Author: kannadanewsnow05

ಬೆಂಗಳೂರು : ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಕಡೆಗೂ ನೂರಡಿ ದಾಟಿದೆ. ಸಾಮಾನ್ಯವಾಗಿ ಮೇ, ಜೂನ್‌ನಲ್ಲೇ ನೂರು ಅಡಿ ತಲುಪುತ್ತಿದ್ದ ಕನ್ನಂಬಾಡಿ ಕಟ್ಟೆಯ ನೀರಿನ ಮಟ್ಟ ಈ ವರ್ಷ ಜುಲೈ ಮೊದಲ ವಾರದಲ್ಲಿ ಮುಟ್ಟಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರಿಗೆ ಸಿಹಿ ಸುದ್ದಿ ನೀಡುತ್ತಿದ್ದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರ್ಹರಿಸಲು ಪ್ಲಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ. ಹೌದು ಜುಲೈ 8 ರಿಂದ ವಿಸಿ ನಾಲೆಗಳಿಗೆ ನೀರು ಹರಿಸಲು ಪ್ಲಾನ್ ಮಾಡಲಾಗಿದ್ದು, ಹಾಗಾಗಿ ಇಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ. ಈ ಒಂದು ಸಭೆಯಲ್ಲಿ ನೀರು ಹರಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವಿಸಿ ನಾಲೆಗಳಿಗೆ ನೀರು ಹರಿಸುವ ಕುರಿತಂತೆ ಕೃಷಿ ಸಚಿವ ಚೆಲುವರಾಯ ಸ್ವಾಮಿಯವರು ಮಾಹಿತಿ ನೀಡಲಿದ್ದಾರೆ. ಕಳೆದ ವರ್ಷ ಬರಗಾಲ ಹಿನ್ನೆಲೆಯಲ್ಲಿ ನೀರು ಹರಿಸಲು ಆಗಿಲ್ಲ ಈಗ ಡ್ಯಾಮ್…

Read More

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ನೇಮಕ ಅಕ್ರಮ ಸಂಬಂಧ ಮುರುಗೇಶ್‌ ನಿರಾಣಿ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಆದರೆ, ಅವರನ್ನು ಬಂಧಿಸದಂತೆ ಮಧ್ಯಂತರ ಆದೇಶ ನೀಡಿದೆ. ಹೌದು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಸಲ್ಲಿಸಿರುವ ದೂರು ಆಧರಿಸಿ ನೇಮಕ ಹಗರಣದ ತನಿಖೆಯನ್ನು ಹೈಗ್ರೌಂಡ್ಸ್‌ ಪೊಲೀಸರು ತನಿಖೆ ನಡೆಸುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಮುರುಗೇಶ್ ನಿರಾಣಿ ಅವರು, ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ, ಪ್ರಕರಣ ರದ್ದು ಕೋರಿ ಮುರುಗೇಶ್‌ ನಿರಾಣಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾ. ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಎಲ್ಲರನ್ನೂ ಬಂಧಿಸಿ ಕಾರಾಗೃಹದಲ್ಲಿಡುವುದು ಸರಿಯಲ್ಲ. ಹೊರಗಿರುವವರು ಮತ್ತು ಜೈಲಿನಲ್ಲಿರುವವರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗುತ್ತದೆ. ಹಾಗಾಗಿ, ಈ ಪ್ರಕರಣದಲ್ಲಿತನಿಖೆ ಮುಂದುವರಿಸಿ, ಅದಕ್ಕೆ ನ್ಯಾಯಾಲಯ ಯಾವುದೇ ಅಡ್ಡಿಪಡಿಸುವುದಿಲ್ಲ. ಆದರೆ, ಅರ್ಜಿದಾರರನ್ನು ಬಂಧಿಸಬೇಡಿ. ಅವರು ತನಿಖೆಗೆ ಎಲ್ಲಾರೀತಿಯ ಸಹಕಾರ ನೀಡಲಿದ್ದಾರೆ…

Read More

ಧಾರವಾಡ : ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲದ ಸಿದ್ದಲಿಂಗ ಶ್ರೀ ಸ್ವಾಮೀಜಿ ಸೇರಿದಂತೆ ಶ್ರೀ ರಾಮ ಸೇನೆಯ ಪ್ರಮುಖ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಶ್ರೀರಾಮ ಸೇನಾ ಸಂಘಟಿತ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ತಿಳಿಸಿದ್ದಾರೆ. ಇಂದು ಧಾರವಾಡದಲ್ಲಿ ಮಾತನಾಡಿದ ಅವರು, ಶ್ರೀರಾಮ ಸೇನೆ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ ಎಂದು ಧಾರವಾಡ ನಗರದಲ್ಲಿ ಗಂಗಾಧರ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನದಿಂದ ನಮ್ಮ ಫೇಸ್ ಬುಕ್ ಅಕೌಂಟ್ ಬ್ಲಾಕ್ ಆಗಿದೆ. ಲವ್ ಜಿಹಾದ್ ವಿರುದ್ಧ ನಾವು ಅಭಿಯಾನ ಮಾಡುತ್ತಿದ್ದೇವೆ ಇದನ್ನು ಹತ್ತಿಕ್ಕಲು ನಮ್ಮ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ. ಇದರಿಂದ ಸರ್ಕಾರ ಅಥವಾ ಯಾರದ್ದೋ ಷಡ್ಯಂತರವಿದೆ. ಪ್ರಮೋದ್ ಮುತಾಲಿಕ್, ಸಿದ್ದಲಿಂಗ ಶ್ರೀ ಸೇರಿದಂತೆ ಪ್ರಮುಖರ ಖಾತೆ ಬ್ಲಾಕ್ ಆಗಿದ್ದು, ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಸರ್ಕಾರವೇ ಮಾಡಿದ್ದರೆ ಯಾಕೆ ಅಂತ ಕಾರಣ ಕೊಡಬೇಕು. ಫೇಸ್ಬುಕ್ ಸಂಸ್ಥೆ ಮಾಡಿದ್ದರೆ ಸರ್ಕಾರ…

Read More

ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…

Read More

ಬೆಂಗಳೂರು : ಇತ್ತೀಚಿಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದರ ಕುರಿತು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಅಧ್ಯಯನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹೌದು ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದಿದ್ದರು. ಪತ್ರದ ಮೂಲಕ ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದೆ ಎಂದು ತಿಳಿದುಬಂದಿದೆ. ಕಾವೇರಿ…

Read More

ಬೆಂಗಳೂರು : ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ 9 ಸ್ಥಾನ ಪಡೆದುಕೊಂಡು ಜೆಡಿಎಸ್ ಮೂರರಲ್ಲಿ ಎರಡು ಸ್ಥಾನ ಪಡೆದುಕೊಂಡಿತು. ಈಗ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಶ್ರೀರಾಮುಲು ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ ನಾನೇ ಕಾರಣ ಎಂದು ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನನ್ನ ಸೋಲಿಗೆ ಬೇರೆ ಯಾರು ಕಾರಣ ಅಲ್ಲ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ನನ್ನ ಸೋಲಿಗೆ ನಾನೇ ಕಾರಣನಾಗಿದ್ದೇನೆ ಎಂದು ಬೆಂಗಳೂರಿನಲ್ಲಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮಲು ಹೇಳಿಕೆ ನೀಡಿದರು. ನಿಮ್ಮ ಸೋಲಿಗೆ ಕಾರಣ ಏನು ಅಂತ ರಾಧಾ ಮೋಹನ್ದಾಸ್ ಕೇಳಿದಾಗ ಸೋಲಿಗೆ ವೈಯಕ್ತಿಕವಾಗಿ ನಾನೇ ಕಾರಣ ಅಂತ ಹೇಳಿದ್ದೇನೆ ಎಂದರು. ಬಳ್ಳಾರಿ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಅಂದಿದ್ದೇನೆ. ಇನ್ನೂ ಸಂಡೂರು ವಿಧಾನಸಭೆ ಉಪಚುನಾವಣೆ ಟಿಕೆಟ್ ಕೇಳಿಲ್ಲ. ಆದರೆ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆಯೋ ಅವರ…

Read More

ಬೆಂಗಳೂರು : ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್​ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಎಸ್‌ಐಟಿಗೆ ನೋಟಿಸ್ ನೀಡಿದೆ. ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್​ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿತು. ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣನವರಿಗೆ ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ನ್ಯಾಯಪೀಠ, ಸಿಐಡಿ ದಾಖಲಿಸಿರುವ ಎಫ್‌ಐಆರ್​ನಲ್ಲಿ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶವಿದೆಯೇ ಎಂದು ಪ್ರಶ್ನಿಸಿತು. ಅಲ್ಲದೆ, ಸರ್ಕಾರ ಈ ಸಂಬಂಧ ಆಕ್ಷೇಪಣೆ…

Read More

ದಾವಣಗೆರೆ : ವೈದ್ಯರ ನಿರ್ಲಕ್ಷತನ ಎಡವಟ್ಟಿನಿಂದ ಹಲವಾರು ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಅಂತದ್ದೇ ಮತ್ತೊಂದು ದುರಂತ ಸಂಭವಿಸಿದ್ದು ಹೆರಿಗೆ ಮಾಡುವ ವೇಳೆ ಮಗುವಿನ ಮರ್ಮಾಂಗವನ್ನೇ ಕಟ್ ಮಾಡಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ನಿವಾಸಿ ಅರ್ಜುನ್ ಎಂಬುವರ ಪತ್ನಿ ಅಮೃತಾ ಅವರು ಹೆರಿಗೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್​ ಡೆಲಿವರಿ ಆಗದ ಹಿನ್ನೆಲೆ ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ಮಗುವಿನ ಮರ್ಮಾಂಗಕ್ಕೆ ವೈದ್ಯರಿಂದ ತೊಂದರೆ ಮಾಡಿದ್ದಾರೆ. ಅಮೃತಾಳಿಗೆ ಸಿಸರಿನ್ ಮೂಲಕ ಮಗುವನ್ನು ಹೊರ ತೆಗೆಯಬೇಕು ಎಂದು ವೈದ್ಯರು ಸೂಚಿಸಿದ್ದರು.  ಸಿಸರಿನ್ ಮಾಡಿ ಮಗು ತೆಗೆಯುವ ವೇಳೆ ವೈದ್ಯ ನಿಜಾಮುದ್ದೀನ್ ಮಗುವಿನ ಮರ್ಮಾಂಗವನ್ನು ಆಕಸ್ಮಿಕವಾಗಿ ಕೊಯ್ದಿದ್ದಾರೆ. ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಬಾಪುಜಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಮಗುವಿನ ಸಾವಿಗೆ ವೈದ್ಯರು ಕಾರಣ ಅಂತ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಗುವಿನ ಸಾವಿಗೆ ಕಾರಣವಾದ ವೈದ್ಯನನ್ನು ಅಮಾನತು…

Read More

ತುಮಕೂರು : ಜಮೀನು ವಿವಾದ ವಿಚಾರಕ್ಕೆ ಎರಡು ಕುಟುಂಬಗಳ ಪರಸ್ಪರ ಬಡಿದಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಸೊಂಡೆಮಾರ್ಗೋನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾದ ಗಾಯಗಳಾಗಿರುವ ಘಟನೇ ನಡೆದಿದೆ. ಶಶಿಕುಮಾರ್, ಲಕ್ಷ್ಮಣಯ್ಯ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ, ಘಟನೆಯಲ್ಲಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು, ತುರುವೇಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗೇಗೌಡನಪಾಳ್ಯದ ಮಂಜುನಾಥ್,ಗಂಗಮ್ಮ,ನಾಗಯ್ಯ,ಮಂಜುನಾಥ ನ ತಾಯಿ,ಪತ್ನಿ ಹಲ್ಲೆ ಮಾಡಿದವರು. ಲಕ್ಷ್ಮಣಯ್ಯ ಕುಟುಂಬಸ್ಥರು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ಮಂಜುನಾಥ್ ಕುಟುಂಬಸ್ಥರು ಲಕ್ಷ್ಮಣಯ್ಯರನ್ನ ನೀರಿನಲ್ಲಿ ಮುಳುಗಿಸಿ ಕುಡುಗೋಲು, ಕಲ್ಲಿನಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಲಕ್ಷ್ಮಣಯ್ಯ ಗಂಭೀರ ಗಾಯಗೊಂಡಿದ್ದು ಸದ್ಯ ತುರುವೇಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೀಗ ಮಾಜಿ ಉಪಮೇಯರು ಒಬ್ಬರು ನಟ ದರ್ಶನ್ ಅವರಿಗೆ ಹಣ ಸಹಾಯ ಮಾಡಿದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ವಿಚಾರಣೆ ಹಾಜರಾಗಿ ಎಂದು ನೋಟಿಸ್ ನೀಡಿತ್ತು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮಾಜಿ ಉಪಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ 40 ಲಕ್ಷ ಹಣ ನೀಡಿದ್ದರು ಎಂದು ಆರೋಪ ಕೇಳಿಬಂದಿದೆ. ಹಾಗಾಗಿ ಉಪ ಮೇಯರ್ ಮೋಹನ್ ರಾಜ್ ಇದಿ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ರೇಣುಕಾ ಸ್ವಾಮಿ ಕೊಲೆಯಾದ ದಿನದಂದೇ ದರ್ಶನ್ ಅವರು ಮೋಹನ್ ರಾಜ್ ಅವರ ಬಳಿ ನಲವತ್ತು ಲಕ್ಷ ಯಾಕೆ ತೆಗೆದುಕೊಂಡರು? ಹಾಗೂ ಏನು ಕಾರಣ ಎಂಬುದರ ಕುರಿತು ಪೊಲೀಸರು ಉಪಮೇಯರ್ ಮೋಹನ್ ರಾಜ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮಾಜಿ ಉಪಮೇಯ…

Read More