Author: kannadanewsnow05

ಬೆಂಗಳೂರು : ಇಸ್ರೇಲ್ ಇರಾನ್ ಯುದ್ಧದ ಪರಿಣಾಮ ಇಡೀ ಜಗತ್ತಿನಾದ್ಯಂತ ಬಹುದೊಡ್ಡ ಪರಿಣಾಮ ಬಿರಿದು ಅದರಲ್ಲೂ ಭಾರತದಲ್ಲಿ ಅಗತ್ಯ ವಸ್ತುಗಳ ಬೆಲೆ ಸೇರಿದಂತೆ ಗ್ಯಾಸ್ ಸಿಲಿಂಡರ್ ಕೂಡ ಇದೀಗ ಸಿಗುವುದು ಕಷ್ಟವಾಗಿದೆ. ಹೌದು ಈ ಒಂದು ಯುದ್ಧದ ಬಿಸಿ ರಾಜ್ಯದ ಹಲವು ಪ್ರಸಿದ್ಧ ದೇವಸ್ಥಾನಗಳಿಗೂ ತಟ್ಟಿದೆ. ಇರಾನ್–ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಕೊರತೆ ರಾಜಧಾನಿ ಬೆಂಗಳೂರಿನ ಧಾರ್ಮಿಕ ಕೇಂದ್ರಗಳ ಮೇಲೂ ಪರಿಣಾಮ ಬೀರುವಂತಾಗಿದೆ. ಇದರ ಪರಿಣಾಮವಾಗಿ ದೇವಾಲಯಗಳಲ್ಲಿ ಭಕ್ತರಿಗೆ ವಿತರಿಸಲಾಗುತ್ತಿದ್ದ ಅನ್ನಪ್ರಸಾದ ಸೇವೆಯಲ್ಲೂ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನ ಪ್ರಸಿದ್ಧ ಬನಶಂಕರಿ ದೇವಸ್ಥಾನದಲ್ಲಿ ಪ್ರತಿದಿನ ಸಾವಿರಾರು ಭಕ್ತರಿಗೆ ಅನ್ನಪ್ರಸಾದ ವಿತರಿಸುವ ವ್ಯವಸ್ಥೆ ಇದೆ. ಸಾಮಾನ್ಯ ದಿನಗಳಲ್ಲಿ ಸುಮಾರು 3 ಸಾವಿರದಿಂದ 4 ಸಾವಿರ ಭಕ್ತರು ಪ್ರಸಾದ ಸ್ವೀಕರಿಸುತ್ತಾರೆ. ವಿಶೇಷವಾಗಿ ಶುಕ್ರವಾರ ಮತ್ತು ಮಂಗಳವಾರದಂದು ಭಕ್ತರ ಸಂಖ್ಯೆ ಹೆಚ್ಚಾಗಿ 4 ಸಾವಿರದಿಂದ 5 ಸಾವಿರದವರೆಗೆ ತಲುಪುತ್ತದೆ. ಭಕ್ತರಿಗಾಗಿ ದೇವಾಲಯದಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು…

Read More

ಗದಗ : ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ರಹಸ್ಯ ಇದೀಗ ಬಯಲಾಗಿದೆ. ಜನವರಿ 10 ರಂದು 465 ಗ್ರಾಂ ಚಿನ್ನದ ನಿಧಿ ಪತ್ತೆಯಾಗಿತ್ತು. ರಿತ್ತಿ ಕುಟುಂಬ ಮನೆಯ ಪಾಯ ತೆಗೆಯುವಾಗ ನಿಧಿ ಪತ್ತೆಯಾಗಿತ್ತು. ಪುರಾತನ ನಿಧಿ ದರ ಸುಮಾರು 8 ಕೋಟಿ ಮೌಲ್ಯದಾಗಿದೆ. ಈಗಿನ ಚಿನ್ನದ ದರಕ್ಕೆ ಹೋಲಿಸಿದರೆ 10ಪಟ್ಟು ಹೆಚ್ಚಳವಾಗಿದ್ದು ಕಲ್ಯಾಣ ಚಾಲುಕ್ಯರು ವಿಜಯನಗರ ಅರಸರ ಕಾಲದ ಆಭರಣಗಳು ಇವು ಎಂದು ಸರ್ಕಾರ ರಚಿಸಿದ್ದ ತಜ್ಞರ ತಂಡದಿಂದ ಇದೀಗ ನಿಧಿ ರಹಸ್ಯ ಬಯಲಾಗಿದೆ. ಆಭರಣಗಳಿಗೆ ಬೆಲೆ ಕಟ್ಟಲು ಆಗಲ್ಲ ಎಂದು ತಜ್ಞರು ತಿಳಿಸಿದ್ದು 500 ರಿಂದ 600 ವರ್ಷಗಳ ಹಳೆಯದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಹೆಣ್ಣು ದೇವರಿಗೆ ಹಾಕುವ ಚಿನ್ನದ ಆಭರಣಗಳು ಇವು ಎಂದು ತಜ್ಞರು ತಿಳಿಸಿದ್ದಾರೆ ಗದಗ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತಜ್ಞರ ತಂಡ ಪರಿಶೀಲನೆ ನಡೆಸಿತ್ತು. ಎಂ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ತಜ್ಞರು ಪರಿಶೀಲನೆ ನಡೆಸಿದ್ದರು. ಎಂಎಸ್ ಕೃಷ್ಣಮೂರ್ತಿ ಪುರಾತತ್ವ ಶಾಸ್ತ್ರಜ್ಞ ಮತ್ತು ಸಮಿತಿಯ ಮುಖ್ಯಸ್ಥರಾಗಿದ್ದಾರೆ ಖಜಾನೆಯಲ್ಲಿ…

Read More

ವಿಜಯಪುರ : ಕಳೆದ ಕೆಲವು ತಿಂಗಳ ಹಿಂದೆ ವಿಜಯಪುರ ನಗರದಲ್ಲಿ ಕೃಷ್ಣ ಪ್ಯಾಲೇಸ್ ಹೋಟೆಲ್ , ಸಂಪೂರ್ಣವಾಗಿ ಸುಟ್ಟು ಬೆಂಕಿಗೆ ಆಹುತಿಯಾಗಿತ್ತು. ಇದೀಗ ಶಾರ್ಟ್ ಸರ್ಕ್ಯೂಟ್‌ನಿಂದ ಹೋಟೆಲ್‌ನಲ್ಲಿ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹೊತ್ತಿಯುರಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಹೊಟೇಲ್‌ವೊಂದರಲ್ಲ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಹೋಟೆಲ್‌ನಲ್ಲಿ ಏಕಾಏಕಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಲಕ್ಷಾಂತರ ಮೌಲ್ಯದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ಆನೆ ತಲೆದಿಂಬದ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ರಸ್ತೆಯ ಇಳಿಜಾರಿನ ತಿರುವಿನಲ್ಲಿ ಚಿರತೆ ತಡೆಗೋಡೆ ಪಕ್ಕದಲ್ಲಿ ಕೂತಿತ್ತು. ವಾಹನದಲ್ಲಿ ತೆರಳುತ್ತಿದ್ದವರ ಮೊಬೈಲ್ ಕ್ಯಾಮೆರಾದಲ್ಲಿ ಚಿರತೆ ಇರುವ ದೃಶ್ಯ ಸೆರೆಯಾಗಿದೆ. ಶಿವರಾತ್ರಿ ಜಾತ್ರೆಯ ವೇಳೆ ಚಿರತೆ ಪಾದಯಾತ್ರೀಕನನ್ನು ಕೊಂದು ತಿಂದಿತ್ತು. ಇದೀಗ ಅದೇ ಸ್ಥಳದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಭಕ್ತರಲ್ಲಿ ಆತಂಕ ಹೆಚ್ಚಿಸಿದೆ.

Read More

ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಸದ್ಯ ಭಾರತದಲ್ಲಿ ಗ್ಯಾಸ್ ಸಿಲೆಂಡರ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಇದೀಗ ಬೆಂಗಳೂರಲ್ಲಿ ದೊಡ್ಡ ದೊಡ್ಡ ಹೋಟೆಲ್ ಗಳೆಲ್ಲ ಬಂದ್ ಆಗಿವೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಈ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಪಾತ್ರ ಬರೆದಿದ್ದಾre ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟ್ ನಲ್ಲಿ ದೇಶೀಯ ಎಲ್‌ಪಿಜಿ ಪೂರೈಕೆಗೆ ಆದ್ಯತೆ ನೀಡುವಂತೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇತ್ತೀಚೆಗೆ ಹೊರಡಿಸಿದ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ಕೊರತೆಯ ಕುರಿತು ನಾನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಪತ್ರ ಬರೆದಿದ್ದೇನೆ. ಈ ಆದೇಶದಿಂದಾಗಿ ಪ್ರತಿದಿನ ಲಕ್ಷಾಂತರ ಜನರಿಗೆ ಆಹಾರ ಒದಗಿಸುವ ಹೋಟೆಲ್‌ಗಳು, ಮೆಸ್‌ಗಳು, ಹಾಸ್ಟೆಲ್‌ಗಳು, ಕಲ್ಯಾಣ ಮಂಟಪಗಳು ಮತ್ತು ಇತರ ಸಂಸ್ಥೆಗಳ ಕಾರ್ಯಚಟುವಟಿಕೆಗೆ ತೀವ್ರ ಅಡಚಣೆಯಾಗಿದೆ. ಆದ್ದರಿಂದ, ವಾಣಿಜ್ಯ ಎಲ್‌ಪಿಜಿಯ ಸಮರ್ಪಕ ಪೂರೈಕೆಯನ್ನು ಪುನಃಸ್ಥಾಪಿಸಲು ತುರ್ತಾಗಿ…

Read More

ಉಡುಪಿ: ಕುಡಿದ ಅಮಲಿನಲ್ಲಿ ನಡೆದ ಗಲಾಟೆಯು ವೃದ್ಧೆಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸೋಮವಾರ (ಮಾ.09) ಉಡುಪಿ ತಾಲೂಕಿನ ಮಣಿಪುರ ಗ್ರಾಮದ ಕೆನರಾಡಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿ ವನಜಾ ಪೂಜಾರ್ತಿ (60) ಕೊಲೆಯಾದ ದುರ್ದೈವಿ. ವಲೇರಿಯನ್ ಮೆಂಡೋನ್ಸಾ ಹಾಗೂ ಪ್ರವೀಣ್‌ ಮೆಂಡೋನ್ಸಾ ಬಂಧಿತ ಆರೋಪಿಗಳು. ಇವರಿಬ್ಬರು ಆಗಾಗ ವನಜಾ ಪೂಜಾರ್ತಿ ಅವರ ಜತೆ ಮದ್ಯ ಸೇವನೆ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಮೃತ ವನಜಾ ಪೂಜಾರ್ತಿ ಆರೋಪಿ ವಲೇರಿಯನ್ ಮೆಂಡೊನ್ಸಾ ಅವರ ಮನೆಯಲ್ಲಿ ಆಗಾಗ್ಗೆ ಮದ್ಯ ಸೇವನೆ ಮಾಡುತ್ತಿದ್ದರು. ಮಾರ್ಚ್ 9ರಂದು ಸಂಜೆಯಿಂದ ಮಾರ್ಚ್ 10ರ ಬೆಳಿಗ್ಗೆವರೆಗೂ ಎಂದಿನಂತೆ ಮದ್ಯ ಸೇವಿಸುತ್ತಿದ್ದಾಗ ಇವರ ನಡುವೆ ಯಾವುದೋ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದೆ. ಕುಡಿದ ಅಮಲಿನಲ್ಲಿ ಗಲಾಟೆ ವಿಕೋಪಕ್ಕೆ ಹೋಗಿದ್ದು, ಈ ವೇಳೆ ಆರೋಪಿಗಳು ಹರಿತವಾದ ಆಯುಧದಿಂದ ವನಜಾ ಅವರ ಮೇಲೆ ದಾಳಿ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ನಡೆಸಿದ…

Read More

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮನೆ ಕಲಕುವಂತಹ ಘಟನೆ ಒಂದು ನಡೆದಿದ್ದು ಮೊಮ್ಮಗಳು ಬೇರೆ ಧರ್ಮದ ಯುವಕನ ಜೊತೆಗೆ ಮದುವೆಯಾಗಿದ್ದಕ್ಕೆ ಅದೇ ಸಿಟ್ಟಿನಲ್ಲಿ ಅಜ್ಜಿ ಆಕೆಯ 40 ದಿನದ ನವಜಾತ ಶಿಶುವನ್ನು ಕೊಲೆ ಮಾಡಿರುವ ಘೋರ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 2025ರ ಡಿಸೆಂಬರ್​ 24ರಂದು ಘಟನೆ ನಡೆದಿತ್ತು. ತಡವಾಗಿ ಬೆಳಕಿಗೆ ಬಂದಿದೆ. ಕಳೆದ 2025 ಡಿಸೆಂಬರ್ 24ರಂದು ಚೇಳೂರು ಪಟ್ಟಣದಲ್ಲಿ ಮೆಹಮೂಬಿ ಎಂಬಾಕೆಯ ಮನೆಯಲ್ಲಿ ಈಕೆಯ ಮೊಮ್ಮಗಳ 40 ದಿನದ ಗಂಡು ಮಗು ಸಾವನ್ನಪ್ಪಿತ್ತು. ಅನಾರೋಗ್ಯ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಅಜ್ಜಿ ಮಣ್ಣು ಸಹ ಮಾಡಿಸಿಬಿಟ್ಟಿದ್ದಳು. ಆದರೆ ಅಜ್ಜಿಯ ಮೇಲೆ ಅನುಮಾನಗೊಂಡ ಮೊಮ್ಮಗಳು, ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನ ಮೇರೆಗೆ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಎಫ್​ಎಸ್​ಎಲ್​ ವರದಿಗೆ ಕಳುಹಿಸಲಾಗಿತ್ತು. ಎಫ್​ಎಸ್​ಎಲ್​ ವರದಿಯಲ್ಲಿ ಮಗು ಉಸಿರುಗಟ್ಟಿಸಿ ಕೊಂದಿರುವುದಾಗಿ ಬೆಳಕಿಗೆ ಬಂದಿದೆ. ಹೀಗಾಗಿ ಮಗುವಿನ ಅಜ್ಜಿಯೇ ಕೊಲೆ…

Read More

ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ಸೈಬರ್ ಕ್ರೈಂ ಠಾಣೆ ಪೋಲಿಸರು 11 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಹಿನ್ನೆಲೆ ನಟಿ ರಮ್ಯಾ ಇಂದು ಬೆಂಗಳೂರಿನ 46ನೇ ಸಿಸಿಎಚ್ ಕೋರ್ಟಿಗೆ ಹಾಜರಾಗಿದ್ದಾರೆ. ಸಾಕ್ಷಿ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ವೃತ್ತಿ ಜೀವನ, ರಾಜಕೀಯ ಜೀವನದ ಮಾಹಿತಿಯನ್ನು ಕೋರ್ಟ್ ಗೆ ರಮ್ಯಾ ನೀಡಿದರು. ಅಲ್ಲದೆ ಇನ್ಸ್ಟಾಗ್ರಾಮ್ ನಲ್ಲಿ ಆಶ್ಲೀಲ ಸಂದೇಶ ಬಂದಿರುವ ಕುರಿತು ಸಾಕ್ಷಿ ಹೇಳಿಕೆ ನೀಡಿದರು. ಆರೋಪಿಗಳು ಇನ್ಸ್ಟಾಗ್ರಾಮ್ ಮೂಲಕ ಕಳುಹಿಸಿದ್ದ ಸಂದೇಶದ ಬಗ್ಗೆಯೂ ಮಾಹಿತಿ ನೀಡಿದ್ದಾರೆ. ಸೂಕ್ಷ್ಮ ಪ್ರಕರಣವೆಂದು ಮುಚ್ಚಿದ ಕೊಠಡಿಯಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಜಡ್ಜ್ ಈ ರಾಜೀವ್ ಗೌಡ ಇನ್ ಕ್ಯಾಮೆರಾ ಪ್ರೊಸಿದಿಂಗ್ಸ್ ನಡೆಸಿದರು.

Read More

ಚಾಮರಾಜನಗರ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ವಾರ್ಡ್ ನಂ.16ರ ನಾಯಕರ ಬೀದಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಪರಮೇಶ್ ಸಿ ಮತ್ತು ಜ್ಯೋತಿ ಗಾಯಗೊಂಡವರು. ಸುಮಾರು 10.30ರ ವೇಳೆಗೆ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ತಕ್ಷಣ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ದಾವಣಗೆರೆಯಲ್ಲಿ ತುಂಗಾಭದ್ರ ನದಿಗೆ ಹಾರಿ ಪ್ರೇಮಿಗಳು ಅತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ. ತುಂಗಾಭದ್ರ ಬ್ರಿಡ್ಜ್ ಮೇಲಿಂದ ದಾವಣಗೆರೆ ಮೂಲದ ಪ್ರೇಮಿಗಳು ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದಿದ್ದರಿಂದ ಜೀವಕ್ಕೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Read More