Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ಇರಾನ್ ಇಸ್ರೇಲ್ ಯುದ್ಧದ ಸಂಘರ್ಷದ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿಯ ಸಾಮ್ರಾ ವಿಮಾನ ನಿಲ್ದಾಣವನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (DGCA) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಹೌದು ಇರಾನ್-ಇಸ್ರೇಕ್ ಸಂಘರ್ಷದ ಬಿಸಿ ಹಿಂದೂ ಮಹಾಸಾಗರಕ್ಕೂ ತಟ್ಟಿದ್ದಾಯ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ‘ರೆಡ್ ಝೋನ್’ ಎಂದು ಘೋಷಿಸಲಾಗಿದೆ. ಅಲ್ಲದೆ, ಏರ್ಪೋರ್ಟ್ ಸುತ್ತಲಿನ 8 ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ನಗರದ ಸಾಂಬ್ರಾ ವಿಮಾನ ನಿಲ್ದಾಣವನ್ನು ಹಾಗೂ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯನ್ನು ನಾಗರಿಕ ವಿಮಾನಯಾನ ಮಹಾ ನಿರ್ದೇಶಕರು (DGCA) ಈಗಾಗಲೇ ರೆಡ್ ಜೋನ್ ಎಂದು ಘೋಷಿಸಿರುತ್ತಾರೆ. ವಿಮಾನ ನಿಲ್ದಾಣದ ಸುತ್ತಮುತ್ತಲಿನ 08 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಪ್ರೋನ್ /ಅನ್ಮ್ಯಾನಡ್ ಏರಿಯಲ್ ವಾಹನ ಹಾರಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
ಬೆಂಗಳೂರು : ಮನೆ ಖಾಲಿ ಮಾಡುವ ವಿಚಾರಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿದ್ದ ಆರೋಪಿಯನ್ನು ವಿವೇಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇನಾಯತ್ ಪಾಷಾ ಎಂಬಾತನನ್ನು ಹತ್ಯೆಗೈದಿದ್ದ ಆರೋಪದಡಿ ಮಸ್ರೂರ್ ಅಹಮದ್ ಎಂಬವನನ್ನು ಬಂಧಿಸಲಾಗಿದೆ. ಮಾರ್ಚ್ 1ರಂದು ರಾತ್ರಿ ಆಸ್ಟಿನ್ ಟೌನ್‌ನಲ್ಲಿ ಇನಾಯತ್ ಪಾಷಾನ ಹತ್ಯೆಯಾಗಿತ್ತು. ಒಂಟಿಯಾಗಿದ್ದ ಇನಾಯತ್ ಪಾಷಾ, ಕಳೆದ 11 ವರ್ಷಗಳಿಂದ ಬೆಂಗಳೂರಿನ ವಿವೇಕ ನಗರದ ಆಸ್ಟಿನ್ ಟೌನ್‌ನಲ್ಲಿ ತನ್ನ ಮಾವನ ಮನೆಯಲ್ಲಿ ಇನಾಯತ್ ವಾಸವಾಗಿದ್ದ. ಇತ್ತೀಚಿಗೆ ಕೌಟುಂಬಿಕ ಕಲಹದಿಂದಾಗಿ ಇನಾಯತ್‌ಗೆ ಡಿವೋರ್ಸ್ ಆಗಿತ್ತು. ಬಳಿಕ ಒಂಟಿಯಾಗಿ ವಾಸವಿದ್ದ. ಆದರೆ ಈಗೀಗ ಮಾವ ಮಸೂರ್ ಅಹ್ಮದ್ ಮನೆ ಖಾಲಿ ಮಾಡುವಂತೆ ಇನಾಯತ್‌ಗೆ ಕಿರುಕುಳ ನೀಡೋಕೆ ಶುರು ಮಾಡಿದ್ದ. ಕಳೆದ ಭಾನುವಾರ ಮನೆಗೆ ಬಂದ ಇನಾಯತ್ ಮಾವ ಮಸೂರ್ ಅಹ್ಮದ್ ಇದೇ ವಿಚಾರಕ್ಕೆ ಗಲಾಟೆ ಮಾಡಿದ್ದಾರೆ. ಇಬ್ಬರು ಕೂಡ ಪರಸ್ಪರ ಜೋರು ಗಲಾಟೆ ಮಾಡ್ಕೊಂಡು, ಹೊಡೆದಾಡಿದ್ದಾರೆ. ಈ ಗಲಾಟೆಯಲ್ಲಿ ಇನಾಯತ್‌ಗೆ ಹಿಗ್ಗಾಮುಗ್ಗ ಥಳಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದ. ತಕ್ಷಣ…
ಬೆಂಗಳೂರು : ಕೆಪಿಎಸ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜ್ಯೋತಿ ಸ್ಪಷ್ಟಿಕರಣ ಕೊಟ್ಟಿದ್ದಾರೆ. ಪರೀಕ್ಷೆಯನ್ನು ಅತಂತ್ರ ಪಾರದರ್ಶಕವಾಗಿ ನಡೆಸಿದ್ದು ಫಲಿತಾಂಶವನ್ನು ಸಹ ಬಿಡುಗಡೆ ಮಾಡಲಾಗಿದೆ ಆಧಾರದ ಇಲ್ಲದೆ ಭ್ರಷ್ಟಾಚಾರ ಆರೋಪ ಮಾಡಲು ಸರಿಯಲ್ಲ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ವರದಿ ಕೇಳಿದ್ದಾರೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದೇವೆ. ಫಲಿತಾಂಶದ ಕುರಿತು ಹಲವಾರು ಜನ ತುಂಬಾ ತಪ್ಪುಗಳು ನಡೆದಿದೆ ಎಂದು ಹೇಳುತ್ತಿದ್ದಾರೆ. ಈ ಕುರಿತು ಮುಖ್ಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇವೆ. ಯಾವುದೇ ತಪ್ಪುಗಳು ಇದರಲ್ಲಿ ನಡೆದಿಲ್ಲ. ಮಾಹಿತಿಯನ್ನು ಅರ್ಥ ಮಾಡಿಕೊಳ್ಳುವರಲ್ಲಿ ಸ್ವಲ್ಪ ಗೊಂದಲಕ್ಕೆ ಈಡಾಗಿದ್ದಾರೆ. ಯಾವುದೇ ಮಾಹಿತಿ ಇದ್ದರೂ ಕೂಡ ಅವರು ನಮ್ಮನ್ನು ಕೇಳಬಹುದು ನಾವು ಅದನ್ನು ಪರಿಶೀಲನೆ ಮಾಡಿ ಅವರಿಗೆ ಉತ್ತರ ಕೊಡುತ್ತೇವೆ. ಒಂದೇ ಕೊಠಡಿಯಲ್ಲಿ ಇರುವವರು 15, 16 ಜನ ಆಯ್ಕೆ ಮಾಡಿದ್ದಾರೆ ಎನ್ನುವುದು ಅದನ್ನು ಕೂಡ ನಾವು ಆಂತರಿಕವಾಗಿ ಪರಿಶೀಲನೆ ಮಾಡುತ್ತಿದ್ದಾರೆ. ಒಂದೇ ಪರೀಕ್ಷೆ ಕೇಂದ್ರದಿಂದ…
ಬಿಹಾರ್ : ಬಿಹಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪೂರ್ವ ಚಂಪಾರಣ್ ಜಿಲ್ಲೆಯ ಗ್ರಾಮವೊಂದರಲ್ಲಿ ನೀರು ತುಂಬಿದ ಹೊಂಡದಲ್ಲಿ ಸ್ನಾನ ಮಾಡಲು ಹೋಗಿ ಐವರು ಬಾಲಕಿಯರು ಸೇರಿ ಆರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ದೀಕ್ಷಾ ಕುಮಾರಿ(12), ಆರಾಯಾಧ್ಯ ಕುಮಾರಿ(11), ಚೋಟಿ ಕುಮಾರಿ(8), ಸೋನಾಕ್ಷಿ ಕುಮಾರಿ(9), ಪ್ರಿಯಾ ಕುಮಾರಿ(7) ಹಾಗೂ ಪ್ರಿನ್ಸ್ ಕುಮಾರ್(11) ಎಂದು ಗುರುತಿಸಲಾಗಿದೆ.ಪೂರ್ವ ಚಂಪಾರಣ್ ಜಿಲ್ಲೆಯ ಕೇಸರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಲೋಹರ್ಗವ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ. ಸ್ನಾನ ಮಾಡಲು ಓರ್ವ ಬಾಲಕಿ ಮೊದಲು ಹೊಂಡಕ್ಕೆ ಇಳಿದು ಮುಳುಗಿದಾಗ, ಆಕೆಯನ್ನು ಕಾಪಾಡಲು ಉಳಿದ ಬಾಲಕಿಯರು ಸಹ ನೀರಿ ಹಾರಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಯುವತಿಗೆ 25 ಲಕ್ಷ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬನಶಂಕರಿ ಪೊಲೀಸರು ಡಾ. ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆಯೇಷಾ ಖಥುಮ್ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS 318(4), 318(2) ಸೇರಿ ಒಟ್ಟು 8 ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿದೆ. ದ್ವಿತೀಯ ಪಿಯುಸಿ ಮತ್ತು NLT ಪರೀಕ್ಷೆಗಳನ್ನು ಬರೆದಿದ್ದ ಯುವತಿ MBBSಗೆ ಸೇರಿಕೊಳ್ಳುವ ಬಗ್ಗೆ ಯೋಚಿಸಿ, ಒಳ್ಳೆಯ ಕಾಲೇಜಿನಲ್ಲಿ ಸೀಟ್ಗಾಗಿ ಪ್ರಯತ್ನಿಸುತ್ತಿದ್ದರು. ಈ ನಡುವೆ ಪರಿಚಯದ ಸೈಯದ್ ತಬ್ರೇಜ್ ಮೂಲಕ ಶಂಶೇರ್ ಬೇಗ್ ಎಂಬಾತನ ಪರಿಚಯವಾಗಿತ್ತು. ಈತ…
ಬೆಂಗಳೂರು : ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಉದ್ದೇಶದ ವಿದ್ಯುತ್ ದರಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದು ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ (MSMEs) ಮೇಲೆ ತೀವ್ರ ಪರಿಣಾಮ ಬೀರಿದೆ. ಹಾಗಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) 2025-26ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ವಿದ್ಯುತ್ ದರವನ್ನು ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹೌದು, ರಾಜ್ಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳ ವಿದ್ಯುತ್ ದರ ಏರಿಕೆಯಾಗಿರುವುದು ಉದ್ಯಮಿಗಳಲ್ಲಿ ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರಲ್ಲಿ ಸಾಕಷ್ಟು ಆತಂಕ ಮೂಡಿಸಿದೆ. ಇದು ಉತ್ಪಾದನಾ ವೆಚ್ಚದ ಮೇಲೆ ನೇರ ಪರಿಣಾಮ ಬೀರಲಿದ್ದು, ಮಾರುಕಟ್ಟೆಯಲ್ಲಿ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಬಹುದು. ವಾಣಿಜ್ಯ ಬಳಕೆ (LT-3A): ಸ್ಥಿರ ಶುಲ್ಕವನ್ನು ಪ್ರತಿ ಕಿಲೋವ್ಯಾಟ್‌ಗೆ 235 ರೂ.ಗೆ ಮತ್ತು ಇಂಧನ ಶುಲ್ಕವನ್ನು ಪ್ರತಿ ಯೂನಿಟ್‌ಗೆ 7.10 ರೂ.ಗೆ ನಿಗದಿಪಡಿಸಲಾಗಿದೆ. ಕೈಗಾರಿಕೆಗಳು (LT-5): ಪ್ರತಿ ಯೂನಿಟ್ ಇಂಧನ ಶುಲ್ಕ 5.20 ರೂ.ಗೆ ನಿಗದಿಪಡಿಸಲಾಗಿದೆ.…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ನದಿಗೆ ಹಾರಿ ಮಹಿಳೆ ಒಬ್ರು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕೌಟುಂಬಿಕ ಕಲಹದಿಂದ ಅಭ್ಯಾಸದ ಮಹಿಳೆ ಇದೀಗ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ, ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ರಶ್ಮಿ (39) ಎಂದು ಗುರುತಿಸಲಾಗಿದೆ. ಈಕೆ ಪತಿ ಲೋಕೇಶ್ ಹಾಗೂ ಮಕ್ಕಳ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದಳು. ಸಂಸಾರದ ವಿಚಾರದಲ್ಲಿ ಬೇಸತ್ತು ವೆಸ್ಲಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀಕರತೆ ಸಾರುತ್ತಿರುವ ಹೊತ್ತಲ್ಲೇ ಇರಾನ್‌ನಿಂದ ಜಗತ್ತೇ ನಡುಗುವ ಸುದ್ದಿಯೊಂದು ಹೊರಬಿದ್ದಿದೆ. ದಶಕಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ ಸರ್ವೋಚ್ಚ ನಾಯಕ (Supreme Leader) ಅಲಿ ಖಮೇನಿ ಅವರು ಯುದ್ಧದ ಸಂದರ್ಭದಲ್ಲಿ ಹತರಾಗಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ಬೆಳವಣಿಗೆ ಬೆನ್ನಲ್ಲೇ ಅವರ ಪುತ್ರ ಮೊಜ್ತಬಾ ಖಮೇನಿ (Mojtaba Khamenei) ಅವರನ್ನು ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ನೇಮಿಸಲಾಗಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಇದೀಗ ಮೊಜ್ತಬಾ ಖಮೇನಿ ಮೇಲೆ ಇಸ್ರೇಲ್ ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆದರೆ ದಾಳಿಯಲ್ಲಿ ಮೋಜ್ತಾಬಾ ಬದುಕುಳಿದ ಮಾಹಿತಿ ಕೂಡ ತಿಳಿದು ಬಂದಿದೆ. ರಹಸ್ಯ ಕಾರ್ಯಾಚರಣೆಯಲ್ಲಿ ಅಂತ್ಯ? ವರದಿಗಳ ಪ್ರಕಾರ, ಅಮೆರಿಕ ಮತ್ತು ಇರಾನ್ ನಡುವಿನ ಭೀಕರ ಸಂಘರ್ಷದ ನಡುವೆ ಅಲಿ ಖಮೇನಿ ಅವರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇರಾನ್ ಸರ್ಕಾರವು ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ನೀಡದಿದ್ದರೂ, ಟೆಹ್ರಾನ್‌ನಲ್ಲಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದರ್ಶನ್ ಗೆಳತಿ ಪವಿತ್ರಗೌಡಗೆ ಜೈಲುಟವೇ ಗತಿಯಾಗಿದೆ. ಮನೆ ಊಟಕ್ಕೆ ಬೇಡಿಕೆ ಇಟ್ಟು ಅರ್ಜಿ ಸಲ್ಲಿಸಿದ್ದರು ಆದರೆ ಹೈಕೋರ್ಟ್ ಇದೀಗ ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ಹೌದು ಪವಿತ್ರಗೌಡ, ಲಕ್ಷ್ಮಣ ಮತ್ತು ನಾಗರಾಜಗೆ ಮನೆ ಊಟ ಕುರಿತು ಪ್ರಶ್ನಿಸಿ ಒಂದು ಅರ್ಜಿ ಸಲ್ಲಿಸಲಾಗಿತ್ತು. ವೈದ್ಯಕೀಯ ಸಲಹೆ ಇದ್ದರೆ ಮಾತ್ರ ಮನೆ ಊಟಕ್ಕೆ ಅವಕಾಶ ಇದೇ. ಕೈದಿ ಕೇಳಿದ ಕೂಡಲೇ ಮನೆ ಊಟ ಒದಗಿಸಲು ಅವಕಾಶ ಇಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನೀಡಿದ ಆದೇಶವನ್ನು ಹೈಕೋರ್ಟ್ ಇದೀಗ ರದ್ದುಪಡಿಸಿದೆ. ಹಾಗಾಗಿ ದರ್ಶನ್ ಮತ್ತು ಗ್ಯಾಂಗ್ ಗೆ ಇದೀಗ ಜೈಲೂಟವೇ ಗತಿಯಾಗಿದೆ.
ಬೆಂಗಳೂರು : ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಕೆಲವು ಯೂಟ್ಯೂಬರ್ಸ್ ವಿರುದ್ಧ ಸ್ಯಾಂಡಲ್ ವುಡ್ ನಟಿ ಸಪ್ತಮಿ ಗೌಡ ಇದೀಗ ಅಕ್ರೋಶ ಹೊರಹಾಕಿದ್ದಾರೆ. ಕೆಲ ಯೂಟ್ಯೂಬರ್ಸ್ ಸಪ್ತಮಿ ಗೌಡಗೆ ಮುಜುಗರ ತಂದಿಟ್ಟಿದ್ದು ಅಸಭ್ಯ ರೀತಿಯಲ್ಲಿ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಅಪ್ಲೋಡ್ ಮಾಡಿದ್ದಕ್ಕೆ ಕಿಡಿ ಕಾರಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೋರಿ ಹಾಕಿಕೊಂಡಿರುವ ಅವರು, ಚಿತ್ರರಂಗದಲ್ಲಿರುವ ಮಹಿಳೆಯರಾಗಿ,ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತು ಫೋಟೋಗಳನ್ನು ಅಸಭ್ಯ ಕೋನಗಳಿಂದಚಿತ್ರೀಕರಿಸಿ, ನಮ್ಮ ಕಲೆಯಿಗಿಂತೆ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹವರ್ತನೆ,ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ, ಅವಮಾನಕಾರಿ ಮತ್ತುಸ್ತೆಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ.ನಾವು ಇಲ್ಲಿನಮ್ಮ ಸೆನೆಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮಗೌರವಕ್ಕೆ ಸ್ಪಷ್ಟಧಕ್ಕೆ.ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ,…














