Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆಣ್ಣು ಮಗುವನ್ನು ಸಾಕಲು ಇಷ್ಟವಿಲ್ಲದೇ 50 ಸಾವಿರ ರೂ.ಗೆ ಮಾರಾಟ ಮಾಡಿದ್ದ ಘಟನೆ ಬೆಳಕಿಗೆ ಬಂದಿದ್ದು, ತಂದೆ, ತಾಯಿ ಸೇರಿ ಐವರನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ರಾಮಸಮುದ್ರ ಟೌನಿನ ಕುರುಬರ ಬೀದಿಯಲ್ಲಿ ವಾಸವಿದ್ದ ಸಿಂಧು ಮತ್ತು ಮಂಜುನಾಯಕ ಬಂಧಿತ ಪೋಷಕರಾಗಿದ್ದಾರೆ. ಜೊತೆಗೆ, ಮಧ್ಯವರ್ತಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಡಿ ಗ್ರೂಪ್ ಸಿಬ್ಬಂದಿ ಶಾಂತಾ, ಮಗು ಖರೀದಿ ಮಾಡಿದ್ದ ಹಾಸನದ ಅರಕಲಗೂಡು ತಾಲೂಕು ಕೋಣನೂರಿನ ಜವರಯ್ಯ ಮತ್ತು ನೇತ್ರಾ ದಂಪತಿ ಜೈಲು ಸೇರಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಶಾಂತಾ ಮೂಲಕ ಹಾಸನದ ಕೊಣನೂರು ಗ್ರಾಮದ ಮಕ್ಕಳಿಲ್ಲದ ಜವರಯ್ಯ ಮತ್ತು ನೇತ್ರಾ ದಂಪತಿಗೆ 50 ಸಾವಿರ ರೂ.ಗೆ ಮಾರಾಟ ಮಾಡಿರುವುದಾಗಿ ತಿಳಿದುಬಂತು. ಬಳಿಕ ಸಿಂಧು ಮತ್ತು ಮಂಜುನಾಯಕ, ಶಾಂತ, ಜವರಯ್ಯ ಮತ್ತು ನೇತ್ರಾ ಅವರನ್ನು ಸೆರೆ ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು…
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಇಂದು 77ನೇ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಡಾ. ನಂದಿನಿದೇವಿ ಕೆ. ಭಾ.ಆ.ಸೇ, ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ರವರು ಧ್ವಜಾರೋಹಣವನ್ನು ನೆರವೇರಿಸಿ, ರಾಷ್ಟ್ರಪಿತ ಮಹಾತ್ಮಾ ಗಾಂಧಿ, ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸಂಗೊಳ್ಳಿ ರಾಯಣ್ಣ ರವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಗಣರಾಜ್ಯೋತ್ಸವ ದಿನವು ನ್ಯಾಯ, ಸಮಾನತೆ ಮತ್ತು ಹಿರಿಮೆಯನ್ನು ನೀಡಿದೆ. ಈ ದಿನವು ಹಕ್ಕುಗಳನ್ನು ಆಚರಿಸುತ್ತದೆ ಜೊತೆಗೆ ನಮ್ಮ ಕರ್ತವ್ಯಗಳನ್ನು ಸಹ ನೆನಪಿಸುತ್ತದೆ. ರಾಷ್ಟ್ರೀಯ ಹಬ್ಬಗಳಲ್ಲಿ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಂಡು, ರಾಷ್ಟ್ರ ನಿರ್ಮಾಣದಲ್ಲಿ ತಮ್ಮೆಲ್ಲವನ್ನು ಸಮರ್ಪಿಸಿದ ಮಹಾನ್ ಚೇತನಗಳ ಕಾರ್ಯ, ತ್ಯಾಗ, ನಿಸ್ವಾರ್ಥಸೇವೆಯನ್ನು ಸ್ಮರಿಸಿ ಗೌರವಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ನಮ್ಮ ಸಾರಿಗೆ ಸಂಸ್ಥೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡ್ಯೊಯುವ ನಿಟ್ಟಿನಲ್ಲಿ ನಾವೆಲ್ಲರೂ ನಮ್ಮ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ, ನಿಗಮದ…
ನವದೆಹಲಿ : ದೇಶದಾದ್ಯಂತ ಇಂದು 77ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆಚರಿಸಲಾಗುತ್ತಿದ್ದು ಈ ಹಿನ್ನಲೆಯಲ್ಲಿ ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಭೇಟಿ ನೀಡಿ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ದೆಹಲಿ 77ನೇ ಗಣರಾಜ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ಏಳು ಸುತ್ತಿನ ಕೋಟೆಯಾಗಿದೆ. ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ರಾಷ್ಟ್ರೀಯ ಗೀತೆ ವಂದೇ ಮಾತರಂ ಗೆ 150 ವರ್ಷ, ಒಂದೇ ಮಾತರಂ ಪರಿಕಲ್ಪನೆಯಡಿ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದ್ದು, 26 ಯುದ್ಧ ವಿಮಾನಗಳಿಂದ ವೈಮಾನಿಕ ಪ್ರದರ್ಶನ, 17 ರಾಜ್ಯ, 10 ಇಲಾಖೆಗಳ ಸ್ತಬ್ಧ ಚಿತ್ರಗಳ ಅನಾವರಣ ಪಥಸಂಚಲಕ್ಕೆ ಎಐ ತಂತ್ರಜ್ಞಾನದ ಕ್ಯಾಮೆರಾ ಕಣ್ಗಾವಲು ಹಾಗೂ ಆಪರೇಷನ್ ಸಿಂಧೂರ ಯುದ್ಧ ಅಭಿಮಾನಿಗಳ ಪ್ರದರ್ಶನ ನಡೆಯಲಿದೆ.
ತುಮಕೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಇಂದು ಬೆಳ್ಳಂಬೆಳಗ್ಗೆ ವಾಪಸ್ ತೆರಳುವಾಗ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗ್ತಿದೆ. ಅಪಘಾತದಲ್ಲಿ ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ ಬರುತ್ತಿದ್ದರು. ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣದ ಬಳಿಕ ಸಿಎಂ ಸಿದ್ದರಾಮಯ್ಯ ಸಂವಿಧಾನವನ್ನು ದುರ್ಬಲಗೊಳಿಸುವ ನಿರಂತರ ಪ್ರಯತ್ನ ನಡೆಯುತ್ತಿದೆ. ಸಂವಿಧಾನವನ್ನ ನಾವು ರಕ್ಷಿಸಿದರೆ ಅದು ನಮ್ಮನ್ನ ರಕ್ಷಣೆ ಮಾಡುತ್ತದೆ ಎಂದು ತಿಳಿಸಿದರು. ಸಂವಿಧಾನ ಜಾರಿಗೆ ಬಂದು 76 ವರ್ಷಗಳು ಪೂರ್ಣಗೊಂಡಿದೆ. ಗ್ಯಾರಂಟಿ ಇಂದ ಸಮಾಜದಲ್ಲಿ ಭದ್ರತೆಯ ಭಾವನೆ ಮನೆ ಮಾಡಿದೆ ಸಂವಿಧಾನದ ಆಶಯ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಆಗಿದೆ ಸಂವಿಧಾನ ವಿರೋಧಿಸುವವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವವರು ಅಂಬೇಡ್ಕರ್ ಅವರು ಸಂವಿಧಾನ ಅರ್ಪಿಸಿದಾಗಲು ಅದನ್ನು ವಿರೋಧಿಸಿದ್ದರು. ಈಗಲೂ ಸಂವಿಧಾನ ಬದಲಾಯಿಸುವ ಕೂಗುಗಳು ಅಲಲ್ಲಿ ಕೇಳಿ ಬರುತ್ತಿವೆ. ಆದರೆ ಇದು ಸುಲಭದ ಕೆಲಸ ಅಲ್ಲ ಎಂದು ಅರ್ಥ ಮಾಡಿಕೊಂಡವರು ಅದನ್ನು ನಿಧಾನವಾಗಿ ದುರ್ಬಲಗೊಳಿಸುವ ಪ್ರಯತ್ನದಲ್ಲಿದ್ದಾರೆ. ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞೆಯನ್ನು ಮಾಡಬೇಕಾಗಿದೆ. ಸರ್ಕಾರದ ಯೋಜನೆಗಳು ನೂರಾರು. ಆದರೆ ಅವುಗಳ ಹಿಂದಿನ ಸದಾಶಯ ಮಾತ್ರ ಒಂದೇ. ಅದು ಸಮ ಸಮಾಜದ ನಿರ್ಮಾಣ, ಸರ್ವರಿಗೂ…
ಬೆಂಗಳೂರು : ರಾಜ್ಯದಲ್ಲಿ ಕೆಪಿಎಸ್ ಶಾಲೆಗಳ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಶೀಘ್ರದಲ್ಲೇ ಶಿಕ್ಷಕರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಿ ಕೆಪಿಎಸ್ (KPS) ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ, ಆಹಾರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಕಲಾ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಈ ಮಹತ್ವದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರು ಶಿವಮೊಗ್ಗದಿಂದಲೇ ಅಧಿಕೃತ ಚಾಲನೆ ನೀಡಲಿದ್ದಾರೆ ಎಂಬುದನ್ನೂ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. 1995ರಿಂದ ಹತ್ತು ವರ್ಷಗಳ ಕಾಲ ಅನುದಾನವಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳಿಗೆ ರಾಜ್ಯ ಬಜೆಟ್‌ನಲ್ಲಿ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಕ್ಷೇತ್ರದ ಬಲವರ್ಧನೆ ಸರ್ಕಾರದ ಪ್ರಮುಖ ಗುರಿಯಾಗಿದ್ದು, ಈ ಕುರಿತು ಫೆಬ್ರವರಿ 2ರಂದು ಬಜೆಟ್ ಪೂರ್ವ ಸಭೆಯನ್ನು ಕರೆಯಲಾಗಿದೆ ಎಂದು ಅವರು ಹೇಳಿದರು.
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರಸಭೆ ಕಾರ್ಯಾಲಯದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಕಿರಿಯ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹಿರಿಯ ಆರೋಗ್ಯ ಅಧಿಕಾರಿ ರಂಗಸ್ವಾಮಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಆರೋಗ್ಯ ಅಧಿಕಾರಿ ಆರೋಪಿಸಿದ್ದಾರೆ. ಈ ಸಂಬಂಧ ಮಹಿಳಾ ಅಧಿಕಾರಿ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಚ್ಚರಿಕೆ ನೀಡಿದ್ರೂ ಪದೇಪದೇ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ವಿಷಯ ಬಹಿರಂಗ ಮಾಡಿದರೆ ಪೌರಕಾರ್ಮಿಕರ ಮುಂದೆ ಅವಮಾನ ಮಾಡುವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ : ಶ್ರವಣಬೆಳಗೊಳ ಹಾಗೂ ಅರಸೀಕೆರೆಯಲ್ಲಿ ರವಿವಾರ ಹಮ್ಮಿಕೊಂಡಿದ್ದ ಹಿಂದೂ ಸಮಾಜೋತ್ಸವದಲ್ಲಿ ಭಾಷಣಕಾರರಾಗಿ ಭಾಗವಹಿಸಬೇಕಿದ್ದ ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಜಿಲ್ಲಾ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಆದೇಶಿಸಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿರುವ ಸಂಬಂಧ ವಿವಿಧ ಜಿಲ್ಲೆಗಳಲ್ಲಿ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಾಗಿವೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಶರಣ್ ಪಂಪ್‌ವೆಲ್ ಜಿಲ್ಲೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭಾರಿ ಅನಾಹುತ ಒಂದು ತಪ್ಪಿದ್ದು, ಖಾಸಗಿ ಬಸ್ ಒಂದು ಆಕಸ್ಮಿಕ ಬೆಂಕಿಯಿಂದಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಖಾಸಗಿ ಬಸ್ ನಲ್ಲಿ ಇದ್ದ ಪ್ರಯಾಣಿಕರು ಪಾರಾಗಿರುವ ಘಟನೆ ಸಿಗಂದೂರು ಬಳಿ ಹುಲಿದೇವರ ಬನ ಗ್ರಾಮದ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಕ್ಷೇತ್ರದ ಬಳಿ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಬೆಂಕಿ ಕಂಡು ಹುಲಿದೇವರಬನ ಗ್ರಾಮಸ್ಥರು ಬಸ್ ನಿಲ್ಲಿಸಿದ್ದಾರೆ. ಬಸ್ ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಜನ ನಂದಿಸಿದ್ದಾರೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ.














