Subscribe to Updates
Get the latest creative news from FooBar about art, design and business.
Author: kannadanewsnow05
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾತ್ರಿ ಯುವತಿ ಮಲಗಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಘಟನೆ ಕುರಿತಂತೆ ಇದೀಗ ಪೊಲೀಸರು ತನಿಖೆ ಕೈಗೊಂಡಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬೆಲೆ ಬೀಸಿದ್ದಾರೆ ಎನ್ನಲಾಗಿದೆ.
ನವದೆಹಲಿ: ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಆತಂಕ ಸೃಷ್ಟಿಯಾಗಿದ್ದು, ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಲೇ ಇದ್ದಾರೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಏಳು ಆಸ್ಪತ್ರೆಗಳು ಮತ್ತು ತಿಹಾರ್ ಜೈಲಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಭಯದ ವಾತಾವರಣ ಸೃಷ್ಟಿಸುವ ದುಷ್ಕರ್ಮಿಗಳ ಅಟ್ಟಹಾಸ ಮುಂದುವರಿದಿದೆ. ಕಳೆದ ಎರಡು ವಾರಗಳಿಂದ ದೇಶಾದ್ಯಂತ ವಿವಿಧ ನಗರಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿರುವ ಅಪರಿಚಿತರು ಮಂಗಳವಾರವೂ ತಿಹಾರ್ ಜೈಲು ಹಾಗೂ ದೆಹಲಿಯ ಜಿಟಿವಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಡೆವಾರ್ ಆಸ್ಪತ್ರೆ, ದೀಪ್ ಚಂದ್ ಬಂಧು ಆಸ್ಪತ್ರೆ, ಕೇಶವಪುರಂನ ಅತ್ತರ್ ಸೈನ್ ಜೈನ್ ಮತ್ತು ಗೀತಾ ಕಾಲನಿಯಲ್ಲಿರುವ ಚಾಚಾ ನೆಹರು ಆಸ್ಪತ್ರೆಗಳಿಗೆ ಇ-ಮೇಲ್ ಕಳುಹಿಸಿ ಭಯ ಸೃಷ್ಟಿಸಿದ್ದಾರೆ. ದೇಶಾದ್ಯಂತ ಶಾಲೆಗಳು, ವಿಮಾನ ಮತ್ತು ರೈಲು ನಿಲ್ದಾಣಗಳು ಸೇರಿ ಸಾರ್ವಜನಿಕ ಸ್ಥಳಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಲಾಗುತ್ತಿದ್ದು, ವಿದೇಶಿ ಮೇಲಿಂಗ್ ಸೇವಾ ಕಂಪನಿಗಳ ಮೂಲಕ ಇ-ಮೇಲ್ ಬರುತ್ತಿವೆ. ಭಾನುವಾರ ಯುರೋಪ್ ಮೂಲದ ‘beeble.com’ ಕಂಪನಿಯಿಂದ “courtisgod123@beeble.com” 2…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಇದೀಗ ಅವರ ತಂದೆ ಎಚ್ಡಿ ರೇವಣ್ಣ ಅವರು ಪುತ್ರನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಕಾನೂನು ತಜ್ಞರ ಸಲಹೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಅವರು ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಜಾಮೀನು ಪಡೆದುಕೊಂಡು ಬಿಡುಗಡೆಯಾಗಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಂತರ ಎಚ್ ಡಿ ರೇವಣ್ಣ ಅವರಿಗೆ ಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಬಿಡುಗಡೆಯಾದ ಬೆನ್ನಲ್ಲೇ ಮೊದಲು ಬೆಂಗಳೂರಿನಲ್ಲಿ ಪದ್ಮನಾಭನಗರದಲ್ಲಿರುವ ತಂದೆ ಎಸ್‌ಡಿ ದೇವೇಗೌಡ ಹಾಗೂ ಕುಟುಂಬಸ್ಥರನ್ನು ಭೇಟಿಯಾದರು. ತದನಂತರ ಟೆಂಪಲ್ ರನ್ ಮಾಡಿರುವ ಎಚ್ ಡಿ ರೇವಣ್ಣ ಅವರು ಸ್ಥಳೀಯ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜಿ ಸಲ್ಲಿಸಿದರು. ನಂತರ ಮೈಸೂರಿಗೆ…
ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ಮೇಲೇತು ವೆಗೆ ಕೆ.ಆರ್.ಪುರ ಕಡೆಯಿಂದ ಬರುವ ಅಪ್ ಕ್ಯಾಂಪ್ ಮುಚ್ಚಿರುವುದರಿಂದ ಮಂಗಳವಾರದಿಂದ ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಲೇ ತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಏಪ್ರಿಲ್ 17ರಿಂದ ಕೆ.ಆರ್.ಪುರ ಲೂಪ್ ಸೇರುವ ಟ್ರ್ಯಾಕ್‌ನಲ್ಲಿ ದ್ವಿಚಕ್ರ ವಾಹನಗಳನ್ನು ಹೊರತುಪಡಿಸಿ ಎಲ್ಲ ವಾಹನ ಸಂಚಾರ ನಿರ್ಬ೦ ಧಿಸಲಾಗಿತ್ತು. ಇದೀಗ ನಾಗವಾರ ಕಡೆಯಿಂದ ಹೆಬ್ಬಾಳ ಮೇಲೇತುವೆ ಕಡೆಗೆ ಬರುವ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿಬಂಧಿಸಿ, ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಪರ್ಯಾಯ ಮಾರ್ಗಗಳು ಯಾವವು? ನಾಗವಾರ (ಔಟರ್‌ರಿಂಗ್ ರಸ್ತೆ) ಕಡೆಯಿಂದ ನಗರದ ಒಳಗೆ ಮೇನ್ರಿ ವೃತ್ತದ ಮೂಲಕ ಸಂಚರಿಸುವ ವಾಹನಗಳು ಹೆಬ್ಬಾಳ ವೃತ್ತ ದಲ್ಲಿ ಮೇಲೇತುವೆ ಕೆಳಗಿನ ರಸ್ತೆಯಿಂದ ಬಲಕ್ಕೆ ತಿರುವು ಪಡೆದು ಕೊಡಿಗೆಹಳ್ಳಿ ಜಂಕ್ಷನ್ ಬಳಿ ಯೂಟರ್ನ್ ಪಡೆದು ಸರ್ವಿಸ್ ರಸ್ತೆಯಿಂದ ಹೆಬ್ಬಾಳ ಮೇಲ್ಸ್ತುವೆ ರ್ಯಾಂಪ್ ಮೂಲಕ ನಗರದ ಕಡೆಗೆ…
ಬೆಂಗಳೂರು : ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆ-ಮಗಳು ಮನೆಗೆ ತೆರಳುವಾಗ ದ್ವಿಚಕ್ರ ವಾಹನಕ್ಕೆ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾದ ಪರಿಣಾಮ ತೆಂದೆ ಮೃತಪಟ್ಟು, ಮಗಳು ಗಾಯಗೊಂ ಡಿರುವ ದಾರುಣ ಘಟನೆ ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆಯ 5ನೇ ಕ್ರಾಸ್ ನಿವಾಸಿ ನಾರಾಯಣ್ (37) ಮೃತ ದುರ್ದೈವಿ. ಇವರ ಪುತ್ರಿ ತ್ರಿಷಾಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ಸುಮಾರು 2.15ಕ್ಕೆ ಟೌನ್ ಹಾಲ್ ಜಂಕ್ಷನ್‌ನಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ತಮಿಳುನಾಡು ಸಾರಿಗೆ ಸಂಸ್ಥೆಯ ಬಸ್ ಚಾಲಕ ನವೀನ್ ಕುಮಾರ್ ಎಂಬಾತನ ವಶಕ್ಕೆ ಪಡೆದು ವಿಚಾರಣೆಗೆಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಬಸ್: ಶಾಂತಿನಗರದಲ್ಲಿ ಸಂಬಂಧಿಕರ ಅಂತ್ಯಕ್ರಿಯೆ ಮುಗಿಸಿಕೊಂಡು ನಾರಾಯಣ್ ಮತ್ತು ತ್ರಿಷಾ ದ್ವಿಚಕ್ರ ವಾಹನದಲ್ಲಿ ಮಾಗಡಿ ರಸ್ತೆಯಲ್ಲಿರುವ ಮನೆ ಕಡೆಗೆ ಬರುತ್ತಿದ್ದರು. ಜೆ.ಸಿ.ರಸ್ತೆಯಲ್ಲಿ ಬಂದು ಟೌನ್ ಹಾಲ್ ಜಂಕ್ಷನ್ ಕಡೆಯಿಂದ ಸಿ.ಟಿ.ಮಾರ್ಕೆಟ್ ಕಡೆಗೆ ತೆರಳು…
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯ ಅಪ ಹರಣಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತಿದೆ. ಹೌದು ನಿನ್ನೆ ಮಹಿಳೆ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ ರೇವಣ್ಣ, ಅಪಹರಣ ಪ್ರಕರಣಕ್ಕೆ ಸಾಕ್ಷ್ಯ ಕೊರತೆ ಆಧಾರದ ಮೇಲೆ ಜಾಮೀನು ಪಡೆದುಕೊಂಡಿದ್ದಾರೆ. ಇದೇ ಆಧಾರದ ಮೇಲೆ ತಮ್ಮ ವಿರುದ್ಧ ಎಫ್‌ಐಆರ್ ರದ್ದು ಮಾಡುವಂತೆ ಅರ್ಜಿ ಸಲ್ಲಿಸುವ ಕುರಿತು ಗಂಭೀರವಾಗಿ ಚಿಂತನೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ರೇವಣ್ಣ ಪರ ವಕೀಲರು ವಾದ ಮಂಡಿಸಿದ್ದರು. ಇದೇ ಅಂಶಗಳನ್ನಿಟ್ಟುಕೊಂಡು ಪ್ರಕರಣ ರದ್ದು ಮಾಡುವಂತೆ ಕೇಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ ಎಂದು ತಿಳಿದುಬಂದಿದೆ. ಮುಂದಿನ ದಿನದಲ್ಲಿ ಪ್ರಕರಣ ತಲೆಬಿಸಿಯನ್ನುಂಟು ಮಾಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಫ್‌ಐಆರ್…
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳ ಕಾಲ ಜೈಲುವಾಸ ಅನುಭವಿಸಿ ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಿಂದ ಬಿಡುಗಡೆಯಾದ ಹೆಚ್ ಡಿ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ ಎಂದು ತಿಳಿದು ಬಂದಿದೆ. ಕಿಡ್ನ್ಯಾಪ್ ಕೆಎಸ್ ಅಲ್ಲಿ ಎಚ್ ಡಿ ರೇವಣ್ಣಗೆ ಜಾಮೀನು ದೊರಕಿದ್ದು ಇದಿರ ಎಸ್ಐಟಿ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ತಮ್ಮ ಪುತ್ರ ಹಾಗೂ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ಹಗರಣದ ಸಂತ್ರಸ್ತೆ ಅಪಹರಣ ಪ್ರಕರಣ ಸಂಬಂಧ ಆರೋಪಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಜಾಮೀನು ರದ್ದು ಕೋರಿ ಬುಧವಾರ ಅಥವಾ ಗುರುವಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ವಿಶೇಷ ತನಿಖಾ ದಳ ಮುಂದಾಗಿದೆ ಎಂದು ತಿಳಿದು ಬಂದಿದೆ. ತನ್ಮೂಲಕ ಜೈಲಿನಿಂದ ಹೊರಬಂದ ಕೂಡಲೇ ದೇವರ ದರ್ಶನಕ್ಕೆ ಯಾತ್ರೆ ನಡೆಸಿದ್ದ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಲ್ಲದೆ ಎಸ್‌ಐಟಿ ಈ ನಿರ್ಧಾರಕ್ಕೆ…
ಬೆಂಗಳೂರು : ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ರೇವಣ್ಣ ಅವರಿಗೆ ಜಾಮೀನು ಮಂಜೂರು ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಆಗಿರುವ ತನಿಖಾ ಬೆಳವಣಿಗೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಎಸ್‌ಐಟಿ ಪೊಲೀಸರೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು ಎಂದು ತಿಳಿದುಬಂದಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಎಸ್‌ಐಟಿ ಪೊಲೀಸರು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿದರು. ಪ್ರಮುಖವಾಗಿ ರೇವಣ್ಣ ಅವರಿಗೆ ಜಾಮೀನು ಸಿಗಲು ಕಾರಣ, ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಬಂಧನಸೇರಿದಂತೆಮತ್ತಿತರ ವಿಷಯಗಳನ್ನು ತಿಳಿಸಿದರು. ಈ ವೇಳೆ ಸಿಎಂ, ತನಿಖೆ ಯನ್ನು ಚುರುಕುಗೊಳಿಸು ವಂತೆ ತಿಳಿಸಿದರಲ್ಲದೆ, ಪಾರ ದರ್ಶಕವಾಗಿ ಮಾಡುವಂತೆ ಸೂಚನೆ ನೀಡಿದರುಎಂದು ಮೂಲಗಳು ತಿಳಿಸಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಡಿಸಿಎ೦ಡಿ.ಕೆ.ಶಿವಕುಮಾರ್, ಸಚಿವರಾದ ಡಾ. ಜಿ.ಪರಮೇಶ್ವರ್, ಚೆಲುವರಾಯಸ್ವಾಮಿ, ಬೈರತಿ ಸುರೇಶ್ ಸೇರಿದಂತೆ ಹಿರಿಯ ಅಧಿಕಾರಿಗಳು…
ಬೆಂಗಳೂರು : ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾ ಲಯ ಕಾನೂನು ಕ್ರಮ ಜರುಗಿಸಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೌದು ನಕಲಿ ಜಾತಿ ಪ್ರಮಾಣ ಪ್ರಮಾಣ ಪತ್ರ ಪಡೆದು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಆರೋಪ ಸಂಬಂಧ ಕೇಂದ್ರ ಶಿಪ್ಪಿಂಗ್ ಸಚಿವಾಲಯದಲ್ಲಿ ಸಹಾಯಕ ಲೈಟ್ ಕೀಪರ್‌ಆಗಿ ಸೇವೆ ಸಲ್ಲಿಸುತ್ತಿದ್ದ ಎ.ಎಸ್. ಪಳನಿ ಎಂಬುವವರ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಪಡಿಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ ಅವರ ಪೀಠ ಈ ಸ್ಪಷ್ಟನೆ ನೀಡಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳು ಹಾಗೂ ಇತರೆ ಹಿಂದುಳಿದ ವರ್ಗಗಳ (ಮೀಸಲಾತಿ ಮತ್ತು ನೇಮಕಾತಿ ಇತರೆ) ಅಧಿನಿಯಮ 1992ರ ನಿಯಮ 7ರ ಪ್ರಕಾರ ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಜರುಗಿಸಲು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಶಿಫಾರಸು ಮಾಡಬೇಕು. ಆ ಬಳಿಕವೇ ಜಾರಿ ನಿರ್ದೇಶನಾಲಯ…
ಬೆಂಗಳೂರು : ರಾಜಧಾನಿಯಲ್ಲಿ ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಖಾಸಗಿ ಬ್ಯಾಂಕ್ ಉದ್ಯೋಗಿ, 3 ವಿದೇಶಿ ಪ್ರಜೆಗಳು ಸೇರಿ ಆರು ಮಂದಿಯನ್ನು ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ ಜಪ್ತಿ ಮಾಡಿದೆ. ನೈಜೀರಿಯಾ ದೇಶದ ಆಗಸ್ಟೆನ್ ನಾನ್ನೊ, ಫ್ರೆಡೈಲಿಸ್, ಎರೇಂಜಿನ್ ಸ್ಟಾರ್ಟ್, ಮಡಿಕೇರಿ ಜಿಲ್ಲೆ ನಾಣಯ್ಯ, ವಿ.ವಿ.ಪುರದ ಕುಶಾಲ್ ಹಾಗೂ ಮಡಿವಾಳದ ವಿಶ್ವಾಸ್ ಬಂಧಿತರಾಗಿದ್ದು, ಆರೋ ಪಿಗಳಿಂದ MDMA, ಕ್ರಿಸ್ಟೆಲ್, ಕೊಕೆನ್, , ಎಲ್ ಎಸ್ ಡಿ ಚರಸ್ প্রơ, 12 ಕೆಜಿ ಗಾಂಜಾ, ಹ್ಯಾಶೀಶ್ ಆಯಿಲ್ ಸೇರಿ ಒಟ್ಟು 22.74 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಹಲವು ದಿನಗಳಿಂದ ನಗರದಲ್ಲಿ ಈ ಆರು ಮಂದಿ ಪೆಡ್ಡರ್‌ಗಳು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಸಿಬಿ ಕಾರ್ಯಾಚರಣೆ ನಡೆಸಿದೆ. ಈ ವಿದೇಶಿ ಪ್ರಜೆಗಳು ಬಿಜಿನೆಸ್, ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಬಂದು ನೆಲೆಸಿದ್ದರು. ಮೋಜಿನಜೀವನ ನಡೆಸಲು ಗೋಡಾ, ಮುಂಬೈ ಹಾಗೂ ದೆಹಲಿಯಲ್ಲಿ ನೆಲೆಸಿರುವ ತಮ್ಮ ದೇಶದ…











