Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ರಾಯಚೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನ ಬೈಕ್ ನಲ್ಲಿ ತೆರಳುತ್ತಿದ್ದ ಮಂಜುನಾಥ್ ಮತ್ತು ನಾಗಪ್ಪ ಮೃತಪಟ್ಟವರು ಎಂದು ಹೇಳಲಾಗಿದೆ. ಮಸ್ಕಿಯಿಂದ ಕುಡುಗಲದಿನ್ನಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಅಪಘಾತದ ಕುರಿತಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಶಿವಮೊಗ್ಗದಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ!
ಶಿವಮೊಗ್ಗ : ಶಿವಮೊಗ್ಗದಲ್ಲಿ ನೇಣು ಹಾಕಿಕೊಂಡು ಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ನೇಣಿಗೆ ಶರಣಾಗಿರುವ ಮೆಡಿಕಲ್ ವಿದ್ಯಾರ್ಥಿಯನ್ನು ವಿಷ್ಣುಪ್ರಿಯ (22) ಎಂದು ತಿಳಿದುಬಂದಿದೆ. ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿಷ್ಣುಪ್ರಿಯ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ ಇದೀಗ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ವಿಷ್ಣುಪ್ರಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇಂಟರ್ನಶಿಪ್ ಮುಗಿಯಲು 10 ದಿನಗಳು ಮಾತ್ರ ಬಾಕಿ ಉಳಿದಿತ್ತು. ಮೃತ ವಿದ್ಯಾರ್ಥಿನಿಯ ಪೋಷಕರು ಬರ್ಲಿನ್ ನಲ್ಲಿ ಇದ್ದಾರೆ. ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಾಳಲಾರದೆ ಕಳೆದ ಕೆಲವು ತಿಂಗಳು ಹಿಂದೆ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಬಳಿಕ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿತ್ತು. ಆದರೂ ರಾಜ್ಯದಲ್ಲಿ ಆತ್ಮಹತ್ಯೆ ಘಟನೆಗಳು ನಿಲ್ಲುತ್ತಿಲ್ಲ. ಇದೀಗ, ಹುಬ್ಬಳ್ಳಿಯಲ್ಲಿ ಬಡ್ಡಿ ದಂಧೆಕೊರರ ಕಿರುಕುಳಕ್ಕೆ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ. ಹೌದು ಹುಬ್ಬಳ್ಳಿಯ ಎಸ್ಎಂ ಕೃಷ್ಣ ನಗರದಲ್ಲಿ ಭಾಷಾ ಸಾಬ್ ಸಂಕೇಶ್ವರ (65) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ತಿಳಿದುಬಂದಿದೆ. ವಿಡಿಯೋ ಮಾಡಿಟ್ಟು ಭಾಷಾ ಸಾಬ್ ಸಂಕೇಶ್ವರ ನೇಣಿಗೆ ಶರಣಾಗಿದ್ದಾರೆ. ಕುಟುಂಬಸ್ಥರು ಸಂಬಂಧಿಕರ ಕಾರ್ಯಕ್ರಮಕ್ಕೆ ತೆರಳಿದ್ದಾಗ, ಮನೆಯಲ್ಲಿಯೇ ಭಾಷಾ ಸಾಬ್ ಸಂಕೇಶ್ವರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾದ ಬಾಷಾಸಾಬ್ ಸಂಕೇಶ್ವರ್ ಅವರು, ಲಲಿತ, ಕಿಟ್ಯಾ, ವಿನೋದ್ ಬಂಕಾಪುರ್ ಹಾಗೂ ಅಶ್ಪಾಕ ನಿಂದ ಸಾಲ ಪಡೆದಿದ್ದರು. ಇವರೆಲ್ಲರೂ ಸಾಲ ಹಿಂತಿರುಗಿಸುವಂತೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.ಸಾಲ ನೀಡಿದ್ದವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು…
ಕಲಬುರ್ಗಿ : ಪ್ರತಿಭಟನೆಯ ವೇಳೆ ಕಲಬುರ್ಗಿ ಜಿಲ್ಲಾಧಿಕಾರಿಯ ಕುರಿತು ಕಲ್ಬುರ್ಗಿ ಜಿಲ್ಲಾಧಿಕಾರಿಗಳು ಇಂಡಿಯಾದವರ? ಅಥವಾ ಪಾಕಿಸ್ತಾನದವರ? ಎಂದು ಬಿಜೆಪಿ MLC ರವಿಕುಮಾರ್ ಹೇಳಿಕೆ ನೀಡಿದ್ದರು. ಇದೀಗ ಈ ಒಂದು ಹೇಳಿಕೆ ಕುರಿತು ಹೈಕೋರ್ಟ್ ವಿಚಾರಣೆಗೆ ಹಾಜರಾಗಿ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದು ಕಲ್ಬುರ್ಗಿಯ ಸೆನ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆಯ ವೇಳೆ ಪೊಲೀಸರು ರವಿಕುಮಾರ್ ಅವರ ವಾಯ್ಸ್ ಸ್ಯಾಂಪಲ್ ಪಡೆದುಕೊಂಡರು.. ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದೆ. ನನ್ನನ್ನು ಅರೆಸ್ಟ್ ಮಾಡಬಾರದು ಎಂದು ಕೋರ್ಟ್ ಹೇಳಿದೆ. ದಲಿತರ ಅವಹೇಳನ ಮಾಡಿಲ್ಲ ಆ ಬಗ್ಗೆ ವಿಡಿಯೋ ಇದೆ. ಕಲ್ಬುರ್ಗಿ ಜಿಲ್ಲಾಧಿಕಾರಿಗೂ ಕೂಡ ನಾನು ಬೈದಿಲ್ಲ ಧರ್ಮದ ವಿಚಾರವಾಗಿ ನಾನು ಹೇಳಿಕೆಯನ್ನು ನೀಡಿಲ್ಲ. ನಾನು ಹೇಳಿಕೆ ನೀಡಿದ ಮರುದಿನವೇ ಕ್ಷಮೆ ಕೇಳಿದ್ದೇನೆ ವೈಯಕ್ತಿಕವಾಗಿಯೂ ಜಿಲ್ಲಾಧಿಕಾರಿಗೆ ಪತ್ರ ಬರೆದು ಕ್ಷಮೆ ಕೇಳುತ್ತೇನೆ ಎಂದು ರವಿಕುಮಾರ್ ಅವರು ತಿಳಿಸಿದರು.
ಮಂಗಳೂರು : ದಕ್ಷಿಣಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾದ ಬಳಿಕ ಅರುಣ ಪುತ್ತಿಲ್ ಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಇದೀಗ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ್ ಅಮೀನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಹಿಂದೂ ಜಾಗರಣ ವೇದಿಕೆ ಮುಖಂಡ ರತ್ನಾಕರ್ ಅಮಿನ್ ಬಂಧನವಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೇಕಾರು ಪೊಲೀಸರು ರತ್ನಾಕರ್ ಅಮೀನ್ ನನ್ನು ಅರೆಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಿನ್ನೆಲೆಯಲ್ಲಿ ಇದೀಗ ರತ್ನಾಕರ್ ಅಮಿನನ್ನು ಪೊಲೀಸರ ಅರೆಸ್ಟ್ ಮಾಡಿದ್ದಾರೆ. ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಮುಖಂಡ ರತ್ನಾಕರನ ಬಂಧನವಾಗಿದೆ.
ಬೆಂಗಳೂರು : ತಮಿಳು ನಿಂದಲೇ ಕನ್ನಡ ಹುಟ್ಟಿದ್ದು ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಇದೀಗ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು ಕನ್ನಡಪರ ಸಂಘಟನೆಗಳು ಕಮಲ್ ಹಾಸನ್ ನಟನೆಯ ಚಲನಚಿತ್ರ ರಾಜ್ಯದಲ್ಲಿ ಬಿಡುಗಡೆ ಮಾಡದಂತೆ ಆಗ್ರಹಿಸುತ್ತಿವೆ. ದೇವಿ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ನಾವು ಇಲ್ಲಿ ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರಿಕೆ ಹಾಕುತ್ತಾರೆ ಎಂದು ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, ಮುಖ್ಯವಾಗಿ ಇರುವ ಸಮಸ್ಯೆ ಎಂದರೆ ಬಲವಂತವಾಗಿ ಹಿಂದಿ ಹೇರಲಾಗುತ್ತಿದೆ. ಆದರೆ ಎಲ್ಲಾ ಭಾಷೆಗಳು ಸಮನಾಂತರ ಭಾಷೆಗಳು. ಕನ್ನಡ ಭಾಷೆ ಮತ್ತು ಕನ್ನಡ ಸಂಸ್ಕೃತಿ ಅಳಿಸುವಂತಹ ಪ್ರಯತ್ನವಾಗುತ್ತಿದೆ ಎಂದು ಅವರು ಹೇಳಿದರು. ಕನ್ನಡ ತಮಿಳು ಅಂತ ಸಮಯ ವ್ಯರ್ಥ ಮಾಡಿದರೆ ಹಿಂದಿ ಹೇರುತ್ತಾರೆ. ಕೇಂದ್ರ ಸರ್ಕಾರದ ಮೇಲೆ ಬಲವಂತವಾಗಿ ಹಿಂದಿ ಹೇರುತ್ತಿದೆ. ಸ್ವಯಂ…
ಮೈಸೂರು : ದಕ್ಷಿಣ ಕನ್ನಡದಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು 15 ಜನರ ವಿರುದ್ಧ FIR ದಾಖಲಾದ ಬೆನ್ನಲ್ಲೆ, ಅರುಣ್ ಕುಮಾರ್ ಪುತ್ತಿಲ್ ಗೆ ಗಡಿಪಾರು ನೋಟಿಸ್ ನೀಡಲಾಗಿದ್ದು, ಹಾಗೂ ಕಲ್ಲಡ್ಕ ಪ್ರಭಾಕರ ಭಟ್ಟ ಅವರಿಗೂ ಕೂಡ ನೋಟಿಸ್ ನೀಡಲಾಗಿದೆ. ಈ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ ಎಂದು ಆಕ್ರೋಶ ಹೊರ ಹಾಕಿದರು. ಮೈಸೂರಲ್ಲಿ ಮಾತನಾಡಿದ ಅವರು, ತಾಲಿಬಾನಿ ಸರಕಾರ ಸ್ಥಾಪನೆಗೆ ಸರ್ಕಾರ ಹೆಜ್ಜೆ ಇಟ್ಟಿದೆ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂಗಳಲ್ಲಿ ಅಭದ್ರತೆ ಮತ್ತು ಆತಂಕ ಇದೆ. ಅರುಣ ಪುತ್ತಿಲ್ ಮತ್ತು ಕಲ್ಲಡ್ಕ ಪ್ರಭಾಕರ ಭಟ್ ಗೆ ನೋಟಿಸ್ ನೀಡಿರುವುದು ತಾಲಿಬಾನಿ ಸರ್ಕಾರದ ಸ್ಥಾಪನೆಗೆ ಇಟ್ಟಿರುವ ಹೆಜ್ಜೆಯಿದು. ಪ್ರವೀಣ್ ನೆಟ್ಟರು ಹತ್ಯೆ ಆಗದಿದ್ದರೆ ಈ ಸರಣಿ ಹತ್ಯೆ ನಡೆಯುತ್ತಿದ್ವ? ಎಂದು ಕಿಡಿ ಕಾರಿದರು. ಆಗ ಆರೋಪಿಗಳಿಗೆ ಸರಿಯಾದ ಪಾಠ ಕಲಿಸಿದ್ದರೆ, ಈ ಹತ್ಯೆಗಳು…
ಬಳ್ಳಾರಿ : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ ಪವರ್ ಹೌಸ್ ಘಟಕವು ಹೊತ್ತಿ ಉರಿದಿರುವ ಘಟನೆ ಬಳ್ಳಾರಿಯ ತೋರಣಗಲ್ ಬಳಿ ಇರುವ ಜಿಂದಾಲ್ನಲ್ಲಿ ಈ ಒಂದು ಘಟನೆ ಸಂಭವಿಸಿದೆ. ಹೌದು ಬಳ್ಳಾರಿಯ ತೋರಣಗಲ್ ಬಳಿ ಇರುವ ಜಿಂದಾಲ್ ಪವರ್ ಹೌಸ್ ನಲ್ಲಿ ಆಕಸ್ಮಿಕದಿಂದಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ತುಮಕೂರು : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರವಾದ ಕೊಲೆ ಆಯಿತು. ಬಳಿಕ ಇತ್ತೀಚಿಗೆ ಅಷ್ಟೇ ಮತ್ತೆ ಮಂಗಳೂರಿನಲ್ಲಿ ಮುಸ್ಲಿಂ ಯುವಕನ ಭೀಕರ ಕೊಲೆ ಆಯಿತು. ಇದೆಲ್ಲದರ ಹೊರತಾಗಿಯೂ ಗೃಹ ಸಚಿವ ಜಿ.ಪರಮೇಶ್ವರ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತುಂಬಾ ಚೆನ್ನಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಇದನ್ನು ನಾನು ಹೇಳುತ್ತಿಲ್ಲ ಹೈದರಾಬಾದ್ ವಿಶ್ವವಿದ್ಯಾಲಯದವರು ಹೇಳುತ್ತಿದ್ದಾರೆ. ಬೇರೆ ಬೇರೆ ರಾಜ್ಯದಲ್ಲಿ ಅಧ್ಯಯನ ಮಾಡಿ ಹೈದರಾಬಾದ್ ವಿಶ್ವವಿದ್ಯಾಲಯದವರು ರಾಜ್ಯದ ಕಾನೂನು ವ್ಯವಸ್ಥೆ ಬಗ್ಗೆ ಹೇಳಿಕೆ ನೀಡಿದ್ದಾರೆ. ಹೈದರಾಬಾದ್ ವಿಶ್ವವಿದ್ಯಾಲಯ ವರದಿಯ ಪ್ರಕಾರ ಕರ್ನಾಟಕ ಸೇಫ್ ಎಂದು ತಿಳಿದುಬಂದಿದೆ ನಾನು ಗೃಹ ಸಚಿವನಾಗಿ ಇದನ್ನು ಹೇಳುತ್ತಿಲ್ಲ ಎಂದು ತಿಳಿಸಿದರು. ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎನ್ನುವ ವಿಚಾರವಾಗಿ ಯಾರನ್ನು ನಾವು ಟಾರ್ಗೆಟ್ ಮಾಡಲ್ಲ ತಪ್ಪು ಮಾಡಿದರೆ ಯಾರನ್ನು ಸಹ ಬಿಡುವುದಿಲ್ಲ. ಯಾರು ಕಾನೂನಿನ ವಿರುದ್ಧ ಹೋಗುತ್ತಾನೋ…
ಬೆಂಗಳೂರು : ಕನ್ನಡ ಹುಟ್ಟಿದ್ದೇ ತಮಿಳು ನಿಂದ ಎಂದು ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲದೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಮೊಂಡುತನ ತೋರಿದ್ದಾರೆ. ಈ ಹಿನ್ನೆಲೆ ಈಗಾಗಲೇ ರಾಜ್ಯದಲ್ಲಿ ಪ್ರತಿಭಟನೆಗಳು ಜೋರಾಗಿವೆ. ಈ ವಿಚಾರವಾಗಿ ಕಮಲ್ ಹಾಸನ್ ಅವರ ಥಗ್ ಲೈಫ್ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಯಾಗದಂತೆ ಬ್ಯಾನ್ ಮಾಡಬೇಕು ಎಂದು ಕನ್ನಡ ಚಲನಚಿತ್ರ ಮಂಡಳಿಯ ಪದಾಧಿಕಾರಿಗಳು ಸಿಎಂ ಜೊತೆಗೆ ಸಭೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ಸಿನಿಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಸರಕಾರ ಬೆಂಬಲ ಸೂಚಿಸಿದೆ. ಕನ್ನಡದ ವಿಚಾರವಾಗಿ ಎಲ್ಲಾ ಗಟ್ಟಿಯಾಗಿ ನಿಲ್ಲಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸರ್ಕಾರ ಕಾನೂನಾತ್ಮಕವಾಗಿ ಸಹಕಾರ ನೀಡುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವಿಚಾರವಾಗಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕಮಲ್ ಹಾಸನ್…