನ್‍ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಒಂದೇ ಕೋಮಿನ ಎರಡು ಯುವಕರ ಗುಂಪಿನ ನಡುವೆ ಘರ್ಷಣೆ ನಡೆಯುತ್ತಿತ್ತು. ಈ ವೇಳೆ ನಿಯಂತ್ರಣಕ್ಕೆ ಮುಂದಾದ ಕಾನ್ಸ್‌ಟೇಬಲ್‌ ಹರೀಶ್ ಹಾಗೂ ಕೆಂಚಪ್ಪ ಎಂಬವರ ಮೇಲೆ ಕಿಡಿಗೇಡಿಗಳು ಏಕಾಏಕಿ ಹಲ್ಲೆ ಮಾಡಿದ್ದರು. ಹಲ್ಲೆಗೆ ಸಂಬಂಧಿಸಿದಂತೆ 10 ಜನ ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹಲ್ಲೆಯಿಂದ ಪೊಲೀಸ್ ಸಿಬ್ಬಂದಿ ತಲೆ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಅನಿರೀಕ್ಷಿತ ಹಲ್ಲೆಯಿಂದ ಆಘಾತಕ್ಕೊಳಗಾಗಿದ್ದಾರೆ. ರಾತ್ರಿಯಿಂದ ಜ್ವರದಿಂದ ಬಳಲುತ್ತಿದ್ದಾರೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Read More

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ ಕಡಿಮೆ ಟ್ಯಾಕ್ಸ್ ರಿಲೀಫ್ ಕೊಟ್ಟ ಕೇಂದ್ರ ಸರ್ಕಾರ. ಈ ವೇಳೆ ಮಧ್ಯ ಸಿಗರೇಟ್ ವಿಮಾನದ ಬಿಡಿ ಭಾಗ ಸೇರಿದಂತೆ ಹಲವು ವಸ್ತುಗಳ ದರ ಏರಿಕೆ ಮಾಡಲಾಯಿತು. ಇದೆ ವೇಳೆ ಬೀಡಿ ದರ, ವಿದೇಶಿ ಯಾತ್ರೆ ಪಾದರಕ್ಷೆ ದರ ಬ್ಯಾಟರಿ ದರ ಸೋಲಾರ್ ಬಿಡಿ ಭಾಗಗಳ ದರ ಇಳಿಕೆ ಮಾಡಲಾಯಿತು. ಸೆಣಬು ಸಿಎನ್ಜಿ ಹಾಗೂ ಬಯೋಗ್ಯಾಸ್ ದರ ಇಳಿಕೆ ಮಾಡಲಾಗಿದೆ. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ ಇದರಿಂದ…

Read More

ನವದೆಹಲಿ : 2026 ನೇ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದರು. 9ನೇ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮಾಘ ಪೂರ್ಣಿಮೆ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ನಿರ್ಮಲ ಸೀತಾರಾಮನ್ ಬಜೆಟ್ ಭಾಷಣದಲ್ಲಿ ತಿಳಿಸಿದರು. ಈ ವೇಳೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದ್ದು BSE ಸೆನ್ಸಕ್ಸ್ 2500 ಹಾಗು ನಿಫ್ಟಿ 500 ಅಂಕ ಕುಸಿತ ಕಂಡಿದೆ. ಈ ವೇಳೆ ಮಧ್ಯ ಸಿಗರೇಟ್ ವಿಮಾನದ ಬಿಡಿ ಭಾಗ ಸೇರಿದಂತೆ ಹಲವು ವಸ್ತುಗಳ ದರ ಏರಿಕೆ ಮಾಡಲಾಯಿತು. ಇದೆ ವೇಳೆ ಬೀಡಿ ದರ, ವಿದೇಶಿ ಯಾತ್ರೆ ಪಾದರಕ್ಷೆ ದರ ಬ್ಯಾಟರಿ ದರ ಸೋಲಾರ್ ಬಿಡಿ ಭಾಗಗಳ ದರ ಇಳಿಕೆ ಮಾಡಲಾಯಿತು. ಸೆಣಬು ಸಿಎನ್ಜಿ ಹಾಗೂ ಬಯೋಗ್ಯಾಸ್ ದರ ಇಳಿಕೆ ಮಾಡಲಾಗಿದೆ. ವಿದೇಶಿ ವಿನಿಮಯ ಕಾನೂನು ಪರಿಷ್ಕರಣೆಯ ನಿರ್ಧಾರದಿಂದ ವಿದೇಶಿ ಹೂಡಿಕೆದಾರರಿಗೆ ಅನುಕೂಲವಾಗಲಿದ್ದು ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಆಗಲಿದೆ…

Read More