Author: kannadanewsnow05

ನವದೆಹಲಿ : ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಕುಮಾರ್ ಸಾವನಪ್ಪಿದ್ದು, ಇವರ ಈ ಒಂದು ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ಭೀಕರ ವಿಮಾನ ಅಪಘಾತದಿಂದ ನಾನು ದುಃಖಿತನಾಗಿದ್ದೇನೆ. ಅಜಿತ್ ಪವಾರ್ ಜನ ಸೇವೆ ಸಲ್ಲಿಸುವ ಸಲ್ಲಿಸುವ ಕಠಿಣ ಪರಿಶ್ರಮಿ ಬಡವರ ಸಬಲೀಕರಣದಲ್ಲಿ ಅವರ ಉತ್ಸಾಹ ಗಮನಾರ್ಹವಾಗಿದೆ. ಅಜಿತ್ ಪವಾರ್ ಅಕಾಲಿಕ ನಿಧನ ತುಂಬಾ ಆಘಾತಕಾರಿಯಾಗಿದೆ. ಅವರ ಕುಟುಂಬ ಅಭಿಮಾನಿಗಳಿಗೆ ಸಂತಪ್ಪ ಸೂಚಿಸುತ್ತೇನೆ ಮೃತರ ಕುಟುಂಬಗಳಿಗೆ ದೇವರು ಶಕ್ತಿ ಧೈರ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಕ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ. https://twitter.com/narendramodi/status/2016378092802187363?t=I4jkHY2yH2RHneGP7DhldQ&s=19 ಇನ್ನೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಅಜಿತ್ ಪವರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು…

Read More

ಬೆಂಗಳೂರು : ಕಾಲ್ತುಳಿತ ದುರಂತ ನಡೆದ ಬಳಿಕ ಬೆಂಗಳೂರಿನಲ್ಲಿ ಇದುವರೆಗೂ ಯಾವುದೇ ದೇಶೀಯ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯ ನಡೆದಿಲ್ಲ. ಇದೀಗ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಸಲು ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಆದರೆ ಆರ್‌ಸಿಬಿ ಮ್ಯಾನೇಜ್ಮೆಂಟ್ ಇದೀಗ ಬೆಂಗಳೂರಲ್ಲಿ ಉದ್ಘಾಟನಾ ಪಂದ್ಯ ನಡೆಸಲು ಹಿಂದೇಟು ಹಾಕುತ್ತಿದೆ. ಆದರೆ, ಆರ್ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಪಿಎಲ್ (IPL) ಪಂದ್ಯ ನೋಡೋ ಆಸೆಯಲ್ಲಿರುವ ಆರ್‌ಸಿಬಿ ಅಭಿಮಾನಿಗಳ ಕನಸು ನನಸಾಗುವ ಸಣ್ಣ ಸೂಚನೆ ಸಿಕ್ಕಿದೆ. ಆರ್‌ಸಿಬಿ ಮ್ಯಾನೇಜ್‌ಮೆಂಟ್‌ನಿಂದಲೇ ಅಂಥದೊಂದು ಸುಳಿವು ಸಿಕ್ಕಿದೆ. ಇಂದು ಅಥವಾ ನಾಳೆ ಬೆಂಗಳೂರಿನಲ್ಲಿ ಆರ್‌ಸಿಬಿ (RCB) ಪಂದ್ಯಗಳನ್ನು ಆಡುತ್ತಾ, ಅಥವಾ ಬೇರೆಡೆಗೆ ಹೋಗುತ್ತಾ ಅನ್ನೋ ಅಧಿಕೃತ ವಿಚಾರ ಹೊರಬೀಳಲಿದೆ. ಹೌದು, ಕೆಎಸ್‌ಸಿಎ ಕಳೆದ ವಾರವಷ್ಟೇ ಬೆಂಗಳೂರಿನಲ್ಲಿ ಆಡುವ ನಿರ್ಧಾರ ಆರ್‌ಸಿಬಿ ಮ್ಯಾನೇಜ್‌ಮೆಂಟ್ ನಿರ್ಧಾರ ಮಾಡಲಿದೆ, ನಮ್ಮದೇನು ಇಲ್ಲ ಅನ್ನೋ ಮಾತನ್ನ ಹೇಳಿ ಆರ್‌ಸಿಬಿ ಕಡೆ ಬೊಟ್ಟು ಮಾಡಿತ್ತು.…

Read More

ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟುಗಳಂಥ ಚಟುವಟಿಕೆಗಳಲ್ಲಿ ಎಲ್ಲ ಪಕ್ಷಗಳ ಪ್ರಭಾವಿಗಳೂ ಶಾಮೀಲಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನಸಭೆಯಲ್ಲಿ ತಿಳಿಸಿದರು. ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಅಕ್ರಮ ಚಟುವಟಿಕೆಗಳಲ್ಲಿ ಯಾವ ನಾಯಕರು ಭಾಗಿ ಆಗಿದ್ದಾರೆ. ಯಾವ ನಾಯಕರ ನೇತೃತ್ವದಲ್ಲಿ ನಡೆಯುತ್ತಿದೆ ಅಂತ ವಿವರಣೆ ಕೊಡಲ್ಲ. ಇದರ ಹಿಂದೆ ದೊಡ್ಡವರೇ ಇದ್ದಾರೆ. ಎಲ್ಲ ಪಕ್ಷದವರೂ ಇದರಲ್ಲಿ ಇದ್ದಾರೆ. ಹಾಗಾಗಿ ಇದರ ಬಗ್ಗೆ ನಾನು ವಿವರಣೆ ಕೊಡುವುದಿಲ್ಲ ಎಂದರು.‌ ಇದಕ್ಕೂ ಮುಂಚೆ ಮಾತನಾಡಿದ ಶಾಸಕಿ ಕರೆಮ್ಮ ನಾಯಕ್, ಅಕ್ರಮ ಮರಳು ದಂಧೆ, ಮಟ್ಕಾ, ಜೂಜು ಚಟುವಟಿಕೆ ಗಳಿಗೆ ಕಡಿವಾಣ ಹಾಕಿ. ರಾಯಚೂರು ಜಿಲ್ಲೆಯಾದ್ಯಂತ ಇಂತಹ ಪ್ರಕರಣಗಳು ಹೆಚ್ಚಾಗಿವೆ. ಕಳ್ಳತನ ಪ್ರಕರಣಗಳು ಕೂಡ ಜಾಸ್ತಿ ಆಗಿವೆ. ನಾನು ಶಾಸಕಿ ಅದ ಮೇಲೆ ನನ್ನ ಕ್ಷೇತ್ರ ದಲ್ಲಿ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾಗಿದ್ದೆ. ಆದರೆ ಸದ್ಯ ಆಗ್ತಾ ಇಲ್ಲ. ಗೃಹ…

Read More

ಮುಂಬೈ : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಮಹಾರಾಷ್ಟ್ರ DCM ಅಜಿತ್ ಪವಾರ್ ಇದ್ದರು ಎಂದು ವರದಿಯಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/ANI/status/2016360094838190589?t=UocwgvaGN2mj4gyVxMf8yg&s=19

Read More

ಶಿವಮೊಗ್ಗ : ಇತ್ತೀಚಿಗೆ ಚಿತ್ರದುರ್ಗದಲ್ಲಿ ಖಾಸಗಿ ಬಸ್ ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಸಾವನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಭಾರಿ ಬಸ್ ಅನಾಹುತ ಒಂದು ತಪ್ಪಿದೆ, ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ತಗುಲಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 36 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಹೌದು ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್​ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್​ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು‌‌. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್​ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ರಿಪ್ಪನ್​ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಹೊಸನಗರ ಹಾಗೂ ರಿಪ್ಪನ್​ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಪಟ್ಟಣದ ಸರಕಾರಿ ಕಾಲೇಜು ಬಳಿ ನಡೆದಿದೆ. ಮೃತರನ್ನು ಸವಾರರಾದ ಅಭಿ (18) ಹಾಗು ಹಿಂಬದಿ ಕುಳಿತಿದ್ದ ಶಿವಲಿಂಗಮ್ಮ (18) ಸಾವನಪ್ಪಿದ್ದಾರೆ. ಮೃತ ಶಿವಲಿಂಗಮ್ಮ ಬಿಎ ಓದುತ್ತಿದ್ದೂ, ಇನ್ನು ಅಭಿ ಡಿಪ್ಲೋಮ ವ್ಯಾಸಂಗ ಮಾಡುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬಾಕಿ ವೇತನ ಪಾವತಿ ಹಾಗು ವಿವಿಧ ಬೇಡಿಕೆ ಈಡೇರಿಸುವಂತೆ ಅಗ್ರಹಿಸಿ ಗುರುವಾರ ಸಾರಿಗೆ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದು ಇದೀಗ ಕೆಎಸ್ಆರ್ಟಿಸಿ ಸಾರಿಗೆ ನೌಕರರಿಗೆ ಮುಷ್ಕರ ನಡೆಸದಂತೆ ಎಚ್ಚರಿಕೆ ನೀಡಿದೆ. ಗುರುವಾರದಂದು ಬೆಂಗಳೂರು ಚಲೋ ಮುಷ್ಕರದಲ್ಲಿ ಭಾಗಿಯಾಗದಂತೆ ಕೆಎಸ್ಆರ್ಟಿಸಿ ಸಾರಿಗೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದೆ. ಮುಷ್ಕರ ಹೂಡುವಂತೆ ಇಲ್ಲ ಎಂದು ಸಂದೇಶ ನೀಡಿದೆ. ಕರ್ತವ್ಯಕ್ಕೆ ಹಾಜರಾಗದಿದ್ದರೆ ನೋ ವರ್ಕ್ ನೋ ಪೆ ಆದೇಶ ಜಾರಿ ಮಾಡಿದ್ದು, 2020 ಜನವರಿ 1ರಿಂದ 2023 ಫೆಬ್ರವರಿ 28 ರವರೆಗಿನ 38 ತಿಂಗಳ ವೇತನ ಹಿಂಬಾಗಿ ಪವರಿಸುವಂತೆ ಆಗ್ರಹಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಗುರುವಾರ ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಕೆ ಎಸ್ ಆರ್ ಟಿ ಸಿ ಖಡಕ್ ಎಚ್ಚರಿಕೆ ನೀಡಿದೆ.

Read More

ಕೊಪ್ಪಳ : ಕೊಪ್ಪಳದ ಕನಕಗಿರಿ ತಾಲ್ಲೂಕಿನ ವರಣಖೇಡ ಗ್ರಾಮದಲ್ಲಿ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಸಾವಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಗ ಹಾಗೂ ಸೊಸೆ ವಿರುದ್ಧ ಆಸ್ತಿಗಾಗಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹೌದು ವೆಂಕೋಬಾ ಹಂಚಿನಾಳ (50) ಮೃತ ತಂದೆ. ಆಸ್ತಿಗಾಗಿ ತಂದೆಗೆ ಮಗ ವಿಷ ಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ವೆಂಕೋಬಾ ಸಾವಿಗೆ ಆತನ ಮಗ ಮತ್ತು ಸೊಸೆ ಕಾರಣ ಎಂದು ಕನಕಗಿರಿ ಪೊಲೀಸ್ ಠಾಣೆಗೆ ವೆಂಕೋಬಾ ತಾಯಿ ಸೂರಮ್ಮ ದೂರು ನೀಡಿದ್ದಾರೆ.ವಿಷ ಸೇವಿಸಿ ವೆಂಕೋಬಾ ಮೃತ ಪಟ್ಟಿದ್ದಾರೆ, ಆದರೆ ಇದೊಂದು ಕೊಲೆ ಎನ್ನುವುದು ಮೃತ ವೆಂಕೋಬಾ ತಾಯಿಯ ಆರೋಪವಾಗಿದೆ. ಇನ್ನೂ ಈ ಸಂಬಂಧ ಮೃತನ ತಾಯಿ ಸೂರಮ್ಮ ಅವರು ದೂರು ದಾಖಲಿಸಿದ್ದಾರೆ. ಹತ್ತು ಎಕರೆ ಆಸ್ತಿ ವಿಚಾರಕ್ಕೆ ಆಗಾಗ ವೆಂಕೋಬಾ ಹಾಗೂ ಆತನ ಮಗನ ನಡುವೆ ಗಲಾಟೆಯಾಗುತ್ತಿತ್ತು. ಹೀಗಾಗಿ ತಂದೆಯನ್ನ ವಿಷ…

Read More

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಕೇಸ್ ಗೆ ಸಂಬಂಧಪಟ್ಟಂತೆ ಇದೀಗ ಆರೋಪಿ ರಾಜೀವ್ ಗೌಡನನ್ನ ಅರೆಸ್ಟ್ ಮಾಡಿ ಶಿಡ್ಲಘಟ್ಟ JMFC ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಅದಕ್ಕೂ ಮುನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಯಿತು. ಜಡ್ಜ್ ಸುಕನ್ಯಾ ಎದುರು ಶಿಡ್ಲಘಟ್ಟ ಪೊಲೀಸರು ರಾಜೀವ್ ಗೌಡನನ್ನ ಹಾಜರುಪಡಿಸಿದರು. ಈ ವೇಳೆ 5 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರ್ಟ್ ಗೆ ಪೊಲೀಸರು ಮನವಿ ಮಾಡಿದರು. ರಾಜೀವ್ ಗೌಡ ಪರ ವಕೀಲ ವಿವೇಕ್ ರೆಡ್ಡಿಯಿಂದ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ.

Read More

ಶಿವಮೊಗ್ಗ : ಧಾರವಾಡದಲ್ಲಿ ಹುಚ್ಚು ನಾಯಿ ಕಡಿತ ಬೆನ್ನಲ್ಲೆ, ಹೊಳೆಹೊನ್ನೂರಲ್ಲಿ ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿದಿದೆ. ಎಲ್ಲರಿಗೂ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳನ್ನು ನಿಯಂತ್ರಿದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನಗರದ ಬಹುತೇಕ ವಾರ್ಡ್‍ಗಳಲ್ಲಿ ಒಟ್ಟಾರೆಯಾಗಿ ನೂರಾರು ಬೀದಿನಾಯಿಗಳಿವೆ. ಇದರಿಂದ ಹಲವು ದಿನಗಳಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇಂದು ಒಂದೇ ದಿನ ಇಷ್ಟೊಂದು ಮಂದಿಗೆ ಬೀದಿ ನಾಯಿಗಳು ಕಡಿದಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಈ ಬೀದಿ ನಾಯಿಗಳನ್ನು ಸೆರೆ ಹಿಡಿಸಿ, ಅವುಗಳಿಗೆ ದೂರದಲ್ಲಿ ಶೆಡ್ ಮಾಡಿ ಇರಿಸಬೇಕು. ಸಾರ್ವಜನಿಕರ ಜೀವಕ್ಕೆ ಮಾರಕವಾಗಿರುವ ಬೀದಿ ನಾಯಿಗಳಿಂದ ಮುಕ್ತಿ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.

Read More