Subscribe to Updates
Get the latest creative news from FooBar about art, design and business.
Author: kannadanewsnow05
ಟೆಹ್ರಾನ್ : ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮುಜ್ತಬಾ ಖಮೇನಿ ಅವರ ಸುತ್ತ ಈಗ ಅಭೇದ್ಯ ಕೋಟೆಯೊಂದು ನಿರ್ಮಾಣವಾಗಿದೆ. ಇರಾನ್‌ನ ಅತ್ಯಂತ ಕ್ರೂರ ಮತ್ತು ಶಕ್ತಿಶಾಲಿ ಪಡೆಯೆಂದು ಕರೆಯಲ್ಪಡುವ ‘NOPO’ (ನೋಪೋ) ಪಡೆಯ ಕಾವಲು ಈಗ ಮುಜ್ತಬಾ ಅವರನ್ನ ಸುತ್ತುವರೆದಿದೆ. ಇದು ಇರಾನ್‌ನಲ್ಲಿ ಮುಂದಿನ ಅಧಿಕಾರ ಬದಲಾವಣೆಯ ದಿಕ್ಸೂಚಿಯೇ ಎಂಬ ಚರ್ಚೆ ಜಾಗತಿಕ ಮಟ್ಟದಲ್ಲಿ ಶುರುವಾಗಿದೆ. ಏನಿದು NOPO ರಹಸ್ಯ? NOPO ಅಂದರೆ ‘ನಿರುಯೆ ವಿಝೆ-ಯೆ ಪಾಸ್ಬನ್-ಎ ವೆಲಾಯತ್’ (Niruye Vizhe-ye Pasban-e Velayat). ಇದನ್ನು ಇಂಗ್ಲಿಷ್‌ನಲ್ಲಿ “Special Force of the Guardians of the Velayat” ಎಂದು ಕರೆಯಲಾಗುತ್ತದೆ. ಇವರನ್ನು ಸಾಮಾನ್ಯವಾಗಿ ಇರಾನ್‌ನ ‘ಬ್ಲ್ಯಾಕ್ ಸ್ಕ್ವಾಡ್’ (Black Squad) ಎಂದು ಗುರುತಿಸಲಾಗುತ್ತದೆ. * ಯಮದೂತರ ಕಾವಲು: ಇವರು ಸಂಪೂರ್ಣ ಕಪ್ಪು ಉಡುಪು ಧರಿಸಿ, ಮುಖವಾಡ ತೊಟ್ಟು ಕಾರ್ಯಾಚರಣೆ ನಡೆಸುತ್ತಾರೆ. ಇವರ ತರಬೇತಿ ಎಷ್ಟು ಕಠಿಣವಾಗಿರುತ್ತದೆ ಎಂದರೆ, ಇವರನ್ನು ಎದುರಿಸುವುದು ಸಾವಿಗೆ ಸವಾಲು ಹಾಕಿದಂತೆ…
ಬೀದರ್ : ವಿದ್ಯಾರ್ಥಿನಿಗೆ ಆಕೆಯ ಸಹಪಾಠಿಗೆ ನನ್ನನ್ನು ಪ್ರೀತಿಸು ಅಂತ ಕಿರುಕುಳ ನೀಡಿದ್ದಾನೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಶಾಲಾ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದರುವುದಾಗಿ ತಿಳಿದುಬಂದಿದೆ. ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಕಾಮಗಾರಿ ಒಂದಕ್ಕೆ ಗುತ್ತಿಗೆದಾರನ ಬಳಿ 5 ಲಕ್ಷ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಉಲಮಾಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ. ಜಾಮೀನು ಕೋರಿ ಚಂದ್ರು ಲಮಾಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೇ, 2 ಲಕ್ಷ ರು.ಗಳ ವೈಯಕ್ತಿಕ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ, ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಯಗಳಿಗೆ ನೇರ ಅಥಾವ ಪರೋಕ್ಷವಾಗಿ ಸಂಪರ್ಕಿಸಬಾರದು. ಅವರ ಮೇಲೆ ಪ್ರಭಾವ ಬೀರುವುದಕ್ಕೆ ಮುಂದಾಗಬಾರದು. ಸಾಕ್ಷ್ಯಗಳ ನಾಶಕ್ಕೆ ಪ್ರಯತ್ನಿಸಬಾರದು. ನ್ಯಾಯಾಲಯದಿಂದ ಲಿಖಿತ ಅನುಮತಿ ಪಡೆಯದೇ ದೇಶ ತೊರೆಯಬಾರದು, ತನಿಖೆ ಸಂದರ್ಭದಲ್ಲಿ ತನಿಖಾಧಿಕಾರಿಗಳಿಗೆ ಸಹಕಾರ ನೀಡಬೇಕು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಸ್ನೇಹಿತನ ಜೊತೆ ಎಣ್ಣೆ ಪಾರ್ಟಿಗೆ ಹೋದಾಗ ಯುವಕನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ದೊಡ್ಡಕೆರೆ ಬಳಿ ಈ ಒಂದು ಕೊಲೆ ನಡೆದಿದೆ ಕತ್ತು ಸೀಳಿದ ರೀತಿಯಲ್ಲಿ ನಂಜುಂಡಸ್ವಾಮಿ (22) ಎನ್ನುವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಸ್ನೇಹಿತನ ಜೊತೆಗೆ ನಂಜುಂಡಸ್ವಾಮಿ ಎಣ್ಣೆ ಪಾರ್ಟಿಗೆ ತೆರಳಿದ್ದಾನೆ ಗಾಂಜಾ ಮತ್ತಿನಲ್ಲಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಓರ್ವವನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಭಂದ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಟಿಪ್ಪರ್ ಗೆ ಬೈಕ್ ಡಿಕ್ಕಿಯಾಗಿ, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೆ ಸಾವು!
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ಕೃತಿಕ (21) ಸಾವನಪ್ಪಿದ್ದು, ಆಕೆಯ ಜೊತೆ ತೆರಳುತ್ತಿದ್ದ ಮತ್ತೋರ್ವ ಯುವತಿ ಹಂಸ ಸ್ಥಿತಿ ಗಂಭೀರವಾಗಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ಆರ್ ಆರ್ ಮೆಡಿಕಲ್ ಕಾಲೇಜಿನಲ್ಲಿ ಕೃತಿಕಾ ವ್ಯಾಸಂಗ ಮಾಡುತ್ತಿದ್ದಳು. ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದು ಕೆಳಗೆ ಇಬ್ಬರು ಬಿದ್ದಿದ್ದಾರೆ.ಈ ವೇಳೆ ಕೃತಿಕಾ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡ ಹಂಸಗೆ ರಾಜರಾಜೇಶ್ವರಿ ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.
ಬೀದರ್ : ಬೀದರ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೈಕ್ ನಲ್ಲಿ ಸಾಗಿಸುತ್ತಿದ್ದ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಸಂತಪುರಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸಂತಪುರಕ್ಕೆ ಸಾಗಿಸುವಾಗ 19.70 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಮಂಡ್ಯ : ಅರ್ಚಕ ಅನುಮಾನಾಸ್ಪದವಾಗಿ ಸಾವನ್ನಪಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಕಾಮದಾಟಕ್ಕೆ ಅಡ್ಡಿಯಾಗಬಾರದೆಂದು ಪ್ರಿಯಕರನಿಂದಲೇ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಬಳಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಕೊಲೆಯಾದವರು. ಸಿದ್ದಲಿಂಗಪ್ಪನ ಪತ್ನಿ ಶಾಲಿನಿ (32), ಮರಳಗಾಲ ಗ್ರಾಮದ ಹರೀಶ (33), ಸಂತೋಷ್ ಕುಮಾರ್ (29) ಮತ್ತು ಗಣೇಶ ಬಿ.ಆರ್. ಬಿನ್ ಲೇಟ್ ರಾಮಸಿದ್ದು (29) ಕೊಲೆ ಪ್ರಕರಣದ ಬಂಧಿತ ಆರೋಪಿಗಳಾಗಿದ್ದಾರೆ. ಮಾ.6ರಂದು ಶ್ರೀರಂಗಪಟ್ಟಣ ತಾಲೂಕಿನ ಮಾರಳಗಾಲ ಗ್ರಾಮದ ಅರ್ಚಕ ಸಿದ್ದಲಿಂಗಪ್ಪ ಅವರು ಕೆ.ಶೆಟ್ಟಹಳ್ಳಿ ಗಣಪತಿ ದೇವಸ್ಥಾನಕ್ಕೆ ಪೂಜೆಗೆ ಹೋಗಿ ರಾತ್ರಿ ಮನೆಗೆ ಬಾರದೇ ಇದ್ದಾಗ ಮತ್ತು ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸಂಬಂಧಿಕರು ಹುಡುಕಾಟ ನಡೆಸಿದ್ದಾರೆ. ರಾತ್ರಿ ಸಿಡಿಎಸ್ ಕಾಲುವೆಯ ತೂಬಿನ ಹತ್ತಿರದ ರಸ್ತೆಯಲ್ಲಿ ಆರ್ಚಕ ಸಿದ್ದಲಿಂಗಪ್ಪನ ಚಪ್ಪಲಿ ಮತ್ತು ಪಕ್ಕದ ಹುಲ್ಲಿನ ಮೇಲೆ ರಕ್ತ ಚೆಲ್ಲಿದ್ದು, ಅಕ್ಕಪಕ್ಕದಲ್ಲಿ ಅರ್ಚಕ ಧರಿಸುತ್ತಿದ್ದ ರುದ್ರಾಕ್ಷಿಮಣಿ ಸ್ಪಟಿಕಮಣಿ ಸರ, ಅದರಲ್ಲಿದ್ದ ಡಾಲರ್‌ಗಳು ಬಿದ್ದಿದ್ದವು. ಶಾಲಿನಿ ಹಾಗೂ…
ಮಂಗಳೂರು : ಚೀನಾ ಸೈಬರ್ ವಂಚಕರಿಗೆ ಜನಸಾಮಾನ್ಯರ ಬ್ಯಾಂಕ್ ಅಕೌಂಟ್ ಗಳ ಮಾಹಿತಿಗಳನ್ನು ನೀಡುತ್ತಿದ್ದ ಇಬ್ಬರು ಸೈಬರ್ ವಂಚಕರನ್ನು ಮಂಗಳೂರಲ್ಲಿ ಸೈಬರ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ರಾಜ್ಯ ಸೈಬರ್ ಕಮಾಂಡ್ ಯೂನಿಟ್ನಿಂದ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್‌ಗಳು, 18 ಬಿಟ್ ಕಾರ್ಡ್‌ಗಳು, 17 ಬ್ಯಾಂಕ್ ಪಾಸ್‌ಬುಕ್‌ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ) 1 ಕಾರನ್ನು ವಶಕ್ಕೆ ಪಡೆಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ…
ಬೆಂಗಳೂರು : ಇರಾನ್-ಇಸ್ರೇಲ್ ಯುದ್ಧ ಆಗುತ್ತಿದೆ. ಪೆಟ್ರೋಲ್, ಗ್ಯಾಸ್ ಬರುತ್ತಿಲ್ಲ. ಮನೆಬಳಕೆ ಸಿಲಿಂಡರ್ಗೆ ಸಮಸ್ಯೆ ಇಲ್ಲ. 28 ದಿನದ ಉಪಯೋಗಕ್ಕೆ ಕೊಡುತ್ತೇವೆ. ಸಿಲಿಂಡರ್ ಸ್ಟೋರೇಜ್ಗೆ ಅವಕಾಶವಿಲ್ಲ. ಒಂದು ವೇಳೆ ಮಾಡಿದರೆ ಕ್ರಮ ಜರುಗಿಸುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು. ವಿಧಾನಸಭೆಯಲ್ಲಿಂದು ವಾಣಿಜ್ಯ ಎಲ್ಪಿಜಿ ಕೊರತೆ ತೀವ್ರ ಸದ್ದುಗದ್ದಲಕ್ಕೆ ಕಾರಣವಾಯಿತು. ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ಸಾಕ್ಷಿಯಾಯಿತು. ನಾನು ಬೆಳಗ್ಗೆಯೇ ತೈಲ ಮಾರುಕಟ್ಟೆ ಕಂಪನಿ ಜೊತೆ ಸಭೆ ಮಾಡಿದ್ದೇನೆ. ಇವತ್ತಿನವರೆಗೆ ಸರಬರಾಜು ಸಮಸ್ಯೆ ಇಲ್ಲ. 20.30% ನಮ್ಮ ಸ್ವಂತ ಉತ್ಪಾದನೆ ಇದೆ. 70%ರಷ್ಡು ವಿದೇಶದಿಂದ ಬರಬೇಕು. ಆಯಿಲ್ ತುಂಬಿರುವ ಹಡಗನ್ನು ಬಿಡುತ್ತಿಲ್ಲ. ಇರಾನ್-ಇಸ್ರೇಲ್ ಯುದ್ಧ ಆಗುತ್ತಿದೆ. ಪೆಟ್ರೋಲ್, ಗ್ಯಾಸ್ ಬರುತ್ತಿಲ್ಲ. ಮನೆಬಳಕೆ ಸಿಲಿಂಡರ್ಗೆ ಸಮಸ್ಯೆ ಇಲ್ಲ. 28 ದಿನದ ಉಪಯೋಗಕ್ಕೆ ಕೊಡುತ್ತೇವೆ. ಬೇರೆಯ ಉಪಯೋಗವನ್ನು ಸದ್ಯಕ್ಕೆ ನಿಲ್ಲಿಸುತ್ತೇವೆ. ಗ್ಯಾಸ್ ಹೆಚ್ಚು ಖರ್ಚು ಮಾಡುವುದು ಬೇಡ. ಸ್ಟೋರೇಜ್ ಮಾಡುವುದು ಬೇಡ. ಆದರೆ ವಾಣಿಜ್ಯ ಸಿಲಿಂಡರ್ ಸಮಸ್ಯೆ ಇದೆ ಎಂದರು.…
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಈ ಹಿಂದೆ 11.67 ಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಈಗ ಆ ಒಂದು ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್ ಅವರು ಸಮಿತಿ ಒಂದನ್ನು ರಚಿಸಿ ಮರು ತನಿಖೆಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು 2021ರಿಂದ 4 ವರ್ಷಗಳ ವರೆಗೆ ಅಂಕಪಟ್ಟಿ ನೀಡದೆ, ಭೌತಿಕ ಅಂಕಪಟ್ಟಿಗಳನ್ನು ಮುದ್ರಿಸಿ ವಿಶ್ವವಿದ್ಯಾನಿಲಯಕ್ಕೆ ಒಟ್ಟಾರೆ 11.67 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿರುವುದು ಗುಲ್ಬರ್ಗಾ ವಿವಿಯಲ್ಲಿ ಬಹಿರಂಗವಾಗಿದೆ. ಈ ಪ್ರಕರಣದ ಕುರಿತು ಸಮಗ್ರ ತನಿಖೆಗಾಗಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರ ನೇತೃತ್ವದಲ್ಲಿ ಏಕವ್ಯಕ್ತಿ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಈ ಮೂಲಕ ವಿವಿಯಲ್ಲಿನ ಕೋಟ್ಯಂತರ ಹಣ ಲೂಟಿ ಪ್ರಕರಣದ ತನಿಖೆ ಮತ್ತೆ ಆರಂಭವಾಗಿದೆ. ಏನಿದು 11.67 ಕೋಟಿ ಹಗರಣ? 2024ರ ವೇಳೆಯಲ್ಲಿನ ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಅವರು ಗುಲ್ಬರ್ಗಾ ವಿವಿಗೆ ಭೇಟಿ ನೀಡಿ,…














