Author: kannadanewsnow05

ಬೆಂಗಳೂರು : ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು, ರಾಜ್ಯ ಸರ್ಕಾರ ಕರ್ನಾಟಕದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆರು ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಿನ್ನೆ ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು 60 ಕಂಪನಿಗಳ 80 ಮುಖ್ಯಸ್ಥರು ಮತ್ತು ಸಿಇಒಗಳೊಂದಿಗೆ ‘ಉತ್ಪಾದನಾ ಮಂಥನ’ ನಡೆಯಿತು. ಈ ಸಮಾವೇಶದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ಸ್, ಕ್ಯಾಪಿಟಲ್ ಗೂಡ್ಸ್ ಮತ್ತು ರೋಬೋಟಿಕ್ಸ್, ಆಟೋ ಮತ್ತು ಎಲೆಕ್ಟ್ರಿಕ್ ವೆಹಿಕಲ್ಸ್, ಟೆಕ್ನಿಕಲ್ ಮತ್ತು ಎಂಎಂಎಫ್ ಬೇಸ್ಡ್ ಟೆಕ್ಸ್ಟೈಲ್ಸ್ ಹಾಗೂ ಪಾದರಕ್ಷೆ, ಗೊಂಬೆ ಮತ್ತು ಎಫ್ಎಂಸಿಜಿ ಉತ್ಪನ್ನಗಳನ್ನು ಒಳಗೊಂಡಿರುವ ಗ್ರಾಹಕ ಉತ್ಪನ್ನಗಳ ವಲಯಗಳ ಮೇಲೆ ಗಮನ ಕೇಂದ್ರೀಕರಿಸಲಾಗಿತ್ತು. ರಾಜ್ಯದ ಕೈಗಾರಿಕಾ ವಲಯವು ತಯಾರಿಕಾ ವಲಯಕ್ಕೆ ಹೊರಳಿಕೊಳ್ಳಬೇಕಾಗಿದೆ. ಇದಕ್ಕಾಗಿ ರಫ್ತು ಕೇಂದ್ರಿತವಾಗಿರುವಂಥ `ಫ್ರೀ ಟ್ರೇಡ್ ವೇರ್-ಹೌಸಿಂಗ್ ಝೋನ್’ಗಳು, ರಫ್ತನ್ನೇ ಮುಖ್ಯವಾಗಿ ಹೊಂದಿರುವ ಕೈಗಾರಿಕಾ ಪಾರ್ಕುಗಳು, ಬಂದರುಗಳಿಗೆ ತ್ವರಿತ…

Read More

ಬೆಂಗಳೂರು : ಸತತ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ಐಪಿಎಲ್ ನಲ್ಲಿ ಕಪ್ ಬರ ನೀಗಿಸಿದ್ದು 18ನೇ ಆವೃತ್ತಿಯಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿಹಿಡಿದಿದೆ. ಹಾಗಾಗಿ ಆರ್ಸಿಬಿ ತಂಡದ ಆಟಗಾರರಿಗೆ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಈ ಒಂದು ಸಮಾರಂಭದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ತನಿಖೆ ಚುರುಕುಗೊಳಿಸಿದೆ. ಅಲ್ಲದೇ ಇಂದು ಕಾಲ್ತುಳಿತದಲ್ಲಿ ಆರ್‌ಸಿಬಿಯ 11 ಅಭಿಮಾನಿಗಳು ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಘಟನೆ ಕುರಿತು ಮ್ಯಾಜಿಸ್ಟ್ರಿಯಲ್ ತನಿಖೆ ಮುಂದುವರೆದಿದ್ದು, ಇಂದು ಬೆಂಗಳೂರು ನಗರದ ಜಿಲ್ಲಾಧಿಕಾರಿ ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಡಿಸಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ. ಜಿಲ್ಲಾಧಿಕಾರಿ ಆಗಿರುವಂತಹ ಜಗದೀಶ್ ಅವರು ಗಾಯಾಳುಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಒಂದು ವಿಚಾರಣೆ ನಡೆಯಲಿದೆ.

Read More

ಬೆಳಗಾವಿ : ಡೆತ್ ನೋಟ್ ಅಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಗುರುರಾಜ್ (28) ಎಂದು ತಿಳಿದುಬಂದಿದೆ. ಡೆತ್​ನೋಟ್​ನಲ್ಲಿ ಮೂವರ ಹೆಸರನ್ನು ಬರೆದಿಟ್ಟು ಯಾರೂ ಇಲ್ಲದ ವೇಳೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಐಗಳಿ ಠಾಣಾ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಯಾದಗಿರಿ : ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿದ್ದು, ಸಚಿವ ಸಂಪುಟ ಪುನಾರಚನೆ ಆಗುತ್ತೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಕರೆದು ಸಿಎಂ ಸ್ಥಾನ ಕೊಟ್ಟರೆ ನಾಳೆ ನಾನೂ ಸಹ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ತಮ್ಮ ಸಿಎಂ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಜನರ ವಿಚಾರದ ಮೇಲೆ ಸಂಪುಟ ಪುನರ್ ರಚನೆ ಆಗುವುದಿಲ್ಲ. ಅದೇನಿದ್ದರೂ ಹೈಕಮಾಂಡ್‌ ತೀರ್ಮಾನ ದಂತೆ ಆಗುತ್ತದೆ. ಸರ್ಜರಿ ಆದೇಲೆ 10 ರಿಂದ 15 ಸಚಿವರು ಬದಲಾವಣೆ ಆದರೂ ಆಗಬಹುದು. ಅವರಿಗೆ ಯಾವ ಖಾತೆ ಕೊಡಬೇಕು ಅನ್ನೋದು ಮುಖ್ಯಮಂತ್ರಿ ಅವರಿಗೆ ಬಿಟ್ಟ ವಿಚಾರ ಎಂದರು. ಕೆಪಿಸಿಸಿ ಅಧ್ಯಕ್ಷಸ್ಥಾನದ ಆಕಾಂಕ್ಷಿ ಬಹಳಷ್ಟು ಜನ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಾನೂ ಆಗುತ್ತೇನೆ. ಶಾಸಕ ಚೆನ್ನಾರೆಡ್ಡಿ ಅವರೂ ಆಗುತ್ತಾರೆ. ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಅವರು ತಿಳಿಸಿದರು.

Read More

ಬೆಂಗಳೂರು : ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ 5 ದಿನ ನಂದಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ವಾಹನ ದಟ್ಟಣೆಯನ್ನು ತಪ್ಪಿಸಲು ಹಾಗೂ ಸುಗಮ ಸಭೆಗೆ ಅನುವು ಮಾಡಿಕೊಡಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಜೂನ್ 17 ರಿಂದ 19 ರವರೆಗೆ ಹೋಟೆಲ್ ಬುಕಿಂಗ್‌ಗಳನ್ನು ರದ್ದುಗೊಳಿಸಲಾಗಿದೆ. ಹೌದು 2025ನೇ ಸಾಲಿನ 13ನೇ ರಾಜ್ಯ ಸಚಿವ ಸಂಪುಟದ ಸಭೆ ಜೂನ್ 19 ರಂದು ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಭಾಗಿಯಾಗುತ್ತಾರೆ. ಈ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜೂನ್ 16 ರ ಸಂಜೆ 6 ಗಂಟೆಯಿಂದ ಜೂನ್ 20ರ ನಸುಕಿನ ಜಾವ 5 ಗಂಟೆವರೆಗೂ ಸಾರ್ವಜನಿಕರು ನಂದಿ…

Read More

ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ರನ್ಯಾರಾವ್ಗೆ ಮತ್ತೊಂದು ಶಾಕ್ ಎದುರಾಗಿದ್ದು ಈ ಒಂದು ಪ್ರಕರಣದಲ್ಲಿ ಐಟಿ ಅಧಿಕಾರಿಗಳು ಎಂಟ್ರಿ ಆಗಿದ್ದಾರೆ. ಐಟಿ ಅಧಿಕಾರಿಗಳಿಗೆ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತನಿಖೆ ನಡೆಸಲು ಅನುಮತಿ ನೀಡಿದೆ. ಹೌದು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರಮ್ಯ ರಾವ್ ಅರೆಸ್ಟ್ ಆಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮ್ಯಾ ವಿರುದ್ಧದ ಪ್ರಕರಣಕ್ಕೆ ಇದೀಗ ಐಟಿ ಇಲಾಖೆ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ. ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ತನಿಖೆಗೆ ಅನುಮತಿ ನೀಡಿದೆ. ಜೂನ್ 11ರಿಂದ 13 ರವರೆಗೆ ವಿಚಾರಣೆ ನಡೆಸಲು ಅನುಮತಿ ನೀಡಿದೆ ಜೈಲಿನಲ್ಲಿ ವಿಚಾರಣೆ ನಡೆಸಲು ಕೋರ್ಟ್ ಅನುಮತಿಸಿದೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಆದರ್ಶ ಶಾಲೆಗಳಲ್ಲಿ ಈ ವರ್ಷದಿಂದಲೇ ಪಿಯುಸಿ ಕಾಲೇಜು ಆರಂಭಿಸಲು ಅನುಮತಿ ನೀಡಲಾಗಿದೆ. ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಈ ವರ್ಷವೇ ಕೆಲವು ಬದಲಾವಣೆ ಮಾಡುತ್ತೇವೆ. ಒಂದೂವರೆ ಎರಡು ತಿಂಗಳಲ್ಲಿ ಎಲ್ಲ ಗೊತ್ತಾಗಲಿದೆ. ಸರಕಾರಿ ಶಾಲೆಯಲ್ಲೇ 25 ಸಾವಿರ ಮಕ್ಕಳಿಗೆ ಸಿಇಟಿ ಮತ್ತು ನೀಟ್ ತರಬೇತಿ ಕೊಡುತ್ತಿದ್ದೇವೆ. ಆಸಕ್ತ ಎಲ್ಲ ವಿದ್ಯಾರ್ಥಿಗಳಿಗೂ ಸಿಇಟಿ ಮತ್ತು ನೀಟಿ ತರಬೇತಿ ಕೊಡಿ ಅಂತ ಹೇಳಿದ್ದೇನೆ ಎಂದು ಹೇಳಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಲೆ ಮಾಡಲಾಗಿದ್ದು, ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ. ಕಾಡುಗೋಡಿ ಠಾಣೆಯ ವ್ಯಾಪ್ತಿಯ ರೌಡಿಶೀಟರ್ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್, ಪುನೀತ್ ಅಲಿಯಾಸ್ ನೇಪಾಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇನ್ನು ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆತನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ಕಳೆದ ವರ್ಷ ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ತಾಯಿ ಮತ್ತು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು, ವಿದ್ಯುತ್ ಕಂಬದ ಬಳಿ ಆಟ ಆಡುತ್ತಿರುವಾಗ ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ 11 ವರ್ಷದ ಮಗು ಇದೀಗ ಬಲಿಯಾಗಿದೆ. ವಿದ್ಯುತ್ ಪ್ರವಹಿಸಿ 11 ವರ್ಷದ ಬಾಲಕಿ ತನಿಷ್ಕ ಸಾವನಪ್ಪಿದ್ದಾಳೆ. ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ಈ ಒಂದು ದುರಂತ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಾರಾಯಣಘಟ್ಟ ಗ್ರಾಮದಲ್ಲಿ ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಇದೀಗ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆ ಕುರಿತಂತೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಮಕ್ಕಳಿಲ್ಲದವರು ನಮಗೆ ಮಕ್ಕಳು ಇಲ್ಲ ಎಂದು ಕೊರಗುವವರನ್ನು ನೋಡಿದ್ದೇವೆ. ಆದರೆ ಮಕ್ಕಳು ಹುಟ್ಟಿದ ತಕ್ಷಣ ಮಕ್ಕಳೇ ಬೇಡ ಎಂದು ತಂದೆ ತಾಯಿಗಳು ಅದೆಷ್ಟೋ ಮಕ್ಕಳನ್ನು ಅನಾಥರನ್ನಾಗಿ ಮಾಡಿದ್ದಾರೆ. ಇದೀಗ ಕೋಲಾರದಲ್ಲಿ ಅಂತಹದ್ದೇ ಘಟನೆ ನಡೆದಿದ್ದು, ನವಜಾತಶವನ್ನು ಆಸ್ಪತ್ರೆಯಲ್ಲಿ ಪೋಷಕರು ಬಿಟ್ಟು ಹೋಗಿರುವ ಘಟನೆ ನಡೆದಿದೆ. ಹೌದು ಪೋಷಕರು ನವಜಾತ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಪೋಷಕರು ನವಜಾತಶವನ್ನು ಬಿಟ್ಟು ಹೋಗಿದ್ದಾರೆ. ತಾಯಿ ಸತ್ತಿದ್ದಾಳೆ ತಂದೆ ಜೈಲಲಿದ್ದಾನೆ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದು, ಮೂರನೇ ವ್ಯಕ್ತಿ ಶಿಶುವನ್ನು ಆಸ್ಪತ್ರೆಗೆ ದಾಖಲು ಮಾಡಿ ಹೋಗಿದ್ದಾನೆ. ಕೋಲಾರ ನಗರ ಪೊಲೀಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ದೂರು ನೀಡಿದ್ದಾರೆ.

Read More