Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಬಂಧಿತರ ಬಿಡುಗಡೆ ವಿಚಾರಕ್ಕೆ ಸಂಬಂಧಸಿದಂತೆ ಜೈಲು ಸೇರಿದವರನ್ನು ಬಿಡುಗಡೆ ಮಾಡಿಸುವಂತೆ ಸುಮಾರು 15 ಕುಟುಂಬಸ್ಥರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಶಿವಾಜಿನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಜನರ ಅಹವಾಲು ಸ್ವೀಕಾರಕ್ಕೆ ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ಅವರಿಗೆ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಕುಟುಂಬದ ಸದಸ್ಯರು ಮನವಿ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ನಾವು ಏನೇ ಮಾಡಿದರು ಮಾಡಿದರೂ ಕಾನೂನು ವ್ಯಾಪ್ತಿಯಲ್ಲಿ ಮಾಡಬೇಕು. ಈ ಬಗ್ಗೆ ಹೆಚ್ಚು ಮಾತನಾಡಲು ಆಗುವುದಿಲ್ಲ. ಬಿಜೆಪಿ ಸರ್ಕಾರ ಕೆಲವು ಸೆಕ್ಷನ್‌ಗಳನ್ನು ಪ್ರಯೋಗ ಮಾಡಿರುವುದರಿಂದ ಬಂಧಿತರು ಬಿಡುಗಡೆ ಆಗುತ್ತಿಲ್ಲ. ಕಾನೂನಿನ ಅಡಿಯಲ್ಲಿ ನ್ಯಾಯ ಒದಗಿಸಿ ಕೊಡಬೇಕು. ಈ ಬಗ್ಗೆ ಶಾಸಕರ ಬಳಿ ಚರ್ಚೆ ಮಾಡಿದ್ದು, ಕಾನೂನು ತಂಡದ ಜತೆ ಮಾತನಾಡಿ ತೀರ್ಮಾನ ಮಾಡುತ್ತೇವೆ ಎಂದರು. ಈ ಪ್ರಕರಣದ ಕುರಿತು ಕಾನೂನು ಚೌಕಟ್ಟಿನಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.ಕಾನೂನು ಕೈಗೆತ್ತಿಕೊಂಡವರ ವಿರುದ್ಧದ ಕ್ರಮಕ್ಕೆ ಅಭ್ಯಂತರವಿಲ್ಲ.…
ಬೆಂಗಳೂರು : ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ ನನ್ನ ಭಾವನೆ ಹೇಳಿಕೊಂಡಿದ್ದೇನೆ. ಸಂಕ್ರಾಂತಿ ಬಳಿಕ ಎಲ್ಲವೂ ಸುಖಾಂತ್ಯವಾಗಬೇಕು ಎಂದರು. ಇನ್ನು ವಿ ಸೋಮಣ್ಣ ಜನವರಿ 8ರಂದು ನವದೆಹಲಿಗೆ ತೆರಳಲಿದ್ದಾರೆ. 12ರ ವರೆಗೂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಈ ಅವಧಿಯಲ್ಲಿ ವರಿಷ್ಠರಿಗೆ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೆ ಸಿಡಿದೆದ್ದ ಸೋಮಣ್ಣ ವಿಧಾನಸಭೆ ಚುನಾವಣೆಯಲ್ಲಿ ವಿ ಸೋಮಣ್ಣ ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಕ್ಷೇತ್ರಗಳಲ್ಲಿ ವಿ ಸೋಮಣ್ಣ ಸೋತಿದ್ದಾರೆ. ಈ…
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮೂವರು ಡಿಸಿಎಂ ಹುದ್ದೆ ನೇಮಕ ವಿಚಾರ ಮುನ್ನಡೆಗೆ ಬಂದಿದ್ದು, ಸಹಕಾರ ಸಚಿವ ಕೆ ಎನ್ ರಾಜಣ್ಣ ಮೂರು ಡಿಸಿಎಂಗಳನ್ನು ನೇಮಕ ಮಾಡಿ ಎಂದು ಹೇಳಿಕೆಗೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ಹೈಕಮಾಂಡ್ ನಲ್ಲಿದ್ದರೆ ಖಂಡಿತವಾಗಿ ಮಾಡೇ ಮಾಡುತ್ತಾರೆ ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಎರಡು ಒಂದೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ಡಿಸಿಎಂ ಹುದ್ದೆ ಬಗ್ಗೆ ಯಾರು ಎಲ್ಲಿ ಚರ್ಚೆ ಮಾಡಿದ್ದಾರೆ? ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ ಪರಮೇಶ್ವರ್ ಪ್ರಶ್ನಿಸಿದ್ದಾರೆ.ಸಚಿವ ಕೆಎನ್ ರಾಜಣ್ಣ ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ ಎಂದು ಅವರು ತಿಳಿಸಿದರು. ಎಂಪಿ ಚುನಾವಣೆಗೂ ಮುನ್ನ ಡಿಸಿಎಂ ಮಾಡಲಿ ಅನ್ನೋ ಸಲಹೆಯನ್ನು ನೀಡಿದ್ದಾರೆ. ಆದರೆ ಹೈಕಮಾಂಡ್ ದೃಷ್ಟಿಕೋನ ಏನು ಅನ್ನೋದು ಗೊತ್ತಿಲ್ಲ.ಮೂವರನ್ನು ಡಿಸಿಎಂ ಮಾಡಿದರೆ ಲೋಕಸಭೆ ಚುನಾವಣೆಯನ್ನು ಗೆಲ್ಲಬಹುದು ಇದು ಹೈಕಮಾಂಡ್ ಗಮನದಲ್ಲಿದ್ದರೆ ಅವರು ಮಾಡೇ ಮಾಡುತ್ತಾರೆ.ನನ್ನ ಅಭಿಪ್ರಾಯ ಹೈಕಮಾಂಡ್ ಅಭಿಪ್ರಾಯ ಒಂದೇ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಂತ್ಯವಾಗಲಿದೆ ಎಂಬ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನನ್ನ ಮತ್ತು ಡಿಕೆ ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ HD ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ಅವರಿಗೆ ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ. ಜಾತ್ಯತೀತ ಜನತಾಪಕ್ಷ ಎನ್ನುವುದು ಬಿಜೆಪಿಯ ಬಿ ಟೀಮ್ ನನ್ನ ಮಾತನ್ನು ಒಪ್ಪಿಕೊಂಡಿದ್ದಕ್ಕೆ ಜೆಡಿಎಸ್ ಗೆ ಅಭಿನಂದನೆ ಸೈದ್ಧಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷಕ್ಕೆ ಅಭಿನಂದಿಸುತ್ತೇನೆ ಮುಂದಿನ ಚುನಾವಣೆ ಜಾತ್ಯತೀತ ಕೋಮುವಾದಿ ಶಕ್ತಿಗಳ ಸಂಘರ್ಷ ಜನ ಮುಂದಿನ ಚುನಾವಣೆಯಲ್ಲಿ ಸರಿಯಾದ ಆಯ್ಕೆ ಮಾಡುವ ವಿಶ್ವಾಸವಿದೆ ಎಂದು ಟ್ವಿಟರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…
ಹುಬ್ಬಳ್ಳಿ : ಸ್ವಪಕ್ಷದ ವಿರುದ್ಧವೇ ಬಿಜೆಪಿಯ ಮಾಜಿ ಸಚಿವ ವಿ ಸೋಮಣ್ಣ ಆಗಾಗ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಇದೀಗ ಮತ್ತೆ ಸ್ವಪಕ್ಷದ ವಿರುದ್ಧ ಅವರು ತಮ್ಮ ಅಸಮಾಧಾನ ಹೊರಹಾಕಿದ್ದು ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿ ವಿ. ಸೋಮಣ್ಣ ಅವರ ಯಾವುದೇ ಸಮಸ್ಯೆ ಇದ್ದರೂ ಸರಿ ಮಾಡುತ್ತೇನೆ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ವಿರುದ್ಧ ಸಚಿವ ಸೋಮಣ್ಣ ಅಸಮಾಧಾನ ವಿಚಾರ ಸೋಮಣ್ಣ ನಮ್ಮ ಜೊತೆ ಮಾತನಾಡಿದ್ದಾರೆ. ದೆಹಲಿಗೆ ಬರುವುದಾಗಿ ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ಏನೇ ಸಮಸ್ಯೆ ಇದ್ದರೂ ಸರಿ ಮಾಡುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದರು. ಅಲ್ಲದೆ ಪುರಾತತ್ವ ಇಲಾಖೆಯ ಮ್ಯೂಸಿಯಂ ಗಳಿಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಸಿದಂತೆ ಮಾತನಾಡಿದ ಅವರು, ಇದರ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮೇಲ್ ಹಾಕಿದವರು ಯಾವ ಜಾತಿಯವರೆಂದು ನೋಡಬಾರದು. ಯಾರೇ ಬೆದರಿಕೆ ಕರೆ ಮಾಡಿದರು ಕಠಿಣ ಕ್ರಮ…
ಹುಬ್ಬಳ್ಳಿ : ಕೋವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ.ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಳವಾಗಿದೆ. ಸಹಜವಾಗಿ ಕರೋನ ಕೇಸ್ ಸ್ವಲ್ಪ ಜಾಸ್ತಿ ಆಗಿದೆ.ರಾಜ್ಯದಲ್ಲಿ ಸುಮಾರು 7,000 ಕೋವಿಡ್ ಟೆಸ್ಟ್ ಮಾಡುತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ಇನ್ನೂ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಸಿದಂತೆ ಪ್ರತಿಕ್ರಿಯಿಸಿದ ಅವರು, ಆರೋಪಿ ಶ್ರೀಕಾಂತ ಹೆಸರಿನಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ.ಶ್ರೀಕಾಂತ ಪೂಜಾರಿ ಯಾರು ಅನ್ನೋದೇ ನಮಗೆ ಗೊತ್ತಿಲ್ಲ ಆತನಿಗಾಗಿ ಬಿಜೆಪಿಯವರು ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ ಎಂದರು. ಕೇಂದ್ರದಿಂದ ಬರಬೇಕಿರುವ ಜಿಎಸ್ಟಿ ಹಣಕ್ಕಾಗಿ ನಾವು ಹೋರಾಟ ಮಾಡಬೇಕು. ಮೋದಿ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೂರಿದರು. ಗಲಭೆ ಆರೋಪಿ ಶ್ರೀಕಾಂತ್ ಪೂಜಾರಿ ರೌಡಿಶೀಟರ್, ಕ್ರಿಮಿನಲ್ಹಿನ್ನೆಲೆ ಹೊಂದಿರುವದರಿಂದ ಕೋರ್ಟ್ ಆದೇಶದಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬೆಂಗಳೂರು : ರಾಜ್ಯದಲ್ಲಿ ಮಳೆ ಬಾರದೆ ಇರುವುದರಿಂದ ರೈತರು ತೀವ್ರವಾದ ಸಂಕಷ್ಟವನ್ನು ಎದುರಿಸಿದ್ದು ಈವರೆಗೆ ರಾಜ್ಯ ಸರ್ಕಾರ ಸೂಕ್ತವಾದ ರೀತಿಯಲ್ಲಿ ರೈತರಿಗೆ ಪರಿಹಾರವನ್ನು ಒದಗಿಸಿಲ್ಲ. ಆದ್ದರಿಂದ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರ ತಕ್ಷಣವೇ ಪರಿಹಾರ ಒದಗಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೈತ ವಿರೋಧಿ ಸರ್ಕಾರವಿದೆ.ಎನ್ ಡಿ ಆರ್ ಎಫ್ ನಿಯಮ ಪ್ರಕಾರ ಈ ಹಿಂದೆ ನಮ್ಮ ಸರ್ಕಾರ ಪರಿಹಾರ ನೀಡಿತ್ತು.ಹೆಕ್ಟರ್ ಗೆ 26 ಸಾವಿರ ರೂಪಾಯಿ ಪರಿಹಾರ ನೀಡಿದ್ದೆವು.ಈಗಿನ ಸರ್ಕಾರ ಬರಿ 2 ಸಾವಿರ ನೀಡುವುದಾಗಿ ಹೇಳುತ್ತಿದೆ ಎಂದರು. ಸರ್ಕಾರದ ಈ ನಡೆಯಿಂದ ರೈತರಿಗೆ ಮಾಡುತ್ತಿರುವ ಅಪಮಾನವಾಗಿದೆ. ಕಳೆದ ನಾಲ್ಕು ತಿಂಗಳಿಂದ ಸರ್ಕಾರ ರೈತರಿಗೆ ಬರ ಪರಿಹಾರ ನೀಡಿಲ್ಲ. ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ.ಸಂಕಷ್ಟದಲ್ಲಿರುವ ರೈತರಿಗೆ ಕೂಡಲೇ ಬರ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಇನ್ನೂ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ…
ಬೆಂಗಳೂರು : ಕರಸೇವಕ ಶ್ರೀಕಾಂತ್ ಪೂಜಾರಿ ಬಂದಿಸಿದ ಪೊಲೀಸ್ ಅಧಿಕಾರಿ ಯಾವುದೇ ರೀತಿಯಾದಂತಹ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಇಂದು ನಗರದಲ್ಲಿ ಸುಧಿಕಾರದೊಂದಿಗೆ ಮಾತನಾಡಿದ ಅವರು, ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದ ಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ .16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಆ ಪೈಕಿ ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ಬಿಜೆಪಿ ಹೋರಾಟ ಮಾಡುತ್ತಿದೆ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ ಇದ್ದಾರೆ. ಅವರು ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬಿಜೆಪಿಯನ್ನು ತಿರಸ್ಕರಿಸಿ ನಮ್ಮ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. ಶ್ರೀಕಾಂತ್ ಬಂಧಿಸಿದ ಪೊಲೀಸ್ ನನ್ನು ಅಮಾನತುಗೊಳಿಸಬೇಕೆಂಬ…
ಹುಬ್ಬಳ್ಳಿ : ರಾಮಮಂದಿರ ನಿರ್ಮಾಣಕ್ಕೆ ನಾವು ಕೊಟ್ಟ ಇಟ್ಟಿಗೆ ಎಲ್ಲಿ? ರಾಮಮಂದಿರ ಪಕ್ಕದ ಜಮೀನಿನ ವಿಚಾರವಾಗಿ ಭ್ರಷ್ಟಾಚಾರ ಆಗಿದೆ.ಜಮೀನಿನ ಬೆಲೆ ಹೆಚ್ಚಳ ಮಾಡಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಆರೋಪ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದಾಧಿಕಾರಿಗಳು ಕೋಟ್ಯಾಂತರರು ಲಾಭ ಮಾಡಿಕೊಂಡಿದ್ದಾರೆ 17 ಲಕ್ಷಕ್ಕೆ ಭೂಮಿ ಪಡೆದು ಮೂರು ಕೋಟಿಗೆ ಮಾರಾಟ ಮಾಡಿದ್ದಾರೆ.ಇದರ ಬಗ್ಗೆ ಯಾರೂ ಹೋರಾಟ ಮಾಡಬೇಕು ಎಂದು ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.ರಾಮನು ನಮ್ಮದೇವರು ದುರ್ಗಮ್ಮ ಕೂಡ ನಮ್ಮ ದೇವರು ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು. ಹತ್ತು ವರ್ಷದಲ್ಲಿ ಹಿಂದುಗಳಿಗೆ ಏನಾದರೂ ಲಾಭ ಆಗಿದೆಯಾ? ಎಂದು ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ. ನಾನು ಹಿಂದೂ ನೀವು ಹಿಂದೂ ಏನಾದರೂ ಲಾಭ ಆಗಿದೆಯಾ ಏನಾದ್ರೂ ವಿಶೇಷ ಲಾಭ ಆಗಿದೆಯಾ? ಎಂದು ಪ್ರಶ್ನಿಸಿದರು. ಇದರಿಂದ ಬಿಜೆಪಿ ಅವರಿಗೆ ಅಷ್ಟೇ ಲಾಭವಾಗಿದೆ. ಶ್ರೀಕಾಂತ್ ಪೂಜಾರಿ ವಿರುದ್ಧ ಕೇಸ್ ಹಾಕಿದರೆ ನಮಗೇನು ಲಾಭವಾಗುತ್ತದೆ?ಅಷ್ಟು ಕೇಸ್ ಆಗಿದೆ…
ಸಾಲದ ಸಮಸ್ಯೆಯನ್ನು ಪರಿಹರಿಸಲು ರಾಯಲ್ ಲೀಫ್ ಲ್ಯಾಂಪ್ ಪರಿಹಾರ ಪ್ರತಿಯೊಂದು ಮರಕ್ಕೂ ವಿಭಿನ್ನ ಶಕ್ತಿಗಳಿವೆ. ಈ ಶಕ್ತಿಗಳಿಂದಾಗಿ ಮರಕ್ಕೆ ಔಷಧೀಯ ಗುಣಗಳು ಉಂಟಾಗುತ್ತವೆ. ದೈಹಿಕ ಕಾಯಿಲೆಗಳನ್ನು ಹೋಗಲಾಡಿಸಲು ನಾವು ಆ ಔಷಧೀಯ ಗುಣಗಳನ್ನು ಬಳಸುತ್ತೇವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನಾವು ಕೇವಲ ದೈಹಿಕ ಕಾಯಿಲೆಗಳನ್ನು ಮಾತ್ರವಲ್ಲದೆ ನಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ತೊಡೆದುಹಾಕಲು ರಾಜ ಮರದ ಎಲೆಯಿಂದ ಹೇಗೆ ಪೂಜಿಸಬೇಕು ಎಂಬುದನ್ನು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ…










