Subscribe to Updates
Get the latest creative news from FooBar about art, design and business.
Author: kannadanewsnow05
ದುಬೈ : ಶುಕ್ರವಾರ ತಡರಾತ್ರಿ ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಗೋಪುರವಾದ ಮರೀನಾ ಪಿನಾಕಲ್ ಒಳಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 6 ಗಂಟೆಗಳ ನಂತರ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಆಗಸದೆತ್ತರಕ್ಕೆ ಹೊಗೆ ಹರಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅಗ್ನಿ ಅವಘಡ ಕುರಿತು ಶನಿವಾರ ನಸುಕಿನ 1.44ಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಡಿಎಂಒ ಮಾಹಿತಿ ಹಂಚಿಕೊಂಡಿದ್ದಾರೆ. 67 ಅಂತಸ್ತಿನ ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ. ಅವರ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೈಕೆಯ ಕಾಳಜಿಗೆ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ತಂಡ ತನ್ನ ಪ್ರಯತ್ನ ಮುಂದುವರಿಸಿದೆ ಎಂದು ತಿಳಿಸಿದ್ದರು. ಆಂಬುಲೆನ್ಸ್ ಸಹಿತ ವೈದ್ಯಕೀಯ ತಂಡ ಭೇಟಿ ನೀಡಿದೆ ಎಂದು ನಸುಕಿನ 2.09ಕ್ಕೆ ಸಂದೇಶ ಕಳುಹಿಸಿದ್ದಾರೆ. ಬಹುಮಹಡಿ…
ಬೆಂಗಳೂರು : ರಾಜ್ಯದಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಜೂನ್ 24ಕ್ಕೆ ನಿಗದಿ ಪಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 15ರ ಬಳಿಕ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ. ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆ ಯಾಗದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟಕ್ನಾಲಜಿ ಪ್ರೈವೇಟ್ ಲಿಮಿಟೆಡ್ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾದೀನ ಕೈದಿಯ ಮೇಲೆ ಹಲ್ಲೆ ನಡೆಸಲಾಗಿದೆ. ಜೈಲಿನೊಳಗೆ ನಡೆದಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಫೇಸ್ಬುಕ್ ನಲ್ಲಿ ಭದ್ರಾವತಿ ಜೆಡಿಎಸ್ ಮುಖಂಡ ಅಜಿತ್ ಅಪ್ಪಾಜಿಗೌಡ ಪೋಸ್ಟ್ ಅಪ್ ಲೋಡ್ ಮಾಡಿದ್ದು, ಕಾರ್ಯಗೃಹದಲ್ಲಿ ಸಹಪಾಠಿ ಗಳಿಂದ ಕಿರಣ್ ಸೇಠ ಎಂಬುವನ ಮೇಲೆ ಹಲ್ಲೆ ನಡೆದಿದೆ. ನಿನ್ನೆ ಅಟ್ರಾಸಿಟಿ ಕೇಸ್ ನಲ್ಲಿ ಜೆಡಿಎಸ್ ಕಾರ್ಯಕರ್ತ ಕಿರಣ್ ಜೈಲು ಸೇರಿದ್ದ ಕಿರಣ್ ನನ್ನು ಬಂಧಿಸಿ ಭದ್ರಾವತಿ ಗ್ರಾಮಾಂತರ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಸಂಜೆ ಊಟಕ್ಕೆ ಬಿಟ್ಟಾಗ ರೂಮ್ಗೆ ಕರೆದುಕೊಂಡು ಹೋಗಿ ಹಲ್ಲಿ ನಡೆಸಿದ್ದಾರೆ. ಪರಶುರಾಮ್ ಯಾನೆ, ಅಪ್ಪು ನಾಯ್ಕ್, ಶಬರೀಶ್ ಹಾಗು ಪ್ರದೀಪ್ ಎನ್ನುವ ಸಹ ಕೈದಿಗಳು ಹಲ್ಲೆ ಮಾಡಿದ್ದಾರೆ. ಪಕ್ಷದ ವಿಚಾರದಲ್ಲಿ ಹೊಡೆದಾಡಿಕೊಂಡ ಬಗ್ಗೆ ಮಾಹಿತಿ ಇದೆ ಈ ಕುರಿತು FIR ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಜೈಲರ್ ರಂಗನಾಥ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ಕಾರ್ಯಕ್ರಮ ಹಮ್ಮಿಕೊಂಡಿರತ್ತು. ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆಯನ್ನು ಖಂಡಿಸಿ ಇದೇ ಜೂನ್ 16 ಮತ್ತು 17ರಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹೌದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಜೂನ್ 16 ಮತ್ತು 17 ರಂದು ಪ್ರತಿಭಟನೆ ನಡೆಸಲಿದೆ. ಜೂನ್ 16 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದ್ದು, ಅದೇ ರೀತಿಯಾಗಿ ಜೂನ್ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ನಿನ್ನೆ ನಿಗದಿಯಾಗಿದ್ದ ಧರಣಿ, ಅಹಮದಾಬಾದ್ ವಿಮಾನ ದುರಂತದಿಂದ ಪ್ರತಿಭಟನೆ ಮುಂದೂಡಲ್ಪಟ್ಟಿತ್ತು. ಹಾಗಾಗಿ ಜೂನ್…
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿಯ ಬಳಿ ಈ ಒಂದು ದುರ್ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಆಕಾಶ್ (24) ಎಂದು ಗುರುತಿಸಲಾಗಿದೆ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಮೈಸೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಗಲಕೋಟೆ : ಶಿಕ್ಷಣ ಇಲಾಖೆಯಲ್ಲಿ CRP ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಷಣೆ ಎಸೆಗಿದ ಆರೋಪದ ಅಡಿ ಇದೀಗ ಬಾಗಲಕೋಟೆಯಲ್ಲಿ ಶಿಕ್ಷಕ ಮುತ್ತು ಮುಳ್ಳಾ ಎನ್ನುವವನನ್ನು ಅರೆಸ್ಟ್ ಮಾಡಲಾಗಿದೆ. ಹೌದು ಬಾಗಲಕೋಟೆಯ ವಿದ್ಯಗಿರಿ ನಿವಾಸಿಯಾಗಿರುವ ಮುತ್ತು ಮುಳ್ಳ ಎನ್ನುವ ಶಿಕ್ಷಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶಿಕ್ಷಣ ಇಲಾಖೆಯಲ್ಲಿ ಸಿಆರ್ಪಿ ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.
ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹುಕ್ಕೇರಿ ತಾಲ್ಲೂಕಿನ ಹಟ್ಟಿಆಲೂರಿನ ರಾಯಪ್ಪ ಸುರೇಶ ಕಮತಿ(28) ಕೊಲೆಯಾದವರು. ಬಸವರಾಜ ಕಮತಿ(24) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬಸವರಾಜ್ ಕಮತಿ ಕುವೈತ್ ನ್ಯಾಷನಲ್ ಪೆಟ್ರೋಲಿಯಂ ಕಂಪನಿಯಲ್ಲಿ ವಾಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ರಜೆ ಮೇಲೆ ತನ್ನ ಊರಾದ ಹಟ್ಟಿ ಆಲೂರಿಗೆ ತೆರಳಿದ್ದ. ಈ ವೇಳೆ ಅಣ್ಣ ರಾಯಪ್ಪ ಕಮತಿ, ಬಸವರಾಜ್ ಗೆ ಮತ್ತೆ ಕೆಲಸಕ್ಕೆ ಹೋಗಲು ಬಿಡದೇ ತನ್ನೊಂದಿಗೆ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದನಂತೆ. ಅಲ್ಲದೇ ಪ್ರತಿದಿನ ಕುರಿದೊಡ್ಡಿಯಲ್ಲಿ ಮಲಗಲು ಹೇಳುತ್ತಿದ್ದನಂತೆ. ಇದೇ ಕಾರಣಕ್ಕೆ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಬೇಸತ್ತ ಬಸವರಾಜ್ ಅಣ್ಣನನ್ನೇ ಕೊಲ್ಲಲು ಪ್ಲಾನ್ ಮಾಡಿದ್ದಾನೆ. ಅಣ್ಣ ಕುರಿ ಕಾಯಲು ಜಮೀನು ಬಳಿ ಹೋಗಿದ್ದಾಗ ಬಸವರಾಜ್ ಮನೆಯಿಂದ ಖಾರದ ಪುಡಿ ತೆಗೆದುಕೊಂಡು ಹೋಗಿದ್ದಾನೆ. ಅಣ್ಣ ಮರದ ಕೆಳಗೆ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತ…
ಮಂಗಳೂರು : ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ನಿಂತ ನೀರಿನಿಂದ ಬಸ್ಸೊಂದು ಕೆಟ್ಟು ನಿಂತಿದ್ದು, ಸಾರ್ವಜನಿಕರು ಬಸ್ಸನ್ನು ರಸ್ತೆ ಬದಿಗೆ ತಳ್ಳಿದ್ದಾರೆ. ಇನ್ನು ಪಡೀಲ್ ರೈಲ್ವೆ ಅಂಡರ್ ಪಾಸ್ನಲ್ಲಿಯೂ ರಸ್ತೆಯಲ್ಲಿ ನೀರು ತುಂಬಿ ವಾಹನ ಓಡಾಟಕ್ಕೆ ಅಡಚಣೆಯಾಗಿದೆ. ನಗರದ ಕಾರ್ಸ್ಟ್ರೀಟ್ನಲ್ಲಿ ಕೃತಕ ನೆರೆಗೆ ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ತುಂಬಿದ್ದು, ಮನೆಯೊಳಗೆ ನೀರು ನುಗ್ಗಿದೆ. ಹವಾಮಾನ ಇಲಾಖೆ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೂ ಜಿಲ್ಲೆಯಲ್ಲಿ ಭಾರೀ ಮಳೆ ಆಗಿರಲಿಲ್ಲ. ಆದರೆ, ಇಂದು ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು, ದಟ್ಟ ಮೋಡಗಳು ಇನ್ನಷ್ಟು ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 16ರ ಮುಂಜಾನೆ ವರೆಗೆ ರೆಡ್ ಅಲರ್ಟ್ ಎಚ್ಚರಿಕೆ…
ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅನ್ಯ ಭಾಷಿಕರ ದಬ್ಬಾಳಿಕೆ ಹಾಗೂ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಗಳು ನಡೆದಿತ್ತು.ಅಲ್ಲದೆ ಇದಕ್ಕೆ ಕನ್ನಡಿಗರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು.ಆದರೆ ಇದೀಗ ವಿಪರ್ಯಾಸ ಅಂದರೆ ಕಾಲೇಜು ಒಂದರಲ್ಲಿ ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿಗೆ ಉಪನ್ಯಾಸಕರು ಕನ್ನಡದಲ್ಲಿ ಉತ್ತರ ಹೇಳಿದ್ದಕ್ಕೆ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾರೆ. ಹೌದು, ಈ ಒಂದು ಘಟನೆ ನಡೆದಿದ್ದು ಬೆಂಗಳೂರಿನ ಕೋಣನಕುಂಟೆಯಲ್ಲಿರುವ ಆರ್ ವಿ ಪಿಯು ಕಾಲೇಜಿನಲ್ಲಿ ಎಂದು ತಿಳಿದುಬಂದಿದೆ. ಕನ್ನಡದಲ್ಲಿ ವಿದ್ಯಾರ್ಥಿ ಪ್ರಶ್ನೆ ಕೇಳಿದ್ದ ಅದಕ್ಕೆ ಉಪನ್ಯಾಸಕ ಕನ್ನಡದಲ್ಲಿ ಉತ್ತರಿಸಿದ್ದರು . ಕನ್ನಡದಲ್ಲಿ ಉತ್ತರ ನೀಡಿದ್ದಕ್ಕೆ ಉಪನ್ಯಾಸಕನ ವಿರುದ್ಧ ಕಾಲೇಜು ಆಡಳಿತ ಮಂಡಳಿಗೆ ಓರ್ವ ವಿದ್ಯಾರ್ಥಿ ದೂರು ನೀಡಿದ್ದಾನೆ.ಉಪನ್ಯಾಸಕ ರಾಜೀನಾಮೆಗೆ ಕಾಲೇಜು ಆಡಳಿತ ಮಂಡಳಿ ಆಗ್ರಹಿಸಿದೆ. ರಾಜೀನಾಮೆ ಕೊಡಲು ನಿರಾಕರಿಸಿದಕ್ಕೆ ಉಪನ್ಯಾಸಕನಿಗೆ ಬೆದರಿಕೆ ಹಾಕಿದ್ದಾರೆ. ಉಪನ್ಯಾಸಕನ ಪುತ್ರಿ ಅದೇ ಕಾಲೇಜಿನ ಬೇರೆ ಬ್ರ್ಯಾಂಚ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಮಗಳ ಟಿ.ಸಿ ಹಾಗು ದಾಖಲೆಗಳನ್ನು ಕೊಡಲ್ಲ ಅಂತ ಉಪನ್ಯಾಸಕನಿಗೆ ಬೆದರಿಕೆ ಹಾಕಿದ್ದಾರೆ.ಮಗಳ ಭವಿಷ್ಯ ಮತ್ತು…
ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದ್ದು, ಇದೀಗ ಎನ್ ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ. ಹಾಗಾಗಿ ಇದೀಗ ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ.ಮೇ 1 ರಂದು ಮಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.