Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಿಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಿದ್ದು, ಈ ಒಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಕೂಡ ರೇಸ್ ನಲ್ಲಿದ್ದರು. ಆದರೆ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ನನಗೆ ಕೈ ತಪ್ಪಿದಲ್ಲ ಅದು ಮೊದಲೇ ಕ್ಲಿಯರ್ ಆಗಿತ್ತು ಅಂತ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬ್ಬರಿಗೆ ಒಂದೇ ಪೋಸ್ಟ್ ಎಂಬಂತೆ ಮಾನದಂಡದ ಪ್ರಕಾರ ಎಲ್ಲರಿಗೂ ಖಾತೆ ನೀಡಲಾಗಿದೆ. ಹಾಗಾಗಿ ಕೆಪಿಸಿಸಿ ಸ್ಥಾನ ಕೈ ತಪ್ಪಿದ್ದಲ್ಲ ಅದು ಎರಡು ತಿಂಗಳ ಮೊದಲೇ ಹೇಳಿದ್ದರು. ನಮ್ಮ ಪಕ್ಷದಲ್ಲಿ ಒಬ್ಬರಿಗೆ ಒಂದು ಪೋಸ್ಟ್ ಅಂತಲೇ ಇದ್ದಿದ್ದು ಒಂದು ಪೋಸ್ಟ್ ಅಂತ ಬಂದಾಗ ಇಷ್ಟೆಲ್ಲ ಆಯ್ತು ಕೊನೆ ಗಳಿಗೆಯಲ್ಲಿ ಮಂತ್ರಿ ಸ್ಥಾನ ಇರಲಿಲ್ಲ. ಕೆಪಿಸಿಸಿ ಸ್ಥಾನ ಇತ್ತು ಹಾಗಾಗಿ ಕೆಪಿಸಿಸಿ ವಿಚಾರವಾಗಿ ಸುಮ್ಮನಾದ್ವಿ. ಸಿದ್ದರಾಮಯ್ಯ ಅಧ್ಯಕ್ಷರಾಗದೆ ಮುಖ್ಯಮಂತ್ರಿ ಆಗಿದ್ದರು. ಸಿಎಂ ಆಗಲು ಅಧ್ಯಕ್ಷ ಸ್ಥಾನ ಬೇಕು ಅಂತ ಏನು ಇಲ್ಲ ಎಂದು ಬೆಂಗಳೂರಲ್ಲಿ ಸಚಿವ ಸತೀಶ್…
ತುಮಕೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಒಮಿನಿ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಇನ್ನೂ ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಆಂಧ್ರಪ್ರದೇಶದ ಮೂಲದವರು ಎಂಬ ಮಾಹಿತಿ ತಿಳಿದು ಬಂದಿದೆ. ಹಿರಿಯೂರಿನಿಂದ ಹುಳಿಯಾರು ಕಡೆಗೆ ಓಮಿನಿ ಕಾರು ಬರುತ್ತಿತ್ತು. ಓಮನಿ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಓಮಿನಿ ಕಾರು ರಸ್ತೆ ಪಕ್ಕ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿ ಇದ್ದ ವೃದ್ಧ ದಂಪತಿ ಸೇರಿ ಮೂವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹುಳಿಯಾರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಶಾಸಕರೊಬ್ಬರು ಭೀಕರ ಕಾರು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವರದಿಯಾಗಿದೆ. ಶಾಸಕರು ಪ್ರಯಾಣಿಸುತ್ತಿದ್ದ ಐಷಾರಾಮಿ ಎಸ್‌ಯುವಿ ಕಾರು ನಿಯಂತ್ರಣ ತಪ್ಪಿ ಶಾಲೆಯ ಗೋಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಬೆನ್ನಲ್ಲೇ ಕಾರಿನಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಮಧ್ಯಪ್ರದೇಶದ ಪ್ರಮುಖ ಶಾಸಕರಾದ ಯೋಗೇಂದ್ರ ಸಿಂಗ್ ಬಾಬಾ ಅವರು ಈ ಅಪಘಾತಕ್ಕೆ ಒಳಗಾದವರು. ಇತ್ತೀಚೆಗೆ ಅವರು ಜಬಲ್ಪುರದಿಂದ ತಮ್ಮ ಹುಟ್ಟೂರಾದ ಘುರ್ವಾಡಾಗೆ ಎಸ್‌ಯುವಿ ಕಾರಿನಲ್ಲಿ ಹಿಂತಿರುಗುತ್ತಿದ್ದರು. ಈ ವೇಳೆ ಸಿಯೋನಿ ಬಂಜಾರಿ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಹಸುವನ್ನು ತಪ್ಪಿಸಲು ಹೋಗಿ ಸಂಭವಿಸಿದ ಅವಘಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ವೇಗವಾಗಿ ಚಲಿಸುತ್ತಿದ್ದಾಗ ಹಠಾತ್ ಆಗಿ ಹಸುವೊಂದು ಅಡ್ಡ ಬಂದಿದೆ. ರಸ್ತೆಯಲ್ಲಿದ್ದ ಹಸುವನ್ನು ರಕ್ಷಿಸಲು ಚಾಲಕ ತಕ್ಷಣವೇ ಪ್ರಯತ್ನಿಸಿದ್ದಾನೆ. ಈ ವೇಳೆ ತೀವ್ರ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯಲ್ಲಿದ್ದ ಶಾಲೆಯ ರಕ್ಷಣಾ ಗೋಡೆಗೆ ಬಲವಾಗಿ…
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿ ಆದ ಎರಡನೇ ದಿನಕ್ಕೆ ಆಡಳಿತ ಯಂತ್ರಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚುರುಕು ಮುಟ್ಟಿಸಿದ್ದಾರೆ. ಸಿಎಂ ಆದ ಎರಡನೇ ದಿನವೇ ಆಡಳಿತ ಯಂತ್ರಕ್ಕೆ ಡಿಕೆ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ಮೇಲೆ ಸಭೆ ನಡೆಸಿದ್ದಾರೆ. ಇಂದು ವಿಧಾನಸೌಧದಲ್ಲಿ ಎಲ್ಲಾ ಇಲಾಕವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳು ಯಾರ ಮಾತು ಕೇಳದೆ ಕೆಲಸ ಮಾಡಬೇಕು. ಯಾವುದೇ ಒತ್ತಡಕ್ಕೆ ಅಧಿಕಾರಿಗಳು ಮಣಿಯಬಾರದು. ಅಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಹೊಂದಿದ್ದೇನೆ. ನಮ್ಮ ಸರ್ಕಾರದಲ್ಲಿ ಜಾತಿ ಧರ್ಮ ರೆಕಮಂಡ್ ಇರಲ್ಲ ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ 15 ದಿನದಲ್ಲಿ ಆಕ್ಷನ್ ಕಾರ್ಡ್ ಸಿದ್ಧಪಡಿಸಲು ಸೂಚನೆ ನೀಡಿದ್ದೇನೆ ಎಂದರು. ಎಸ್ಐಆರ್ ನಡೆಯುತ್ತಿದೆ ಯಾರು ಮತದಾನದ ಹಕ್ಕು ಕಳೆದುಕೊಳ್ಳಬಾರದು. ತಪ್ಪು ದಾರಿಗೆ ಎಳೆಯದೆ ಎಸ್ಐಆರ್ ನಡಿಯಬೇಕು ಎಂದು ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ ಎಲ್ಲಾ ಮತದಾರರಿಗೆ ಎಸ್ಐಆರ್ ಬಗ್ಗೆ ಜಾಗೃತಿ ಮೂಡಿಸಬೇಕು.…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡನೇ ದಿನವೇ ಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಆಡಳಿತ ಯಂತ್ರಕ್ಕೆ ಭರ್ಜರಿ ಚುರುಕು ಮುಟ್ಟಿಸಿದ್ದಾರೆ. ಹೊಸ ಸರ್ಕಾರದ ಆಡಳಿತದ ಚುಕ್ಕಾಣಿ ಹಿಡಿಯುತ್ತಿದ್ದಂತೆ ಆಕ್ಷನ್ ಮೂಡ್‌ಗೆ ಜಾರಿದ್ದಾರೆ. ಅಭಿವೃದ್ಧಿ ಕಾರ್ಯಾಚರಣೆಗೆ ಅತಿ ಹೆಚ್ಚು ಒತ್ತು ನೀಡಿರುವ ಅವರು, ಹಿರಿಯ ಅಧಿಕಾರಿಗಳ ಸಭೆಯ ಮೇಲೆ ಸಭೆಗಳನ್ನು ನಡೆಸುವ ಮೂಲಕ ಸರ್ಕಾರಿ ವ್ಯವಸ್ಥೆಯಲ್ಲಿ ಬಿಗಿ ಉಂಟುಮಾಡಲು ಮುಂದಾಗಿದ್ದಾರೆ. ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಹತ್ವದ ಸಭೆ ನಡೆಸಿದರು. ಈ ವೇಳೆ ಆಡಳಿತದಲ್ಲಿ ಪ್ರಗತಿ ಸಾಧಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಸಿಎಂ, ಬಾಕಿ ಉಳಿದಿರುವ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಗಡುವು ವಿಧಿಸಿದರು. ಯಾವುದೇ ಕಾರಣಕ್ಕೂ ಕಡತಗಳ ವಿಲೇವಾರಿಯಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದರು. ಇಲಾಖಾ ಕಾರ್ಯದರ್ಶಿಗಳ ಸಭೆಯ ಬೆನ್ನಲ್ಲೇ, ರಾಜ್ಯದ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡನೇ ದಿನವೇ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿರುವ ಅವರು, ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಭೆಯ ಮೇಲೆ ಸಭೆಗಳನ್ನು ನಡೆಸುವ ಮೂಲಕ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಆಡಳಿತದಲ್ಲಿ ದಕ್ಷತೆ ಮತ್ತು ಪಾರದರ್ಶಕತೆಯನ್ನು ತರುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದ ಸಿಎಂ, ಉತ್ತಮ ಆಡಳಿತದ ದೃಷ್ಟಿಯಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದರು. ಸಭೆಯಲ್ಲಿ ಸಾರ್ವಜನಿಕರ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, “ಅಧಿಕಾರಿಗಳು ಕಚೇರಿಗಳಿಗೆ ಬರುವ ಸಾರ್ವಜನಿಕರ ಕಷ್ಟಗಳಿಗೆ ತಕ್ಷಣವೇ ಸ್ಪಂದಿಸಬೇಕು. ಯಾವುದೇ ಫೈಲ್‌ಗಳು ಅನಗತ್ಯವಾಗಿ ವಿಳಂಬವಾಗಬಾರದು. ಸರ್ಕಾರದ ಪ್ರತಿಯೊಂದು ಜನಕಲ್ಯಾಣ ಯೋಜನೆಗಳನ್ನು ಸಮರ್ಥವಾಗಿ ಕಟ್ಟಕಡೆಯ ಜನರಿಗೂ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ”…
ಬೆಂಗಳೂರು : ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಸೂರ್ಯನಗರ ಠಾಣೆ ಪೋಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಮತ್ತು ರೋಮಿಯೋ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅಪಹರಣಕ್ಕೆ ಆರೋಪಿಗಳು ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಂಗಳವಾರ ರಾತ್ರಿ ಒಂದು ಕಿಡ್ನ್ಯಾಪ್ ನಡೆದಿತ್ತು.ಬಾಕ್ಸ್ ನೀಡುವ ನೆಪದದಲ್ಲಿ ಗನ್ ತೋರಿಸಿ ಆರೋಪಿಗಳು ಕಿಡ್ನಾಪ್ ಮಾಡಿದ್ದರು. ಕಿಡ್ನಾಪ್ ಮಾಡಿ ಕರೆದೊಯುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮಾಜಿ ಎಂಎಲ್ಸಿ ಕಿಡ್ನ್ಯಾಪ್ ಮಾಡಿ ಆರೋಪಿಗಳು ಮೂರು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಹಣ ನೀಡುವುದಾಗಿ ಒಪ್ಪಿಕೊಂಡು ದಯಾನಂದ ರೆಡ್ಡಿ ಬಚಾವಾಗಿದ್ದರು ದಯಾನಂದ ರೆಡ್ಡಿ ಮಾತು ನಂಬಿ ಅಪಹರಣಕಾರರು ಅವರನ್ನು ಬಿಟ್ಟು ಕಳುಹಿಸಿದ್ದರು. ಈ ಸಂಬಂಧ ಅತ್ತಿಬೆಲೆ…
ಬೆಂಗಳೂರು : ನೂತನ ಸಿಎಂ ಪದಗ್ರಹಣ ಬೆನ್ನಲ್ಲೆ, ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಇದೀಗ ಅಸಮಾಧಾನ ಭುಗಿಲೆದ್ದಿದೆ. ರಾಮಲಿಂಗಾರೆಡ್ಡಿ ಇದೀಗ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದು, ಆ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೌದು ಸಚಿವರಿಗೆ ಖಾತೆ ಹಂಚಿಕೆಗೂ ಮುನ್ನ ಅಸಮಾಧಾನ ಭುಗಿಲೆದ್ದಿದೆ. ಖಾತೆ ಹಂಚಿಕೆ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ಹೊರ ಹಾಕಿದ್ದಾರೆ. ಜಲ ಸಂಪನ್ಮೂಲ ಖಾತೆ ನೀಡಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆದಿದ್ದು, ಆದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಬೇಕು ಎಂದು ಪಟ್ಟು ಹಿಡಿದಿದ್ದು, ಆ ಖಾತೆ ಕೊಡದಿದ್ದರೆ, ಸಚಿವ ಸ್ಥಾನವೇ ಬೇಡ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮೈನಿಂಗ್ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ-ಮಗ ಇಬ್ಬರು ಸಾವನ್ನಪ್ಪಿರುವ ಘಟನೆ, ಜಿಲ್ಲೆಯ ಸಂಡೂರು ತಾಲೂಕಿನ ಚಿನ್ನುಬಸಪ್ಪ ಕ್ಯಾಂಪ್ ಬಳಿ ನಡೆದಿದೆ. ಬೈಕ್ ನಲ್ಲಿದ್ದ ಬೆಳ್ಳಿ ನಾಗರಾಜ್ (45) ದುರಗೇಶ (22) ಸಾವನ್ನಪ್ಪಿದ್ದಾರೆ. ಮೈನಿಂಗ್ ಕಂಪನಿಯಲ್ಲಿ ವಾಚ್ ಮೆನ್ ಆಗಿದ್ದ ಬೆಳ್ಳಿ ನಾಗರಾಜ ಪ್ಯಾರಾ ಮೆಡಿಕಲ್ ಓದುತ್ತಿದ್ದ ನಾಗರಾಜ ಪುತ್ರ ದುರಗೇಶ ತಂದೆಯನ್ನು ಕೆಲಸಕ್ಕೆ ಬಿತ್ತು ಬರಲು ಹೊರಟಿದ್ದ ದುರಗೇಶ. ವೇಗವಾಗಿ ಬಂದು ಮೈನಿಂಗ್ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳ್ಳಿ ನಾಗರಾಜ ಸ್ಥಳದಲ್ಲೇ ಸಾವನ್ನಪ್ಪಿದ್ದು, ದುರುಗೇಶ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರು, ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ರಾಜ್ಯದ ಯುವಜನರು, ವಿದ್ಯಾರ್ಥಿಗಳು ಹಾಗೂ ಬೆಂಗಳೂರಿನ ನಾಗರಿಕರ ಹಿತದೃಷ್ಟಿಯಿಂದ ಹಲವು ಮಹತ್ವದ ಮತ್ತು ಜನಪರ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, “ನಾವು ಪಡೆದಿರುವ ಈ ಅಧಿಕಾರವನ್ನು ಕೇವಲ ಅಧಿಕಾರವೆಂದು ಭಾವಿಸದೆ, ಜನಸೇವೆಯ ಭಾಗ್ಯವೆಂದು ತಿಳಿದು ಈ ನೂತನ ಕಾರ್ಯಕ್ರಮಗಳನ್ನು ನಾಡಿನ ಜನತೆಗೆ ಸಮರ್ಪಿಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ‘ಯುವ ಉದ್ಯೋಗ ಸೇತು’ ಸ್ಥಾಪನೆ ಮತ್ತು 56,000 ಹುದ್ದೆಗಳ ಭರ್ತಿ ರಾಜ್ಯದಲ್ಲಿ ತೀವ್ರವಾಗಿರುವ ನಿರುದ್ಯೋಗ ಸಮಸ್ಯೆಗೆ ಮುಕ್ತಿ ಹಾಡಲು ಸರ್ಕಾರ ಮೊದಲ ಆದ್ಯತೆ ನೀಡಿದೆ. ಇದರ ಅಂಗವಾಗಿ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳು ಮತ್ತು ಉದ್ಯೋಗ ಆಕಾಂಕ್ಷಿ ಯುವಕರ ನಡುವೆ ಕೊಂಡಿಯಾಗಿ ಕೆಲಸ ಮಾಡಲು ‘ಯುವ ಉದ್ಯೋಗ ಸೇತು’ ಎಂಬ ವಿಶೇಷ ಉದ್ಯೋಗ ವಿನಿಮಯ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಕೇಂದ್ರದ…












