Subscribe to Updates
Get the latest creative news from FooBar about art, design and business.
Author: kannadanewsnow05
ಯಾದಗಿರಿ : ಬಾಲಕಿ ಜೊತೆಗೆ ಅನುಚಿತ ವರ್ತನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಲ್ಲಿಕಾರ್ಜುನ ಮುತ್ಯ ವಿರುದ್ಧ ಪೋಕ್ಸೋ ಕೇಸ್ ದಾಖಲು ವಿಚಾರವಾಗಿ ಯಾದಗಿರಿನಲ್ಲಿ ಮಲ್ಲಿಕಾರ್ಜುನ ಮುಕ್ತಿಯ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿ, ಮಾರ್ಚ್ 9ಕ್ಕೆ ಕೋರ್ಟ್ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ. ಪ್ರಕರಣದ ಹಿನ್ನೆಲೆ ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಪತ್ರ ಬರೆದಿದಿತ್ತು. ಬಳಿಕ ಮಲ್ಲಿಕಾರ್ಜನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 26 ವರ್ಷದ ಮುತ್ಯಾ ಅಪ್ರಾಪ್ತ ಬಾಲಕಿಯನ್ನು ಹಿಡಿದುಕೊಂಡು ಆಕೆಯ ಪೋಷಕರ ಸಮ್ಮುಖದಲ್ಲಿ ಅನುಚಿತವಾಗಿ ಸ್ಪರ್ಶಿಸಿ ಚುಂಬಿಸುತ್ತಿರುವುದನ್ನು ಈ ವಿಡಿಯೋದಲ್ಲಿ…
ಬೆಂಗಳೂರು : “ಆರೋಗ್ಯವೇ ಐಶ್ವರ್ಯ” ಎಂಬ ಆಶಯದೊಂದಿಗೆ, ರಾಜ್ಯದ ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗಾಗಿ ಕರ್ನಾಟಕ ಸರ್ಕಾರವು ಯಶಸ್ವಿನಿ ನಗದು ರಹಿತ (Cashless) ಚಿಕಿತ್ಸಾ ಯೋಜನೆಯ ನೋಂದಣಿಯನ್ನು ಆರಂಭಿಸಿದೆ. ದುಬಾರಿ ವೈದ್ಯಕೀಯ ವೆಚ್ಚದಿಂದ ಪಾರಾಗಲು ಇದು ಸುವರ್ಣಾವಕಾಶ. ನೋಂದಣಿ ಪ್ರಾರಂಭ: ಜನವರಿ 03, 2026 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 31, 2026 (ಇನ್ನೂ ಕೇವಲ 25 ದಿನಗಳು ಬಾಕಿ!) ಯೋಜನೆಯ ಅವಧಿ: ಏಪ್ರಿಲ್ 01, 2026 ರಿಂದ ಮಾರ್ಚ್ 31, 2027 ರವರೆಗೆ. ನೋಂದಣಿ ಶುಲ್ಕ (ವಾರ್ಷಿಕ ಪ್ರೀಮಿಯಂ) ಕುಟುಂಬದ ನಾಲ್ಕು ಸದಸ್ಯರಿಗೆ ಅನ್ವಯವಾಗುವಂತೆ: | ಪ್ರದೇಶ | ವಾರ್ಷಿಕ ಶುಲ್ಕ | | ಗ್ರಾಮೀಣ ಪ್ರದೇಶ | ₹ 500/- | | ನಗರ ಪ್ರದೇಶ | ₹ 1,000/- | | SC / ST ವರ್ಗದವರು | ಸಂಪೂರ್ಣ ಉಚಿತ (ಸರ್ಕಾರವೇ ಭರಿಸಲಿದೆ) | ಅರ್ಹತೆಗಳು ಮತ್ತು ದಾಖಲೆಗಳು ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ದಾಖಲೆ 17ನೇ ಬಜೆಟ್ ಮಂಡನೆ ಮಾಡಿದ್ದು ಇದಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟ್ವಿಟ್ ನಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ. ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ ಸಿದ್ದರಾಮಯ್ಯನವರು. ಒಂದು ಮಾತು ಸ್ಪಷ್ಟ; ಕರ್ನಾಟಕದ ಆರ್ಥಿಕತೆ ಹಿಂಜರಿಕೆಯತ್ತ ಸಾಗಿದೆ. ಸಿಎಜಿ ವರದಿ, ರಿಸರ್ವ್ ಬ್ಯಾಂಕ್ ಕೊಟ್ಟಿರುವ ಎಚ್ಚರಿಕೆಗಿಂತ ದೊಡ್ಡ ಆರ್ಥಿಕ ಅಪಾಯಕ್ಕೆ ಸಿಲುಕಿದೆ ಕರ್ನಾಟಕ. ಮುಂದಿನ ದಿನಗಳು ಇನ್ನೂ ದುರ್ಬರವಾಗಿವೆ. ಕಾಂಗ್ರೆಸ್ ಸರಕಾರವನ್ನು ರಾಜ್ಯದ ಜನರು ಕ್ಷಮಿಸುವುದಿಲ್ಲ. ಈ ಆಯವ್ಯಯ ಕರ್ಣಕಠೋರ ಮತ್ತು ರಾಜ್ಯಕ್ಕೆ ಭಾರ. ಏಕೆಂದರೆ, ಮುಖ್ಯಮಂತ್ರಿಗಳು ಕೇಂದ್ರದ ನಿಂದನೆಯನ್ನು ಈ ಬಾರಿಯೂ ಮುಂದುವರಿಸಿದರು, ಅದು ಅಗತ್ಯವಿರಲಿಲ್ಲ. ಒಕ್ಕೂಟ ವ್ಯವಸ್ಥೆಯ ಮೂಲತತ್ವವನ್ನೇ ಮರೆತು ತಮ್ಮ ಸರಕಾರದ ಕೆಟ್ಟ ಮಾದರಿಯನ್ನು ಪ್ರಚಾರ ಮಾಡಿಕೊಂಡು ಆತ್ಮರತಿ ಮೆರೆದಿದ್ದಾರೆ. 16ನೇ ಹಣಕಾಸು ಆಯೋಗದಲ್ಲಿ ರಾಜ್ಯದ…
ಬೆಂಗಳೂರು : ರಾಜ್ಯ ಬಜೆಟ್ ಖಂಡಿಸಿ, ಜೆಡಿಎಸ್ ನಿಂದ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದು, ಜೆಡಿಎಸ್ ಬಾಬು ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಸರ್ಕಾರದ ಲೂಟಿ ಮತ್ತು ದಿವಾಳಿತನ ಸಾಲರಾಮಯ್ಯ ಎಂಬ ಕಿರುಹೊತ್ತಿಗೆಯನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಸಾಲ ಎತ್ತುವುದನ್ನೇ ಬಂಡವಾಳ ಮಾಡಿಕೊಂಡಿರುವ ಸಾಲಗಾರ ಮುಖ್ಯಮಂತ್ರಿ @siddaramaiah, ಮಂಡಿಸಿದ 2026-27ನೇ ಸಾಲಿನ ಬಜೆಟ್‌ನಲ್ಲಿ 1.32 ಲಕ್ಷ ಕೋಟಿ ರೂ. ಸಾಲ ಮಾಡುವುದಾಗಿ ಘೋಷಿಸಿದ್ದಾರೆ. ಅದಕ್ಷ @INCKarnataka ಸರ್ಕಾರದ ದುರಾಡಳಿತದಲ್ಲಿ ಕರ್ನಾಟಕ ರಾಜ್ಯದ ಒಟ್ಟು ಸಾಲ 8,24,389 ಲಕ್ಷ ಕೋಟಿ ರೂ. ಏರಿಕೆಯಾಗಿದೆ. 👉 2026-27ನೇ ಸಾಲಿನಲ್ಲಿ – ₹1.32 ಲಕ್ಷ ಕೋಟಿ ಸಾಲ 👉 2025-26ನೇ ಸಾಲಿನಲ್ಲಿ – ₹1.16 ಲಕ್ಷ ಕೋಟಿ ಸಾಲ 👉 2024-25ನೇ ಸಾಲಿನಲ್ಲಿ – ₹1.05 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯರ ಆರ್ಥಿಕ ಅಶಿಸ್ತಿನಿಂದ ಕರ್ನಾಟಕದ ಅಭಿವೃದ್ಧಿ ಹಳಿತಪ್ಪಿದೆ. 📉 ಎಂದು…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ. ಈ ವೇಳೆ ನಾಳೆ ರಾಜ್ಯ ಗುತ್ತಿಗೆದಾರರ ಸಂಘದ ಜೊತೆ ಸಭೆ ಮಾಡುತ್ತೇವೆ. ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಸಚಿವ ಸದಸ್ಯರು ಭರವಸೆ ನೀಡಿದರು. ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುತ್ತಿಗೆದಾರರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧಡೆಯಿಂದ ಗುತ್ತಿಗೆದಾರರು ಆಗಮಿಸಿದ್ದಾರೆ. 37,370 ಕೋಟಿ ಬಾಕಿ ಹಣ ರಾಜ್ಯ ಸರ್ಕಾರ ಉಳಿಸಿಕೊಂಡಿದೆ ಈ ನೆಲೆಯಲ್ಲಿ ಬೆಂಗಳೂರಿನ ಪ್ರದಂ ಪಾರ್ಕ್ ನಲ್ಲಿ ರಾಜ್ಯದ ವಿವಿಧತೆಯಿಂದ ಗುತ್ತಿಗೆದಾರರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ ಪ್ರತಿಭಟನಾ ನಿರದ ಗುತ್ತಿಗೆದಾರರ ಜೊತೆಗೆ ಡಿಸಿಎಂ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು 17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸಿದ್ದಾರೆ ಆದರೆ ಬಜೆಟ್ ನಲ್ಲೂ ಗುತ್ತಿಗೆದಾರರಿಗೆ ಯಾವುದೇ ಭರವಸೆ ಸಿಗಲಿಲ್ಲ. ಹಾಗಾಗಿ ಇದೀಗ ಹಣ ಬಿಡುಗಡೆಗಾಗಿ ಗುತ್ತಿಗೆದಾರರು ಇದೀಗ ಬೀದಿಗೆ ಇಳಿದಿದ್ದಾರೆ. ಬಾಕಿ ಹಣ ಬಿಡುಗಡೆಗಾಗಿ ಗುತ್ತಿಗೆದಾರರ ಸಂಘ ಧರಣಿ ಮಾಡುತ್ತಿದ್ದಾರೆ. ರಾಜ್ಯಾದ್ಯಂತ ಕಾಮಗಾರಿ ಸ್ಥಗಿತಗೊಳಿಸಿ ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಗುತ್ತಿಗೆದಾರರು ಧರಣಿ ನಡೆಸುತ್ತಿದ್ದಾರೆ. ರಾಜ್ಯದ ವಿವಿಧಡೆಯಿಂದ ಗುತ್ತಿಗೆದಾರರು ಆಗಮಿಸಿದ್ದಾರೆ. 37,370 ಕೋಟಿ ಬಾಕಿ ಹಣ ರಾಜ್ಯ ಸರ್ಕಾರ ಉಳಿಸಿಕೊಂಡಿದೆ ಈ ನೆಲೆಯಲ್ಲಿ ಬೆಂಗಳೂರಿನ ಪ್ರದಂ ಪಾರ್ಕ್ ನಲ್ಲಿ ರಾಜ್ಯದ ವಿವಿಧತೆಯಿಂದ ಗುತ್ತಿಗೆದಾರರು ಆಗಮಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಇನ್ನು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ ಪ್ರತಿಭಟನಾ ನಿರದ ಗುತ್ತಿಗೆದಾರರ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಸಚಿವ ಸತೀಶ್ ಜಾರಕಿಹೊಳಿ ಅವರು ಕೂಡ ಸ್ಥಳಕ್ಕೆ ತೆರಳಿ ಗುತ್ತಿಗೆದಾರರೊಂದಿಗೆ ಚರ್ಚಿಸುತ್ತಿದ್ದಾರೆ ಅವರ ಜೊತೆಗೆ ಸಣ್ಣ ನೀರಾವರಿ ಸಚಿವ…
ಬೆಂಗಳೂರು : ರಾಜ್ಯದ ಜನರಿಗೆ ಬಜೆಟ್ನಿಂದ ಯಾವುದೇ ಪ್ರಯೋಜನ ಆಗಿಲ್ಲ ಈ ಬಜೆಟ್ ಸಾಹಿತಿಗಳು ಬರೆದುಕೊಟ್ಟ ರೀತಿ ಕಾಣುತ್ತಿದೆ ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಚಂಬು ನೀಡಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು. ಸಿದ್ದರಾಮಯ್ಯ ಸಾಲ ಮಾಡಿರುವುದೇ ದಾಖಲೆಯ ಸಾಧನೆಯಾಗಿದೆ. ಆಡಳಿತ ಪಕ್ಷದ ಸದಸ್ಯರಿಗೂ ಸಹ ಬಜೆಟ್ ನಲ್ಲಿ ಯಾವುದೇ ಆಸಕ್ತಿ ಇರಲಿಲ್ಲ. ಉತ್ತರ ಕರ್ನಾಟಕದ ಭಾಗದ ಬಗ್ಗೆ ಯಾವುದೇ ಕಾಳಜಿತವರು ಇಲ್ಲ. ಕರಾವಳಿ ಭಾಗದ ಬಗ್ಗೆಯೂ ಬಜೆಟ್ ನಲ್ಲಿ ಉಲ್ಲೇಖ ಮಾಡಿಲ್ಲ. ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬಜೆಟ್ ಕುರಿತು ಕಿಡಿಕಾರಿದರು.
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಾರಿ 4.48 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹಲವು ನೂತನ ಯೋಜನೆಗಳನ್ನು ನೀಡಿದ್ದಾರೆ. ಹಾಗಾದ್ರೆ ಯಾವ ಜಿಲ್ಲೆಗೆ ಯಾವ ಯಾವ ಯೋಜನೆಗಳು ಮಂಜೂರಾಗಿವೆ, ಅದಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ, ಮುಂದಿನ ಗುರಿ ಏನು ಎಂಬ ಜಿಲ್ಲಾವಾರು ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಜಿಲ್ಲಾವಾರು ಮತ್ತು ಪ್ರಾದೇಶಿಕವಾರು ಬಜೆಟ್‌ನ ಪ್ರಮುಖ ಮುಖ್ಯಾಂಶಗಳು ಇಲ್ಲಿವೆ: 1. ಬೆಂಗಳೂರು (ನಗರ ಮತ್ತು ಗ್ರಾಮಾಂತರ) ಬೆಂಗಳೂರನ್ನು ವಿಶ್ವದ ಅತ್ಯುತ್ತಮ ನಗರವನ್ನಾಗಿ ಮಾಡಲು ಹೆಚ್ಚಿನ ಆದ್ಯತೆ ನೀಡಲಾಗಿದೆ. ಎರಡನೇ ವಿಮಾನ ನಿಲ್ದಾಣ: ಕೆಂಪೇಗೌಡ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಸಮೀಕ್ಷೆ. ರಸ್ತೆ ಮತ್ತು ಸುರಂಗ ಮಾರ್ಗ: ಹೆಬ್ಬಾಳ ಜಂಕ್ಷನ್‌ನಿಂದ ಎಚ್‌ಎಸ್‌ಆರ್ ಲೇಔಟ್‌ವರೆಗಿನ ಉತ್ತರ-ದಕ್ಷಿಣ ಕಾರಿಡಾರ್ ಅಭಿವೃದ್ಧಿಗೆ ₹17,780 ಕೋಟಿ. ಸಾರ್ವಜನಿಕ ಸಾರಿಗೆ:…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದರು. ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿನ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ ಘೋಷಿಸಲಾಗಿದೆ. 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕೊಡುವ ಘೋಷಣೆ ಮಾಡಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರಲಿದೆ.ಅಲ್ಲದೇ, ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್‌ಗಳ ಅಭಿವೃದ್ಧಿ, 9 ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ವಿವಿಗಳಲ್ಲಿ 1000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. 31 ಕೋಟಿ ರೂ. ವೆಚ್ಚದಲ್ಲಿ ವಿದ್ಯಾರ್ಥಿನಿಯರು ಹೆಚ್ಚಿರುವ ಕಾಲೇಜುಗಳಿಗೆ ಅಗತ್ಯ ಸೌಲಭ್ಯ ಒದಗಿಸಲಾಗುವುದು. 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಪದವಿ ಕಾಲೇಜುಗಳ ಉನ್ನತೀಕರಣ ಮಾಡಲಾಗುವುದು ಎಂದಿದ್ದಾರೆ.
ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿ ಬಜೆಟ್ ಮಂಡನೆ ಮಾಡಿದ್ದು, ರಾಜ್ಯದ ಎಲ್ಲಾ ಇಲಾಖೆಗಳಿಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದಾರೆ. ಪ್ರತಿ ಇಲಾಖೆಗೂ ಭರ್ಜರಿ ಅನುದಾನ ಘೋಷಣೆ ಮಾಡಿದ್ದು ಇಲಾಖಾವಾರು ಅನುದಾನ ಹಂಚಿಕೆ ಮಾಡಿರುವ ಸಂಪೂರ್ಣ ವಿವರ ಇಲ್ಲಿದೆ. ಶಿಕ್ಷಣ ಇಲಾಖೆಗೆ 47,224 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಅದೇ ರೀತಿ ಇಂಧನ ಇಲಾಖೆಗೆ 29,947 ಕೋಟಿ ರೂಪಾಯಿ ಹಂಚಿಕೆ ಮಾಡಿದ್ದು, ಗ್ರಾಮೀಣ ಅಭಿವೃದ್ಧಿ ಇಲಾಖೆಗೆ 26,559 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಜಲ ಸಂಪನ್ಮೂಲ ಇಲಾಖೆಗೆ 22, 436 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಿದ್ದು, ನಗರ ಅಭಿವೃದ್ಧಿ ಮತ್ತು ವಸತಿ ಇಲಾಖೆಗೆ 22, 203 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ. ಒಳ ಆಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ಆರೋಗ್ಯ ಮತ್ತು…













