Author: kannadanewsnow05

ಬೆಂಗಳೂರು : ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಒಡೆತನದ ಕಾರು ಅಪಘಾತಗಿದ್ದು, ಹೆಚ್ ಎಂ ರೇವಣ್ಣ ಪುತ್ರನಿಗೆ ಸೇರಿದ ಕಾರು ಡಿಕ್ಕಿಯಾಗಿ 27 ವರ್ಷದ ಯುವಕ ಸಾವನಪ್ಪಿದ್ದಾನೆ . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಗುಡಿಮರನಹಳ್ಳಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. Hm ರೇವಣ್ಣ ಪುತ್ರ ಶಶಾಂಕ್ ಗೆ ಈ ಒಂದು ಕಾರು ಸೇರಿದೆ ತಡರಾತ್ರಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ರಾಜೇಶ್ (27) ಸಾವನಪಿದ್ದಾನೆ.ಮೃತ ಯುವಕ ಮಾಗಡಿ ತಾಲೂಕಿನ ಬೆಳಗುಂಬ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದ್ದು ರೇವಣ್ಣ ಪುತ್ರ ಶಶಾಂಕ್ ಕಾರು ಚಲಾಯಿಸುತ್ತಿದ್ದ ಮಾಹಿತಿ ತಿಳಿದು ಬಂದಿದೆ. ಕಕಾ 51 MQ 0555 ನಂಬರ್ ಶಶಾಂಕ್ ಮಾಲೀಕತ್ವದ ಕಾರು ಎಂದು ತಿಳಿದು ಬಂದಿದೆ. ಮಾಗಡಿ ಇಂದ ಕಾರು ಬೆಂಗಳೂರು ಕಡೆಗೆ ತೆರಳುತ್ತಿತ್ತು. ಇಂದು ಬೆಳಿಗ್ಗೆ ತಾನೇ ಈ ಒಂದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಕುರಿತು ಕುದುರು ಪೊಲೀಸ್ ಠಾಣೆಯಲ್ಲಿ…

Read More

ಬೆಳಗಾವಿ : ರಾಜ್ಯದಲ್ಲಿ ಸದ್ಯಕ್ಕೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ಸ್ವಪಕ್ಷದ ಸಚಿವರು ಶಾಸಕರುಗಳೇ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಸಿದ್ದರಾಮಯ್ಯ ಅವರು 5 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂಬ ಹೇಳಿಕೆ ವಿಚಾರವಾಗಿ ನಾನು ಏನು ಹೇಳಬೇಕು ಅದನ್ನು ಹೇಳಿ ಆಗಿದೆ ನನ್ನ ಹೇಳಿಕೆ ಕುರಿತು ಬೇರೆಯವರು ಏನು ಹೇಳುತ್ತಾರೋ ಅದಕ್ಕೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಮತ್ತೆ ತಮ್ಮ ಹೇಳಿಕೆಯನ್ನು ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೆ ವಿಚಾರವಾಗಿ ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರನ ಜೊತೆಗೆ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ಸುಮಾರು ಒಂದು ಗಂಟೆಗಳ ಸುದೀರ್ಘವಾಗಿ ಚರ್ಚೆ ನಡೆಸಿದರು. ಆ ರೀತಿ ಹೇಳಿಕೆ ನೀಡಬೇಡ ಅಂತ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಹೇಳಿದರು ಕೂಡ ಯತೀಂದ್ರ ಮಾತ್ರ ತಂದೆಯ ಮಾತಿಗೂ ಬಗ್ಗದೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.

Read More

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಿತ್ತಾಟ ಜೋರಾಗಿತ್ತು ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ನಾವು ಸಹೋದರರು ಇದ್ದಂತೆ ಇದ್ದೇವೆ ಎಂದು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದರು. ಆದರೆ ಕಳೆದ ಎರಡು ದಿನಗಳಿಂದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ಯಾವುದೇ ರೀತಿಯಾಗಿ ನಾಯಕತ್ವ ಬದಲಾವಣೆ ಇಲ್ಲ ಎಂದು ಪದೇಪದೇ ಹೇಳಿಕೆ ನೀಡುತ್ತಿದ್ದಾರೆ ಇವರ ಒಂದು ಹೇಳಿಕೆಗೆ ಸ್ವಪಕ್ಷದ ಹಲವು ಶಾಸಕರು ಸಚಿವರು ಯತೀಂದ್ರ ವಿರುದ್ಧ ಆಕ್ರಶ ಹೊರಹಾಕಿದ್ದು ನಾವು ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡಿದರೆ ನೋಟಿಸ್ ಕೊಡುತ್ತಾರೆ ಆದರೆ ಯತಿಂದ್ರ ವಿರುದ್ಧ ಯಾಕೆ ಇನ್ನು ನೋಟಿಸ್ ನೀಡುವ ಕ್ರಮ ಆಗಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಮಧ್ಯ ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಆಪ್ತ ಸಚಿವರು ಹಾಗೂ ಶಾಸಕರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದು…

Read More

ಬೆಂಗಳೂರು : ಕಳೆದ ತಿಂಗಳ ಹಿಂದೆ ಬೆಂಗಳೂರಿನಲ್ಲಿ ವೈದ್ಯೆ ಡಾಕ್ಟರ್ ಕೃತಿಕಾ ರೆಡ್ಡಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣದಲ್ಲಿ ಪತಿ ಡಾ. ಮಹೇಂದ್ರ ರೆಡ್ಡಿಯನ್ನು ಅರೆಸ್ಟ್ ಮಾಡಲಾಗಿತ್ತು. ಇದೀಗ ಪತಿ ಮಹೇಂದ್ರ ರೆಡ್ಡಿ ಜಾಮೀನು ಅರ್ಜಿ ವಜಾಗೋಳಿಸಲಾಗಿದೆ. ಹೌದು ಕೊಲೆ ಪ್ರಕರಣದಲ್ಲಿ ಸದ್ಯ ಡಾಕ್ಟರ್ ಮಹೇಂದ್ರ ರೆಡ್ಡಿ ಜೈಲಲ್ಲಿ ಇದ್ದಾರೆ ಜಾಮೀನು ನೀಡುವಂತೆ ಇತ್ತೀಚಿಗೆ ಅವರು ಅರ್ಜಿ ಸಲ್ಲಿಸಿದರು. ಇಂದು ವಿಚಾರಣೆ ನಡೆಸಿ ಬೆಂಗಳೂರಿನ ಸೇಷನ್ಸ್ ನ್ಯಾಯಾಲಯ ಮಹೇಂದ್ರ ರೆಡ್ಡಿ ಅರ್ಜಿ ವಜಾ ಗೊಳಿಸಿದೆ. ಜಾಮೀನು ಅರ್ಜಿ ವಜಾ ಗೊಳಿಸುವಂತೆ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಅನಸ್ತೇಶಿಯಾ ಖರೀದಿಗೆ ಪತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದಾನೆ. ನಂತರ ಮನೆಗೆ ಬಂದು ಪತ್ನಿ ಕೃತಿಕಾ ರೆಡ್ಡಿಗೆ ಅನೆಸ್ಥೆಶಿಯ ನೀಡಿದ್ದಾನೆ. ಮೃತಪಟ್ಟ ಬಳಿಕ ಮರಣೋತ್ತರ ಪರೀಕ್ಷೆಗೆ ವಿರೋಧಿಸಿದ್ದಾನೆ. ಪತ್ನಿ ಕೊಂದಿದ್ದಾಗಿ ಸ್ನೇಹಿತರಿಗೆ ಫೋನ್ ಪೇ ಸಂದೇಶ ನೀಡಿದ್ದಾನೆ ಎಂದು ವಾದ ಮಂಡಿಸಿದರು. ಬಳಿಕ ವಾದ ಆಲಿಸಿದ ನಂತರ ಸೇಷನ್ಸ್…

Read More

ಬೆಂಗಳೂರು : ಈ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೋಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಈ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು. ಹಾಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯ ನಡೆಸದೇ ಇರಲು ನಿರ್ಧರಿಸಲಾಗಿತ್ತು. ಆದರೆ ಇದೀಗ ನಿನ್ನ ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ ಪಂದ್ಯಾರ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ. ಹೌದು ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌ ಸಿಕ್ಕಿದೆ. 2026ರ ಐಪಿಎಲ್‌ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್‌ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ…

Read More

ಕೊಪ್ಪಳ : ಕೊಪ್ಪಳದಲ್ಲಿ ಬೆಳ್ಳಂ ಬೆಳ್ಳಿಗ್ಗೆ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ಘಟನೆಯಲ್ಲಿ ರಾಜು, ದುರ್ಗಪ್ಪ, ಸುರೇಶ್, ಹುಸೆನಮ್ಮ, ನಾಗರಾಜ್, ವಿಷ್ಣು, ಹುಲಿಗೆಮ್ಮ ಹಾಗೂ ಶ್ರೀಕಾಂತ್ ಗೆ ಗಂಭೀರವಾದ ಗಾಯಗಳಾಗಿದ್ದು ಎಲ್ಲರನ್ನೂ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯಲ್ಲಿ ಹೊಸ ಗ್ಯಾಸ್ ಸಿಲಿಂಡರ್ ಅಳವಡಿಸುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಬಿ ಎಂ ಆರ್ ಸಿ ಎಲ್ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಪ್ರೋಟೋಟೈಪ್ ಚಾಲಕ ರಹಿತ ರೈಲನ್ನು ಇಂದು ಬಿಎಂಆರ್‌ಸಿಎಲ್‌ ಅನಾವರಣಗೊಳಿಸಿದೆ. ಪಿಂಕ್ ಲೈನ್‌ನ ಮೂಲಮಾದರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಜೆ ರವಿಶಂಕರ್ ಅವರು ಬಿಇಎಂಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶಾಂತನು ರಾಯ್ ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಔಪಚಾರಿಕವಾಗಿ ಅನಾವರಣಗೊಳಿಸಿದರು.ಬಳಿಕ BEML ರೈಲು ಸಂಕೀರ್ಣದಲ್ಲಿ ರೈಲಿನ ಯಶಸ್ವಿ ಪರೀಕ್ಷಾರ್ಥ ಓಟ ನಡೆಸಿತು. ಕಾಳೇನ ಅಗ್ರಹಾರದಿಂದ ನಾಗಾವಾರದವರೆಗೆ ಸುಮಾರು ‌21.25 ಕಿಮೀ ಸಂಪರ್ಕಿಸುವ ಗುಲಾಬಿ ಮಾರ್ಗ 2026ರ ಡಿಸೆಂಬರ್ ಅಥವಾ 2027 ರಲ್ಲಿ ಕಾರ್ಯಾರಂಭವಾಗುವ ನಿರೀಕ್ಷೆಯಿದೆ. ಈ ಭಾಗದಲ್ಲಿ ಮೊದಲ ಹಂತವಾಗಿ ಐದು ಹೊಸ ʻಚಾಲಕರಹಿತʼ ರೈಲುಗಳನ್ನ ಓಡಿಸಲು ಸಿದ್ಧತೆ ನಡೆಯುತ್ತಿದೆ. ಇದರ ಅಂಗವಾಗಿ ಇಂದು ಹೊಸ ರೈಲು ಮಾದರಿಯನ್ನ ಅನಾವರಣಗೊಳಿಸಿದ್ದು, ಡಿ.15ರ ನಂತರ ರೈಲುಗಳು ಕೊತ್ತನೂರು ಡಿಪೋಗೆ…

Read More

ಬೆಳಗಾವಿ : ಹೊಸ ವಾಹನ ಖರೀದಿ ಮಾಡುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸರ್ಕಾರದಿಂದ ರಾಜ್ಯ ರಸ್ತೆ ಸುರಕ್ಷತಾ ತಿದ್ದುಪಡಿ ವಿಧೇಯಕ ಮಂಡನೆ ಮಾಡಲಾಯಿತು. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಹೊಸ ಸೆಸ್ ಜಾರಿಗೊಳಿಸಲಾಗಿದೆ. ಹಾಗಾಗಿ ಹೊಸ ವಾಹನ ಖರೀದಿದಾರರಿಗೆ ಸೆಸ್ ಬಿಸಿ ತಟ್ಟಿದೆ. ನೂತನವಾಗಿ ಖರೀದಿಸುವ ವಾಹನದ ಮೌಲ್ಯ ಆಧರಿಸಿ ಜಾರಿಗೊಳಿಸಲಾಗಿದೆ.ಹಾಲಿ ಎಲ್ಲಾ ಮಾದರಿಯ ವಾಹನಗಳಿಗೆ ಕೇವಲ ರೂ.1000 ವಿಧಿಸಲಾಗಿದ್ದು ತಿದ್ದುಪಡಿ ಅನ್ವಯ ಕಾರಿನ ಬೆಲೆ ಆಧರಿಸಿ ಶೇಕಡಾವಾರು ಸೆಸ್ ಜಾರಿಗೊಳಿಸಲಾಗುತ್ತಿದೆ. ಯಾವ ಮಾದರಿ ಕಾರುಗಳಿಗೆ ಎಷ್ಟು ವಿಧಿಸುವ ಬಗ್ಗೆ ತೀರ್ಮಾನಿಸಲಾಗುತ್ತೆ. ಎಷ್ಟು ಚೆಸ್ ವಿಧಿಸುವ ಬಗ್ಗೆ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.

Read More

ತುಮಕೂರು : ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಲಿಂಗರಾಜು ಹಾಗೂ ಸಹಾಯಕ ಪ್ರಸಾದ್ 1.15 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಕ್ಕೆ ಬಿದ್ದಿದ್ದಾರೆ. ತುಮಕೂರು ಜಿಲ್ಲಾ ಕೈಗಾರಿಕಾ ಕಚೇರಿಯ ಮುಂಭಾಗ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ಉದ್ಯಮಿದಾರರೊಬ್ಬರಿಗೆ ಸಹಾಯಧನ ನೀಡಲು ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಇಬ್ಬರನ್ನು ರೆಡ್ ಹ್ಯಾಂಡಾಗಿ ಅರೆಸ್ಟ್ ಮಾಡಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದುಕೊಂಡು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವಿಧಾನಸಭೆಯ ಚುನಾವಣೆಯ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ರದ್ದು ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಇಂದು ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಸರ್ಕಾರವನ್ನು ಟೀಕಿಸಿದರೆ ಬಿಜೆಪಿಯನ್ನು ಟೀಕೆಸಿದಂತಲ್ಲ. ದೂರುದಾರರ ವಿರುದ್ಧ ರಾಹುಲ್ ಗಾಂಧಿ ಟ್ವೀಟ್ ಮಾಡಿಲ್ಲ. ಪತ್ರಿಕೆಗಳಲ್ಲಿ ರಾಹುಲ್ ಗಾಂಧಿ ಜಾಹೀರಾತು ನೀಡಿಲ್ಲ. ರಾಹುಲ್ ಗಾಂಧಿ ಫೋಟೋ ಮಾತ್ರ ಜಾಹಿರಾತಿನಲ್ಲಿ ಬಳಸಿಕೊಳ್ಳಲಾಗಿದೆ. ಆಗ ರಾಹುಲ್ ಗಾಂಧಿ ಪಕ್ಷದ ಯಾವುದೇ ಹುದ್ದೆಯಲ್ಲಿ ಇರಲಿಲ್ಲ. ದೂರುದಾರರನ್ನು ಉಲ್ಲೇಖಿಸಿಲ್ಲವಾದ್ದರಿಂದ ಮಾನ ನಷ್ಟ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ವಾದಿಸಿದರು. ರಾಹುಲ್ ಗಾಂಧಿ ಪರ ವಕೀಲರ ವಾದಕ್ಕೆ ಬಿಜೆಪಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಬಿಜೆಪಿಯೇ ಅಧಿಕಾರದಲ್ಲಿ ಇದುದ್ದರಿಂದಲೇ ಈ ರೀತಿ ಜಾಹೀರಾತು ನೀಡಲಾಗಿದೆ. ಜಾಹಿರಾತು ನಿಂದಾಗಿ 500 ರಿಂದ 1000 ಮತಗಳ ಅಂತರದಲ್ಲಿ 40 ಸ್ಥಾನ ಕಳೆದುಕೊಂಡಿದೆ ಎಂದು ದೂರುದಾರ ಭಾರತೀಯ ಜನತಾ ಪಕ್ಷದ ಪರ ವಕೀಲ ವಿನೋದ್ ಕುಮಾರ್…

Read More