Subscribe to Updates
Get the latest creative news from FooBar about art, design and business.
Author: kannadanewsnow05
BREAKING : ಇಂದು ಸಂಜೆ ನಡೆಯಬೇಕಿದ್ದ ‘ರಾಜ್ಯ ಸಚಿವ ಸಂಪುಟ ಸಭೆ’ ನಾಳೆಗೆ ಮುಂದೂಡಿಕೆ | Karnataka Cabinet Meeting
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂಜೆ 7:00 ಗೆ ನಡೆಯಬೇಕಿದ್ದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಾಳೆಗೆ ಮುಂದೂಡಿಕೆಯಾಗಿದೆ. ಹೌದು ಇಂದು ಸಂಜೆ ಬೆಂಗಳೂರಿನ ವಿಧಾನಸೌಧದಲ್ಲಿ 7 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಬೇಕಿತ್ತು. ಆದರೆ ನಾಳೆ ಈ ಒಂದು ಸಚಿವ ಸಂಪುಟ ಸಭೆ ಮುಂದೂಡಲಾಗಿದ್ದು, ನಾಳೆ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಿಗದಿಯಾಗಿದೆ. ನಾಳೆ ಸಂಜೆ 7 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಿಗದಿ ಪಡಿಸಲಾಗಿದೆ. ಈ ಒಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಿದ್ದಾರೆ. ಅಂದು ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯೂ ಅಸ್ತು ಎನ್ನಲಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಮನೆ ಮೇಲೆ ಇಂದು ‘ED’ (ಜಾರಿ ನಿರ್ದೇಶನಾಲಯ) ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಈ ಒಂದು ಪ್ರಕರಣಕ್ಕೆ ಸಿಬಿಐ ಎಂಟ್ರಿ ಆಗಿದ್ದು, ಇದೀಗ ನಟಿ ರನ್ಯಾ ರಾವ್ ವಿರುದ್ಧ FIR ದಾಖಲಿಸಿಕೊಂಡಿದೆ. ಹೌದು ನಟಿ ರನ್ಯಾ ರಾವ್ ಗೋಲ್ಡ್ ಮಾಗಲಿ ಪ್ರಕರಣದಲ್ಲಿ ಸಿಬಿಐ ಎಂಟ್ರಿ ಕೊಟ್ಟಿದ್ದು, ಸಿಬಿಐ ಪ್ರಧಾನ ಕಚೇರಿಯಲ್ಲಿ ಸಿಬಿಐ FIR ದಾಖಲಿಸಿದೆ. DRI ಅಧಿಕಾರಿಗಳ ದೂರು ಆಧರಿಸಿ ಸಿಬಿಐ FIR ದಾಖಲಿಸಿಕೊಂಡಿದೆ. ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಹಿನ್ನೆಲೆಯಲ್ಲಿ FIR ದಾಖಲಾಗಿದೆ. ಬೆಂಗಳೂರು ಮತ್ತು ಮುಂಬೈಗೆ ಅಕ್ರಮವಾಗಿ ಚಿನ್ನ ಸಾಗಾಟ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
ಬೆಂಗಳೂರು : ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿರುವ ಘಟನೆ ಬೆಂಗಳೂರಿನ ರಾಜಕುಮಾರ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಡಿವೈಡರ್ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ನಾಲ್ವರಿಗೆ ಗಾಯಗಳಾಗಿವೆ. ದಿಕ್ಕಿಯ ರಭಸಕ್ಕೆ 20 ಮೀಟರ್ ನಷ್ಟು ಕಾರು ಬಿದ್ದಿದೆ. ಕೂಡಲೇ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ಅವರನ್ನು ದಾಖಲಿಸಿ ನೀಡಲಾಗುತ್ತಿದೆ ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದರಿಂದ ಈ ಒಂದು ಅಪಘಾತ ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯನಗರ : ವಿಜಯನಗರದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೊದಲಗಟ್ಟೆ ಗ್ರಾಮದ ಬಳಿ ನಡೆದಿದೆ. ನೀರು ಪಾಲಾಗಿರುವ ಯುವಕನನ್ನು ವಿನೋದ ಸ್ವಾಮಿ ಚನ್ನವೀರಯ್ಯ ಹಿರೇಮಠ (25) ಎಂದು ತಿಳಿದುಬಂದಿದೆ. ಈತ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದವ ಎಂದು ತಿಳಿದುಬಂದಿದೆ.ವಿನೋದ ಮುಂಡರಗಿ ತಾಲೂಕಿನ ಶೀರನಹಳ್ಳಿ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಮೊದಲಗಟ್ಟಿ ಬಳಿ ಇರುವ ನದಿಗೆ ಈಜಲು ಹೋಗಿದ್ದಾನೆ. ಈ ಸಂದರ್ಭದಲ್ಲಿ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಪತ್ತೆ ಕಾರ್ಯಚರಣೆ ಪ್ರಾರಂಭಿಸಿದ್ದಾರೆ. ಇದೇ ಸ್ಥಳದಲ್ಲಿ ಕಳೆದ 4-5 ದಿನಗಳ ಹಿಂದೆ ಮೂವರು ಯುವಕರು ನೀರು ಪಾಲಾಗಿದ್ದರು. ಇದೀಗ ಇಂದು ಮತ್ತೊಂದು ದುರ್ಘಟನೆ ನಡೆದಿದೆ. ಘಟನೆ ಕುರಿತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಉಡುಪಿಯಲ್ಲಿ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಆಗಿದೆ. ಉಡುಪಿ ತಾಲೂಕಿನ ಹಿರಿಯಡ್ಕದಲ್ಲಿ ಶೂಟ್ ಔಟ್ ನಡೆದಿದೆ. ಇಸಾಕ್ ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಎಂದು ತಿಳಿದುಬಂದಿದೆ. ಮಣಿಪಾಲ್ ಪೊಲೀಸರು ಇದೀಗ ಇಸಾಕ್ ಮೇಲೆ ಫೈರಿಂಗ್ ನಡೆಸಿದ್ದಾರೆ. ಮಣಿಪಾಲ್ ಠಾಣೆಯ ಇನ್ಸ್ಪೆಕ್ಟರ್ ದೇವರಾಜ್ ಅವರು ಗರುಡ ಗ್ಯಾಂಗ್ ನಟೋರಿಯಸ್ ಸದಸ್ಯ ಇಸಾಕ್ ಮೇಲೆ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ನಡೆಸಿದ ಬಳಿಕ ತಕ್ಷಣ ಪೊಲೀಸರು ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೀದರ್ : ಬೀದರ್ ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಭಾಲ್ಕಿ ಪೊಲೀಸರು, ಆತನಿಂದ ಬರೋಬ್ಬರಿ 14 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಪವನ್ ಎಂದು ತಿಳಿದುಬಂದಿದೆ. ಈತ ಹೈದ್ರಾಬಾದ್ ಮೂಲದವನು ಎಂದು ತಿಳಿದುಬಂದಿದೆ.ಪವನ್ ರೈಲು ಮೂಲಕ ಮಹಾರಾಷ್ಟ್ರದಿಂದ ಹೈದರಾಬಾದ್ಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದರ ಬಗ್ಗೆ ಖಚಿತ ಮಾಹಿತಿ ತಿಳಿದು ದಾಳಿ ಮಾಡಿದ ಭಾಲ್ಕಿ ಪೊಲೀಸರು, ಆತನ ಬ್ಯಾಗನಲ್ಲಿದ್ದ 14 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಬೆಂಗಳೂರು : ಈಗಾಗಲೇ KPSC ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇದೀಗ KAS ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆ ಪ್ರಶ್ನೆಪತ್ರಿಕೆಯ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಆಯೋಗಕ್ಕೆ ಸೂಚನೆ ನೀಡಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಲೋಪದೋಷಗಳಿಗೆ ಕಾರಣರಾದ ವಿಷಯ ತಜ್ಞರನ್ನು…
ಬೆಂಗಳೂರು : KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ ಮೇಲೆ ಕೆಪಿಎಸ್‌ಸಿ ಕುರಿತ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ, KPSC ನಲ್ಲಿ ಹಲವು ಬಾರಿ ನಾನಾ ಗೊಂದಲಗಳಾಗಿ, ನ್ಯಾಯಾಲಯಗಳ ಮೆಟ್ಟಿಲು ಏರಿರುವ ಚರಿತ್ರೆ ಇದೆ. ಭ್ರಷ್ಟಾಚಾರ KPSC ಯಿಂದ ಹೊರಗೆ ಹೋಗಬೇಕು ಇದರ ಬಗ್ಗೆ ಎರಡು ಮಾತಿಲ್ಲ. ನಾನು ಯಾವತ್ತಿಗೂ ಅಧಿಕಾರಿಗಳನ್ನು ವಹಿಸಿಕೊಂಡು ಹಾಗೂ ಕೆಪಿಎಸ್ಸಿ ವಹಿಸಿಕೊಂಡು ಮಾತನಾಡಲ್ಲ. ಎಲ್ಲಿ ನ್ಯಾಯ ಸಿಗಬೇಕು ಅದರ ಪರವಾಗಿಯೇ ಇರುತ್ತೇನೆ. ಯಾರು ತಪ್ಪು ಮಾಡಿದ್ದಾರೋ…
ಕೋಲಾರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಕಾಮುಕ ತಂದೆಯೊಬ್ಬ ಮಗಳ ಮೀ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿರುವ ಹೀನ ಕೃತ್ಯ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಈ ಒಂದು ಬೆಚ್ಚಿ ಬೆಳಿಸುವ ಘಟನೆ ವರದಿಯಾಗಿದೆ. ಹೌದು ಕಾಮುಕ ತಂದೆಯೊಬ್ಬ ತನ್ನ 20 ವರ್ಷದ ಮಗಳ ಮೇಲೆ 5 ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗೆ ಮೂವರು ಹೆಣ್ಣು ಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ತಾಯಿ ಇಲ್ಲದ ಹೆಣ್ಣು ಮಕ್ಕಳನ್ನು ತಂದೆ ತಾನೆ ನೋಡಿಕೊಳ್ಳುತ್ತಿದ್ದ. ಅಲ್ಲದೇ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ. ಇದೀಗ 20 ವರ್ಷದ ಮಗಳ ಮೇಲೆ ನಿರಂತರವಾಗಿ 5 ತಿಂಗಳಿನಿಂದ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆನೋವು ಎಂದು ಆಸ್ಪತ್ರೆಗೆ ಹೋದಾಗ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ಮಗಳ ದೂರಿನ ಮೇರೆಗೆ ಪೊಲೀಸರು ತಂದೆಯನ್ನು ಅರೆಸ್ಟ್ ಮಾಡಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ನಡೆದಿದ್ದು, ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಂಠಿ ತಾಂಡದಲ್ಲಿ ನಡೆದಿದೆ. ಮೃತರನ್ನು ನೀಲಾಬಾಯಿ ಶಂಕರ್ (35) ಪುತ್ರಿಯರಾದ ರಾಜೇಶ್ವರಿ (10) ನಿಶಾ (4) ಎಂದು ತಿಳಿದುಬಂದಿದೆ.ನೀಲಾಬಾಯಿಗೆ ನಾಲ್ವರು ಪುತ್ರಿಯರು ಹಾಗೂ ಓರ್ವ ಪುತ್ರ ಸೇರಿ ಒಟ್ಟು ಐದು ಜನ ಮಕ್ಕಳಿದ್ದು, ಬೇಬಿ (12) ಹಾಗೂ 11 ತಿಂಗಳ ಗಂಡು ಮಗು ಶೆವಾನನ್ನು ಮನೆಯಲ್ಲಿ ಬಿಟ್ಟು, ಇನ್ನುಳಿದ ಮೂವರು ಹೆಣ್ಣು ಮಕ್ಕಳನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ತಾಂಡಾದ ಬಳಿ ಇರುವ ಬಾವಿಗೆ ತೆರಳಿದ್ದಾರೆ. ಮೊದಲು ಇಬ್ಬರು ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿದ್ದಾಳೆ. ಇನ್ನೊಬ್ಬ ಮಗಳು ಸಂಜುಳನ್ನು ಬಾವಿಗೆ ತಳ್ಳುವಾಗ ಬಾಲಕಿ ತಪ್ಪಿಸಿಕೊಂಡು ಓಡಿ ಹೋಗಿ ತಾಂಡಾದಲ್ಲಿ ಈ ವಿಷಯ ತಿಳಿಸಿದ್ದಾಳೆ. ಆದರೆ ಅಲ್ಲಿನ ನಿವಾಸಿಗಳು ಬಾವಿಯ ಹತ್ತಿರ ಬರುವಷ್ಟರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ…