Subscribe to Updates
Get the latest creative news from FooBar about art, design and business.
Author: kannadanewsnow05
ಮುಂಬೈ : ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಮತ್ತು ರಾಜ್ಯಸಭಾ ಸಂಸದೆ ಸುನೇತ್ರಾ ಪವಾರ್ ಅವರನ್ನ ಇಂದು (ಶನಿವಾರ) ಎನ್ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಯಿತು. ಹೌದು ಅವರು ಇಂದು ಸಂಜೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ನಾಮನಿರ್ದೇಶನವನ್ನು ಹಿರಿಯ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಪ್ರಸ್ತಾಪಿಸಿದರು ಮತ್ತು ಇತರ ಹಿರಿಯ ನಾಯಕರು ಅನುಮೋದಿಸಿದರು ಮತ್ತು ಅವರು ಸರ್ವಾನುಮತದಿಂದ ಆಯ್ಕೆಯಾದರು. ಬಾರಾಮತಿಯಲ್ಲಿ ನಡೆದ ಚಾರ್ಟರ್ಡ್ ವಿಮಾನ ಅಪಘಾತದಲ್ಲಿ ಎನ್‌ಸಿಪಿ ಮುಖ್ಯಸ್ಥ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ ಮೂರು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ಅಪಘಾತದಲ್ಲಿ ಇನ್ನೂ 4 ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು : ರಾಜ್ಯದ ಎಲ್ಲ ರಾಜಕೀಯ ಪಕ್ಷಗಳಲ್ಲಿನ ಪ್ರಭಾವಿ ವ್ಯಕ್ತಿಗಳು ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. 2026ರ ಜನವರಿ 27ರಂದು ನಡೆದ ವಿಧಾನಸಭಾ ಕಲಾಪದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೀಡಿದ ಹೇಳಿಕೆ, ಅಕ್ರಮ ಗಣಿಗಾರಿಕೆ ದೊಡ್ಡ ದಂಧೆಯಾಗಿದೆ. ಪ್ರಕರಣ ಸಂಬಂಧ ಯಾರ ಹೆಸರನ್ನು ಪ್ರಸ್ತಾಪಿಸುತ್ತಿಲ್ಲ. ಯಾರನ್ನೂ ದೂಷಣೆ ಮಾಡುತ್ತಿಲ್ಲ. ಏಕೆಂದರೆ ಇದು ಅತ್ಯಂತ ಮುಜುಗರ ಸಂಗತಿಯಾಗಿದೆ. ಈ ಸಂಬಂಧ ಸೀಮಿತವಾಗಿ ಉತ್ತರವನ್ನು ಮಾತ್ರ ನೀಡುತ್ತಿದ್ದು, ಅನೇಕ ಪ್ರಭಾವಿಗಳು ದಂಧೆಯಲ್ಲಿ ಭಾಗಿಯಾಗಿದ್ದಾರೆ. ಈ ವಿಷಯವನ್ನು ಚರ್ಚಿಸುವುದಕ್ಕಾಗಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಈ ಅಂಶ ಜನವರಿ 28ರಂದು ಪತ್ರಿಕೆಗಳು ಮತ್ತು ಟಿವಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ ಎಂದು ನ್ಯಾಯಪೀಠ ಹೇಳಿದೆ. ಮಾಫಿಯಾಗಳಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯುವುದಕ್ಕೆ ಕ್ರಮ ಕೈಗೊಳ್ಳುವಲ್ಲಿ ರಾಜ್ಯದ ಗೃಹ…
ಮೈಸೂರು : ಮೈಸೂರಿನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮಗು ಮೇಲೆ ಏಕಾಏಕಿ ಚಿರತೆ ದಾಳಿ ನಡೆಸಿದೆ. ಚಿರತೆ ದಾಳಿಯಿಂದ ಬೈಕ್ ನಿಂದ ಕೆಳಗೆ ಬಿದ್ದ ದಂಪತಿ ಮತ್ತು ಮಗುವಿಗೆ ಗಂಭೀರವಾದ ಗಾಯಗಳಾಗಿದ್ದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ಈ ಒಂದು ಕಡಿಮೆ ಸಂಭವಿಸಿದೆ. ಚಿರತೆ ದಾಳಿಯಿಂದ ರೈತ ಮಹದೇವಸ್ವಾಮಿ ಪತ್ನಿ ಮತ್ತು ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ತಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಎಚ್ಎಂಟಿಸಿಗಾಗಿ ಮೈಸೂರು ಆಸ್ಪತ್ರೆಗೆ ಸಿಬ್ಬಂದಿಗಳು ಕಳುಹಿಸಿದ್ದು ಚಿರತೆಯನ್ನು ಸೆರೆಹಿಡಿದು ಸ್ಥಳಾಂತರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೆಂಗಳೂರು : ಬೀದರ್ ನಲ್ಲಿ ನಿಗೂಢ ಸ್ಫೋಟ ಬೆನ್ನಲ್ಲೇ, ಬೆಂಗಳೂರಿನ ಉರ್ದು ಶಾಲೆಯಲ್ಲಿ ಕೆಮಿಕಲ್ ಸ್ಫೋಟಗೊಂಡು ಓರ್ವ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಘಟನೆ ಸಂಭವಿಸಿದೆ. ಜಗ್ ನ ನೀರಿಗೆ ಕೆಮಿಕಲ್ ಹಾಕಿದಾಗ ಏಕಾಏಕಿ ಸ್ಪೋಟಗೊಂಡಿದೆ. ಕೆಮಿಕಲ್ ಸ್ಫೋಟದಿಂದ 7ನೇ ತರಗತಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿವೆ. ಕಾರ್ಬನ್ ಕೆಮಿಕಲ್ ತಂದು 7ನೇ ತರಗತಿ ವಿದ್ಯಾರ್ಥಿ ಪ್ರಯೋಗ ಮಾಡುತ್ತಿದ್ದ ಗಾಯಗೊಂಡ ವಿದ್ಯಾರ್ಥಿ ದೇವನಹಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರು, ಜ.31: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಸೊಕೊ ತಂಡ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದೆ ಇನ್ನು ಬಾಂಬ್ ಸ್ಥಳದಲ್ಲಿ ಬೀಡು ಬಿಟ್ಟಿದೆ. FSL ತಜ್ಞರಿಂದ ಪರಿಶೀಲನೆ ನಡೆಸಲಾಗುತ್ತಿದೆ ಸ್ಥಳದ ಸುತ್ತಮುತ್ತಲು ಬ್ಯಾರಿಕೆ ಹಾಕಿದ್ದಾರೆ ಜನರು ಓಡಾಡದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ. ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮತ್ತು ಚಿಕಿತ್ಸಾವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿರುವ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಸ್ಫೋಟ ಸ್ಥಳದಲ್ಲಿ ಮಾದರಿ ಸಂಗ್ರಹಿಸಿ ತನಿಖೆ ಮಾಡಲು ಆದೇಶಿಸಿದ್ದಾರೆ. ಸ್ಫೋಟಕ್ಕೆ ಕಾರಣವೇನು, ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು, ಆ ಸ್ಫೋಟಕ ವಸ್ತು…
ವಿಜಯನಗರ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ತಂದೆ-ತಾಯಿ ಹಾಗೂ ಸಹೋದರಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮನೆಯ ಹಾಲ್ ನಲ್ಲಿ ಹೂತು ಹಾಕಿದ್ದ ಶವಗಳನ್ನು ಇದೀಗ ಹೊರತೆಗೆಲಾಗಿದೆ. ಮನೆಯ ಹಾಲ್ ನಲ್ಲಿಯೇ ಆರೋಪಿ ಅಕ್ಷಯ್ ತಂದೆ ತಾಯಿ ಹಾಗೂ ಸಹೋದರಿಯ ಶವಗಳನ್ನು ಹೂತು ಹಾಕಿದ್ದ. ಒಂದೇ ಗುಂಡಿಯಲ್ಲಿ ಮೂರು ಶವಗಳನ್ನು ಹೂತಿದ್ದ ಅಕ್ಷಯ್, ಬಳಿಕ ಪೊಲೀಸರಿಗೆ ನಾಪತ್ತೆಯಾಗಿರುವ ಕುರಿತು ಕೆಸ್ ದಾಖಲಿಸಿದ್ದಾನೆ. ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಸದ್ಯ ಮೂವರು ಶವಗಳನ್ನ ಕೊಟ್ಟೂರು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಪ್ರಕರಣದ ಹಿನ್ನೆಲೆ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಜನವರಿ 27 ರಂದು ಭೀಕರ ಕುಟುಂಬ ಕೊಲೆ ನಡೆದಿದೆ. ಅರೋಪಿ ಅಕ್ಷಯ್ ಕುಮಾರ್ ತಮ್ಮ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿ ಮನೆಯಲ್ಲಿ ಹೂತಾಕಿದ್ದಾನೆ. ಸ್ಥಳಕ್ಕೆ ಶೀಘ್ರವೇ ಕೊಟ್ಟೂರು ಠಾಣೆಯ ಪೊಲೀಸರು ಭೇಟಿ ನೀಡಿ ಅರೋಪಿಯನ್ನು ಕರೆತರಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮನೆ ಪರಿಶೀಲನೆ ನಡೆಸಿ, ಸ್ಥಳವನ್ನು ಸೀಲ್…
ರಾಯಚೂರು / ಬೆಳಗಾವಿ : ರಾಜ್ಯದಲ್ಲಿ ನಿನ್ನೆ ಒಂದೇ ದಿನ ಪ್ರತ್ಯೇಕ ಘಟನೆಗಳಲ್ಲಿ ವಿದ್ಯುತ್ ತಂತಿ ತಗುಲಿ ಓರ್ವ ವಿದ್ಯಾರ್ಥಿ ಹಾಗೂ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಹಾಗೂ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ವಿದ್ಯಾರ್ಥಿನಿ ಸಾವು! ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕುರಕುಂದಿ ಗ್ರಾಮದಲ್ಲಿ ವಿದ್ಯುತ್ ತಗುಲಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ಕುರಕುಂದಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ತನುಶ್ರೀ ಶ್ಯಾಮಣ್ಣ ಭಜಂತ್ರಿ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಬೆಳಿಗ್ಗೆ 11.30ಕ್ಕೆ ವಿರಾಮ ಸಮಯದಲ್ಲಿ ಕುಡಿಯಲು ನೀರು ತರಲು ತೆರಳಿದ್ದ ವೇಳೆ ವಿದ್ಯುತ್ ತಗುಲಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣವೇ ವಿದ್ಯಾರ್ಥಿನಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದ ಬಳಿಕ ತುರುವಿಹಾಳ ಪೊಲೀಸ್ ಠಾಣೆಯ ಪಿಎಸ್‌ಐ ಸುಜಾತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಿಳೆ ಸಾವು!…
ಬೆಂಗಳೂರು : 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಪಿ ಅಗ್ರಹಾರ ಠಾಣೆ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕೆಪಿ ಅಗ್ರಹಾರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜನನ್ನು ಲಂಚ ಪಡೆದ ಪ್ರಕರಣದಲ್ಲಿ ಸಸ್ಪೆಂಡ್ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು. ಅಲ್ಲದೆ ವಿವಿಧ ಪ್ರಕರಣಗಳ ಸಂಬಂಧ ನೂರಕ್ಕೂ ಅಧಿಕ ಪೊಲೀಸ್ ಹೆಸರನ್ನು ಅಮಾನತು ಮಾಡಲಾಗಿದೆ. ಭ್ರಷ್ಟಾಚಾರದಲ್ಲಿ ಭಾಗಿಯಾಗದಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಆದರೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಅವರಿಗೂ ಇರಬೇಕು ಪದೇ ಪದೇ ಎಂತಹ ಘಟನೆ ನಡೆದಾಗ ಇಲಾಖೆಗೆ ಮುಜುಗರ ಆಗುತ್ತದೆ. ಸರ್ಕಾರ ಹಾಗೂ ವೈಯಕ್ತಿಕವಾಗಿ ನಮಗೂ ಮುಜುಗರವಾಗುತ್ತದೆ. ಮತ್ತೆ ಇಂತಹ ಘಟನೆ ಆಗಬಾರದು…
ಶಿವಮೊಗ್ಗ : ಖಾತೆ ಮಾಡಿಕೊಡಲು 1 ಲಕ್ಷ ರೂ. ಹಣ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ(ವಿಎ) ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ ಎಂದು ತಿಳಿದುಬಂದಿದೆ. ತಮ್ಮ ತಂದೆಯ ವಿಲ್ ಪತ್ರದಂತೆ ಶಿಕಾರಿಪುರ ತಾಲೂಕಿನ ಚಿಕ್ಕಬಂಜೂರಿನಲ್ಲಿರುವ ಜಮೀನಿನ ಖಾತೆ ಮಾಡಿಕೊಡುವಂತೆ ಜಮೀನಿನ ಮಾಲೀಕರಾದ ಜಿಕ್ರಿಯಾ ಬೇಗ್ ಎಂಬುವರು ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಅವರನ್ನು ಸಂಪರ್ಕಿಸಿದ್ದರು.ವಿಠ್ಠಲ್ ಕೋಲ್ಹಾರ್ ಖಾತೆ ಬದಲಾವಣೆಗೆ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಸಲುವಾಗಿ ಜಿಕ್ರಿಯಾ ಬೇಗ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ಕೊಟ್ಟಿದ್ದರು.ಖಾತೆ ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆಯಲ್ಲಿ ಜಿಕ್ರಿಯಾ ಬೇಗ್ ಅವರು ಬಂಗಾರವನ್ನು ಅಡವಿಟ್ಟು 1 ಲಕ್ಷ ರೂ ಹಣವನ್ನು ಹೊಂದಿಸಿದ್ದರು.ಈ 1 ಲಕ್ಷ ರೂ ಹಣವನ್ನು ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ್ ಕೋಲ್ಹಾರ್ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು…
ಬೀದರ್ : ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೆರ ಗ್ರಾಮದಲ್ಲಿ ಅನುಮಾನಾಸ್ಪದ ವಸ್ತು ಸ್ಪೋಟಗೊಂಡು ಶಾಲೆಗೆ ತೆರಳುತ್ತಿದ್ದ ಆರು ಮಕ್ಕಳಿಗೆ ಗಂಭೀರವಾದ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡ ಅನ್ವರ್ ಎಂಬ ಬಾಲಕನಿಗೆ ಹೈದರಾಬಾದ್ ಗೆ ಶಿಫ್ಟ್ ಮಾಡಿದ್ದು, ಮೊಳಗಿ ಮಾರಾಯ ದೇಗುಲಕ್ಕೆ ಹೋಗುವಾಗ ರಸ್ತೆಯಲ್ಲಿ ಒಂದು ಘಟನೆ ಸಂಭವಿಸಿದೆ. ಸ್ಥಳಕ್ಕೆ ಹುಮನಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಕಳೆದ ಆರು ತಿಂಗಳಿನಲ್ಲಿ ಇದು ಎರಡನೇ ಬಾರಿ ಸ್ಪೋಟಗೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.














