Author: kannadanewsnow05

ಬೆಳಗಾವಿ : ವೀರಭದ್ರ ದೇವರ ವಿಚಾರಗಳ ರಕ್ಷಣೆ ಜವಾಬ್ದಾರಿ ನಮ್ಮ ಮೇಲಿದೆ. ದೇವರು ಬೇಕು ಇಲ್ಲವಾದರೆ ಬದುಕಿಗೆ ಅರ್ಥ ಕೊಡಲು ಸಾಧ್ಯವಿಲ್ಲ. ಈ ದೇಶಕ್ಕೆ ಶಿವನೇ ದೊಡ್ಡಮೂಲ. ಭಕ್ತರಿಗೂ ಭಗವಂತನಿಗೆ ವ್ಯವಹಾರ ಮಾಡುವ ಸ್ಥಳ ದೇವಸ್ಥಾನ. ದೇವರು ವರನು ಕೊಡಲ್ಲ ಶಾಪನು ಕೊಡಲ್ಲ ಆದರೆ ಅವಕಾಶ ಕೊಡುತ್ತಾನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ಧರ್ಮೋತ್ಥಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಮಿತ್ರ ಗಣೇಶ್ ಈ ಭಾಗದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಪ್ರಭಾಕರ ಕೋರೆ ದೊಡ್ಡ ಕ್ರಾಂತಿ ಮಾಡಿದ್ದಾರೆ. ನಾನು ಡಿಸಿಎಂ ಅಂತ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ಶ್ರೀಗಳು ಮಾಡುತ್ತಿರುವ ಕೆಲಸದ ಬಗ್ಗೆ ನಾನು ತಿಳಿದುಕೊಂಡಿದ್ದೇನೆ. ನಾನು ವೀರಗಂಗಾಧರ ಅಜ್ಜನ ಪರಮಶಿಷ್ಯ. ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವದಲ್ಲಿ ಶಾಂತಿ. ವೀರಗಂಗಾಧರ ಶ್ರೀಗಳು ಸಂದೇಶ ಕೊಟ್ಟಿದ್ದಾರೆ. ನಾವೆಲ್ಲರೂ ಅದೇ ಮಾರ್ಗದಲ್ಲಿ ಹೋಗುತ್ತಿದ್ದೇವೆ. ಪಂಚಪೀಠದ ಶ್ರೀಗಳು ದೇಶಕ್ಕೆ ಶಕ್ತಿ ಮಾರ್ಗದರ್ಶನ…

Read More

ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ಸದ್ಯ ನಾಯಕತ್ವ ಬದಲಾವಣೆ ಚರ್ಚೆ ಮಧ್ಯ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ೧೭ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಮಧ್ಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದು ಭವಿಷ್ಯ ನುಡಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನಲ್ಲಿ ದೇವಸ್ಥಾನದ ಧರ್ಮಸ್ಥಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ಅವರನ್ನು ನಾನು ವೈಯಕ್ತಿಕವಾಗಿ ಇಷ್ಟಪಡುತ್ತೇನೆ ಅವರು ಡಿಸಿಎಂ ಆಗಿದ್ದಾರೆ ಅಥವಾ ಮುಂದೆ ಸಿಎಂ ಆಗುತ್ತಾರೆ ಅಂತ ಅಲ್ಲ ಧರ್ಮದ ಗುರುಗಳನ್ನು ಕೊಂಡರೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಾರೆ ಆ ಕಾರಣಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಷ್ಟಪಡುತ್ತೇನೆ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶ್ರೀಗಳು ಹೇಳಿಕೆ ನೀಡಿದರು.

Read More

ಕುಂದಾಪುರ: ಇಂದಿನ ಕಾಲದಲ್ಲಿ ರಸ್ತೆಯಲ್ಲಿ ಒಂದು ನೂರು ರೂಪಾಯಿ ನೋಟು ಬಿದ್ದಿದ್ದರೆ ಅದನ್ನು ಎತ್ತಿಕೊಂಡು ಹೋಗುವವರೇ ಹೆಚ್ಚು. ಇನ್ನು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಸರ ಸಿಕ್ಕರೆ ಮರಳಿಸುವವರು ಎಷ್ಟು ಜನ? ಆದರೆ, ಕುಂದಾಪುರದ ವಿಶಾಲ್ ಮೋಟಾರ್ಸ್ ಬಸ್ಸಿನ ನಿರ್ವಾಹಕರೊಬ್ಬರು ತಮಗೆ ಸಿಕ್ಕ ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಮರಳಿಸುವ ಮೂಲಕ ಇಡೀ ಸಮಾಜವೇ ತಲೆಬಾಗುವಂತಹ ಕೆಲಸ ಮಾಡಿದ್ದಾರೆ. ಘಟನೆಯ ವಿವರ: ವಿಶಾಲ್ ಮೋಟಾರ್ಸ್ ಬಸ್ಸಿನಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಜೇಶ್ ಹೆಗ್ಡೆ ಅವರಿಗೆ ಬಸ್ಸಿನ ಆಸನವೊಂದರ ಬಳಿ ಚಿನ್ನದ ಸರವೊಂದು ಬಿದ್ದಿರುವುದು ಕಂಡುಬಂದಿದೆ. ಸುಮಾರು 3 ಲಕ್ಷ ರೂಪಾಯಿ ಮೌಲ್ಯದ ಈ ಆಭರಣವನ್ನು ಕಂಡ ಕೂಡಲೇ ಅವರು ಯಾವುದೇ ಆಮಿಷಕ್ಕೆ ಒಳಗಾಗದೆ, ಅದನ್ನು ಸುರಕ್ಷಿತವಾಗಿ ತಮ್ಮ ವಶದಲ್ಲಿಟ್ಟುಕೊಂಡರು. ವಾಟ್ಸಾಪ್ ಮೂಲಕ ವಾರಸುದಾರರ ಪತ್ತೆ: ಬರಿ ಸರವನ್ನು ಎತ್ತಿಟ್ಟುಕೊಳ್ಳುವುದಷ್ಟೇ ಅಲ್ಲದೆ, ಅದರ ವಾರಸುದಾರರನ್ನು ಹುಡುಕುವಲ್ಲಿ ರಾಜೇಶ್ ಅವರು ತಕ್ಷಣ ಕಾರ್ಯಪ್ರವೃತ್ತರಾದರು. ಡಿಜಿಟಲ್ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡ ಅವರು, ವಿವಿಧ…

Read More

ಹೈದ್ರಾಬಾದ್ : ತೆಲಂಗಾಣದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನಾಗರ್ಕರ್ನೂಲ್‌ನಲ್ಲಿ ಪರೀಕ್ಷೆ ಬರೆಯಲು ಶಾಲೆಗೆ ಬಂದಿದ್ದ 16 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯರ ವಸತಿ ಶಾಲೆಯ ವಿದ್ಯಾರ್ಥಿನಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾದಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಈ ಬಗ್ಗೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾಳೆ. ನಂತರ ಆಕೆಯ ತಾಯಿ ಅವಳನ್ನು ಪಟ್ಟಣದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ವೈದ್ಯರು ಸ್ಕ್ಯಾನ್ ಮಾಡಿಸಲು ಸೂಚಿಸಿದ್ದರು. ಸ್ಕ್ಯಾನಿಂಗ್ ಕೇಂದ್ರದಲ್ಲಿ ಕಾಯುತ್ತಿದ್ದಾಗ, ಬಾಲಕಿ ಶೌಚಾಲಯಕ್ಕೆ ತೆರಳಿದ್ದಳು. ಅಲ್ಲಿ ಅವಳು ಮಗುವಿಗೆ ಜನ್ಮ ನೀಡಿದ್ದಾಳೆ. ಅಲ್ಲಿನ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕಿ ಮತ್ತು ನವಜಾತ ಶಿಶುವನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ತಾಯಿ ಮತ್ತು ಮಗು ಇಬ್ಬರೂ ಸುರಕ್ಷಿತರಾಗಿದ್ದು ಆರೈಕೆಯಲ್ಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Read More

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ‌ ಮಾಹಿತಿ ನೀಡಿರುವ ಅವರು, ಉದ್ಯೋಗ ಮೇಳಕ್ಕೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಚಾಲನೆ ನೀಡಲಿದ್ದಾರೆ. ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯೋಗ…

Read More

ಮಂಗಳೂರು : ಮಂಗಳೂರಿನ ನೇತ್ರಾವತಿ ನದಿ ತೀರದಲ್ಲಿ ನೂರಾರು ಆಧಾರ್ ಕಾರ್ಡ್‌ಗಳು ಪತ್ತೆಯಾಗಿವೆ. ಇದರಿಂದ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದು, ಅಂಚೆ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣವೆಂದು ಆರೋಪಿಸಿದ್ದಾರೆ. ಆಧಾರ್ ಕಾರ್ಡ್‌ಗಳು ತಮಗೆ ತಲುಪದ ಕಾರಣ ಅನೇಕರು ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯು.ಟಿ. ಖಾದರ್ ಅವರು ಈ ಘಟನೆಯ ಸಮಗ್ರ ತನಿಖೆಗೆ ಅದೇಶಿಸಿದ್ದಾರೆ. ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಮಾರ್ಚ್​​ 03, 2026ರಂದು ಅಪಾರ ಪ್ರಮಾಣದ ಆಧಾರ್ ಕಾರ್ಡ್‌ಗಳು ನದಿ ತಟದಲ್ಲಿರುವುದನ್ನು ಕಂಡು ಸಾರ್ವಜನಿಕರು ಸ್ಥಳೀಯ ಪುದು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕನಾದ ನನಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಬಂದಿದೆ. ಆಧಾರ್ ಕಾರ್ಡ್‌ಗಳು ಇಷ್ಟೊಂದು ಪ್ರಮಾಣದಲ್ಲಿ ನದಿ ತಟದಲ್ಲಿ ಪತ್ತೆಯಾಗಲು ಕಾರಣವೇನು? ಮತ್ತು ಇದಕ್ಕೆ ಕಾರಣರಾದವರು ಯಾರೆಂಬುದನ್ನು ತನಿಖೆ ನಡೆಸಿ ಪತ್ತೆ ಹಚ್ಚಿ ತಮ್ಮ ಇಲಾಖೆಯ ಮುಖಾಂತರ ಕೂಡಲೇ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಯು.ಐ.ಡಿ.ಎ.ಐ ಯೋಜನಾ ವ್ಯವಸ್ಥಾಪಕರಿಗೆ ವಿಧಾನ…

Read More

ಕಲಬುರ್ಗಿ : ಹೋಳಿ ಹುಣ್ಣಿಮೆಯಂದು ಸಾಮಾನ್ಯವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅಣಕು ಶವಯಾತ್ರೆ ನಡೆಸಿ ಮನೋರಂಜನ ರೀತಿಯಲ್ಲಿ ಹೋಳಿ ಹುಣ್ಣಿಮೆಯನ್ನು ಆಚರಿಸಲಾಗುತ್ತದೆ. ಆದರೆ ಕಲ್ಬುರ್ಗಿಯಲ್ಲಿ ಕೆಲ ಯುವಕರು ಬುರ್ಖಾ ರೀತಿಯ ವೇಷ ಧರಿಸಿ ಅಣುಕು ಶವ ಯಾತ್ರೆ ಮಾಡಿದರಿಂದ ಐವರು ಯುವಕರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ. ಹೌದು ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ನಿಮಿತ್ತ ನಡೆದ ‘ಅಣಕು ಶವಯಾತ್ರೆ’ಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ, ಐವರು ಯುವಕರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಕಾಮದಹನದ ನಂತರ ದುಷ್ಟ ಸಂಹಾರದ ಪ್ರತೀಕವಾಗಿ ಅಣಕು ಶವಯಾತ್ರೆ ನಡೆಸುವ ಸಂಪ್ರದಾಯವಿದೆ. ಈ ವೇಳೆ ಕೆಲವರು ಮಹಿಳೆಯರ ವೇಷ ಧರಿಸಿ ಅಳುವಂತೆ ನಟಿಸಿ ಹಾಸ್ಯ ಪ್ರದರ್ಶನ ನೀಡುತ್ತಾರೆ. ಆದರೆ, ನಿಂಬರ್ಗಾ ಗ್ರಾಮದಲ್ಲಿ ನಡೆದ ಈ ಬಾರಿಯ ಆಚರಣೆಯಲ್ಲಿ, ಯುವಕನೊಬ್ಬ ಮುಸ್ಲಿಂ ಸಮುದಾಯದ ಮಹಿಳೆಯರು ಧರಿಸುವ ‘ಬುರ್ಕಾ’ ಮಾದರಿಯ ಬಟ್ಟೆ ಧರಿಸಿ ಶವಯಾತ್ರೆಯ ಹಿಂದೆ…

Read More

ಬೆಂಗಳೂರು : ಬೆಂಗಳೂರಿನ *ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIA)* ಇತ್ತೀಚೆಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಏರ್‌ಪೋರ್ಟ್ ಕೌನ್ಸಿಲ್ ಇಂಟರ್‌ನ್ಯಾಷನಲ್ (ACI) ನೀಡುವ *’ಅತ್ಯುತ್ತಮ ಆಗಮಸ್ಥಾನ’ (Best Airport at Arrivals Globally)* ಪ್ರಶಸ್ತಿಯನ್ನು ಸತತ *4ನೇ ಬಾರಿಗೆ* ಮುಡಿಗೇರಿಸಿಕೊಂಡಿದೆ. ಈ ಕುರಿತಾದ ಸಮಗ್ರ ಮಾಹಿತಿ ಇಲ್ಲಿದೆ: ಪ್ರಶಸ್ತಿಯ ವಿವರಗಳು * *ಪ್ರಶಸ್ತಿ ನೀಡಿದ ಸಂಸ್ಥೆ:* ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್ (Airports Council International – ACI). * *ವರ್ಗ:* 2025ನೇ ಸಾಲಿನ ಏರ್‌ಪೋರ್ಟ್ ಸರ್ವಿಸ್ ಕ್ವಾಲಿಟಿ (ASQ) ಪ್ರಶಸ್ತಿಗಳಲ್ಲಿ “ಜಾಗತಿಕವಾಗಿ ಆಗಮನದ ಸಮಯದಲ್ಲಿ ಅತ್ಯುತ್ತಮ ವಿಮಾನ ನಿಲ್ದಾಣ”. * *ವಿಶೇಷತೆ:* ಇದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ದೊರೆಯುತ್ತಿರುವ ಸತತ 4ನೇ ಗೆಲುವಾಗಿದೆ (2021, 2022, 2023, ಮತ್ತು 2024-25ರ ಅವಧಿ). ಆಯ್ಕೆಗೆ ಪ್ರಮುಖ ಕಾರಣಗಳು ಈ ಪ್ರಶಸ್ತಿಯನ್ನು ಕೇವಲ ಮೂಲಸೌಕರ್ಯ ನೋಡಿ ನೀಡುವುದಿಲ್ಲ, ಬದಲಿಗೆ ನೇರವಾಗಿ *ಪ್ರಯಾಣಿಕರ ಪ್ರತಿಕ್ರಿಯೆ (Feedback)* ಆಧರಿಸಿ ನೀಡಲಾಗುತ್ತದೆ. ಬೆಂಗಳೂರು ಏರ್‌ಪೋರ್ಟ್ ಈ…

Read More

ಬೆಂಗಳೂರು : ಗಲ್ಫ್ ಯುದ್ಧದ ನಡುವೆ ಇದೀಗ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಹಾಗಾಗಿ ಅಡುಗೆ ಎಣ್ಣೆ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆ ಆಗಲಿದೆ ಎಂದು ವರ್ತಕರು ಹೇಳಿದ್ದಾರೆ. ಅಡುಗೆ ಎಣ್ಣೆಯದರ ಪ್ರತಿ ಲೀಟರ್ ಗೆ ಐದು ರೂಪಾಯಿ ಏರಿಕೆ ಆಗುವ ಸಾಧ್ಯತೆಯಿದ್ದು ಬೇಡಿಕೆಗೆ ತಕ್ಕಂತೆ ಅಡುಗೆ ಎಣ್ಣೆ ಸರಬರಾಜು ಆಗುತ್ತಿಲ್ಲ ಅಡುಗೆ ಎಣ್ಣೆ ಬಳಿಯಲ್ಲಿ ಮತ್ತಷ್ಟು ಏರಿಕೆ ಆಗಬಹುದು ಎಂದು ತರಗುಪೇಟೆ ಅಡುಗೆ ಎಣ್ಣೆ ವರ್ತಕ ಸತೀಶ್ ಈ ಒಂದು ಹೇಳಿಕೆ ನೀಡಿದ್ದಾರೆ. ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ: ಬೆಲೆ ಏರಿಕೆಗೆ ಪ್ರಮುಖ ಕಾರಣಗಳು ಪೂರೈಕೆಯಲ್ಲಿ ವ್ಯತ್ಯಯ: ಭಾರತವು ತನ್ನ ಒಟ್ಟು ಬಳಕೆಯ ಬಹುಪಾಲು ಅಡುಗೆ ಎಣ್ಣೆಯನ್ನು (ವಿಶೇಷವಾಗಿ ಸೂರ್ಯಕಾಂತಿ ಮತ್ತು ಪಾಮ್ ಆಯಿಲ್) ವಿದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ಗಲ್ಫ್ ಪ್ರದೇಶದಲ್ಲಿನ ಅಸ್ಥಿರತೆಯಿಂದ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗುವ ಆತಂಕವಿದೆ. ಆಮದು ಸುಂಕದ ಪ್ರಭಾವ: ಇತ್ತೀಚೆಗೆ ಕೇಂದ್ರ ಸರ್ಕಾರವು…

Read More

ಬೆಂಗಳೂರು : ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರ ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಹೌದು ಹಿಂದೂ ಸಂಘಟನೆ ಕಾರ್ಯಕರ್ತ ತೇಜಸ್ ಗೌಡ ಶಾಸಕ ಎನ್‌ ಹ್ಯಾರಿಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹಾಗೂ ಡಿಜಿ ಹಾಗೂ ಐಜಿಪಿಗೆ ದೂರು ಸಲ್ಲಿಸಿದ್ದಾರೆ. ಸದ್ಯ ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದ್ದು,ಕಾಂಗ್ರೆಸ್ ಶಾಸಕ ಎನ್‌ ಹ್ಯಾರಿಸ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆ ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಲಾಗಿದೆ ಎಂಬ ಆರೋಪವಿದೆ. ಯಾವುದೇ ಪ್ರತಿಭಟನೆ, ಹೋರಾಟ, ಧರಣಿ ನಡೆಸುವುದಾದರೂ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಯೇ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶನವಿದೆ. ಆದರೆ ಕಾಂಗ್ರೆಸ್ ಶಾಸಕ ಹ್ಯಾರಿಸ್ ಅವರು ಹೈಕೋರ್ಟ್ ನಿರ್ದೇಶನ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಹಿಂದೂ ಕಾರ್ಯಕರ್ತ ತೇಜಸ್ ಗೌಡ ದೂರಿನಲ್ಲಿ…

Read More