Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರು ಕೆಲವು ಪ್ರಮುಖವಾದಂತಹ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಸಾಹಿತಿಗಳು ಉಲ್ಲೆಖಿಸಿದ ಪ್ರಮುಖ ಅಂಶಗಳು 1) ಪ್ರಜ್ವಲರನ್ನು ಕೂಡಲೇ ಬಂಧಿಸಿ ಐಟಿ ಐಪಿಸಿ ಕಾಯ್ದೆ ಅಡಿ ಕೆಸ್ ಹಾಕಿ 2) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರಚಾರಪ ಮಾಡುತ್ತಿರುವ ರಾಜಕಾರಣಿಗಳಿಗೆ ಕಡಿವಾಣ ಹಾಕಿ 3) ಎಸ್ ಐ ಟಿ ಅಧಿಕಾರಿಯ ತನಿಖೆಯು ಕಾಲಮಿತಿಯೊಳಗೆ ಕೊನೆಗೊಳ್ಳಬೇಕು. 4) ಪ್ರಜ್ವಲ್ ಜೊತೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು 5) ಪ್ರಜ್ವಲ್ ಮಾಜಿ ಕಾರು ಚಾಲ ಕಾರ್ತಿಕ ಗೌಡನನ್ನು ಕೂಡಲೇ ಬಂಧಿಸಬೇಕು.…
ಬೆಂಗಳೂರು : ಈಗಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಹುತೇಕ ಮುಗಿದಿದೆ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆದರೆ ಕಾಂಗ್ರೆಸ್ ಗಂಟು ಮೂಟೆ ಕಟ್ಟುವುದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬೀಳಿಸಲು ಕಾಂಗ್ರೆಸ್ ನವರೇ ಸಾಕು. ಬೇರೆಯವರು ಬೇಡ 17 ಜನ ಹೋದಾಗ ಇವರ್ಯಾಕೆ ಮುಟ್ಟಿ ನೋಡಿಕೊಳ್ಳಲಿಲ್ಲ? ಕೈ ಶಾಸಕರೇ ಯಾಕಾದರೂ ಗೆಲ್ಲಿಸಿದ್ದೀವಿ ಅಂತ ಬೇಸರದಲ್ಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆದಮೇಲೆ ಕಾಂಗ್ರೆಸ್ ಗಂಟು ಮೂಟೆ ಕಟ್ಟೋದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಇನ್ನು ಹಾಸನದಲ್ಲಿ SIT ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ಸಿಗರಿಗೆ ಇರಿ ಮುರಿಸು ಆಗಿ ಹೀಗೆ ಮಾಡಿದ್ದಾರೆ. ಒಕ್ಕಲಿಗ ಸಮುದಾಯ ತಿರುಗಿ ಬೀಳುತ್ತೆ ಎಂದು ಅವರಿಗೆ ಭಯ ಶುರುವಾಗಿದೆ ಚಾಲಕನಿಗೆ ಜಾಮೀನು ನಿರಾಕರಿಸಿದರು…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಎಸ್ಐಟಿ ತನಿಖೆಯ ವೇಳೆ ನಾವು ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಅವರು ತಿಳಿಸಿದರು. ಪ್ರಕರಣದ ಹಿಂದೆ ದೊಡ್ಡ ತಿಮಿಂಗಲ ಇದೆ ಎಂದು HD ಕುಮಾರಸ್ವಾಮಿ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ತಿಮಿಂಗಲ ಯಾರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಅದನ್ನು ಹೇಳದೇ ಇರುವುದೇ ದೊಡ್ಡ ತಪ್ಪಲ್ವಾ? ತಿಮಿಂಗಲ ಯಾರು ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿ ಬಿಡಲಿ. ಪ್ರಜ್ವಲ್ ಎಲ್ಲಿದ್ದಾನೆ ಎಂದು ನಿಮಗೆ ಏನಾದರೂ ಗೊತ್ತಿದೆಯಾ? ಗೊತ್ತಿದ್ದರೆ ಹೇಳಿ ನಮಗೂ ಸ್ವಲ್ಪ ಸಹಾಯ ಆಗುತ್ತದೆ ಎಂದು ತಿರುಗೇಟು…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಹೀಗಾಗಿ ಈ ಒಂದು ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯ ನೀಡಿದ್ದು ಪ್ರಜ್ವಲ್ ಇದುವರೆಗೂ ಯಾರ ಸಂಪರ್ಕಕ್ಕೆ ಕೂಡ ಸಿಕ್ಕಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ. ನಮಗೂ ಗೊತ್ತಿಲ್ಲ ಪ್ರಜ್ವಲ್ ಯಾರು ಸಂಪರ್ಕಕ್ಕೂ ಕೂಡ ಸಿಗುತ್ತಿಲ್ಲ. ಈಗಗ್ಲೇ ಪ್ರಜ್ವಲ್ ನನ್ನು ಪಕ್ಷದಿಂದ ಅಮಾನತು ಕೂಡ ಮಾಡಲಾಗಿದೆ. ತಪ್ಪು ಮಾಡಿದರೆ ನೂರಕ್ಕೆ ನೂರು ಶಿಕ್ಷೆ ಆಗಲಿ. ಇನ್ನೇನಿದ್ದರೂ ಕೂಡ ಸರ್ಕಾರದ ಜವಾಬ್ದಾರಿಯಾಗಿದೆ. ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು ಯಾವಾಗ ಬರುತ್ತಾರೆ ಯಾವಾಗ ಬರುವುದಿಲ್ಲ ಇದು ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ. ಈಗಾಗಲೇ ಬ್ಲೂ ಕಾರ್ನರ್ ಹಾಗೂ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನು…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಕಷ್ಟದಲ್ಲಿದ್ದಾಗ ಯಾವುದೇ ರೀತಿಯಾದ ಸಂಭ್ರಮಾಚರಣೆ ಹಾಗೂ ಪಟಾಕಿ ಸಿಡಿಸುವುದು ಬೇಡ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ. ಯಾರು ಕೂಡ ಸಂಭ್ರಮಾಚರಣೆ ಮಾಡಬೇಡಿ. ರಾಜ್ಯದ ಜನತೆಗೆ ನಾನು ಹೇಳುವುದಿಷ್ಟೇ ಯಾವುದೇ ತರಹ ಸಂಭ್ರಮಾಚರಣೆ ಮಾಡುವುದಕ್ಕೆ ಹೋಗಬೇಡಿ. ಇವತ್ತು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ ನಾನು ಏನೇ ತಪ್ಪು ಮಾಡಿಲ್ಲ ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ ಎಂದು ತಿಳಿಸಿದರು. ನ್ಯಾಯಾಲಯ ಏನು ಆದೇಶ ಕೊಟ್ಟಿದೆಯೋ ಅದಕ್ಕೆ ತಲೆಬಾಗಿದ್ದೇನೆ. ಈಗಾಗಲೇ ಟ್ವೀಟ್ ನಲ್ಲಿ ಹೇಳಿದಂತೆ ನಮ್ಮ ಜಿಲ್ಲೆಯ ಜನ ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ತಿಳಿಸಿದ್ದೇನೆ.ಎಲ್ಲರು ಅದನ್ನು ದಯವಿಟ್ಟು ಪಾಲಿಸಬೇಕು. ಮೆರವಣಿಗೆ ಪಟಾಕಿ ಸಿಡಿಸುವುದು ಮಾಡಬೇಡಿ ಸಂಕಷ್ಟದಲ್ಲಿದ್ದಾಗ ಇದೆಲ್ಲವನ್ನು ಮಾಡಬಾರದು ಅಂತ ನಾನು…
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಸುಕಿನ ವೇಳೆ ಯುವತಿ ಮಲಗಿದ್ದಾಗ ಆಕೆಯ ಪ್ರಿಯಕರ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೇ. ಪ್ರಿಯಕರನ ಹೆಸರು ವಿಶ್ವ ಅಲಿಯಾಸ್ ಗಿರೀಶ್ ಎಂದು ಹೇಳಲಾಗುತ್ತಿದ್ದು, ಕೊಲೆಯಾದ ಅಂಜಲಿಗೆ ಮೈಸೂರಿಗೆ ಬಾ ಎಂದು ಧಮ್ಕಿ ಹಾಕಿದ್ದಾನೆ. ಒಂದು ವೇಳೆ ಮೈಸೂರಿಗೆ ಬರದೆ ಹೋದರೆ ನೇಹಾ ಕೊಂದಂತೆ ನಿನ್ನನ್ನು ಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾನೆ.ಈ ಒಂದು ವಿಷಯ ಅವಳ ಅಜ್ಜಿ ಗಂಗಮ್ಮ ಪೊಲೀಸರಿಗೆ ದೂರು ನೀಡಲು ಹೋದಾಗ ಇದು ಮೂಢನಂಬಿಕೆ ಎಂದು ಪೊಲೀಸರು ಕೂಡ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು ಅಂದುಕೊಂಡಂತೆ ಆಗಿದ್ದರೆ ಇಂದು ಬೆಂಗಳೂರಿಗೆ ಪ್ರಜ್ವಲ್ ಆಗಮಿಸಬೇಕಿತ್ತು, ಆದರೆ ನಾಲ್ಕು ದಿನಗಳ ಹಿಂದೆ ಟಿಕೆಟ್ ಬುಕ್ ಮಾಡಿದ್ದನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಲೂಫ್ತಾನ್ಸ ಏರ್ಲೈನ್ಸ್ ಮೂಲಕ ಆಗಮಿಸಬೇಕಾಗಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮೇ 15 ಅಂದರೆ ಇಂದು ಟಿಕೆಟ್ ಬುಕ್ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಾರೆ. ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು.…
ಚಿಕ್ಕಮಗಳೂರು : ಲಾರಿ ಹಾಗೂ ಟಿಟಿ ವಾಹನದ ಮಧ್ಯ ಸರಣಿ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಐವರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಬಳಿ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಯಲು ಬಸಪ್ಪನ ದಿಬ್ಬ ಗ್ರಾಮದಲ್ಲಿ ಸರಣಿ ಅಪಘಾತದಲ್ಲಿ ಓರ್ವ ಸಾವನಪ್ಪಿದು ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.ಎರಡು ಲಾರಿ ಒಂದು ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿದೆ.ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಗುದ್ದಿದೆ. ಇದೆ ವೇಳೆ ಟಿಟಿ ವಾಹನಕ್ಕೆ ಮತ್ತೊಂದು ಲಾರಿ ಹಿಂದಿನಿಂದ ಬಂದು ಗುದ್ದಿದೆ ಟಿಟಿ ಅಲ್ಲಿದ್ದ ಹಾಸನ ಮೂಲದ ಮಂಜುನಾಥ್ (40) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೆ ಅದೇ ವಾಹನದಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ತಕ್ಷಣ ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ವಿಜಯಪುರ : ಉಷ್ಣ ವಿದ್ಯುತ್ ಸ್ಥಾವರದ ಚಿಮಣಿಯ ಮೇಲಿಂದ ಬಿದ್ದು ಉತ್ತರ ಪ್ರದೇಶದ ಮೂಲದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಿಗೆ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ಕಿಶನ್ ಕುಮಾರ್ ಭಾರಧ್ವಜ (32) ಎನ್ನುವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಉಷ್ಣ ವಿದ್ಯುತ್ ಸ್ಥಾವರದ ಮೇಲಿಂದ ಬಿದ್ದಿರುವ ಪರಿಣಾಮ ಕಾರ್ಮಿಕನ ದೇಹ ಚಿದ್ರ ಚಿದ್ರವಾಗಿದೆ ಎಂದು ಹೇಳಲಾಗುತ್ತಿದೆ. ಕೇಬಲ್ ಅಳವಡಿಸುವಾಗ ಆಯತಪಿ ಬಿದ್ದು ದುರ್ಮರಣ ಉತ್ತರ ಪ್ರದೇಶದ ಗಾಜಿಪುರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇದೆ ವೇಳೆ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಇಲ್ಲ ಎಂದು ಇತರೆ ಕಾರ್ಮಿಕರು ಪ್ರತಿಭಟಿಸುತ್ತಿದ್ದಾರೆ. NTPC ಎದುರು ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.ಮೃತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಇದೀಗ ಒತ್ತಾಯ ಕೇಳಿ ಬಂದಿದೆ. ಕೂಡಗಿ NTPC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾದಗಿರಿ : ಬಡವರಿಗಾಗಿ ರಾಜ್ಯ ಸರ್ಕಾರ ಪಡಿತರ ಅಕ್ಕಿ ವಿತರಣೆ ಯೋಜನೆಯ ದಾರಿ ಮಾಡಿದ್ದು ಆದರೆ ಅಲ್ಲಲ್ಲಿ ಕಳ್ಳತನದಿಂದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಪೊಲೀಸರು ಹಾಗೂ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ತೆಗೆದುಕೊಂಡರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿದೆ. ಇದೀಗ ಯಾದಗಿರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 15 ಕ್ವಿಂಟಲ್ ಪಡಿತರ ಅಕ್ಕಿಯನ್ನು ಆಹಾರ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಪುರದಲ್ಲಿ 15 ಕ್ವಿಂಟಲ್ ಅಕ್ಕಿಯನ್ನು ಇದೀಗ ಜಪ್ತಿ ಮಾಡಿಕೊಂಡಿದ್ದಾರೆ. ಬೋರ್ಡಿನ ಒಂಟಿ ಸೈಯದ್ ಮನೆಯಲ್ಲಿದ್ದ ಅಕ್ಕಿಯನ್ನು ಇದೀಗ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿಯನ್ನು ವಶಪಡಿಸಿಕೊಂಡಿದ್ದು ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ












