Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರ ಗೌಡ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಆದರೆ ಪ್ರಕರಣದ 13ನೇ ಆರೋಪಿ ಆಗಿರುವ ದೀಪಕ್ ಪೊಲೀಸರ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಒಂದನ್ನು ಬಾಯಿಬಿಟ್ಟಿದ್ದಾನೆ. ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿದ ನಂತರ ರೇಣುಕಾ ಸ್ವಾಮಿಯನ್ನು ನೇರವಾಗಿ ಬೆಂಗಳೂರಿನ ಆರ್. ಆರ್. ನಗರದಲ್ಲಿರುವ ಪಟ್ಟಣಗೆರೆ ಶೆಡ್ಡಿಗೆ ಕರೆದುಕೊಂಡು ಬರಲಾಗಿದೆ. ಈ ವೇಳೆ ದರ್ಶನ್ ಆ ಒಂದು ಶೆಡ್ಡುಗೆ ಆಗಮಿಸಕ್ಕೂ ಮುಂಚೆ ಆತನಿಗೆ ಹಲವರು ತೀವ್ರವಾದಂತ ಹಿಂಸೆ ಕಿರುಕುಳ ನೀಡಿದ್ದಾರೆ. ರೇಣುಕಾಸ್ವಾಮಿ ಸಸ್ಯಹಾರಿ ಅಂದರೂ ಬಿಡದೆ ಆತನಿಗೆ ಬಿರಿಯಾನಿ ತಿನ್ನಿಸಿದ ಗ್ಯಾಂಗ್. ಕಿಡ್ನಾಪ್ ಆದ ಮಧ್ಯಾಹ್ನ ಡಿ ಬಾಸ್ ಗ್ಯಾಂಗ್ ರೇಣುಕಾ ಸ್ವಾಮಿಗೆ ಊಟ ಕೊಡಿಸಿದರು. ನಾನು ಸಸ್ಯಹಾರಿ ಅಂದರು ಬಿರಿಯಾನಿ ಮೂಳೆ ಬಾಯಿಗೆ ತುರುಕಿದ್ರು. ಈ ವೇಳೆ ಬಿರಿಯಾನಿಯನ್ನು ತಿನ್ನದೇ ಕೆಳಗೆ ಉಗುಳಿದ್ದ ರೇಣುಕಾಸ್ವಾಮಿ ಬಿರಿಯಾನಿ ಉಗುಳಿದಾಗ ಹಿಗ್ಗಾಮುಗ್ಗ ಥಳಿಸಿದ್ದರು. ಬಾಸ್ ಬರ್ತಾರೆ ಒದೆ ತಿನ್ನಲು ರೆಡಿಯಾಗು…
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಹದಿಮೂರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ಯಾವಾಗ ನಟ ದರ್ಶನ್ ಅವರ ಬಂಧನವಾಯಿತು ಆಗ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಟ್ರೊಲರ್ ಗಳು ಕೆಟ್ಟದಾಗಿ ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಇದೀಗ ಟ್ರೋಲರ್ಸ್ ಗಳಿಗೆ ಪೊಲೀಸರು ಎಚ್ಚರಿಕೆ ನೀಡಬೇಕು ಎಂದು ಮೋಹಕ ತಾರೆ ನಟಿ ರಮ್ಯಾ ಟೋಲರ್ಸ್ ಗಳಿಗೆ ಚಳಿ ಬಿಡಿಸಿದ್ದಾರೆ. ಈ ಕುರಿತಂತೆ ಪೋಸ್ಟ್ ಮಾಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ಅನ್ನೋ ಆಪ್ಷನ್ ಇದೆ.ನಮಗೆ ಇಷ್ಟ ಇಲ್ಲದವರು,ಟ್ರೋಲ್ ಮಾಡುವವರು, ಕೆಟ್ಟ ಕಮೆಂಟ್ ಮೂಲಕ ಕಿರುಕುಳ ಕೊಡುವವರು ಇರುತ್ತಾರೆ. ನನ್ನನ್ನು ಸೇರಿಸಿ ನಟ ನಟಿಯರನ್ನು ಟ್ರೋಲ್ ಮಾಡುವ ಜನರಿದ್ದಾರೆ. ಕೆಟ್ಟ ಮೆಸೇಜ್ ಕಳುಹಿಸಿದರೆ ಕೊಲ್ಲುವ ಶೋಷಣೆಯ ಸಮಾಜದಲ್ಲಿ ಇದ್ದೇವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಕೆಲವೊಮ್ಮೆ ಟ್ರೊಲ್ ಮಾಡುವವರಿಗೆ ಪೊಲೀಸರು ಎಚ್ಚರಿಕೆ ನೀಡಬೇಕು. ಟ್ರೋಲ್ ಮಾಡುವ ಮೂಲಕ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಯಾರು ಕಾನೂನಿಗಿಂತ ಮೇಲಲ್ಲ. ಕಾನೂನನ್ನು…
ಬೆಂಗಳೂರು : ತನ್ನ ಗೆಳತಿ ಪವಿತ್ರ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಹಾಗೂ ಹಲವು ಚಿತ್ರರಂಗ ಕಲಾವಿದರು ದರ್ಶನವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆ. ಈ ಸಂಬಂಧ ಇಂದು ಕರ್ನಾಟಕ್ ಫಿಲಂ ಚೇಂಬರ್ ನಲ್ಲಿ ತುರ್ತು ಸಭೆ ನಡೆಸಿದ್ದು, ಅಧ್ಯಕ್ಷರಾದ ಎಂ.ಎನ್ ಸುರೇಶ್ ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ ಎಂದು ತಿಳಿಸಿದ್ದಾರೆ. ಹೌದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಸ್ಯಾಂಡಲ್ವುಡ್ನಿಂದ ಬ್ಯಾನ್ ಮಾಡುವ ಕುರಿತು ಇಂದು ಕರ್ನಾಟಕ ಫಿಲಂ ಚೇಂಬರ್ ನಲ್ಲಿ ಎಂ.ಎನ್ ಸುರೇಶ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.ಈ ವಿಚಾರದಲ್ಲಿ ನಾವು ರಾಜಿ ಆಗಲ್ಲ. ನಾವು ಈ ಹಿಂದೆ ಎಷ್ಟೋ ಕೇಸ್ಗಳಲ್ಲಿ ಸಂಧಾನ ಮಾಡಿಸಿದ್ದೇವೆ ಎಂದು ಅವರು ತಿಳಿಸಿದರು. ಆದರೆ ಇದು ಕೊಲೆ ಪ್ರಕರಣ ಆಗಿರುವುದರಿಂದ ಎಲ್ಲವೂ ಕಾನೂನಿನ ಅಡಿಯಲ್ಲೇ ನಡೆಯಬೇಕು. ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತೇವೆ. ಯಾವ ಚಿತ್ರರಂಗದಲ್ಲೂ ನಟ-ನಟಿಯರನ್ನು…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪವಿತ್ರ ಗೌಡ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ದರ್ಶನ್ ಪುತ್ರ ವಿನೀಶ್ ಕೂಡ ಪೋಸ್ಟ್ ಹಂಚಿಕೊಂಡಿದ್ದು, ಕೆಟ್ಟದಾಗಿ ಕಮೆಂಟ್ಸ್ ಹಾಕಿದವರಿಗೆ ತಿರುಗೇಟು ನೀಡಿದ್ದಾರೆ. ಇನ್ನೊಂದಡೆ ಪತಿಯ ಒಂದು ಕೃತ್ಯದಿಂದ ಬೇಸತ್ತು ಪತ್ನಿ ವಿಜಯಲಕ್ಷ್ಮಿ ಕೂಡ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅವರ ಜೊತೆಗಿದ್ದ ಫೋಟೋ ರಿಮೂವ್ ಮಾಡಿದ್ದು ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಇದರ ನಡುವೆ ದರ್ಶನ್ ಹಾಗೂ ವಿಜಯಲಕ್ಷ್ಮೀ ಅವರ ಪುತ್ರ 15 ವರ್ಷದ ವಿನೇಶ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿರುವ ಪೋಸ್ಟ್ ಗಮನಸೆಳೆದಿದೆ. ಅವರಿಗೆ ಬರುತ್ತಿರುವ ಸೋಶಿಯಲ್ ಮೀಡಿಯಾ ಒತ್ತಡ ಹಾಗೂ ಕೆಟ್ಟ ಕಾಮೆಂಟ್‌ಗಳ ಬಗ್ಗೆ ಅವರು ಬರೆದುಕೊಂಡಿದ್ದಾರೆ. ವಿನೀಶ್ ಇನ್ಸ್‌ಟಾಗ್ರಾಮ್ ಸ್ಟೋರಿ ಹಂಚಿಕೊಂಡಿದ್ದಾರೆ.’ ನನ್ನ ತಂದೆ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಅಸಭ್ಯ ಭಾಷೆಯಲ್ಲಿ ನಿಂದನೆ ಮಾಡುತ್ತಿರುವರಿಗೆ ಧನ್ಯವಾದಗಳು. ನನಗೆ 15 ವರ್ಷ, ನನಗೂ ಮನಸಿದೆ, ಈ ಕಷ್ಟದ ಸಮಯದಲ್ಲಿ ನನ್ನ…
ದಕ್ಷಿಣಕನ್ನಡ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕೇಸ್ ನಲ್ಲಿ ಬಿಎಸ್ ಯಡಿಯೂರಪ್ಪಗೆ ಅರೆಸ್ಟ್ ವಾರೆಂಟ್ ನೀಡಿರುವ ವಿಚಾರವಾಗಿ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾವೇರಿ ಆರೋಪಿಸಿದ್ದು,ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ವಿಶ್ವಾಸವಿಟ್ಟು ಹೇಳಿಕೆಯನ್ನು ನೀಡುತ್ತಿದ್ದೇನೆ. ಆರೋಪ ಮಾಡಿದ್ದ ಮಹಿಳೆ ಪ್ರತಿನಿತ್ಯ ದೂರು ಕೊಡುತ್ತಿದ್ದವಳು. ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು. ನಾನು ಇನ್ನೇನು ಹೆಚ್ಚು ಹೇಳಲು ಬಯಸುವುದಿಲ್ಲ. ಯಡಿಯೂರಪ್ಪ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರದ ಭಾಗವಾಗಿದೆ ಎಂದು ಕಾರವಾರದಲ್ಲಿ ಸಂಸದ ವಿಶ್ವೇಶ್ವರಹೆಗ್ಡೆ ಕಾಗೇರಿ ಅವರು ತಿಳಿಸಿದರು.
ಶಿವಮೊಗ್ಗ : ಲೈಂಗಿಕ ದೌರ್ಜನ್ಯದ ಅಡಿ ಪೋಕ್ಸೋ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ವಾರೆಂಟ್ ಜಾರಿಯಾದ ವಿಚಾರಕ್ಕೆ ಅವರ ಪುತ್ರ ಬಿವೈ ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದು, ನಮ್ಮ ತಂದೆ ಬಿಎಸ್ ಯಡಿಯೂರಪ್ಪ ಹಾಗೂ ನಮ್ಮ ಕುಟುಂಬದ ಮನಸ್ಥಿತಿ ಕೂಗಿಸಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈ ಗೆ ಅರೆಸ್ಟ್ ವಾರೆಂಟ್ ವಿಚಾರವಾಗಿ ಇದರಲ್ಲಿ ರಾಜಕೀಯ ಉದ್ದೇಶ ಕಾಣುತ್ತಿದೆ ಎಂದು ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ ಹೇಳಿಕೆ ನೀಡಿದ್ದು, ಯಾವುದೇ ಹುರುಳಿಲ್ಲವೆಂದು ಬಿ ರಿಪೋರ್ಟ್ ಹಾಕುವ ಕೇಸ್ ಇದು. ಇದರಲ್ಲೂ ರಾಜಕಾರಣವನ್ನು ಹುಡುಕಿದ್ದಾರೆ. ಆ ಮಹಿಳೆ ಅನೇಕ ಅಧಿಕಾರಿಗಳ ವಿರುದ್ಧವೂ ಕೂಡ ಕೆಸ್ ದಾಖಲಿಸಿದ್ದರು ಎಂದು ತಿಳಿಸಿದರು. ರಾಹುಲ್ ಗಾಂಧಿ ಕೋರ್ಟಿಗೆ ಬಂದು ಹೋದ ಮೇಲೆ ಇಂತಹ ಘಟನೆ ನಡೆದಿದೆ.ಬಿಎಸ್ ಯಡಿಯೂರಪ್ಪ, ಹಾಗೂ ನಮ್ಮ ಕುಟುಂಬದವರ ಮನಸ್ಥಿತಿ…
ಹಾಸನ : ಹಾಸನದಲ್ಲಿ ಸರಣಿ ಅಪಘಾತದಲ್ಲಿ ಪಲ್ಸರ್ ಬೈಕ್ ಗೆ BMW ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕತ್ತರಿಘಟ್ಟ ಗ್ರಾಮದಲ್ಲಿ ನಡೆದಿದೆ. ಬಿ ಎಂ ಡಬ್ಲ್ಯೂ ಕಾರು ಡಿಕ್ಕಿಯಾಗಿ ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರು ಸಾವನ್ನಾಪ್ಪಿದ್ದಾರೆ. ಘಟನೆಯು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕತ್ತರಿ ಘಟ್ಟ ಗ್ರಾಮದಲ್ಲಿ ನಡೆದಿದೆ. ದೇವೇಗೌಡ ನಗರದ ಬಿಎಸ್ ಅಜಿತ್ (30) ಹಾಗೂ ಮನು (26) ಸಾವನಪ್ಪಿರುವ ದುರ್ದೈವಿಗಳು ಎಂದು ಹೇಳಲಾಗುತ್ತಿದೆ. ಕಾರು ಡಿಕ್ಕಿ ರಭಸಕ್ಕೆ ಬೈಕ್ ಸಮೇತ ಹಳ್ಳಕ್ಕೆ ಸವಾರರು ಹಾರಿ ಬಿದ್ದಿದ್ದಾರೆ. ಬೆಂಗಳೂರಿನಿಂದ ಹಾಸನದತ್ತ ತೆರಳುತ್ತಿದ್ದ KA 06 HS 0727 ಪಲ್ಸರ್ ಬೈಕ್ ಎಂದು ಹೇಳಲಗುತ್ತಿದ್ದೂ, ನಂತರ ಕಿಯಾ ಕಾರು ಹಾಗೂ ಸರ್ಕಾರಿ ಬಸ್ಸಿಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದಿದೆ. ಸರಣಿ ಅಪಘಾತದ ಬಳಿಕ, ಪಕ್ಕದಲ್ಲಿರುವ ಕೆರೆಗೆ ಹಾರಿ ಬಿದ್ದಿದೆ.ಘಟನೆ ಕುರಿತಂತೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣಾ…
ಹಾವೇರಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡ ಬಳಿಕ ನೂತನ ಸಂಸತ್ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 17ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು. ಶಿಗ್ಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾನು ಜೂ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾವಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದರೆ, ಬಿಜೆಪಿಯಿಂದ ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ. ಹೈಕಮಾಂಡ್‌ನಿಂದ ಈ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಪಕ್ಷ ಟಿಕೇಟ್ ನೀಡಲಿದೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಖಂಡಿತವಾಗಿ ಶಿಗ್ಗಾವಿ ಉಪಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿದರು. ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ 100 ದಿನದ ಕಾರ್ಯಕ್ರಮ…
ದಕ್ಷಿಣಕನ್ನಡ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಆರೋಪಿ ಶಶಿರಾಜ್ ಶೆಟ್ಟಿಗೆ 25 ದಿನಗಳ ಬಳಿಕ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.ಅದರೊಂದಿಗೆ ನಾಪತ್ತೆಯಾಗಿದ್ದ ಮತ್ತೊಬ್ಬ ಆರೋಪಿ ಪ್ರಮೋದ್ ದಿಡುಪೆಗೂ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮೇ18 ರಂದು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಾಂ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿದ್ದರು. ಅಲ್ಲದೆ ಇತ್ತೀಚಿಗೆ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ PSI ಗೆ ಧಮ್ಕಿ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೂ ಕೂಡ ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದರು. ಬಳಿಕ ಪ್ರಕರಣದ ಆರೋಪಿಯಾದ ಶಶಿರಾಜ್ ಶೆಟ್ಟಿಯನ್ನು ಮೇ18 ರಂದು ರಾತ್ರಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿತ್ತು. ಬಂಧಿಸಿದ 25 ದಿನಗಳ ಬಳಿಕ ಶಶಿರಾಜ್ ಶೆಟ್ಟಿಗೆ…
ಬೆಂಗಳೂರು : ಇಂಜಿನಿಯರ್ ಪದವಿಧರರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ, ನೆಲಮಂಗಲದ ಮಾಜಿ ಶಾಸಕ ಡಾ.ಶ್ರೀನಿವಾಸಮೂರ್ತಿ ಗನ್ ಮ್ಯಾನ್ ಒಬ್ಬ ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿ ಬಂದಿದೆ. ಹೌದು ಸುಮಾರು 10 ವರ್ಷಗಳ ಕಾಲ ನೆಲಮಂಗಲದ ಮಾಜಿ ಶಾಸಕ ಡಾ. ಶ್ರೀನಿವಾಸ್ ಗೌಡ ಗನ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸಿದ್ದ ವೆಂಕಟೇಶ್ ಎಂಬಾತ ವಿಧಾನಸೌಧದಲ್ಲಿ ಸರ್ಕಾರಿ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ ಹಣಪೀಕಿದ ಆರೋಪದ ಹಿನ್ನಲೆ ದಾಬಸ್ ಪೇಟೆ ನಿವಾಸಿ ಸುನಂದಾ ಅವರು ಠಾಣೆಗೆ ದೂರು ದಾಖಲಿಸಿದ್ದಾರೆ. ಇಂಜಿನಿಯರಿಂಗ್ ಪದವೀಧರರಾದ ತನ್ನ ಎರಡು ಹೆಣ್ಣು ಮಕ್ಕಳಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಬರೋಬ್ಬರಿ 16.50 ಲಕ್ಷ ಹಣ ಪೀಕಿರುವ ಗನ್ ಮ್ಯಾನ್, ಇತ್ತ ಕೆಲಸವೂ ಕೊಡಿಸದೇ, ಹಣವೂ ನೀಡದೆ ಸತಾಯಿಸುತ್ತಿದ್ದ. ಡಿಸೆಂಬರ್ 2022 ರಿಂದಲೂ ಕೆಲಸ ಕೊಡಿಸೊದಾಗಿ ನಂಬಿಸಿದ್ದ ವೆಂಕಟೇಶ್, ಪೋನ್ ಪೇ ಮೂಲಕ ಹಾಗೂ ನಗದು ರೂಪದಲ್ಲಿ 25 ಬಾರಿ ಹಣ ಪಡೆದಿದ್ದಾನೆ. ಈ ಹಿನ್ನಲೆ ನೆಲಮಂಗಲ ಟೌನ್ ಪೊಲೀಸ್…













