Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಹುಟ್ಟು ಹಬ್ಬದ ದಿನದಂದೇ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೋಯ್ದು ಕಾಮಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇದೀಗ ವರದಿಯಾಗಿದೆ. ಹೌದು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿ ಹುಟ್ಟಿದ ಹಬ್ಬದ ಹಿನ್ನೆಲೆಯಲ್ಲಿ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ಕರೆದೋಯ್ದು ಅತ್ಯಾಚಾರ ಎಸಗಿದ್ದಾನೆ ಯತೀಶ್ (26) ಎಂಬಾತನಿಂದ ಈ ಒಂದು ಕೃತ್ಯ ನಡೆದಿದೆ. ನಿನ್ನೆ ಸಂಜೆ 7:30 ಸಮಯದಲ್ಲಿ ಈ ಒಂದು ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಯಾದಗಿರಿ : ಯಾದಗಿರಿಯಲ್ಲಿ ಘೋರ ಘಟನೆ ಒಂದು ಸಂಭವಿಸಿದ್ದು, KSRTC ಬಸ್ ಹರಿದು ಎರಡು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮಂಗಳೂರು ಗ್ರಾಮದಲ್ಲಿಂದು ಮಧ್ಯಾಹ್ನ 11:40 ರ ಸುಮಾರಿಗೆ ಸಂಭವಿಸಿದೆ. ಮೃತ ಮಗುವನ್ನು ಪರಸಪ್ಪ ಹುಣಸ್ಯಾಳ ಎಂಬವರ ಪುತ್ರಿ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಸ್ ನಿಲ್ದಾಣದ ಪಕ್ಕದಲ್ಲೇ ಪರಸಪ್ಪರ ಮನೆಯಿದ್ದು, ಅಜ್ಜಿ ಮನೆಯಂಗಳದಲ್ಲಿ ಮಗುವನ್ನು ಆಟವಾಡಿಸುತ್ತಾ ಕುಳಿತಿದ್ದರು. ಈ ಮಧ್ಯೆ ಅಜ್ಜಿ ಕಣ್ತಪ್ಪಿಸಿ ಮಗು ಬಸ್ ನಿಲ್ದಾಣ ಕಡೆಗೆ ಹೋಗಿದೆ. ಅದೇ ವೇಳೆ ನಿಲ್ದಾಣಕ್ಕೆ ಬಂದು ನಿಲುಗಡೆಯಾಗುತ್ತಿತ್ತು. ಬಸ್ಸಿನ ಚಕ್ರದಡಿಗೆ ಸಿಲುಕಿ, ಸ್ಥಳದಲ್ಲೇ ಕೊನೆಯುಸಿರೆಳೆದಿದೆ ಎಂದು ತಿಳಿದು ಬಂದಿದೆ ಈ ಕುರಿತು ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಿಹಾರ್ ಚುನಾವಣೆ ಫಲಿತಾಂಶ ರಾಜ್ಯದ ಮೇಲೆ ಬಹಳಷ್ಟು ಪರಿಣಾಮ ಬೀರಿದೆ. ನವೆಂಬರ್ ನಲ್ಲಿ ಕ್ರಾಂತಿಯಾಗಲಿದೆ, ಸಂಪುಟ ಪುನಾರಚನೆ ಆಗಲಿದೆ ಎಂದು ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ ಯಾವಾಗ ಬಿಹಾರ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲಿತೋ, ಇದೀಗ ನವೆಂಬರ್ ಕ್ರಾಂತಿ ಸಂಪುಟ ಪುನಾರಚನೆ ಸೇರಿ ಎಲ್ಲದಕ್ಕೂ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಬಿಜೆಪಿ ವಿಚಾರಕ್ಕೆ ಬಂದರೆ ನಾನು ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ವಿಶ್ವಾಸವಿದೆ ಎಂದು ಹಾಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವಿದೆ ಬಿಜೆಪಿ ಹೈಕಮಾಂಡ್ ನಿಂದ ಈ ಕುರಿತು ಸ್ಪಷ್ಟತೆ ಸಿಗುತ್ತೆ ಎನ್ನುವ ವಿಶ್ವಾಸವಿದೆ. ನನಗಂತೂ ಈ ವಿಚಾರವಾಗಿ ಸ್ಪಷ್ಟತೆ ಸಿಕ್ಕಿದೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಪರೋಕ್ಷವಾಗಿ ನಾನೇ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ಮುಂದುವರೆಯುವ ಬಗ್ಗೆ ಬಿವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಹಾರ ಫಲಿತಾಂಶ ನಮಗೆ ಆನೆ ಬಲ…
ಬೆಂಗಳೂರು : ನಿನ್ನೆ ಬಿಹಾರ್ ಚುನಾವಣೆಯ ಫಲಿತಾಂಶ ಇಡೀ ದೇಶದಲ್ಲಿ ಕಾಂಗ್ರೆಸ್ ಕುಗ್ಗುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿ ನವೆಂಬರ್ ಕ್ರಾಂತಿ ಹಾಗೂ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಒಂದು ಕಡೆ ಈ ಫಲಿತಾಂಶ, ಡಿಕೆಶಿ ಟೀಮ್‌ಗಿದ್ದ ಅಧಿಕಾರ ಹಸ್ತಾಂತರ ಆಸೆಗೆ ತಣ್ಣೀರೆರಚಿದೆ. ಇನ್ನೊಂದು ಕಡೆ ಪುನಾರಚನೆ ಮಾಡಬೇಕೆಂಬ ಸಿಎಂ ಬೇಡಿಕೆಗೆ ಹೈಕಮಾಂಡ್ ಈಗಿನ ಸ್ಥಿತಿಯಲ್ಲಿ ಒಪ್ಪಿಗೆ ಕೊಡುತ್ತಾ ಅನ್ನೋ ಪ್ರಶ್ನೆಯೂ ಎದ್ದಿದೆ. ಹೈಕಮಾಂಡ್ ಸೋಲು ಸದ್ಯಕ್ಕೆ ಕರ್ನಾಟಕದಲ್ಲಿ ಬದಲಾವಣೆ ಪರ್ವಕ್ಕೆ ಕೈ ಹಾಕೋದಿಲ್ಲವಾ ಅನ್ನೋ ಚರ್ಚೆಗಳು ಪಕ್ಷದಲ್ಲೇ ಜೋರಾಗಿ ನಡೀತಿವೆ. ಬಿಹಾರ ಫಲಿತಾಂಶ ರಾಜ್ಯದ ಮೇಲೆ ಎಷ್ಟು ಪರಿಣಾಮ ಬೀರಿದೆ ಎಂದರೆ, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮುಂದೇನು ಅನ್ನೋ ಪ್ರಶ್ನೆ ಹುಟ್ಟಿಸಿದೆ. ಕಾಂಗ್ರೆಸ್ ಹೀನಾಯ ಸೋಲು ಕರ್ನಾಟಕದಲ್ಲಿ ಎದ್ದಿರೋ ಕ್ರಾಂತಿ ಬಿರುಗಾಳಿಗೆ ತಾತ್ಕಾಲಿಕ ಬ್ರೇಕ್…
ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಗೂಡ್ಸ್ ವಾಹನದ ಮಾಲೀಕನ ಪತ್ನಿ ಜೊತೆಗೆ ಸಲುಗೆಯಿಂದ ಇದ್ದಾನೆ ಎಂದು ಚಾಲಕನನ್ನು ಅಪಹರಿಸಿ ಮನ ಬಂದತ್ತೆ ಥಳಿಸಿ , ಕ್ರೌರ್ಯ ಮೆರೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಚಾಲಕನ ಕೈಕಟ್ಟಿ ಕಾಲುಗಳಿಗೆ ದೊಣ್ಣೆಯಿಂದ ಥಳಿಸಲಾಗಿದೆ. ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಬಾಗಲಕೋಟೆಯ ತುಳಸಿಗಿರಿ ಗುಡ್ಡದಲ್ಲಿ ಈ ಒಂದು ಹಲ್ಲೆ ನಡೆದಿದೆ. ಗೂಡ್ಸ್ ವಾಹನದ ಚಾಲಕ ಪ್ರಕಾಶ್ ಮೇಲೆ ಮಾಲೀಕ ಯಂಕಪ್ಪ ಮನಬಂದಂತೆ ಥಳಿಸಿದ್ದಾನೆ. ಯಂಕಪ್ಪ ಪತ್ನಿ ಜೊತೆಗೆ ಚಾಲಕ ಪ್ರಕಾಶ್ ಸಲುಗೆಯಿಂದ ಇದ್ದ ಎಂಬ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಚೂರಿಯಿಂದ ಕೂಡ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಒಟ್ಟು 10 ಜನರ ಸೇರಿ ಅಮಾನವೀಯವಾಗಿ ಹಲ್ಲೆ ಮಾಡಿದ್ದಾರೆ. ಚಾಲಕ ಪ್ರಕಾಶ್ ಕಾಲುಗಳೆಲ್ಲ ಊದಿಕೊಂಡಿವೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆ ತಾಲೂಕಿನ ಪೊಲೀಸ್ ಠಾಣೆಯಲ್ಲಿ, ವಿಚಾರಣೆಯ ವೇಳೆ ಮೂವರ ಮೇಲೆ ಇನ್ಸ್ಪೆಕ್ಟರ್ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೂಡುಬಿದರೆ ಠಾಣೆಯ ಇನ್ಸ್ಪೆಕ್ಟರ್ ಸಂದೇಶ ವಿರುದ್ಧ ಈ ಒಂದು ಗಂಭೀರ ಆರೋಪ ಕೇಳಿ ಬಂದಿದ್ದು, ಕಳೆದ ಮೇನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ 16 ವರ್ಷದ ಬಾಲಕ 18 ವರ್ಷದ ಯುವಕ ಹಾಗೂ ಮಹಿಳೆಯ ಮೇಲೆ ಇನ್ಸ್ಪೆಕ್ಟರ್ ಸಂದೇಶ್ ಹಲ್ಲೆ ಮಾಡಿದ್ದಾರೆ. 2025 9ರ ರಾತ್ರಿ ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಾನವ ಹಕ್ಕುಗಳ ಆಯೋಗ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. ಬಾಲಕ ಹಾಗೂ ಮಹಿಳೆಯ ಮೇಲೆ ಇನ್ಸ್ಪೆಕ್ಟರ್ ದರ್ಪ, ದೌರ್ಜನ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ಸ್ಪೆಕ್ಟರ್ ಹಲ್ಲೆ ಮಾಡಿರುವ ಕುರಿತು ಸಮಿತಿ ನಾಯಕ್ ರಾಜ್ಯ ಮಾನವ ಹಕ್ಕುಗಳು ಆಯೋಗ ಹಾಗೂ ಕಾನೂನು ಪ್ರಾಧಿಕಾರಕ್ಕೆ ಈ ಕುರಿತು ದೂರು ಸಲ್ಲಿಸಿದ್ದಾರೆ.
ಬೆಳಗಾವಿ : ಸಾಮಾನ್ಯವಾಗಿ ದೇಶದಲ್ಲಿ ಎಲ್ಲೇ ಸೈಬರ್ ವಂಚನೆ ಪ್ರಕರಣಗಳು ನಡೆದರೂ ಅದರ ಹಿಂದೆ ವಿದೇಶಿ ವಂಚಕರ ಕೈವಾಡ ಇರೋದು ಕೇಳಿದ್ದೇವೆ. ಆದರೆ ಇದೀಗ ಬೆಳಗಾವಿಯಲ್ಲೇ ಕುಳಿತು ಅಮೆರಿಕದ ನಾಗರಿಕರಿಗೆ ಮಂಕು ಬೂದಿ ಎರಚಿ ವಂಚನೆ ಎಸುಗುತ್ತಿದ್ದ 33 ಸೈಬರ್ ವಂಚಕರನ್ನು ಬೆಳಗಾವಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಸಾಮಾನ್ಯವಾಗಿ ಕರ್ನಾಟಕದಲ್ಲಿ ಎಲ್ಲೇ ಸೈಬರ್ ವಂಚನೆ ನಡೆದರೂ, ಅದರ ಹಿಂದೆ ವಿದೇಶಿಗರ ಲಿಂಕ್ ಇರುತ್ತಿತ್ತು. ಆದ್ರೆ ಈಗ ಕುಂದಾನಗರಿಯಲ್ಲಿ ನಡೆದಿರೋದೇ ಬೇರೆ. ಬೆಳಗಾವಿಯಲ್ಲಿ ಕುಳಿತು ವಿಶ್ವದ ದೊಡ್ಡಣ್ಣ ಎನ್ನುವ ಅಮೆರಿಕದ ನಾಗರಿಕರಿಗೆ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಕಾಲ್ ಸೆಂಟರ್ ಹೆಸರಿನಲ್ಲಿ ಅನುಮತಿ ಪಡೆದು ವಂಚಿಸುತ್ತಿದ್ದ ಸೈಬರ್ ವಂಚಕರನ್ನ ಬೆಳಗಾವಿ ಪೊಲೀಸರು ಬಂಧಿಸಿ, ಜೈಲಿಗಟ್ಟಿದ್ದಾರೆ. ಘಟನೆ ಬೆಳಕಿಗೆ ಬಂದಿದ್ದೆಗೆ? ಆರೋಪಿಗಳು ಬೆಳಗಾವಿಯ ಅಜಮ್ ನಗರದ ಕುಮಾರ್ ಹಾಲ್‌ನಲ್ಲಿ ಬಾಡಿಗೆ ಮನೆ ಪಡೆದು ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಕಾಲ್ ಸೆಂಟರ್ ಹೆಸರಿನಲ್ಲಿ ದಂಧೆ ಶುರು ಮಾಡಿದ್ದರು. ಪ್ರತಿದಿನ ನೂರಾರು ಜನರಿಗೆ ಕರೆ ಮಾಡಿ ಯಾಮಾರಿಸುತ್ತಿದ್ದರು.…
ದಕ್ಷಿಣಕನ್ನಡ : ಇಂದು ಬೆಳಿಗ್ಗೆ ತಾನೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಫುಟ್ಪಾತ್ ಒಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು ಸಿಗ್ನಲ್ ಬಳಿ ಸರಣಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಎರಡು ಟ್ಯಾಂಕರ್ ಹಾಗೂ ಆಟೋರಿಕ್ಷಾ ಕಾರಿನ ಮಧ್ಯ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಟ್ಯಾಂಕರ್ ಹಿಂದೆ ಕಾರು ಹಾಗು ಆಟೋರಿಕ್ಷಾ ನಿಂತಿದ್ದವು. ಈ ವೇಳೆ ಹಿಂದಿನಿಂದ ಬಂದು ಮತ್ತೊಂದು ಟ್ಯಾಂಕರ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಎದುರಿಗೆ ನಿಂತಿದ್ದ ಕಾರಿಗೆ ಗುದ್ದಿದೆ. ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಆಟೋ ರಿಕ್ಷಾ ಅಪ್ಪಚ್ಚಿಯಾಗಿದೆ.…
ಬೆಳಗಾವಿ : ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇನ್ನೂ ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ತಜ್ಞರ ಸಮಿತಿ ರಚಿಸಿ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹೀಗಾಗಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಅರವಿಂದ್ ವೆಂಕಟೇಶ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಲಾಕ್ ಆಗಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. 2021ರಲ್ಲಿ ಅರವಿಂದ್ಗೂ ಈ ನಟಿಗೂ ಪರಿಚಯ ಬೆಳೆದಿತ್ತು. 2022ರಲ್ಲಿ ಶ್ರೀಲಂಕಾದಲ್ಲಿ ನಡೆದ ‘ಲಾರ್ಸ್ ಕ್ರಿಕೆಟ್ ಕಪ್’ ಉದ್ಘಾಟನೆಗೆ ಬರುವಂತೆ ಅರವಿಂದ್ ನಟಿ ಬಳಿ ಕೇಳಿದ್ದ. ಅಂತೆಯೇ ನಟಿ ತೆರಳಿದ್ದರು. ಅಲ್ಲಿಂದ ಇಬ್ಬರ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯಿತು.…














