Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಹಾಸನ : ಹಾಸನ ಜಿಲ್ಲೆಯಲ್ಲೂ ಕೆಲವು ಅಹಿತಕರ ಘಟನೆಗಳು ನಡೆದಿವೆ. ಹಾಗಂತ ಯಾವುದೇ ಒತ್ತಡಕ್ಕೆ ಮಾಡಿದಿಲ್ಲ ಕಾನೂನು ಎಲ್ಲರಿಗೂ ಒಂದೇ ರೀತಿಯಾಗಿದೆ ಎಂದು ಹಾಸನದಲ್ಲಿ ಗ್ರಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಹಾಸನ ಅಥವಾ ಯಾವುದೇ ಜಿಲ್ಲೆಗೆ ಸಂಬಂಧಿಸಿದರು ಎಲ್ಲರಿಗೂ ಕಾನೂನು ಒಂದೇ. ಯಾವುದೇ ಒತ್ತಡಕ್ಕೆ ಮಣಿಯುವ ಕೆಲಸವಾಗಿಲ್ಲ ಎಂದರು. ರಾಜ್ಯದಲ್ಲಿ ಸೈಬರ್ ಕ್ರೈಂ ಸಂಖ್ಯೆ ಹೆಚ್ಚಾಗಿದೆ. 2016ರಲ್ಲಿ ದೇಶದಲ್ಲಿ ಮೊದಲು ಸೈಬರ್ ಕ್ರೈಂ ಠಾಣೆಯನ್ನು ಆರಂಭಿಸಿದ್ದೆವು. ಕಾನೂನಾತ್ಮಕ ಶಕ್ತಿಯನ್ನು ಸೈಬರ್ ಪೋಲೀಸರಿಗೆ ನಾವು ಕೊಟ್ಟಿದ್ದೇವೆ ಎಂದು ಹಾಸನದಲ್ಲಿ ಗ್ರಾಇ ಇಲಾಖೆ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.
ವಿಜಯಪುರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕ್ರಮಕೈಗೊಳ್ಳುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು ಯತ್ನಾಳ್ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು ಹಾಗೂ ಗೆದ್ದ ಅಭ್ಯರ್ಥಿಗಳ ದೂರುಗಳು ಸಹ ಇವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡ ವಿ. ಸೋಮಣ್ಣ ಅವರ ದೂರು ಇದೆ ಎಂದು ಅವರು ತಿಳಿಸಿದರು. ದೊಡ್ಡ ದೊಡ್ಡ ಜವಾಬ್ದಾರಿ ಇರುವವರು ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಒಳಿತಲ್ಲ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 350 ರಿಂದ 400 ಸ್ಥಾನಗಳು ಬರುತ್ತವೆ ಎಂದು ನಿರೀಕ್ಷೆ ಇಟ್ಟಿದ್ದೆವು. ಬಹಳ ಕಡೆ ಗದ್ದಲವಾಗಿದೆ. ಲೋಕಸಭಾ ಸದಸ್ಯರು ಕೂಡ…
ಕೋಲಾರ : ತಾಲೂಕು ಕಚೇರಿಯಲ್ಲಿ 2 ಸಾವಿರ ಲಂಚ ಸ್ವೀಕರಿಸುವಾಗ FDA ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಮಾಡಿದ್ದು ಲಂಚ ಸ್ವೀಕರಿಸುವಾಗ FDA ಅಧಿಕಾರಿ ತೇಜಸ್ ಭೂಷಣ ಲೋಕಾಯುಕ್ತ ಅಧಿಕಾರಿಗಳ ಬೆಲೆಗೆ ಬಿದ್ದಿದ್ದಾನೆ.2022 ರಲ್ಲಿ ಮಳೆಯಿಂದ ಕೂಸಿದಿದ್ದ ಮನೆಗೆ ಪರಿಹಾರ ನೀಡಲು ಲಂಚ ಕೇಳಿದ್ದ ಎಂದು ಆರೋಪಿಸಲಾಗಿದೆ. ಈ ಕುರಿತು ಗೊಲ್ಲಹಳ್ಳಿಯ ನಾರಾಯಣ ಸ್ವಾಮಿ ಬಳಿ 5 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಬಂಗಾರಪೇಟೆ ತಾಲೂಕಿನ ಗೊಲ್ಲಹಳ್ಳಿಯ ನಿವಾಸಿ ನಾರಾಯಣಸ್ವಾಮಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಅರ್ಜಿ ಸಲ್ಲಿಸಿದ್ದರು ಮೊದಲ ಕಂತಿನ 90,000 ಹಣ ಬಿಡುವಡಿಗೆ ತೇಜಸ್ ಭೂಷಣ್ ಲಂಚದ ಬೇಡಿಕೆ ಇಟ್ಟಿದ್ದ. ಇದೀಗ ಲೋಕಾ ಬಲೆಗೆ ಬಿದ್ದಿದ್ದಾನೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಸದ್ಯ ತೇಜಸ್…
ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಗಳಾದ ಪದ್ಮನಾಭ ಹಾಗೂ ಪರಶುರಾಮ್ ರನ್ನು ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕರಾದಂತಹ ಚಂದ್ರಶೇಖರನ್ ಅವರು ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 3ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಕೇಸಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ನಡೆದಿತ್ತು. ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿದ್ದರು.
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ.ನಾಲ್ವರು ಆರೋಪಿಗಳನ್ನು ಸ್ಥಳಾಂತರಿಸಲು 24ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ತುಮಕೂರು ಜೈಲಿಗೆ ಸ್ಥಳಾಂತರಿಸಲು ಕೋರ್ಟ್ ಆದೇಶಿಸಿದೆ. ನಟಿ ಪವಿತ್ರಾಗೌಡಗೆ ಅಶ್ಲೀಲ ಕಾಮೆಂಟ್ ಮಾಡಿದ್ದಾನೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿತ್ತು.ಕೊಲೆ ಘಟನೆ ಬೆನ್ನಲ್ಲಿಯೇ ನಟ ದರ್ಶನ್‌ನಿಂದ 30 ಲಕ್ಷ ರೂ. ಹಣವನ್ನು ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದರು. ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ A8- ರವಿ, A15-ಕಾರ್ತಿಕ್, A16- ಕೇಶವ ಮೂರ್ತಿ A17-ನಿಖಿಲ್ ನಾಯಕ್ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಲೆ ಕೇಸಿನಲ್ಲಿ ಮೊದಲು ಕಾರ್ತೀಕ್, ಕೇಶವ್ ಹಾಗೂ ನಿಖಿಲ್ ಮೊದಲು ಪೊಲೀಸರ ಮುಂದೆ…
ಬೆಂಗಳೂರು : ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಭೀಕರವಾಗಿ ಕೊಲೆ ಮಾಡಿ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ. ಹೌದು ಚಾಕುವಿನಿಂದ ಇರಿದು ಆಂಧ್ರಪ್ರದೇಶದ ಮೂಲದ ಪ್ರಿಯತಮೆ ಹೇಮಾವತಿ (35) ಎನ್ನುವವಳನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ವೇಣು ಎನ್ನುವ ವ್ಯಕ್ತಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ನಾಲ್ಕು ತಿಂಗಳ ಹಿಂದೆ ವೇಣು ಹೇಮಾವತಿಯನ್ನು ಹೊಸಕೋಟೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಇರಿಸಿದ್ದ ಎನ್ನಲಾಗಿದೆ. ಹೇಮಾವತಿ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡಿಕೊಂಡು ಒಂಟಿಯಾಗಿದ್ದಳು. ಆಗಾಗ ವೇಣು ಹೇಮಾವತಿ ಮನೆಗೆ ಬಂದು ಇದ್ದು ಹೋಗುತ್ತಿದ್ದ. ಆದರೆ ನಿನ್ನೆ ಮನೆಗೆ ಬಂದಿದ್ದ ವೇಣು ಕೊಲೆ ಮಾಡಿ ಮುಂಜಾನೆ ಅಲ್ಲಿಂದ ಪರಾರಿಯಾಗಿದ್ದಾನೆ.ಚಿಂತಾಮಣಿಗೆ ಹೋಗಿ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಕೂಡ ಯತಿದ್ದಾನೆ ಅಸ್ವಸ್ಥ ವೇಣುನನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸಕೋಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ : ರಾಜ್ಯದ ಬಡ ಜನತೆಯ ಒಳಿತಿಗಾಗಿ ಗ್ಯಾರಂಟಿ ನೀಡುತ್ತಿದ್ದೇವೆ. ಹೊರತು ರಾಜಕೀಯ ಲಾಭಕ್ಕಾಗಿ ಅಲ್ಲ. ಇನ್ನು ಐದು ವರ್ಷಗಳ ಕಾಲ ನಾವು ಯಾವುದೇ ಗ್ಯಾರಂಟಿಯ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ.ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ 5 ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿರುವ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು. ನರೇಂದ್ರ ಮೋದಿ ಬರೀ ಸುಳ್ಳು ಹೇಳುತ್ತಾ ಬಂದಿದ್ದಾರೆ. ಈಗ ಚುನಾವಣೆಯಲ್ಲಿ ಮತ್ತೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯವರ ಸುಳ್ಳು ಭರವಸೆಗಳಿಗೆ ಮೋಸ ಹೋಗಬಾರದು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕಲ್ಯಾಣಕ್ಕಾಗಿ 5 ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ಬಡವರು, ದೀನ ದಲಿತರು, ಹೆಣ್ಣುಮಕ್ಕಳು ನೆಮ್ಮದಿಯ ಬದುಕು ಕಂಡುಕೊಂಡಿದ್ದಾರೆ ಎಂದರು.
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಆದೇಶವನ್ನು ಕಾಯ್ದಿರಿಸಿದ್ದು, ಜೂನ್ 26ಕ್ಕೆ ಜಾಮೀನು ಅರ್ಜಿ ಕುರಿತು ಆದೇಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಹೌದು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದರು. ಅರ್ಜುನ ವಿಚಾರಿಸಿದ ನ್ಯಾಯಾಲಯವು ಈ ಒಂದು ಅರ್ಜಿಯ ಆದೇಶವನ್ನು ಜೂನ್ 26ಕ್ಕೆ ಆದೇಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ…
ರಾಮನಗರ : ಚನ್ನಪಟ್ಟಣ ಉಪಚುನಾವಣೆಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧ ಪಟ್ಟಂತೆ ಇಂದು ಚನ್ನಪಟ್ಟಣದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಒಂದು ಉಪಚುನಾವಣೆಗೆ ಈಗಾಗಲೇ ಕಮಿಟಿ ಒಂದನ್ನು ರಚನೆ ಮಾಡಿದ್ದೇವೆ ಎಂದು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಗಾಗಿ ಈಗಾಗಲೇ ಕಮಿಟಿಯನ್ನು ರಚಿಸಿದ್ದೇವೆ. ಕಮಿಟಿಯಲ್ಲಿ ಸಾಕಷ್ಟು ಸಚಿವರು ಶಾಸಕರು ಇದ್ದಾರೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರೂ ಸೇರಿ ತೀರ್ಮಾನಿಸುತ್ತಾರೆ ಎಂದು ತಿಳಿಸಿದರು. ಈ ಒಂದು ಕಮಿಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಸೇರಿದಂತೆ ಹಲವರು ಚರ್ಚಿಸಿ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳುತ್ತೇವೆ. ನನ್ನ ಸ್ಪರ್ಧೆ ಬಗ್ಗೆಯೂ ಕಮಿಟಿ ತೀರ್ಮಾನ ಮಾಡುತ್ತೆ.ಸೂಕ್ತ ಅಭ್ಯರ್ಥಿ ಬಗ್ಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಚನ್ನಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.
ತುಮಕೂರು : ಕಳ್ಳತನದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಬಳಿ ನಡೆದಿದೆ. ಕಳ್ಳತನದ ಆರೋಪಿ ರಿಜ್ವಾನ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಿದ್ದಾರೆ.ಈ ವೇಳೆ ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬವನಿಗೆ ಗುಂಡೆಟ್ಟು ತಗುಲಿದೆ. ಹಲವು ಕಳ್ಳತನ ಕೇಸ್ಗಳಲ್ಲಿ ಆರೋಪಿ ಬೇಕಾಗಿದ್ದ ಎನ್ನಲಾಗಿದೆ.ಈ ವೇಳೆ ಬಂಧಿಸಲು ತೆರಳಿದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಮಧುಗಿರಿ ಸಿಪಿಐ ಹನುಮಂತರಾಯಪ್ಪರಿಂದ ರಿಜ್ವಾನ್ ಮೇಲೆ ರೈಡಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡೇಟು ತಗುಲಿದೆ. ಈಜಿಹಳ್ಳಿ ಬಳಿ ಆರೋಪಿ ರಿಜ್ವನ್ ನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಆರೋಪಿ ರಿಜ್ವಾನ್ ಮೇಲೆ ಮಧುಗಿರಿ ಸಿಪಿಐ ಫೈರಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮಧುಗಿರಿ ಸಿಪಿಐ ಹನುಮಂತರಾಯಪ್ಪರಿಂದ ಆರೋಪಿ ರಿಜ್ವಾನ್ ಕಾಲಿಗೆ ಗುಂಡೇಟು ಬಿದ್ದಿದೆ.













