Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಇದರ ಮಧ್ಯ ಮತ್ತೊಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಹೌದು ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದ್ದು, 2001 ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿಎಂ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮ ಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ. 50:50 ಅನುಪಾತ 2009 ರಲ್ಲಿ ಜಾರಿಗೆ ಬಂದಿದೆ. 2009 ಕ್ಕಿಂತ ಹಿಂದಿನ ಹಳೆ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲ. ಆದರೆ ಪ್ರಾಧಿಕಾರ 2009 ಹಿಂದಿನ ಬಡಾವಣೆಗಳ ಬದಲಿ ನಿವೇಶನಗಳಿಗಾಗಿ ಮಂಜೂರಾತಿಗಾಗಿ 50:50 ಅನುಪಾತ ಕೈಗೊಂಡಿರುವುದು ಕಾನೂನು ಬಾಹಿರ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು ಆದೇಶದಲ್ಲೇ ರಾಜ್ಯ…

Read More

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ಧಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ ಇದೀಗ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.ಈ ಮೂಲಕ ಶಾಸಕ ಯತ್ನಾಳ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹೌದು ಮಾಲಿನ್ಯ ನಿಯಂತ್ರಣ ಮಂಡಳಿ ದಾಖಲಿಸಿದ್ದ ಕೇಸ್ ಅನ್ನು ಇದೀಗ ಹೈಕೋರ್ಟ್ ರದ್ದುಪಡಿಸಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಸಂಸ್ಥೆಯ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ ಗು ಇದೀಗ ಬಿಗ್ ರಿಲೀಸ್ ಸಿಕ್ಕಂತಾಗಿದೆ. ಚಿಂಚೋಳಿಯ ಜಿಎಂಎಫ್‌ಸಿ ಕೋರ್ಟ್ ನಲ್ಲಿ ಈ ಕುರಿತು ದೂರು ದಾಖಲಿಸಲಾಗಿತ್ತು. ಪ್ರಕರಣದ ಹಿನ್ನೆಲೆ? ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಆದೇಶ ನೀಡಲಾಗಿತ್ತು . ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಈ ಶುಗರ್ ಫ್ಯಾಕ್ಟರಿ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ…

Read More

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುತ್ತದೆ ಎಂದು ಮೈಸೂರಿನಲ್ಲಿ ಪ್ರಾಧಿಕಾರದ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಅದೇ ರೀತಿ ಭಕ್ತಾದಿಗಳಿಗೆ ಸೌಲಭ್ಯ ಗಳಿಸಲು ಪ್ರಾಧಿಕಾರವನ್ನು ರಚನೆ ಮಾಡಲಾಗಿದೆ.ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ ಎಂದರು. ಅಲ್ಲದೆ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ. ಚಾಮುಂಡಿ ಬೆಟ್ಟ ಅಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿಯನ್ನು ಅಳವಡಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಅಪರಾಧ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚನೆ ಮಾಡುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ…

Read More

ಬಳ್ಳಾರಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ರಾಜಾತಿಥ್ಯ ಪಡೆದುಕೊಂಡ ನಂತರ ಕೋರ್ಟಿನ ಆದೇಶದ ಮೇರೆಗೆ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದರು. ಇದೀಗ ಜೈಲಿನಲ್ಲಿ ತಮ್ಮ ವಿರುದ್ಧ ಕೊಲೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ವಿಚಾರ ತಿಳಿದುಕೊಳ್ಳಲು ಟಿವಿ ಬೇಕೇ ಬೇಕು ಎಂದು ಜೈಲಿನ ಸಿಬ್ಬಂದಿ ಬಳಿ ದರ್ಶನ್ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಈ ಹಿಂದೆ ಆರೋಪಿ ದರ್ಶನ್ ಟಿವಿ ಸಹವಾಸವೇ ಬೇಡ, ಹಾಗೂ ಮಾಧ್ಯಮಗಳ ಕುರಿತು ಅತ್ಯಂತ ತುಚ್ಚವಾಗಿ ಮಾತನಾಡಿದ್ದರು. ಆದರೆ ಇದೀಗ ದರ್ಶನ್ ಗೆ ಟೀವಿ ಬೇಕಾಗಿದೆ. ಈ ವಿಚಾರವಾಗಿ ಜೈಲು ಸಿಬ್ಬಂದಿ ಬಳಿ ಆರೋಪಿ ದರ್ಶನ್ ಮಾಹಿತಿ ಕೇಳುತ್ತಿದ್ದ. ಪ್ರಕರಣದ ಕುರಿತು ಚಾರ್ಜ್ ಶೀಟ್ ಸಲ್ಲಿಕೆ ವಿಚಾರದ ಬಗ್ಗೆ ಜೈಲು ಸಿಬ್ಬಂದಿ ಬಳಿ ನಟ ದರ್ಶನ ಕೇಳಿದ್ದ ಎನ್ನಲಾಗುತ್ತಿದೆ. ಈ ವೇಳೆ ಸಿಬ್ಬಂದಿ ನಿಮಗೆ ಟಿವಿ ಬೇಕಾಗಿದ್ದರೆ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಎಂದು ಕೂಡ…

Read More

ಹಾವೇರಿ : ಸಂಗೊಳ್ಳಿ ರಾಯಣ್ಣನನ್ನು ನಮ್ಮವರೇ ಹೇಗೆ ಬ್ರಿಟಿಷರಿಗೆ ಹಿಡಿದು ಕೊಟ್ಟರೊ ಅದೇ ರೀತಿ ನಮ್ಮ ಸುತ್ತಮುತ್ತಲೇ ನಮ್ಮವರೇ ನಮಗೆ ಶತ್ರುಗಳಾಗಿರುತ್ತಾರೆ. ಆದರೆ ಅದು ನಮಗೆ ಗೊತ್ತಾಗುವುದಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸಿಎಂ ಸಿದ್ದರಾಮಯ್ಯ ಜೊತೆಗೆ ಇದ್ದು ಅವರ ವಿರುದ್ಧ ಪಿತೂರಿ ನಡೆಸುತ್ತಿರುವವರಿಗೆ ತಿರುಗೇಟು ನೀಡಿದರು. ಇಂದು ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ ಶತ್ರುಗಳಿರುವುದು ಸಹಜ. ಎಲ್ಲರಿಗೂ ಶತ್ರುಗಳಿರುತ್ತಾರೆ. ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಯಾರು ಶತ್ರು ಎಂಬುದು ಹೇಗೆ ಗೊತ್ತಾಗುತ್ತದೆ? ಯಾರು ನಿಜವಾದ ಸ್ನೇಹಿತರೆಂಬುದು ಹೇಗೆ ಗೊತ್ತಾಗುತ್ತದೆ? ಆ ಲೆಕ್ಕದಲ್ಲಿ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಶತ್ರುಗಳು ನಮ್ಮ ಜೊತೆಯೇ ಇರುತ್ತಾರೆ. ಆದ್ರೆ ಗೊತ್ತಾಗುವುದಿಲ್ಲ ಎನ್ನುವ ಮೂಲಕ ಸ್ವಪಕ್ಷೀಯ ವಿರೋಧಿಗಳಿಗೂ ಜಮೀರ್ ಟಾಂಗ್ ಕೊಟ್ಟರು. ಇನ್ನೂ ದರ್ಶನ್​ ಜೈಲು ಅತಿಥ್ಯ ಪ್ರಕರಣದಲ್ಲಿ ನಿಮ್ಮ ಹೆಸರು ಕೇಳಿಬರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಟ ದರ್ಶನ್ ವಿಚಾರವಾಗಿ ಮಾಧ್ಯಮದಲ್ಲಿ ನನ್ನ ಹೆಸರು ಸೇರಿಸಲಾಗುತ್ತಿದೆ. ನಾನು ದರ್ಶನ್ ಆತ್ಮೀಯ ಸ್ನೇಹಿತರು. ಆದ್ರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಮಧ್ಯ ರಾತ್ರಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಡಾಬಾ ಬಳಿ ನಿಲ್ಲಿಸಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ.ಈ ವೇಳೆ ಲಾರಿ ಚಾಲಕ ಮತ್ತು ಬೊಲೆರೋ ವಾಹನದಲ್ಲಿದ್ದ ಆರೋಪಿ ನಡುವೆ ಮಾತಿಗೆ ಮಾತು ಬೆಳೆದು ಲಾರಿ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿ ನಡೆದಿದೆ. ಹೌದು ನಿನ್ನೆ ಮಧ್ಯ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲರಬಾಣವಾಡಿ ಕ್ರಾಸ್ ನಲ್ಲಿ ಇರುವ ಗ್ರೀನ್ ಪಾರ್ಕ್ ಡಾಬಾ ಸಮೀಪ ಈ ಒಂದು ಕೊಲೆ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಬಲಿಯಾಗಿದ್ದಾನೆ. ಡಾಬಾ ಬಳಿ ನಿಲ್ಲಿಸಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿ ಚಾಲಕ ಮತ್ತು ಬೊಲೆರೋ ವಾಹನದಲ್ಲಿದ್ದ ಆರೋಪಿ ಮಹೇಶ್ ನಡುವೆ ಮಾತಿಗೆ ಮಾತು ಬೆಳೆದು ಲಾರಿ ಚಾಲಕರನ್ನು ಹತ್ಯೆ ಮಾಡಿದ್ದಾನೆ.ರಾಡ್ ನಿಂದ ಹೊಡೆದು ಲಾರಿಯಲ್ಲಿದ್ದ ಪ್ರದೀಪ್ ನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು…

Read More

ಬೆಳಗಾವಿ : ಬೆಳಗಾವಿಯಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಕ್ಸಮರ ಅತಿರೇಕಕ್ಕೆ ಏರಿದ್ದು, ಹಾಲಿ ಶಾಸಕ ರಾಜು ಕಾಗೆ, ಮಾಜಿ ಶಾಸಕ ಶ್ರೀಮಂತ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನನ್ನ ತಂಟೆಗೆ ಬಂದ್ರೆ ಬಟ್ಟೆ ಬಿಚ್ಚಿ ಬೆತ್ತಲೆ ಮಾಡಿ, ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಹೌದು ಇಂದು ರಾಜು ಕಾಗೆ, ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಜು ಕಾಗೆ, ನನ್ನ ಬಗ್ಗೆ ಮಾತನಾಡಲು ನಿನಗೆ ಯೋಗ್ಯೆತೆ ಇಲ್ಲ. ನೀನು ನನ್ನ ಬಗ್ಗೆ ಮಾತನಾಡ ಬೇಡ, ಅಪ್ಪಿ-ತಪ್ಪಿ ಮಾತನಾಡಿದರೆ ನಾನು ನಿನ್ನ ಬಟ್ಟೆ ಬಿಚ್ಚಿ ಮೆರವಣಿಗೆ ಮಾಡುತ್ತೇನೆ ಎಂದು ನಾಲಿಗೆ ಹರಿಬಿಟ್ಟರು. ಮುಂದುವರೆದು, ನೀನು ಬಹಳ ಸತ್ಯ ಹರಿಶ್ಚಂದ್ರ ತರಹ ಮಾತನಾಡುತ್ತಿದ್ದೀಯಾ. ನಿಮ್ಮ ಕಾರ್ಖಾನೆಯಲ್ಲಿ ಕಾಟಾ ಯಾರು ಹೊಡೆದ್ರಿ? ಕಾರ್ಮಿಕರ ದುಡ್ಡಿನಲ್ಲಿ ಹುಟ್ಟು ಹಬ್ಬ ಆಚರಿಸಿದವರು ಯಾರು? ಎಂದು ಪ್ರಶ್ನಿಸಿದರು. ಈ ಹಿಂದೆ ರಾಜು ಕಾಗೆ ವಿರುದ್ಧ ಭ್ರಷ್ಟಾಚಾರ ಆರೋಪ…

Read More

ಬೆಂಗಳೂರು : ರಾಜ್ಯದಲ್ಲಿ ಮುಡಾ ಹಗರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇತ್ತ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇನ್ನೊಂದೆಡೆ ಕೆಐಎಡಿಬಿ ಯಲ್ಲಿ ಖರ್ಗೆ ಕುಟುಂಬ ಅಕ್ರಮ ಜಮೀನು ಪಡೆದುಕೊಂಡಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಇತ್ತೀಚಿಗೆ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಇದೇ ವಿಚಾರವಾಗಿ ಕಾಂಗ್ರೆಸ್ ಛಲವಾದಿ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಹೌದು ಕೆಐಎಡಿಬಿಯಿಂದ ಅಕ್ರಮವಾಗಿ ಭೂಮಿ ಪಡೆದ ಆರೋಪ ಸಂಬಂಧ ಬಿಜೆಪಿ ಎಂಎಲ್​ಸಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಸಲೀಂ ಅಹ್ಮದ್ ನೇತೃತ್ವದ ಕಾಂಗ್ರೆಸ್ ಸದಸ್ಯರ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಛಲವಾದಿ ನಾರಾಯಣಸ್ವಾಮಿ ಕೆಐಎಡಿಬಿಯಿಂದ ಬೇರೆಯವರ ಹೆಸರಲ್ಲಿ ಭೂಮಿ ಪಡೆದು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಸದಸ್ಯರು ತನಿಖೆ ನಡೆಸಲು ಅನುಮತಿ ನೀಡುವಂತೆ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಕೆಐಎಡಿಬಿ ಸಿಎ ನಿವೇಶನ ಹಂಚಿಕೆಯಲ್ಲಿ ಇಬ್ಬಗೆ ನೀತಿ ಆರೋಪ ಕೇಳಿಬಂದಿದೆ. ಸರ್ಕಾರದ ಇಲಾಖೆಗೆ ಜಾಗ ನೀಡಲು ಮೀನಾಮೇಷ ಎಣಿಸಲಾಗುತ್ತಿದ್ದು, ಖಾಸಗಿ ಟ್ರಸ್ಟ್, ಕಂಪೆನಿಗಳಿಗೆ…

Read More

ಬೆಂಗಳೂರು : ಬಿಜೆಪಿ ಕಾರ್ಯಕರ್ತ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶಗೌಡ ಗೌಡ ಕೊಲೆ ಪ್ರಕರಣದ ಮರು ವಿಚಾರಣೆ ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಆರೋಪಿಗಳು ಸೇರ್ಪಡೆಯಾದ ಹಿನ್ನೆಲೆಯಲ್ಲಿ ಪ್ರಕರಣದ ಮರು ವಿಚಾರಣೆ ನಡೆಸುವ ಅಗತ್ಯವಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯ 2024ರ ಜೂ.28ರಂದು ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಪ್ರಕರಣದ 6 ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಈ ಆದೇಶದಿಂದಾಗಿ ಪ್ರಕರಣದ ಆರೋಪಿಗಳು ಮತ್ತೆ ವಿಚಾರಣೆ ನಡೆಸಬೇಕಾದ ಅಗತ್ಯ ಎದುರಾಗಿದೆ. ಪ್ರಕರಣದ ಹಿನ್ನೆಲೆ? ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂ.15ರಂದು ಯೋಗೇಶ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಮೊದಲಿಗೆ ತನಿಖೆ ನಡೆಸಿದ್ದ ಧಾರವಾಡ ಪೊಲೀಸರು 6 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಾಸಕ ವಿನಯ ಕುಲಕರ್ಣಿ…

Read More

ಬಳ್ಳಾರಿ : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ, ತುಂತುರು ನೀರಾವರಿ ಘಟಕಗಳಿಗೆ ಬಳ್ಳಾರಿ ಹಾಗೂ ಕುರುಗೋಡು ತಾಲ್ಲೂಕು ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಯಾಂತ್ರೀಕರಣ, ಕೃಷಿ ಸಂಸ್ಕರಣ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ವರೆಗೆ ಸಹಾಯಧನ ನೀಡಲಾಗುತ್ತದೆ. ಸೂಕ್ಷö್ಮ ನೀರಾವರಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.90 ರಷ್ಟು ಸಹಾಯಧನ ಒದಗಿಸಲಾಗುತ್ತದೆ. ಆಸಕ್ತ ರೈತರು ಅರ್ಜಿಗಳನ್ನು ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ರೈತರಿAದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾದಲ್ಲಿ ನಿಯಮಾನುಸಾರ ಜೇಷ್ಠತೆ ಅನ್ವಯ ಅರ್ಜಿಗಳನ್ನು ಪರಿಗಣಿಸಲಾಗುವುದು. ರೈತರು ಮೇಲ್ಕಂಡ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ಪ್ರಕಟಣೆಯಲ್ಲಿ…

Read More