Author: kannadanewsnow05

ಬೆಂಗಳೂರು :- ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ಅಂತಿಮ‌ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಸಾಲುಮರದ ತಿಮ್ಮಕ್ಕನವರ ಅಗಲಿಕೆಯು ವೈಯಕ್ತಿಕವಾಗಿ ನನಗೆ ಅಪಾರವಾದ ನಷ್ಟವಾಗಿದೆ. ತಿಮ್ಮಕ್ಕನವರು ನನಗೆ ಹಾಗೂ ನಮ್ಮ ಕುಟುಂಬಕ್ಕೆ ಬಹಳ ಹತ್ತಿರವಾಗಿದ್ದಂತವರು. ಬಹುಶಃ ಯಾರು ಕೂಡ ನಡೆಯದ ದಾರಿಯನ್ನು ಸೃಷ್ಟಿ ಮಾಡಿ, ಪರಿಸರ ಸಂರಕ್ಷಣೆಯ ಮಾತನ್ನು, ಕೃತಿಯಲ್ಲಿ ಮಾಡಿ ತೋರಿಸಿದವರು. ಅತ್ಯಂತ ಬಡ ಕುಟುಂಬದಿಂದ ಬಂದಂತ ಸಾಲುಮರದ ತಿಮ್ಮಕ್ಕ, ಮಕ್ಕಳಿಲ್ಲ ಎಂಬ ಕಾರಣಕ್ಕಾಗಿ ಗಿಡಗಳನ್ನು ನೆಡುವ ಮೂಲಕ ಅವೇ ತನ್ನ ಮಕ್ಕಳು ಎಂದು ಸಾಕಿದರು. ಜಗತ್ತಿಗೆ, ಪರಿಸರ ಕ್ಷೇತ್ರಕ್ಕೆ ಆದರ್ಶವನ್ನು ಕೊಟ್ಟಿದ್ದಾರೆ. ಇತ್ತೀಚೆಗೆ ಬ್ರೆಜಿಲ್‌ನಲ್ಲಿ ನಡೆದ ಅತಿದೊಡ್ಡ ಸಮಾವೇಶದಲ್ಲಿ, ಜಗತ್ತಿನಲ್ಲಿ ಪರಿಸರ ಹಾಳಾಗುತ್ತದೆ. ಮನುಷ್ಯನ ಮೇಲೆ ಪರಿಣಾಮ ಬೀರುತ್ತದೆ ಎಂಬ…

Read More

ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದ್ದು ಕೆಲಸ ಕೊಟ್ಟ ಮಾಲೀಕ ದೇವರಂತೆ ಎನ್ನುವ ಮಾತಿದೆ. ಆದರೆ ಇಲ್ಲಿ ಚಿನ್ನದಾಸೆಗೆ ಮಾಲೀಕನಿಗೆ ಚಾಕುವಿನಿಂದ ಇರಿದು ನಡುರಸ್ತೆಯಲ್ಲಿ ಚಿನ್ನದ ಚೈನ್​ ದೋಚಿಕೊಂಡು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ ಕರೆದುಕೊಂಡು ಹೋಗಿದ್ದ ಆರೋಪಿ ಈ ಕೃತ್ಯ ಎಸೆಗಿದ್ದಾನೆ. ಗಣೇಶ ಮೂರ್ತಿ ತಯಾರಿಸುವ ಕಾರ್ಖಾನೆ ಮಾಲೀಕ ಅಮರ್ ನಾರಾಯಣಸ್ವಾಮಿ ಗಾಯಗೊಂಡವರು. ಜಯಂತ್ (23) ಹಲ್ಲೆ ನಡೆಸಿ ಪರಾರಿಯಾದ ಆರೋಪಿ. ಅಮರ್ ಅವರಿಗೆ ಆರೋಪಿಯು ಚಾಕುವಿನಿಂದ ಕುತ್ತಿಗೆ, ಭುಜ, ಹಣೆಗೆ ಇರಿದು ಗಾಯಗೊಳಿಸಿ ಅವರ ಕೊರಳಿನಲ್ಲಿದ್ದ 100 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳು ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಉತ್ತರಕನ್ನಡ : ಜಿಲ್ಲೆಯ ದಾಂಡೇಲಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಕಳೆದ ನಾಲ್ಕು ದಿನಗಳಲ್ಲಿ ಹತ್ತಕ್ಕೂ ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಾಲೂಕು ವೈದ್ಯಾಧಿಕಾರಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ನಿನ್ನೆ ಒಂದೇ ದಿನ 5 ಹೆಚ್ಚು ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ವೈಷ್ಣವಿ (14) ಹಜರತ್ (8) ರೋಜಿ (70) ಪೆಟ್ರಿನ (60) ಹಾಗೂ ನಾಗಮ್ಮ (5) ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ. ಮನೆಗೆ ಹೋಗುತ್ತಿದ್ದ ದಾಂಡೇಲಿಯ ತಾಲೂಕು ವೈದ್ಯಾಧಿಕಾರಿ ಮೇಲು ಕೂಡ ಬೀದಿ ನಾಯಿಗಳು ದಾಳಿ ಮಾಡಿವೆ. ಸದ್ಯ ವೈದ್ಯಾಧಿಕಾರಿ ಅನಿಲ್ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಂಡೇಲಿಯಲ್ಲಿ ಸುಮಾರು 2000ಕ್ಕೂ ಹೆಚ್ಚು ಬೀದಿ ನಾಯಿಗಳು ಇವೆ ನಾಯಿಗಳ ಹಾವಳಿ ಹೆಚ್ಚಾಗಿದ್ದರೂ ಕೂಡ ನಗರಸಭೆ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ದಾಂಡೇಲಿ ನಗರಸಭೆ ಅಧಿಕಾರಿಗಳ ವಿರುದ್ಧ ಸದ್ಯ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

Read More

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಹಾಗೂ ವೃಕ್ಷಮಾತೆ ಎಂದು ಹೆಸರುವಾಸಿಯಾಗಿದ್ದ ಸಾಲುಮರದ ತಿಮ್ಮಕ್ಕ (114) ನಿನ್ನೆ ನಿಧನರಾಗಿದ್ದಾರೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಮಧ್ಯಾಹ್ನ 12 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಸಾಲುಮರದ ತಿಮ್ಮಕ್ಕ ಅವರ ಅಗಲಿಕೆ ನನಗೆ ಬಹಳ ದುಃಖ ನೋವು ತರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇಡೀ ನಾಡಿಗೆ ಆದರ್ಶ ಆಗಿದ್ದರು. ತಿಮ್ಮಕ್ಕ ಅವರ ಅಗಲಿಕೆ ನನಗೆ ಬಹಳ ದುಃಖ, ನೋವು ತರಿಸಿದೆ. ಕೇವಲ ಪರಿಸರ ಸಂರಕ್ಷಣೆ ಮಾತಿನಲ್ಲಿ ಅಲ್ಲ ಅವರು ಕೆಲಸ ಮಾಡಿ ತೋರಿಸಿದರು. ತಿಮ್ಮಕ್ಕನವರು ಇಡೀ ಜಗತ್ತಿಗೆ ಪರಿಸರ ಕ್ಷೇತ್ರಕ್ಕೆ ಆದರ್ಶ ಆಗಿದ್ದಾರೆ. ಪರಿಸರ ನಾಶ ಆದರೆ ಜಗತ್ತೇ ನಾಶ ಆಗುತ್ತೆ ಅಂತ ಸಸಿ ನೆಟ್ಟಿದ್ದಾರೆ. ಸಾಲುಮರದ ತಿಮ್ಮಕ್ಕ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಲಪಾತದಲ್ಲಿ ಜಾರಿ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಾಮನಹಳ್ಳಿ ಫಾಲ್ಸ್ ನಲ್ಲಿ ಈ ಒಂದು ದುರ್ಘಟನೆ ನಡೆದಿದೆ. ಬೆಳಗಾವಿ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ವರುಣ್ (17) ಸಾವನ್ನಪ್ಪಿದ್ದಾನೆ. ಐವರು ಸ್ನೇಹಿತರ ಜೊತೆಗೆ ಕಾಮನಹಳ್ಳಿ ಫಾಲ್ಸ್ ಗೆ ವರುಣ್ ತೆರಳಿದ್ದ. ಜಲಪಾತದ ಬಂಡೆಯ ಮೇಲಿಂದ ಕಾಲು ಜಾರಿಬಿದ್ದು ವರುಣ್ ನೀರು ಪಾಲಾಗಿದ್ದಾನೆ. ಮೃತ ವರುಣ್ ಚಿಕ್ಕಮಗಳೂರಿನ ಎಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದ. ಘಟನೆ ಕುರಿತಂತೆ ಚಿಕ್ಕಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವರುಣ್ ಮೃತ ದೇಹಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಫಾಲ್ಸ್ ನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಸ್ಯಾಂಡಲ್ವುಡ್ ನಟಿ ಒಬ್ಬರಿಗೆ ಉದ್ಯಮಿ ವೆಂಕಟೇಶ ರೆಡ್ಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ವೆಂಕಟೇಶ ರೆಡ್ಡಿಯನ್ನು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಆಗಿರುವ ವೆಂಕಟೇಶ್ ರೆಡ್ಡಿ ಸ್ಯಾಂಡಲ್ ನಡಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈತ AVR ಗ್ರೂಪ್ ಸಂಸ್ಥಾಪಕನಾಗಿದ್ದು ಅಲ್ಲದೆ ಚಲನಚಿತ್ರ ನಿರ್ಮಾಪಕ ಕೂಡ ಆಗಿದ್ದಾನೆ ನಟಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಸದ್ಯ ಪೋಲಿಸಲು ಉದ್ಯಮಿಯನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ದಕ್ಷಿಣಕನ್ನಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೆ ಮೂವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನ ಸರ್ಕಲ್ ನಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಮೃತರು ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಬಿಸಿ ರೋಡ್ನ ಎನ್. ಜಿ. ರೋಡ್ ನಲ್ಲಿರುವ ಫುಟ್ ಪಾತ್ ಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿ ಸಾವನಪ್ಪಿದ್ದು ಆರು ಜನರಿಗೆ ಗಂಭೀರವಾದ ಗಾಯಗಳಾಗಿವೆ.ಸದ್ಯಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಅಲ್ಲದೇ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ. ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ಸೇ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು. ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ಬರೆದಿರುವ “ನೀರಿನ ಹೆಜ್ಜೆ : ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮಹದಾಯಿ, ಕೃಷ್ಣ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಮತ್ತೊಂದು ಕಡೆ ಕೃಷ್ಣ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ…

Read More

ಬೆಂಗಳೂರು : ಜವಾಹರಲಾಲ್ ನೆಹರು ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್‌ಲಾಲ್ ನೆಹರು ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರು ಎಂದೇ ಅವರನ್ನು ಕರೆಯಲಾಗುತ್ತಿತ್ತು. ಆದರೆ ಇಂದಿನ ಬಿಜೆಪಿಯವರಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸವಾಗಿದೆ ಎಂದರು. ಬಿಜೆಪಿಗೆ ಗಾಂಧಿ ಹಾಗೂ ನೆಹರು ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರು ಅವರು ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್‌ಎಸ್‌ಎಸ್‌ನವರು ಗಾಂಧಿ ಮತ್ತು ನೆಹರು ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ…

Read More

ಬೆಂಗಳೂರು : ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ದಾಖಲಾಗಿದ್ದರು. ತೀವ್ರ ಉಸಿರಾಟದ ಸಮಸ್ಯೆಯಿಂದ ತಿಮ್ಮಕ್ಕ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ತಿಮ್ಮಕ್ಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು.ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ. https://twitter.com/siddaramaiah/status/1989235723908575408?t=sjyGXM08rEqOCYi6ZqTAFw&s=19

Read More