Subscribe to Updates
Get the latest creative news from FooBar about art, design and business.
Author: kannadanewsnow05
ಉಡುಪಿ : ಮೂರು ಬಾರಿ ಶಾಸಕನಾಗಿದ್ದ ನನಗೆ ಪಕ್ಷದಲ್ಲಿ ಸಿಗಬೇಕಾಗಿದ್ದ ಮನ್ನಣೆ ಗೌರವ ಸಿಕ್ತಿಲ್ಲ. ಆದ್ದರಿಂದ ನಾನು ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿಯೇ ಸಿದ್ದ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ತಿಳಿಸಿದರು. ನಗರದಲ್ಲಿ ನಿನ್ನೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಟಿಕೆಟ್ ಸಿಗ್ಲಿಲ್ಲ ಅಂತ ಮೇ 20ರ ವರೆಗೆ ಗಲಾಟೆ ಮಾಡ್ತಾನೆ, ನಂತರ ನಾಮಪತ್ರ ಹಿಂದಕ್ಕೆ ಪಡೀತಾನೆ ಎಂದು ಪಕ್ಷದ ನಾಯಕರು ತಿಳಿದುಕೊಂಡಿದ್ದಾರೆ. ಆದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ. ಗೆದ್ದು ಬಿಜೆಪಿಯ ವಿಧಾನಪರಿಷತ್ ಸದಸ್ಯನಾಗುತ್ತೇನೆ ಎಂದರು. ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಸಿಗದಂತೆ ಷಡ್ಯಂತ್ರ ಮಾಡಿದರು. ವಿಧಾನಪರಿಷತ್ ಚುನಾವಣೆಯ ಟಿಕೆಟ್ ಘೋಷಣೆಯ ಸಂದರ್ಭದಲ್ಲಿ ನಾಯಕರು ನನ್ನನ್ನು ಕರೆದು ಮಾತನಾಡಿಸಲಿಲ್ಲ. ಟಿಕೆಟ್ ನೀಡದ ಬಗ್ಗೆ ಮನವರಿಕೆ ಮಾಡಲಿಲ್ಲ. ಈಗ ಬಂದು ಸ್ಪರ್ಧಿಸಬೇಡಿ ಎನ್ನುತ್ತಿದ್ದಾರೆ. ಇಂದು ಅಭಿಮಾನಿಗಳೊಂದಿಗೆ ನಾಮಪತ್ರ ರಘುಪತಿ ಭಟ್ಟರು ಇಂದು ಮೈಸೂರಿನ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕಾಗಿ ಉಡುಪಿ,…
ಬೆಂಗಳೂರು : ರಾಜ್ಯದಲ್ಲಿ ನಮ್ಮ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸರ್ಕಾರ ಬೀಳಿಸಲು 50ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕು. ಬದಲಿಗೆ ಎನ್‌ಡಿಎ ಒಕ್ಕೂಟದ ಬಿಜೆಪಿ ಹಾಗೂ ಜೆಡಿಎಸ್‌ನ 30ಕ್ಕೂ ಹೆಚ್ಚು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಎಂ.ಬಿ. ಪಾಟೀಲ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಟ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ. ಅವರು ಇಲ್ಲಿಗೆ ಬಂದರೂ ಏನೂ ಮಾಡಲಾಗುವುದಿಲ್ಲ. ಬರೆದಿಟ್ಟುಕೊಳ್ಳಿ ಚುನಾವಣೆ ಮುಗಿದ ತಿಂಗಳ ಒಳಗಾಗಿ ಅವರೇಮಾಜಿಯಾಗಲಿದ್ದಾರೆ.ಅವರ ಸರ್ಕಾರವೇ ಪತನ ವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌ನ 11-12 ಮಂದಿ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ನೀವೇ ಹೇಳುತ್ತಿದ್ದೀರಿ. ಹೀಗಿದ್ದಾಗ ಇಷ್ಟು ಬಹುಮತದ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹಿಂದೆ ಹೋದವರು ಶೀಘ್ರದಲ್ಲೇ ಮತ್ತೆ ಮಾತೃ ಪಕ್ಷಕ್ಕೆ ವಾಪಸು ರಾಜಿಯಾಗಲಿ ಆಗುತ್ತಾರೆ.ಎಲ್ಲರೂ ಶಿವಸೈನಿಕರು,…
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಬಳಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಹಾರಾಷ್ಟ್ರದ ಸಿಎಂ ಏಕನಾಥ ಶಿಂಧೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ತಿಳಿಸಿದ್ದರು. ಇವರ ಹೇಳಿಕೆಗೆ ಸಚಿವ ಎಮ್ ಬಿ ಪಾಟೀಲ್ ತೆಲುಗು ನೀಡಿದ್ದು ಚುನಾವಣೆಯ ಬಳಿಕ ಒಂದೇ ತಿಂಗಳಲ್ಲಿ ಮಹಾರಾಷ್ಟ್ರ ಸರ್ಕಾರ ಬೀಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಹಾರಾಷ್ಟ್ರದಲ್ಲಿ ಏಕನಾಥ ಶಿಂಧೆ ಮಾಜಿ ಆಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿಕೆ ನೀಡಿದರು. ಮಹಾರಾಷ್ಟ್ರದಲ್ಲಿ 30 ರಿಂದ 40 ಶಾಸಕರು ನಮ್ಮ ಕಡೆ ಬರುತ್ತಾರೆ ಎಂದು ಸ್ಪೋಟಕವಾದ ಮಾಹಿತಿ ತಿಳಿಸಿದರು. ಎಲ್ಲರೂ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ.NCP ಕಡೆಯು ಹೋಗುತ್ತಾರೆ.ಚುನಾವಣೆ ಮುಗಿದ ತಿಂಗಳ ಬಳಿಕ ಸರ್ಕಾರ ಬೀಳಲಿದೆ. ಅಜಿತ್ ಪವಾರ್ ಶಾಸಕರನ್ನ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ.ವಾಪಸ್ ಶಿವಸೇನೆ ನಾಯಕರು ಉದ್ಧವ್ ಠಾಕ್ರೆ ಬಳಿ ಹೋಗುತ್ತಾರೆ ಎಂದು ಬೆಂಗಳೂರಿನಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬೀದರ್ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಮುಖವಾದ 5 ಗ್ಯಾರಂಟಿ ಯೋಜನೆಗಳನ್ನ ಜಾರಿ ಮಾಡಿತ್ತು. ಅದರಲ್ಲಿ ಮಹಿಳೆಯರಿಗಾಗಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಕೂಡ ಒಂದು. ಇದೀಗ ಬೀದರ್ ಅಲ್ಲಿ ಬಸ್ ಸೀಟಿಗಾಗಿ ಮಹಿಳೆಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಸೀಟಿಗಾಗಿ ಇಬ್ಬರು ಮಹಿಳೆಯರು ಕಿತ್ತಾಡಿಕೊಂಡಿದ್ದಾರೆ. ಬೀದರ್ ಇಂದ ಕಲಬುರಗಿಗೆ ಆಗಮಿಸಲು ಉಚಿತ ಯೋಜನೆಯಡಿಯಲ್ಲಿ ಟಿಕೇಟ್ ಪಡೆದುಕೊಂಡಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಇದು ನನ್ನ ಜಾಗ ಬಿಡು ಎಂದಿದ್ದಾರೆ. ಅದಕ್ಕೆ ಇನ್ನೊಬ್ಬ ಮಹಿಳೆ ನಾನು ಸೀಟ್ ಬಿಡಲ್ಲ ಏನೂ ಮಾಡ್ತಿಯಾ ಎಂದು ಪರಸ್ಪರ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ಇಬ್ಬರ ಗಲಾಟೆ ತಾರಕಕ್ಕೆ ಏರಿದೆ.ಗಲಾಟೆ ಜೋರಾಗುತ್ತಿದ್ದಂತೆ ಓರ್ವ ಮಹಿಳೆ ತನ್ನ ಚಪ್ಪಲಿ ತೆಗೆದು ಜಗಳ ಮಾಡುತ್ತಿದ್ದ ಮಹಿಳೆ ಹೊಡೆದಿದ್ದಾಳೆ.ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಇದೀಗ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಹಾಸನ ಸಂಶೋಧ ಪ್ರಚೋಲ ರೇವಣ್ಣ ಅವರು ಕಳೆದ 15 ದಿನಗಳಿಂದ ವಿದೇಶದಲ್ಲಿ ಇದ್ದಾರೆ ಇದೀಗ ಮೇ 15ರಂದು ಟಿಕೆಟ್ ಬುಕ್ ಮಾಡಿದ್ದ ಪ್ರಜ್ವಲ್ ರೇವಣ್ಣ ಕಳೆದ ನಾಲ್ಕು ದಿನಗಳ ಹಿಂದೆ ಅದನ್ನು ಕ್ಯಾನ್ಸಲ್ ಮಾಡಿದರು ಇದೀಗ ಮತ್ತೆ ಬಿಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು ಎಸ್ ಐ ಟಿ ನೀಡುವ ನೋಟಿಸ್ ಹಾಗೂ ಸಿಐಡಿ ಮುಖಾಂತರ ಬ್ಲ್ಯೂ ಕಾರ್ನರ್ ನೋಟಿಸ್ ನೀಡುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಇಂದೇ ಬೆಂಗಳೂರಿಗೆ ಆಗಮಿಸಬೇಕಾಗಿತ್ತು, ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಬುಕ್ ಮಾಡಿದ ಟಿಕೇಟನ್ನು ಕ್ಯಾನ್ಸಲ್ ಮಾಡಿದ್ದರು. ಇದೀಗ ಪ್ರಜ್ವಲ್ ಮತ್ತೆ ಟಿಕೆಟ್ ಬುಕ್ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ LH 764 ವಿಮಾನದಲ್ಲಿ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಬೆಳಗ್ಗೆ ಪ್ರಜ್ವಲ್ ರೇವಣ್ಣ ಟಿಕೆಟ್ ಬುಕ್ ಮಾಡಿದ್ದಾರೆ. ಇಂದು ಮಧ್ಯರಾತ್ರಿ ಬೆಂಗಳೂರಿಗೆ ವಿಮಾನ ಆಗಮಿಸಲಿದೆ ಎಂದು…
ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ಹಲವಾರು ನಾಯಕರು ಹೇಳಿಕೆಗಳನ್ನು ನೀಡಿದರು ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದು,ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿ ವೈ ವಿಜಯೇಂದ್ರ ಅವರು ಮಾನ್ಯ ಸಿದ್ದರಾಮಯ್ಯ ಅವರೇ, ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ. ಭಾರತದ ರಾಜಕೀಯ…
ಬೆಂಗಳೂರು : ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಈ ಕುರಿತಂತೆ ಮಾತನಾಡಿದ್ದು ಈ ಒಂದು ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿದವರೇ ಕಾಂಗ್ರೆಸ್ನವರು ಎರಡು ಮಾತಿಲ್ಲ ಎಂದು ಗಂಭೀರವಾಗಿ ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿದವರೇ ಕಾಂಗ್ರೆಸ್ನವರು ಎರಡು ಮಾತಿಲ್ಲ. ಇದೆಲ್ಲ ಪ್ಲಾನ್ ಮಾಡಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಈಗ ತಮ್ಮ ಮೇಲಿನ ಆಪಾದನೆ ಬಿಜೆಪಿಗೆ ಕಡೆ ತಿರುಗೀಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅರಶೋಕ್ ವಾಗ್ದಾಳಿ ನಡೆಸಿದರು. ಎಸ್ಐಟಿ ಮೂಲಕ ನಮ್ಮ ಕಡೆ ತನಿಖೆಯನ್ನು ತಿರುಗಿಸಿದ್ದಾರೆ.ಎಸ್ ಐ ಟಿ ಅಧಿಕಾರಿಗಳು ಪಕ್ಷಪಾತ ಧೋರಣೆ ತೋರಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕಾದರೆ ಸಿಬಿಐಗೆ ಪ್ರಕರಣವನ್ನು ವಹಿಸಲಿ ಪ್ರಜ್ವಲ್ ಪ್ರಕರಣದ ತನಿಖೆ ಸಿಬಿಐ ಗೆ ವಹಿಸಲಿ. ಪ್ರಜ್ವಲ್ ಇದುವರೆಗೂ ವಾಪಾಸ್ಸಾಗಿಲ್ಲ. ಎಸ್ಐಟಿಯವರು ಬಂಧಿಸಿ ಕರೆ ತಂದಿಲ್ಲ.ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ಪೆನ್ ಡ್ರೈವ್ ಇದೆ. ಕಾಂಗ್ರೆಸ್ ಕಾರ್ಯಕರ್ತರ ಮೊಬೈಲ್ ಚೆಕ್…
ವಿಜಯಪುರ : ವಿಜಯಪುರದಲ್ಲಿ ಇಂದು ಅತ್ಯಂತ ಘೋರವಾದ ಘಟನೆ ನಡೆದಿದ್ದು, ನವ ವಿವಾಹಿತ ಜೋಡಿಗಳು ಮನೆಯಲ್ಲಿ ಯಾರು ಇಲ್ಲದ ವೇಳೆ ನೀನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಹೊರಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.ಮನೋಜ್ ಕುಮಾರ್ ಪೋಳ (30) ರಾಖಿ (23) ಆತ್ಮಹತ್ಯೆಗೆ ಶರಣಾದ ನವವಿವಾಹಿತ ಜೋಡಿಗಳು ಎಂದು ಹೇಳಲಾಗುತ್ತಿದೆ. ಹೌದು ವಿಜಯಪುರದಲ್ಲಿ ನವ ವಿವಾಹಿತ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಜಯಪುರದ ಹೊರಬಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ನವ ಜೋಡಿಗಳು ಎಂದು ಹೇಳಲಾಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯಲ್ಲಿ ಒಪ್ಪಿಸಿ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು ಆದರೆ ಬೆಳಗ್ಗೆ ಬಂದು ನೋಡಿದ ತಕ್ಷಣ ಇಬ್ಬರೂ ನೀನಿಗೆ ಶರಣಾಗಿದ್ದಾರೆ ಎಂದು ಅಮೃತ ರಾಕಿ ತಾಯಿ ಭಾರತಿ ಅವರು ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಏನು ಕಾರಣ…
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರು ಕೆಲವು ಪ್ರಮುಖವಾದಂತಹ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಸಾಹಿತಿಗಳು ಉಲ್ಲೆಖಿಸಿದ ಪ್ರಮುಖ ಅಂಶಗಳು 1) ಪ್ರಜ್ವಲರನ್ನು ಕೂಡಲೇ ಬಂಧಿಸಿ ಐಟಿ ಐಪಿಸಿ ಕಾಯ್ದೆ ಅಡಿ ಕೆಸ್ ಹಾಕಿ 2) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರಚಾರಪ ಮಾಡುತ್ತಿರುವ ರಾಜಕಾರಣಿಗಳಿಗೆ ಕಡಿವಾಣ ಹಾಕಿ 3) ಎಸ್ ಐ ಟಿ ಅಧಿಕಾರಿಯ ತನಿಖೆಯು ಕಾಲಮಿತಿಯೊಳಗೆ ಕೊನೆಗೊಳ್ಳಬೇಕು. 4) ಪ್ರಜ್ವಲ್ ಜೊತೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು 5) ಪ್ರಜ್ವಲ್ ಮಾಜಿ ಕಾರು ಚಾಲ ಕಾರ್ತಿಕ ಗೌಡನನ್ನು ಕೂಡಲೇ ಬಂಧಿಸಬೇಕು.…
ಬೆಂಗಳೂರು : ಈಗಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಹುತೇಕ ಮುಗಿದಿದೆ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆದರೆ ಕಾಂಗ್ರೆಸ್ ಗಂಟು ಮೂಟೆ ಕಟ್ಟುವುದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬೀಳಿಸಲು ಕಾಂಗ್ರೆಸ್ ನವರೇ ಸಾಕು. ಬೇರೆಯವರು ಬೇಡ 17 ಜನ ಹೋದಾಗ ಇವರ್ಯಾಕೆ ಮುಟ್ಟಿ ನೋಡಿಕೊಳ್ಳಲಿಲ್ಲ? ಕೈ ಶಾಸಕರೇ ಯಾಕಾದರೂ ಗೆಲ್ಲಿಸಿದ್ದೀವಿ ಅಂತ ಬೇಸರದಲ್ಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆದಮೇಲೆ ಕಾಂಗ್ರೆಸ್ ಗಂಟು ಮೂಟೆ ಕಟ್ಟೋದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಇನ್ನು ಹಾಸನದಲ್ಲಿ SIT ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ಸಿಗರಿಗೆ ಇರಿ ಮುರಿಸು ಆಗಿ ಹೀಗೆ ಮಾಡಿದ್ದಾರೆ. ಒಕ್ಕಲಿಗ ಸಮುದಾಯ ತಿರುಗಿ ಬೀಳುತ್ತೆ ಎಂದು ಅವರಿಗೆ ಭಯ ಶುರುವಾಗಿದೆ ಚಾಲಕನಿಗೆ ಜಾಮೀನು ನಿರಾಕರಿಸಿದರು…











