Author: kannadanewsnow05

ಬೆಳಗಾವಿ : ಅಕ್ಕನ ಮೇಲೆ ಕಣ್ಣು ಹಾಕಿದ ದೇವಸ್ಥಾನದ ಪೂಜಾರಿಯನ್ನು ಅಪ್ರಾಪ್ತ ಬಾಲಕ ಒಬ್ಬ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನೆಡೆದಿದೆ.  ರಾಜಾಪುರ ಗ್ರಾಮದ ಮಂಜುನಾಥ್ ಸುಭಾಷ್ ಎಣ್ಣಿ (23) ಭೀಕರವಾಗಿ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. 17 ವರ್ಷದ ಅಪ್ರಾಪ್ತ ಬಾಲಕನಿಂದ ಮಂಜುನಾಥ್ ಎಣ್ಣಿ ಕೊಲೆಯಾಗಿದೆ. ಹಲವು ವರ್ಷಗಳಿಂದ ಮಂಜುನಾಥ್ ಅಪ್ರಾಪ್ತೆಯ  ಬೆನ್ನು ಬಿದ್ದಿದ್ದ. ಅಕ್ಕನ ತಂಟೆಗೆ ಬರದಂತೆ ಬಾಲಕ ಕೆಲವು ಬಾರಿ ಎಚ್ಚರಿಕೆ ಸಹ ನೀಡಿದ್ದ ಎನ್ನಲಾಗಿದೆ. ಆದರೂ ಪೂಜಾರಿ ಮಂಜುನಾಥ ಅಪ್ರಾಪ್ತಿ ತಂಟೆಗೆ ಹೋಗುತ್ತಿದ್ದ. ಅಕ್ಕನ ಮೇಲೆ ಕಣ್ಣು ಹಾಕಿದವನನ್ನು ಇದೀಗ ಬಾಲಕ ಭೀಕರವಾಗಿ ಕೊಲೆ ಮಾಡಿದ್ದಾನೆ. ಚೂನಮ್ಮದೇವಿ ದೇವಸ್ಥಾನದ ಪೂಜಾರಿಯಾಗಿದ್ದ ಮಂಜುನಾಥ್, ದೇವಸ್ಥಾನದಲ್ಲಿ ಯಾರು ಇಲ್ಲದನ್ನು ನೋಡಿ ಮಂಜುನಾಥನನ್ನು ಬಾಲಕ ಕೊಲೆ ಮಾಡಿದ್ದಾನೆ. ಪ್ರಕರಣ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಮಹಿಳಾ ಅಧಿಕಾರಿಗಳಿಗೆ ಪುಂಡರು ಬೆದರಿಕೆ ಹಾಕಿರುವ ಘಟನೆಗಳು ಇತ್ತೀಚಿಗೆ ನಡೆದಿವೆ.  ಆದರೆ ಇದೀಗ ಅಕ್ರಮ ಮರಳು ದಂಧೆಕೋರರು ಅಕ್ರಮ ಮರಳುಗಾರಿಕೆ ತಡೆಯದಂತೆ ನನ್ನ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ ಅಂತ ರಾಯಚೂರಿನ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್‌ ಆಕ್ರೋಶ ಹೊರಹಾಕಿದ್ದಾರೆ. ಹೌದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನ ಭೇಟಿಯಾದ ಶಾಸಕಿ ಕರೆಮ್ಮ ಜಿ ನಾಯಕ್ ಅಕ್ರಮ ಮರಳು ದಂಧೆಕೋರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ರಾಯಚೂರು ಎಸ್.ಪಿ ಗೆ ದೂರು ನೀಡಿ ಬಳಿಕ ಮಾತನಾಡಿದ ಕರೆಮ್ಮ ನಾಯಕ್ ದೇವದುರ್ಗ ತಾಲೂಕಿನಲ್ಲಿ ಯಾವುದೇ ಟೆಂಡರ್ ಇಲ್ಲದೇ ಲಾರಿಗಳಲ್ಲಿ ಅಕ್ರಮ ಮರಳು ಸಾಗಣೆ ನಡೆದಿದೆ. ನಾನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುವವರ ಪರ ಇದ್ದೇನೆ, ಲಾರಿಯವರು ಟ್ರ್ಯಾಕ್ಟರ್‌ನವರನ್ನ ಎತ್ತಿಕಟ್ಟುತ್ತಿದ್ದಾರೆ ಎಂದರು. ಲಾರಿ ಇಟ್ಟು ಮರಳುಗಾರಿಕೆ ಮಾಡುವ ಶ್ರೀನಿವಾಸ ನಾಯಕ್ ಇತರರು ಬೆದರಿಸಲು ಬಂದಿದ್ದರು. ಪೊಲೀಸ್ ಕ್ವಾಟ್ರಸ್‌ನಲ್ಲಿರೋ ನನ್ನ ಮನೆಗೆ ಬಂದು ಬೆದರಿಸುತ್ತಾರೆ. ಕಾನೂನು ಸುವ್ಯವಸ್ಥೆ ಎಲ್ಲಿದೆ? ಸರ್ಕಾರ ಕ್ರಮ ಯಾಕೆ…

Read More

ಪೆದ್ದ “ಯಂಕನ” ಮುಗ್ಧ ಭಕ್ತಿ  ಒಂದು ಗ್ರಾಮದಲ್ಲಿ  ವೆಂಕಣ್ಣ ಎಂಬ ಯುವಕನಿದ್ದ.  ಬರ ಬರುತ್ತಾ ಅವನ ಹೆಸರು ಗ್ರಾಮದವರ ಬಾಯಲ್ಲಿ “ಯಂಕ” ಆಯಿತು. ಅನಾಥನಾಗಿ ಬೆಳೆದವನು. ಶಾಲೆ  ಹತ್ತಿದವನಲ್ಲ,  ಹೀಗೆ ಮಾಡು ಎಂದು ಹೇಳುವವರಿಲ್ಲ. ಊರವರ ಜಮೀನಿನಲ್ಲಿ ಕೆಲಸ ಮಾಡಿ, ಊರವರು ಕೊಟ್ಟಿದ್ದನ್ನು ತಿಂದುಕೊಂಡು ಆ ಮಕ್ಕಳ ಜೊತೆ ಬೆಳೆದು, ತಿಳಿದುಕೊಂಡಿದ್ದು  ಎಷ್ಟೋ ಅಷ್ಟೇ. ಅವನಿಗೆ  ಬಂಧು-ಬಳಗ ಹಿಂದಿಲ್ಲ -ಮುಂದಿಲ್ಲ. ಅವನ ಒಳ್ಳೆತನ ನೋಡಿ ಯಾರೋ  ಸಾಹುಕಾರ ನೊಬ್ಬ ಅವನ  ಸ್ವಂತಕ್ಕೆ ಸ್ವಲ್ಪ ಜಮೀನು ಕೊಟ್ಟರು. ಅಂದಿನಿಂದ ಬೇರೆಯವರ ಜಮೀನಿನಲ್ಲಿ ಕೆಲಸ ಮಾಡದೆ ತನ್ನ ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ. ಅವನು ಮುಗ್ಧ- ಪೆದ್ದ- ಒಳ್ಳೆಯವನು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ…

Read More

ಬೆಂಗಳೂರು : ರಾಜ್ಯದಲ್ಲಿ ಇಡೀ ಪೊಲೀಸ್ ಇಲಾಖೆಯ ತಲಿತಗ್ಗಿಸುವಂತಹ ಘಟನೆ  ನಡೆದಿದ್ದು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ, ರಾಜ್ಯ ಸರ್ಕಾರ ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿದೆ.ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್, ಪ್ರಕರಣದ ಕುರಿತು ತನಿಖೆ ನಡೆಸಿ ವರದಿ ಬಂದ ಬಳಿಕ ಆರೋಪ ಸಾಬೀತಾದರೆ ಅವರನ್ನು ವಜಾ ಮಾಡಲಾಗುತ್ತೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಕೇಸ್ ಸಂಬಂಧಪಟ್ಟಂತೆ ಅವರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಪ್ರಕರಣದ ವಿಚಾರ ತಿಳಿದು ಬೇಸರ ಆಗಿದೆ. ಪ್ರಕರಣದ ಸಂಬಂಧ ಪೂರ್ಣ ಪ್ರಮಾಣದ ತನಿಖೆ ನಡೆಸಲಾಗುತ್ತದೆ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಆರೋಪ ಸಾಬೀತಾದರೆ ವಜಾ ಕೂಡ ಆಗಬಹುದು ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು

Read More

ಬೆಂಗಳೂರು : ರಾಜ್ಯದ ಪಿಯು ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಇದೀಗ ಬಿಗ್ ಶಾಕ್ ಕೊಟ್ಟಿದೆ. ಸ್ಟಡಿ ಹಾಲಿಡೇಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಬ್ರೇಕ್ ಹಾಕಿದೆ. ಪಿಯು ಫಲಿತಾಂಶದ ಸುಧಾರಣೆಗೆ ಇಲಾಖೆ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು ಗ್ರೂಪ್ ಸ್ಟಡಿ ಮಾಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು ಕಾಲೇಜಿನಲ್ಲಿಯೇ ವಿದ್ಯಾರ್ಥಿಗಳನ್ನು ಮುಖ್ಯ ಪರೀಕ್ಷೆಗೆ ತಯಾರಿ ಮಾಡಬೇಕು ಈ ಹಿನ್ನೆಲೆ ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಲು ಎಂದು ಶಿಕ್ಷಣ ಇಲಾಖೆ ನಿರ್ಧರಿಸಿದೆ.

Read More

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ನಾಲ್ಕೂವರೆ ಕೆಜಿ ಚಿನ್ನ ಕಳುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ಬಳ್ಳಾರಿ ಹಾಗೂ ತಿರುವನಂತಪುರದಲ್ಲಿ ದಾಳಿ ಮಾಡಿದ್ದಾರೆ. ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನ ಮತ್ತು ಟ್ರಸ್ಟಿ ನಿವಾಸದ ಮೇಲೂ ದಾಳಿ ಮಾಡಿದ್ದಾರೆ. ಬೆಳ್ಳಂ ಬೆಳಗ್ಗೆ ದಾಳಿ ಮಾಡಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿಯ ರೊದ್ದಂ ಜುವೆಲರಿ ಅಂಗಡಿ ಮೇಲು ಇಡೀ ದಾಳಿ ಮಾಡಿದೆ. ಬಳ್ಳಾರಿ ರೊದ್ದಂ ಚಿನ್ನದ ಅಂಗಡಿ ಮಾಲೀಕನಾಗಿರುವ  ಗೋವರ್ಧನ್, ಚಿನ್ನ ಖರೀದಿ ಆರೋಪದ ಅಡಿ ಈಗಾಗಲೇ ಗೋವರ್ಧನ್ ಅರೆಸ್ಟ್ ಆಗಿದ್ದಾರೆ. ಆರೋಪಿ ಉನ್ನಿಕೃಷ್ಣನನಿಂದ ಗೋವರ್ಧನ ಚಿನ್ನ ಖರೀದಿ ಮಾಡಿದ್ದರು. 470 ಗ್ರಾಂ ಕದ್ದ ಚಿನ್ನವನ್ನು ಖರೀದಿ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ ಇದೀಗ ಚಿನ್ನದ ಅಂಗಡಿಯ ಮೇಲೆ ಇಡೀ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಅಂಗಡಿಯಲ್ಲಿ ಇವರು ಹಿಡಿದಿ ಅಧಿಕಾರಿಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.

Read More

ಬೆಂಗಳೂರು : ಇತ್ತೀಚಿಗೆ ಶಿಡ್ಲಘಟ್ಟ ನಗರ ಸಭೆ ಆಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ ಪದಗಳಿಂದ ನಿಂದಿಸಿದ್ದು ಅಲ್ಲದೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ನಡೆದಿತ್ತು. ಅದಾದ ಬಳಿಕ ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ತಹಸಿಲ್ದಾರ್ ಗೆ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿತ್ತು. ಇದೀಗ ಬೆಂಗಳೂರಿನಲ್ಲಿ ಜಿಬಿಎ ಮಹಿಳಾ ಅಧಿಕಾರಿಗೆ ಗುತ್ತಿಗೆದಾರನೊಬ್ಬ ಅವಾಚ್ಯ ಪದಗಳಿಂದ ನಿಧಿಸಿದ್ದು ಅಲ್ಲದೆ ದಬ್ಬಾಳಿಕೆ ನಡೆಸಿರುವ ಘಟನೆ ವರದಿಯಾಗಿದೆ. ಹೌದು ಜಿಬಿಎ ಅಧಿಕಾರಿ ಮೇಲೇನೆ ಗುತ್ತಿಗೆದಾರ ದಬ್ಬಾಳಿಕೆ ನಡೆಸಿರುವ ಘಟನೆ ಇದೀಗ ಬೆಂಗಳೂರಿನಲ್ಲಿ ನಡೆದಿದೆ. ಟೆಂಡರ್ ಫೈಲ್ ಮೂವ್ ಮಾಡುವಂತೆ ಧಮ್ಕಿ ಹಾಕಿದ್ದಾನೆ. ನೆಲಮಂಗಲದ ಬಾಗಲಕುಂಟೆ ಜಿಬಿಎ ಕಚೇರಿಯಲ್ಲಿ ಈ ಒಂದು ಘಟನೆ ನಡೆದಿದೆ. ಬಾಗಲಕುಂಟೆ ಜಿಬಿಎ ಇಇ ಸಂಗೀತ ಅವರಿಗೆ ನಿಂದನೆ ಮಾಡಿದ್ದಾನೆ. ಗುತ್ತಿಗೆದಾರ ನಂದೀಶ್ ಎಂಬಾತನಿಂದ ದಬ್ಬಾಳಿಕೆ ನಡೆದಿದೆ. ದಾಖಲೆ ಪತ್ರಗಳನ್ನು ಹರಿದು ಆವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ. ಕಾಮಗಾರಿ ಕೆಲಸ ನಮಗೆ ಬರಬೇಕು ಅಂತ ಕಿರಿಕ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Read More

ಮೈಸೂರು : ಮೈಸೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಶಹಾಬಾಜ್ (26) ಎನ್ನುವ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.  ಉದಯಗಿರಿ ಬಿಡಿ ಕಾಲೋನಿ ಬಳಿ ಈ ಒಂದು ಕೊಲೆ ನಡೆದಿದೆ.  ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಯಾಗಿ ಶಹಬಾಜ್ ಕೊಲೆಯಾಗಿದ್ದಾನೆ. ಜುಬೆರ್ ಎಂಬಾತ ತನ್ನ ಸ್ನೇಹಿತರ ಜೊತೆಗೆ ಸೇರಿ ಕೊಲೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಕೊಲೆಯ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಅನುಕೂಲ ಆಗಲಿ ಎಂದು ಶಕ್ತಿ ಯೋಜನೆ ಜಾರಿಗೆ ತಂದಿದೆ. ಆದರೆ ಬೆಂಗಳೂರಿನಲ್ಲಿ ಬಿಎಂಟಿಸಿ ಕಂಡಕ್ಟರ್ ಇದನ್ನು ದುರುಪಯೋಗಪಡಿಸಿಕೊಂಡು ಸಾರಿಗೆ ಸಂಸ್ಥೆ ಅಳವಡಿಸಿದ ಸ್ಕ್ಯಾನರ್ ತೆಗೆದು ತಮ್ಮದೇ ಸ್ಕ್ಯಾನರ್ ಹಾಕಿ ಲಕ್ಷಾಂತರ ರೂಪಾಯಿ ನುಂಗಿ ನೀರು ಕುಡಿದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಹೌದು ರಾಜ್ಯದಲ್ಲಿ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದ್ದು, ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು  ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ. ಈ ಆರೋಪಗಳ ಕುರಿತು ತನಿಖೆ ನಡೆಸಿದಾಗ ತನಿಖೆ ವೇಳೆ ಕೂಡ, ಕಂಡಕ್ಟರ್​​ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.ಈ ಕಿಲಾಡಿ ಕಂಡಕ್ಟರ್​​ಗಳು ಡಿಪೋದಿಂದ ಬಸ್​ಗಳು…

Read More

ಬೆಂಗಳೂರು : ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ ಸ್ಥಳದಲ್ಲಿ ಇದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದರು ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Read More