Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು: ಸ್ವಪಕ್ಷದ ವಿರುದ್ಧವೆ ಮಾಜಿ ಸಚಿವ ವಿ. ಸೋಮಣ್ಣ ಆಗಾಗ ಅಸಮಾಧಾನ ಹೊರಹಾಕುತ್ತಿದ್ದು, ಇತೀಚಿಗೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸೋಲಿಗೆ ಸ್ವಪಕ್ಷೀಯರೇ ಕಾರಣ ಎಂದು ಅಸಮಾಧಾನಗೊಂಡಿರುವ ಅವರು ವರಿಷ್ಠರಿಗೆ ದೂರು ನೀಡುವ ಸಂಬಂಧ ಸೋಮವಾರ ದೆಹಲಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ಎರಡು ದಿನಗಳ ಹಿಂದೆ ಚಾಮರಾಜನಗರದಲ್ಲಿ ನನ್ನ ಸೋಲಿಗೆ ಕಾರಣರಾದವರ ಜತೆಗೆ ಅಂಟಿಕೊಂಡು ತೆರೆಮರೆಯಲ್ಲಿ ರಾಜಕಾರಣ ನಡೆಸಲು ಹೋದರೆ ನಾನು ಸಿಡಿದೇಳುತ್ತೇನೆ ಎಂದು ಶನಿವಾರವಷ್ಟೇ ಅವರು ಖಾರವಾಗಿ ಹೇಳಿದ್ದರು. ಮಂಗಳವಾರ ಅಥವಾ ಬುಧವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತಿತರರನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ಹೊರಹಾಕಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರಮೋದಿ ಅವರನ್ನೂ ಭೇಟಿ ಮಾಡುವ ಉದ್ದೇಶವನ್ನು ಸೋಮಣ್ಣ ಅವರು ಹೊಂದಿದ್ದು, ಭೇಟಿಯ ಲಭ್ಯತೆ ಮೇಲೆ ನಿರ್ಧಾರವಾಗಲಿದೆ. ಸೋಮಣ್ಣ ಅವರ ಈ ದೆಹಲಿ ಭೇಟಿ ಬಳಿಕ ಮುಂದಿನ ರಾಜಕೀಯ ದಾರಿಯೂ…
ಗದಗ : ಕಳಸಾ-ಬಂಡೂರಿ ನಾಲಾ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ರೈತ ಸೇನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಅವರಿಗೆ ಮಾಹಿತಿ ನೀಡಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೊಬರದಮಠ, ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಯೋಜನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡಿ.16ರಂದು ಪತ್ರ ಬರೆದಿದ್ದೆ. ಅದಕ್ಕೆ ಪ್ರಧಾನಿಗಳ ಕಾರ್ಯಾಲಯ ಸ್ಪಂದಿಸಿದೆ ಎಂದು ಅವರು ತಿಳಿಸಿದರು. ಅವರು ನನಗೆ ಪತ್ರ ಬರೆದಿದ್ದು, ಈ ಪ್ರದೇಶದಲ್ಲಿ ಹುಲಿಗಳು ಮತ್ತು ಪರಿಸರದ ಬಗ್ಗೆ ಅಧ್ಯಯನ ನಡೆಸಲು 5 ಜನರ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ಈ ಪ್ರದೇಶವನ್ನು ವೀಕ್ಷಣೆ ಮಾಡಿ ಸರ್ಕಾರಕ್ಕೆ ವರದಿ ಕೊಡುತ್ತದೆ ಎಂದು ತಿಳಿಸಿದ್ದಾರೆ. ಸಮಿತಿ ಆಗಮಿಸಿದ ಸಂದರ್ಭದಲ್ಲಿ ಕುಡಿಯುವನೀರಿನಯೋಜನೆಗೆ ಅನುಮತಿನೀಡಬೇಕೆಂದು ಮನವಿ ಮಾಡುತ್ತೇನೆ ಎಂದರು.
ಬೆಂಗಳೂರು : ನಿನ್ನೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ ನಿಂದ ಆಯೋಜಿಸಿದ್ದ 21ನೇ ಚಿತ್ರಸಂತೆಯನ್ನ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ ಮೊದಲು ಚಿತ್ರ ಸಂತೆಗೆ 10 ಲಕ್ಷ ನೀಡುವುದಾಗಿ ಹೇಳಿದ್ದೆವು. ಅದನ್ನು ಹೆಚ್ಚಿಸಿ ₹50 ಲಕ್ಷ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಭಾನುವಾರ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ ಹಮ್ಮಿಕೊಂಡಿದ್ದ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಚಿತ್ರಕಲೆ ಬೆಳೆಸಲು ಸರ್ಕಾರ ತೆರೆದ ಮನಸ್ಸಿನಿಂದ ಕೆಲಸ ಮಾಡಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಗ್ಯಾಲರಿ ಸ್ಥಾಪಿಸಲು ನೆರವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ…
ಬೆಂಗಳೂರು : ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರಾಜ್ಯವು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದು, ಅಲ್ಲದೆ ರೈತರು ಕೂಡ ತುಂಬಾ ಕಷ್ಟವನ್ನು ಎದುರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದಿಂದ 31 ಮಂದಿ ಸಂಸದರ ತಂಡ ಸೋಮವಾರ ರಾಜ್ಯಕ್ಕೆಆಗಮಿಸಲಿದೆ ಎಂದುಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ತಂಡದ ಮುಂದೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲಾಗುವುದು ಎಂದು ತಿಳಿಸಿದರು.ಸಂಸದರ ಅಧ್ಯಯನ ತಂಡಕ್ಕೆ ನಮ್ಮ ನೀರಾವರಿ ಸಮಸ್ಯೆ ಬಗ್ಗೆ ಅರ್ಥ ಮಾಡಿಸಲಾಗುವುದು ಎಂದು ಅವರು ತಿಳಿಸಿದರು. ನದಿ ಜೋಡಣೆ ಎಂಬುದು ಕೇಂದ್ರ ಸರ್ಕಾರದ ಯೋಜನೆ. ಇದೊಂದು ದೊಡ್ಡ ಯೋಜನೆಯಾಗಿದ್ದು, ಕೇಂದ್ರವು ಈಗಾಗಲೇ ಹಲವು ಹಂತದ ಸಭೆಗಳನ್ನು ಮಾಡಿದೆ. ಈ ಬಗ್ಗೆ ಮಾತನಾಡಿ ನಾವು ವಿಷಯಾಂತರ ಮಾಡುವುದು ಬೇಡ. ಸೋಮವಾರ ಹಾಗೂ ಮಂ ಗಳವಾರ ಕೇಂದ್ರದ 31 ಸಂಸದರ ತಂಡ ಕಾವೇರಿ ವೀಕ್ಷಣೆಗೆ ಬರುತ್ತಿದೆ. ಕಾವೇರಿ ವೀಕ್ಷಣೆ ಜತೆ ನಮ್ಮ ಜಲಸಂಪನ್ಮೂಲಗಳ ಬಗ್ಗೆ ಚರ್ಚಿಸಲಿದೆ. ಈ…
ವಿಜಯಪುರ : ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಸಂಕ್ರಾಂತಿ ಹಬ್ಬದ ವೇಳೆ ನಡೆಯುವ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಕೋಮಿನ ವ್ಯಾಪಾರಿಗಳಿಗೆ ಅವಕಾಶ ನೀಡುವುದಿಲ್ಲ. ಕೇವಲ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ದೇಗುಲದ ಮುಂದೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ. ಅನ್ಯಕೋಮಿನವರಿಗೆ ಅವಕಾಶ ನೀಡದಂತೆ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ಹಿಂದೂ ಸಂಘಟನೆಗಳ ಒಕ್ಕೂಟ ಮನವಿ ಸಲ್ಲಿಸಿದೆ. ಸದ್ಯ ಇದು ಪರ ವಿರೋಧಕ್ಕೆ ಕಾರಣವಾಗಿದೆ. ಈ ದೇಶದ ಕಾನೂನಿಗೆ, ನಾಯಾಲಯದ ತೀರ್ಪಿಗೆ ಗೌರವ ನೀಡದವರಿಗೆ, ಪದೇ ಪದೆ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ, ಜಿಹಾದ್ ಹೆಸರಿನಲ್ಲಿ ದೇಶದ ಅಖಂಡತೆಗೆ ಮಾರಕವಾಗಿರುವ ಕ್ರೂರ ಮತಾಂಧರೊಂದಿಗೆ ಹಿಂದೂಗಳು ವ್ಯಾಪಾರ, ವಹಿವಾಟು ನಡೆಸಲ್ಲ. ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ ಎಂದು ದೇವಸ್ಥಾನದ ಎದುರಿಗೆ ಹಿಂದೂ ಸಂಘಟನೆಗಳ ಒಕ್ಕೂಟ ಬ್ಯಾನರ್ ಹಾಕಿದೆ.
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ಎಮರ್ಜೆನ್ಸಿ ವಾತಾವರಣ ಸೃಷ್ಟಿಸಿ, ಜನರಲ್ಲಿ ಭಯ ಉಂಟು ಮಾಡುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ನೀಡದ ದಬ್ಬಾಳಿಕೆ ಸರ್ಕಾರವಾಗಿದೆ. ಅನ್ಯಾಯದ ವಿರುದ್ಧ ಧ್ವನಿ ಎತ್ತಿದರೆ ಪ್ರಕರಣ ದಾಖಲಿಸಿ ಹೆದರಿಸುತ್ತಿದೆ. ಜನರ ಧ್ವನಿಯನ್ನು ಹತ್ತಿಕ್ಕಲು ಮುಂದಾಗುತ್ತಿದೆ. ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಡುವ ಹಾಗೂ ದಲಿತ ಮಹಿಳೆಯರ ಮೇಲೆ ನಡೆದ ದೌರ್ಜನ್ಯದ ಕುರಿತು ಮಾತನಾಡದ ಸರ್ಕಾರ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ ಎಂದರು. ರಾಜ್ಯದಲ್ಲಿ ಭಯ ಹುಟ್ಟಿಸುವ ಹಲವಾರು ಘಟನೆಗಳು ಪದೇಪದೇ ನಡೆಯುತ್ತಿವೆ. ಶ್ರೀಕಾಂತ ಪೂಜಾರಿ ವಿರುದ್ಧ ಯಾವುದೇ ಪ್ರಕರಣ ಇಲ್ಲದಿದ್ದರೂ, ಅವರನ್ನು ಬಂಧಿಸಲಾಗಿತ್ತು. ಗಲಭೆ ಪ್ರಕರಣಕ್ಕೆ ಸಂಬಂಧಿಸಿಯೂ ಅವರ ಮೇಲೆ ಪ್ರಕರಣಗಳಿಲ್ಲ. ಪ್ರಕರಣಗಳಿಲ್ಲದೆ ಬಂಧಿಸಿ ಜೈಲಿಗೆ ಕಳುಹಿಸುವುದು ಎಮರ್ಜೆನ್ಸಿಯಲ್ಲಿ ಮಾತ್ರ ಆಗುತ್ತಿತ್ತು. ಅದೇ ಮಾದರಿ ಈಗ ನಡೆಯುತ್ತಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬಾರದು ಎನ್ನುವ ಕಾಂಗ್ರೆಸ್ ಕನಸು ಭಗ್ನ…
ಬೆಳಗಾವಿ : ಬೆಳಗಾವಿಯ ಜಿಲ್ಲಾ ಬಳಿ ಯುವಕ ಯುವತಿಯ ಮೇಲೆ ಅನ್ಯಕೋಮಿನ ಸುಮಾರು 15 ದಿನ ಪುಂಡರು ವ ನೈತಿಕ ಪೊಲೀಸ್ ಗಿರಿ ನಡೆಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಾರ್ಕೆಟ್ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಬಂಧಿಸಿದ್ದಾರೆ. ನಿನ್ನೆ ಯುವಕ ಹಾಗೂ ಯುವತಿ ಯುವನಿಧಿ ಯೋಜನೆಗೆ ಅಪ್ಲಿಕೇಶನ್ ಹಾಕಲು ಬಂದಿದ್ದಾಗ ಸರ್ವರ್ ಬ್ಯುಸಿ ಇರುವ ಕಾರಣ ಕಿಲಾ ಬಳಿ ಕುಳಿತುಕೊಂಡಿದ್ದರು ಈ ವೇಳೆ ಅನ್ಯಕೋಮಿನ 15 ಜನರ ಯುವಕರ ಗುಂಪೊಂದು ಬಂದು ಯುವಕ ಮತ್ತು ಯುವತಿಯನ್ನು ಅಕಿಲ ಬಳಿ ಇರುವ ಕೋಣೆಗೆ ಕರೆದುಕೊಂಡು ಹೋಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಯುವತಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು ಘಟನೆ ಕುರಿತಂತೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ ದೌರ್ಜನ್ಯ ಕಾಯ್ದೆಯ 10 ಕಲಂ ಅಡಿಯಲ್ಲಿ ದೂರು ದಾಖಲಾಗಿದೆ. ಮಾರ್ಕೆಟ್ ಪೊಲೀಸರಿಂದ 17 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. 15ಕ್ಕೂ…
ಬೆಂಗಳೂರು : ಇದೇ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮ್ಮನ್ನು ಕರೆದಿಲ್ಲ. ನಾನು ಶಿವನ ಭಕ್ತ ಆಂಜನೇಯನ ಮೂರ್ತಿ ಇಲ್ಲಿದೆ ನೋಡಿ.ಎಲ್ಲಾ ದೇವರುಗಳು ನನ್ನ ಹೃದಯದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು. ನಮ್ಮ ಅನ್ನಭಾಗ್ಯ ಅಕ್ಕಿಯಿಂದಲೇ ಅಕ್ಷತೆ ಆಗ್ತಿದೆ ಸಂತೋಷ. ಬೊಮ್ಮಾಯಿ ಫುಡ್ ಆಕ್ಟ್ ತಂದಿದ್ಯಾರು ಎಂಬುದನ್ನೇ ಮರೆತಿದ್ದಾರೆ. ಮೊದಲು ಅನ್ನಭಾಗ್ಯ ಯೋಜನೆಯ ಪ್ರಾರಂಭಿಸಿದ್ದೆ ಸಿಎಂ ಸಿದ್ದರಾಮಯ್ಯ.ಪಾಪ ಬಸವರಾಜ ಬೊಮ್ಮಾಯಿಗೆ ಇದು ಮರೆತುಹೋಗಿದೆ ಎಂದು ಡಿಕೆ ಶಿವಕುಮಾರ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಡಿಕೆಶಿ ಇಂದಲೇ ಕಾಂಗ್ರೆಸ್ ಅಂತ್ಯ ಎಂಬ ಎಚ್ಡಿ ದೇವೇಗೌಡ ಅವರ ಈ ಹೇಳಿಕೆಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ 138 ವರ್ಷಗಳ ಇತಿಹಾಸ ಇದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 136 ಸ್ಥಾನ ಬಂದಿದೆ. ಇಬ್ಬರು ಪಕ್ಷೇತರರು ನಮ್ಮ ಪಕ್ಷಕ್ಕೆ ಸೇರಿದ್ದಾರೆ.ದೇವೇಗೌಡರು…
ಬೆಂಗಳೂರು : ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ಭೀಕರ ಬರಗಾಲ ಎದುರಾಗಿದ್ದು ರೈತರು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿಯ ಕೃಷ್ಣ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶಗಳಿಗೆ 2.77 ಟಿಎಂಸಿ ನೀರು ಬಿಡುವಂತೆ ನಿರ್ಧರಿಸಲಾಗಿದೆ ಎಂದು ಡಿಸೆಂಬ ಡಿಕೆ ಶಿವಕುಮಾರ್ ತಿಳಿಸಿದರು. ಕೃಷ್ಣ ಮೇಲ್ದಂಡೆ ಅಚ್ಚುಕಟ್ಟು ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.ತಡರಾತ್ರಿ ಜನಪ್ರತಿನಿಧಿಗಳು ಜಿಲ್ಲಾಡಳಿತದ ಜೊತೆ ಸಭೆ ನಡೆಸಿದ್ದೇನೆ. ವೀಡಿಯೋಕಾನ್ಸ್ ಮೂಲಕ ಸಭೆ ನಡೆಸಿ ಮಾಹಿತಿಯನ್ನು ಪಡೆದಿದ್ದೇನೆ. ಯಾದಗಿರಿ ಸೇರಿ ಹಲವು ಜಿಲ್ಲೆಯ ಶಾಸಕರು ಭೇಟಿ ಮಾಡಿದ್ದರು ಕುಡಿಯುವ ನೀರಿಗೆ ಬಹಳ ದೊಡ್ಡ ತೊಂದರೆ ಆಗುವ ಪರಿಸ್ಥಿತಿ ಇದೆ ಎಂದು ತಿಳಿಸಿದರು. ರೈತರು ಕಚೇರಿ ಮುಂದೆ ಗುಂಡಿ ತೋಡಿಕೊಂಡು ಅದರಲ್ಲಿ ಕೂತಿದ್ದಾರೆ.ಸರ್ಕಾರವನ್ನು ಬ್ಲಾಕ್ ಮೇಲ್ ಮಾಡಲು ಹೋಗಬಾರದು ಅಂತ ಹೇಳಿದ್ದೇನೆ. ರೈತರಿಂದಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ 2.75 ಟಿಎಂಸಿ ನೀರು ಬಿಡಬೇಕೆಂದು ಸಭೆಯಲ್ಲಿ ನಿರ್ಧಾರ ಮಾಡಿದ್ದೇವೆ ಮೆಣಸು ಬೆಳೆಗಾರರಿಗೆ ತೊಂದರೆ ಆಗಿದೆ…
ಹುಬ್ಬಳ್ಳಿ : ಪುನೀತ್ ಕೆರೆಹಳ್ಳಿ ಎಂಬ ಮತಾಂಧ ನಿಗೆ ಬಿಜೆಪಿ ರಾಜ್ಯದಲ್ಲಿ ಕೋಮುಗಳಭೆ ಸೃಷ್ಟಿಸಲು ತತ್ವ ಹೊರಡಿಸಿದೆ ಎಂದು ಸಾಕ್ಷಿ ಸಮೇತ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದಕ್ಕೆ ಇದೀಗ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದು ರಾಮಮಂದಿರ ಆಗಬಾರದು ಅನ್ನೋದು ಕಾಂಗ್ರೆಸ್ಸಿನ ಆಸೆಯಾಗಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.ಕಾಂಗ್ರೆಸ್ ಸರ್ಕಾರದಲ್ಲಿ ಅನುಭವಿಸಿದ ಬಂದು ವಾತಾವರಣ ಇದೆ ಸಿಎಂ ಮಂತ್ರಿಗಳ ಭಾಷೆ ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ ಎಂದರು. ಅನ್ಯಾಯದ ವಿರುದ್ಧ ಹೋರಾಟ ಮಾಡಿದರೆ ಕೇಸ್ ಹಾಕುತ್ತಿದ್ದಾರೆ. ಕರ್ನಾಟಕದಲ್ಲಿ ಭಯ ಹುಟ್ಟಿಸುವ ಪ್ರಯತ್ನ ಆಗುತ್ತಿದೆ.ಶ್ರೀಕಾಂತ್ ವಿರುದ್ಧ ಯಾವ ಕೇಸ್ ಇಲ್ಲ ಆದರೂ ಜೈಲಿಗೆ ಹಾಕಿದ್ದರು. ಶ್ರೀಕಾಂತ್ ಬಂಧಿಸಿದ ಇನ್ಸ್ಪೆಕ್ಟರ್ ಸಚಿವರು ಕ್ಷಮೆ ಕೇಳಲಿಲ್ಲ.ಏಳು ತಿಂಗಳಲ್ಲೇ ಅಧಿಕಾರದ ಮದ ಏರಿದೆ ನಾಳೆ ಚಿಂತನ ಮಂಥನ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸದರು. ರಾಮಮಂದಿರ ಆಗಬಾರದು ಅನ್ನೋದು…











