Author: kannadanewsnow05

ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆಯೇ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನಡುವಿನ ಮಾತುಕತೆಯ ನಂತರ, ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಹಡಗುಗಳು ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಇದೀಗ ಇರಾನ್ ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ತೈಲ ಹಡಗುಗಳಿಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ವಿಶ್ವದ ಅತ್ಯಂತ ಪ್ರಮುಖ ತೈಲ ಸಾಗಾಣಿಕೆ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯಲ್ಲಿ (Strait of Hormuz) ಭಾರತೀಯ ತೈಲ ಹಡಗುಗಳ ಸಂಚಾರಕ್ಕೆ ಯಾವುದೇ ವಿಶೇಷ ಅನುಮತಿ ಅಥವಾ ವಿನಾಯಿತಿ ನೀಡಿಲ್ಲ ಎಂದು ಇರಾನ್ ಸರ್ಕಾರ ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು: ಸ್ಪಷ್ಟನೆ ನೀಡಿದ ಇರಾನ್: ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಭಾರತೀಯ ತೈಲ ಟ್ಯಾಂಕರ್‌ಗಳಿಗೆ ಯಾವುದೇ ರೀತಿಯ ಪ್ರತ್ಯೇಕ ಸೌಲಭ್ಯ ಅಥವಾ ಸುರಕ್ಷತೆಯ ಭರವಸೆ ನೀಡಿಲ್ಲ ಎಂದು ಇರಾನ್ ವಿದೇಶಾಂಗ ಇಲಾಖೆ…

Read More

ಬೆಂಗಳೂರು : ಹಾಲು ಉತ್ಪಾದಕರಿಗೆ ಬಮುಲ್ ಇದೀಗ ಯುಗಾದಿ ಉಡುಗೊರೆ ನೀಡಿದ್ದು ಲೀಟರ್ ಹಾಲಿಗೆ 1 ರೂಪಾಯಿ ಪ್ರೋತ್ಸಾಹ ಧನವನ್ನು ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್ ಘೋಷಣೆ ಮಾಡಿದ್ದಾರೆ. ರೈತರಿಂದ 59, 39, 78,492 ಲೀಟರ್ ಹಾಲು ಖರೀದಿಸಿದ್ದೇವೆ. ಈ ಬಾರಿ 500 ಕೋಟಿ ಹೆಚ್ಚುವರಿ ಟರ್ನ್ ಓವರ್ ಮಾಡುವ ಗುರಿ ಇದ್ದು, ಕಾರ್ಮಿಕರಿಗೆ ಸುಮಾರು 6 ಕೋಟಿ ರೂಪಾಯಿ ಡಿಎ ಕೊಡಬೇಕು. ನಾವು ಸುಮಾರು 60 ಕೋಟಿ ಲಾಭಗಳಿಸುವ ಮಟ್ಟಿಗೆ ಬಂದಿದ್ದೇವೆ. ಹೀಗಾಗಿ ಸಿಬ್ಬಂದಿಗಳಿಗೆ ಬಾಕಿ ಇದ್ದ ಹಣ ಕೊಡಲು ತೀರ್ಮಾನಿಸಲಾಯಿತು. ಗುತ್ತಿಗೆದಾರರಿಗೆ 5000 ಬೋನಸ್ ಕೊಡುತ್ತೇವೆ. ಗುಣಮಟ್ಟದ ಹಾಲು ಕೊಡುವ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಡಿಕೆ ಸುರೇಶ ತಿಳಿಸಿದರು. ಹೈನುಗಾರಿಕೆಯಲ್ಲಿ ತೊಡಗಿರುವ ರೈತರಿಗೆ ಇದು ನಿಜಕ್ಕೂ ಸಿಹಿ ಸುದ್ದಿ! ಯುಗಾದಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮುಲ್) ತನ್ನ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ 1 ರೂಪಾಯಿ ಪ್ರೋತ್ಸಾಹ ಧನ ಹೆಚ್ಚಳ…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ನೀರಿನ ಸಂಪಿಗೆ ಬಿದ್ದು ಎರಡು ವರ್ಷದ ಮಗು ಸಾವನಪ್ಪಿದೆ. ಬೆಂಗಳೂರಿನ ಬ್ಯಾಡರಹಳ್ಳಿಯ ನಿವಾಸದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿಯ ಎರಡುವರೆ ವರ್ಷದ ಮಗ ಸಂಪಿಗೆ ಬಿದ್ದು ಸಾವನಪ್ಪಿದ್ದಾನೆ. ನಿನ್ನೆ ಕಾರು ತೊಳೆಯಲು ಮನೆಯಲ್ಲಿದ್ದ ಸಂಪ್ ತೆಗೆದಿದ್ದ ಅಣ್ಣಯ್ಯ, ಕಾರು ತೊಳೆದು ನಂತರ ಸಂಪ್ ಕ್ಲೋಸ್ ಮಾಡದೇ ತೆರಳಿದ್ದಾರೆ. ಈ ವೇಳೆ ಆಟವಾಡುತ್ತಿದ್ದ ಚಿರಾಗ್ ಸಂಪಗೆ ಬಿದ್ದು ಸಾವನಪ್ಪಿದ್ದಾನೆ. ಸುರಕ್ಷತೆಗಾಗಿ ಗಮನಿಸಬೇಕಾದ ಅಂಶಗಳು: ಸಂಪ್‌ಗಳಿಗೆ ಸುರಕ್ಷಿತ ಮುಚ್ಚಳ: ಮನೆಯಲ್ಲಿ ನೀರಿನ ಸಂಪ್‌ಗಳಿದ್ದರೆ ಅವುಗಳಿಗೆ ಯಾವಾಗಲೂ ಗಟ್ಟಿಯಾದ ಕಬ್ಬಿಣದ ಅಥವಾ ಸಿಮೆಂಟ್ ಮುಚ್ಚಳಗಳನ್ನು ಅಳವಡಿಸಿರಬೇಕು. ಲಾಕ್ ವ್ಯವಸ್ಥೆ: ಮುಚ್ಚಳಗಳನ್ನು ಕೇವಲ ಮುಚ್ಚಿಡುವುದು ಸಾಲದು, ಮಕ್ಕಳು ಸುಲಭವಾಗಿ ತೆಗೆಯದಂತೆ ಅದಕ್ಕೆ ಲಾಕ್ (Lock) ಹಾಕುವ ವ್ಯವಸ್ಥೆ ಇರುವುದು ಉತ್ತಮ. ನಿರಂತರ ನಿಗಾ: ಸಣ್ಣ ಮಕ್ಕಳಿರುವ ಮನೆಯಲ್ಲಿ ಅವರು ಆಟವಾಡುವಾಗ ದೊಡ್ಡವರ ಕಣ್ಣು ಯಾವಾಗಲೂ ಅವರ ಮೇಲಿರಲಿ. ಆಟದ…

Read More

ಬೆಂಗಳೂರು : ರಾಜ್ಯಾ, ದೇಶ ಸೇರಿದಂತೆ ಎಲ್ಲೆಡೆ ಸಿಲಿಂಡರ್ ವ್ಯತ್ಯಯದಲ್ಲಿ ಭಾರಿ ಸಮಸ್ಯೆ ಉಂಟಾಗಿದೆ. ಈಗಲೇ ಬೆಂಗಳೂರಿನಲ್ಲಿ ಬಹುತೇಕ ಹೋಟೆಲ್ ಗಳು ಬಂದ್ ಆಗಿವೆ. ಸಿಲಿಂಡರ್ ಸಮಸ್ಯೆ ಬೆನ್ನಲ್ಲೇ ತುಂಬಿದ ಸಿಲಿಂಡರ್ ಕಳ್ಳತನ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಕಲ್ಯಾಣ ನಗರದಲ್ಲಿ ಈ ಒಂದು ಕಳ್ಳತನ ನಡೆದಿದೆ. ಕಲ್ಯಾಣ ನಗರದಲ್ಲಿ ಬೈಕಿನಲ್ಲಿ ಬಂದು ಮನೆಯ ಕಂಪೌಂಡ್ ನಲ್ಲಿದ್ದಂತ ಚೀಲದ ಸಮೇತ ಸಿಲಿಂಡರ್ ಕಳ್ಳತನ ನಡೆದಿದೆ. ಮನೆಯವರು ಸಿಲಿಂಡರ್ ಫುಲ್ ಮಾಡಿ ಚೀಲದಲ್ಲಿ ಇಟ್ಟಿದ್ದರು. ಇದನ್ನು ಮೊದಲೇ ಗಮನಿಸಿದ್ದ ಕಳ್ಳ ರಾತ್ರಿ ಬೈಕ್ ನಲ್ಲಿ ಬಂದು ಗ್ಯಾಸ್ ಸಿಲಿಂಡರ್ ಕಳ್ಳತನ ಮಾಡಿದ್ದಾನೆ.

Read More

ಬೆಂಗಳೂರು : ಡೈರಿಗಳಿಗೆ ಪೂರೈಕೆಯಾಗುವ ಹಾಲುಗಳಲ್ಲಿ ಕಲಬೆರಕೆ ಆರೋಪ ಕುರಿತಾಗಿ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಮಧು ಮಾದೇಗೌಡ ಪ್ರಶ್ನಿಸಿದರು. ಮಧು ಮಾದೇಗೌಡ ಪ್ರಶ್ನೆಗೆ ಸಭಾ ನಾಯಕ ಎನ್ ಎಸ್ ಬೋಸರಾಜು ಉತ್ತರಿಸಿದರು. ಕೆಎಂಎಫ್ ಗೆ ಪೂರೈಕೆ ಆಗುವ ಹಾಲಿನಲ್ಲಿ ಕಲಬೆರಿಕೆ ಆಗುತ್ತಿದೆ ಒಟ್ಟು 15 ಲಕ್ಷ ಮಾದರಿ ಪರೀಕ್ಷಿಸಲಾಗಿದೆ. ಅದರಲ್ಲಿ 3049 ಮಾದರಿಗಳಲ್ಲಿ ಕಲಬೆರಕೆ ಕಂಡು ಬಂದಿದೆ ಕಲಬೆರಕೆ ಕಂಡು ಬಂದರೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಬಹುದು ಎಂದು ಎನ್ ಎಸ್ ಬೋಸರಾಜು ತಿಳಿಸಿದರು.

Read More

ಬೆಂಗಳೂರು, ಮಾ.12: ಕಳೆದ ನವೆಂಬರ್ ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತು ಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಮರ್ಥಿಸಿಕೊಂಡಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಧ್ಯಪ್ರವೇಶಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು, ಸಫಾರಿ ಸ್ಥಗಿತಗೊಳಿಸಿದ್ದರಿಂದ 4 ಸಾವಿರಕ್ಕೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದರು. ಸಫಾರಿ ದೇಶಾದ್ಯಂತ ಹಲವು ವರ್ಷದಿಂದ ನಡೆಯುತ್ತಿದೆ. ಒಂದು ಸಮೀಕ್ಷೆಯನ್ನೂ ನಡೆಸದೆ ಸಫಾರಿಯನ್ನು ಏಕಾಏಕಿ ನಿಲ್ಲಿಸಿದ್ದು ಸರಿಯಲ್ಲ ಎಂದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು, ಸಫಾರಿಯನ್ನು ಏಕಾಏಕಿ ನಿಲ್ಲಿಸಲಿಲ್ಲ. ಕಳೆದ ನವೆಂಬರ್ ತಿಂಗಳಲ್ಲಿ 15 ದಿನಗಳ ಅಂತರದಲ್ಲಿ ಮೂರು ಅಮೂಲ್ಯ ಜೀವಹಾನಿ ಆಗಿತ್ತು, ಒಬ್ಬರು ಶಾಶ್ವತವಾಗಿ ಅಂಗವಿಕಲರಾದರು, ಹುಲಿಗಳು ಕಾಡಿನಿಂದ ಹೊರಗೆ ಬಂದು ದಾಳಿ ಮಾಡುತ್ತಿದ್ದವು. ಜನರ ಅಮೂಲ್ಯ ಜೀವ ರಕ್ಷಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಸ್ಪಷ್ಟಪಡಿಸಿದರು. ನವೆಂಬರ್ ನಲ್ಲಿ ತಾವು ಚಾಮರಾಜನಗರದಲ್ಲಿ ಈ ಸಂಬಂಧ ಸಭೆ ನಡೆಸಿದಾಗ…

Read More

ಯಾದಗಿರಿ : ಯಾದಗಿರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಕ್ರೂಸರ ವಾಹನ ಡಿಕ್ಕಿಯಾಗಿ ಬೈಕಿನಲ್ಲಿ ಇದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅಲ್ದಾಳ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕಿಗೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿದೆ. ಇನ್ನು ಕ್ರೂಸರ್ ನಲ್ಲಿ ಇದ್ದಂತಹ ಹಲವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿದಂತೆ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಮೃತರ ಗುರುತು ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಬೆಂಗಳೂರಲ್ಲಿರುವ ಜಪಾನ್ ಇಸ್ರೇಲ್ ಹಾಗೂ ನೆದರ್ಲ್ಯಾಂಡ್ ರಾಯಭಾರಿ ಕಚೇರಿಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದಾರೆ. ಇಮೇಲ್‌ನಲ್ಲಿ ಕಚೇರಿಗಳಲ್ಲಿ RDX ಸೇರಿದಂತೆ ಸ್ಫೋಟಕಗಳನ್ನು ಇರಿಸಲಾಗಿದೆ ಎಂದು ಹೇಳಲಾಗಿತ್ತು. ಈ ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಚೇರಿ ಆವರಣದಲ್ಲಿ ಸಂಪೂರ್ಣ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಕಾರಣ ಇದು ಹುಸಿ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಘಟನೆಯ ನಂತರ ಈ ಇಮೇಲ್‌ಗಳನ್ನು ಸೈಬ‌ರ್ ಕ್ರೈಂ ವಿಭಾಗಕ್ಕೆ ಕಳುಹಿಸಿ ತನಿಖೆ ಆರಂಭಿಸಲಾಗಿದೆ. ಕೆಲವು ಇಮೇಲ್‌ಗಳು ಒಂದೇ ಐಡಿಯಿಂದ ಕಳುಹಿಸಲ್ಪಟ್ಟಿರುವುದರಿಂದ ಇದರ ಹಿಂದೆ ಒಬ್ಬ ವ್ಯಕ್ತಿ ಅಥವಾ ಸಂಘಟಿತ ಗುಂಪಿನ ಕೈವಾಡವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಈ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶಗಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದ್ದಾರೆ. ಹೌದು ಬೆಂಗಳೂರಿನ ರಾಜ್ಯ ಗ್ರಾಹಕರ ವ್ಯಾಜ್ಯ ಆಯೋಗಕ್ಕೆ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಬೆಂಗಳೂರಿನ ಬಸವ ಭವನದಲ್ಲಿರುವ ಆಯೋಗದ ಕಚೇರಿಗೆ ಈ ಒಂದು ಬೆದರಿಕೆ ಸಂದೇಶ ಬಂದಿದ್ದು, 14 ಸೈನೈಡ್ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಇಮೇಲ್ ಸಂದೇಶ ಬಂದಿದೆ. ಮಧ್ಯಾಹ್ನ 1 ಗಂಟೆ ಒಳಗೆ ಬಾಂಬ್ ಸ್ಪೋಟವಾಗುತ್ತೆ ಎಂದು ಬೆದರಿಸಿದ್ದಾರೆ. ಅಡ್ಮಿನಿಸ್ಟ್ರೇಷನ್ ಆಫೀಸರ್ ಈ ಕುರಿತು ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎಷ್ಟೇ ಕಠಿಣವಾದ ನಿಮ್ಮ ಕ್ರಮ ಕೈಗೊಂಡರು ಸಹ ಕೈದಿಗಳಿಗೆ ಗಾಂಜಾ ಸಪ್ಲೈ ಆಗುವುದು ನಿಲ್ಲುತ್ತಿಲ್ಲ. ಇದೀಗ ಜೈಲಿನ ವಾರ್ಡನ್ ಒಬ್ಬ ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ ಮಾಡುತಿದ್ದು ಇದೀಗಜೈಲಾಧಿಕಾರಿಗಳು ಆತನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪ್ರಕಾಶ್ ಗಾವಡೆ ಎಂದು ಗುರುತಿಸಲಾಗಿದೆ. ಮಾರ್ಚ್ 9 ರಂದು ರಾತ್ರಿ ಸುಮಾರು 8.15ರ ಸುಮಾರಿಗೆ ಈ ಘಟನೆ ನಡೆದಿದೆ. ಆ ದಿನ ನಿಯೋಜನೆಗೊಂಡಿದ್ದ ವಾರ್ಡನ್ ಪ್ರಕಾಶ್ ಗಾವಡೆ ಜೈಲಿನೊಳಗೆ ಪ್ರವೇಶಿಸುವ ವೇಳೆ ತಪಾಸಣೆ ವಿಭಾಗ–2ರಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಅವನನ್ನು ಪರಿಶೀಲನೆಗೆ ಒಳಪಡಿಸಿದರು. ಈ ವೇಳೆ ಅವನ ಒಳಉಡುಪಿನಲ್ಲಿ ಹಣ ಮತ್ತು ಕಪ್ಪು ಟೇಪ್‌ನಿಂದ ಸುತ್ತಿದ ಒಂದು ಪೊಟ್ಟಣ ಪತ್ತೆಯಾಯಿತು. ಅದನ್ನು ಪರಿಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಪ್ರಕಾಶ್ ಗಾವಡೆ ಕೆಎಸ್‌ಐಎಸ್‌ಎಫ್ ಸಿಬ್ಬಂದಿಯ ಕಣ್ಣು ತಪ್ಪಿಸಿ ಗಾಂಜಾ ಜೈಲಿನೊಳಗೆ ಸಾಗಿಸಲು ಯತ್ನಿಸುತ್ತಿದ್ದ ಎನ್ನುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬಳಿಕ ಅವನನ್ನು ವಶಕ್ಕೆ ಪಡೆದ ಜೈಲು ಅಧಿಕಾರಿಗಳು…

Read More