Subscribe to Updates
Get the latest creative news from FooBar about art, design and business.
Author: kannadanewsnow05
ದಾವಣಗೆರೆ: ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದ ಜೆಡಿಎಸ್ ಮುಖಂಡ, ಸಾಮಾಜಿಕ ಹೋರಾಟಗಾರನ ಮೇಲೆ ಸೋಮವಾರ ಮೂವರು ಮುಸುಕುದಾರಿಗಳು ರಾತ್ರೋರಾತ್ರಿ ತಲ್ವಾರ್, ಪಂಚ್, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ದಾವಣಗೆರೆಯ ಬಾಷಾ ನಗರದಲ್ಲಿ ನಡೆದಿದೆ. ನಗರದ ಬಾಷಾ ನಗರದ ನಿವಾಸಿ ಟಿ.ಅಸ್ಟರ್‌ಮಾರಣಾಂತಿಕ ದಾಳಿಗೆ ಒಳಗಾದವರು. ಸೋಮವಾರ ರಾತ್ರಿ ಟಿಪ್ಪು ಜಯಂತಿಯಲ್ಲಿ ಅಸ್ಟರ್ ಭಾಗವಹಿಸಿದ್ದ ವೇಳೆ ಮೂವರು ದುಷ್ಕರ್ಮಿಗಳು ಹೊಂಚು ಹಾಕಿ, ಸಂಚು ಮಾಡಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ರಾಜಿ ಪಂಚಾಯಿತಿ ವಿಚಾರವಾಗಿ ಅಸ್ಥರ್‌ಮೇಲೆ ಮೂವರು ದುಷ್ಕರ್ಮಿಗಳ ತಂಡ ದಾಳಿ ಮಾಡಿದೆ ಎಂದು ತಿಳಿದುಬಂದಿದೆ. ಇದೇ ವಿಚಾರವಾಗಿ ಅಸ್ಟರ್‌ಹಾಗೂ ಖಾಲಿದ್ ಪೈಲ್ವಾನ್ ಮಧ್ಯೆ ಗಲಾಟೆಯೂ ಆಗಿತ್ತು. ಸಾಮಾಜಿಕ ಜಾಲತಾಣದಲ್ಲೂ ಅಸ್ಥರ್‌ಗೆ ಖಾಲಿದ್ ಪೈಲ್ವಾನ್ ಬೆದರಿಕೆ ಹಾಕಿದ್ದು, ಈ ಬಗ್ಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕೈಗೊಂಡಿಲ್ಲ ಎಂದು ಅಸ್ಕರ್ ಕುಟುಂಬಸ್ಥರು ದೂರಿದ್ದಾರೆ.
ತಿರುಪತಿ : ಕಳೆದ ವರ್ಷ ದೇಶವನ್ನೇ ಬೆಚ್ಚಿ ಬೀಳಿಸಿದ್ದ ತಿರುಪತಿ ದೇಗುಲಕ್ಕೆ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣದ ತನಿಖೆ ವೇಳೆ ಸ್ಪೋಟಕ ಅಂಶಗಳು ಬೆಳಕಿಗೆ ಬಂದಿವೆ. ಹಾಲನ್ನೇ ಖರೀದಿಸದ ಉತ್ತರಾಖಂಡ ಮೂಲದ ಕಂಪನಿಯೊಂದು ವರ್ಷದಿಂದ ತಿರುಪತಿಗೆ 250 ಕೋಟಿ ರು. ಮೌಲ್ಯದ 68 ಲಕ್ಷ ಕೆ.ಜಿ.ಯಷ್ಟು ನಕಲಿ ತುಪ್ಪ ಪೂರೈಕೆ ಮಾಡಿತ್ತು ಎಂದು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಹೇಳಿದೆ. ಹೌದು ನೆಲ್ಲೂರು ಕೋರ್ಟ್‌ಗೆ ಸಿಬಿಐ ಸಲ್ಲಿಸಿದ ವರದಿಯಲ್ಲಿ ಈ ಅಂಶಗಳಿವೆ. ಕಂಪನಿಗೆ ನಕಲಿ ತುಪ್ಪ ತಯಾರಿಸಲು ಬೇಕಾದ ರಾಸಾಯನಿಕಗಳನ್ನು ಪೂರೈಕೆ ಮಾಡುತ್ತಿದ್ದ ಬಂಧಿತ ಅಜಯ್ ಕುಮಾರ್ ಅಕ್ರಮದ ಕುರಿತು ಬಾಯಿಬಿಟ್ಟಿದ್ದಾನೆ. ಪಾಮಿಲ್ ಜೈನ್ ಮತ್ತು ವಿಪುಲ್ ಜೈನ್ ಎಂಬಿಬ್ಬರು ಉತ್ತರಾ ಖಂಡದ ಭಗವಾನ್‌ಪುರದಲ್ಲಿ ಭೋಲಾ ಬಾಬಾ ಆರ್ಗ್ ಯಾನಿಕ್ ಡೈರಿ ಆರಂಭಿಸಿದ್ದ ರು. ಇದು ತಿರುಪತಿ ಲಡ್ಡು ತಯಾರಿಕೆಗೆ ತುಪ್ಪ ಪೂರೈಕೆ ಗುತ್ತಿಗೆ ಪಡೆದುಕೊಂಡಿತ್ತು. ವಿಚಿತ್ರವೆಂದರೆ ಈ ಸಂಸ್ಥೆ ರೈತರಿಂದ ಒಂದೂ ಲೀಟರ್ ಹಾಲು ಖರೀದಿಸುತ್ತಿರಲಿಲ್ಲ. ಆದರೆ ನಕಲಿ…
ಬೆಂಗಳೂರು : ಪರ್ಪನ ಅಗ್ರಹಾರ ಜಾಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಮರ್ಯಾದೆ ಹರಾಜು ಹಾಕಿದ್ದೀರಿ ಎಂದು ಕಾರಾಗೃಹ ಅಧಿಕಾರಿಗಳ ಮೇಲೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಕೆಂಡಾ ಮಂಡಲವಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಸೌಲಭ್ಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ಜತೆ ನಿನ್ನೆ ಸಚಿವರು ಸಭೆ ನಡೆಸಿದರು. ಈ ಸಭೆಯಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಧಿಕಾರಿಗಳನ್ನು ಸಚಿವರು ಹಿಗ್ಗಾಮುಗ್ಗಾ ಜಾಡಿಸಿದ್ದಾರೆ ಎಂದು ತಿಳಿದು ಬಂದಿದೆ. ನಾನು ನೀವು ಕೊಡುವ ಅಂಕಿ-ಅಂಶಗಳ ಡೇಟಾ ನೋಡಲು ಬಂದಿಲ್ಲ. ರಾಷ್ಟ್ರಮಟ್ಟದಲ್ಲಿ ಇಲಾಖೆಯ ಗೌರವ ಹಾಳಾಗಿದೆ. ಈಗ ಬಂದು ಹಳೇ ವಿಡಿಯೋ ಎಂದು ಸಬೂಬು ಹೇಳುತ್ತಿದ್ದೀರಿ. 2023ರಲ್ಲಾಯ್ತು, 2024ರಲ್ಲಾಯ್ತು ಅಂತ ಹೇಳ್ತಿರಿ. ಆಗ ಯಾಕಾಯ್ತು ಅಂತ ಉತ್ತರ ಕೊಡಿ ಎಂದು ಅಧಿಕಾರಿಗಳಿಗೆ ಖಾರವಾಗಿ ಪ್ರಶ್ನಿಸಿದರು. ಜೈಲುಗಳಲ್ಲಿ ಶೋಧ ಕಾರ್ಯ ನಡೆಸಿದಾಗ ಏನೂ ಸಿಕ್ಕಿಲ್ಲ ಅಂತ ಹೇಳ್ತಿರಿ. ಈಗ ಅದೆಲ್ಲ ಹೇಗೆ…
ಕೋಲಾರ : ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಇಂದು ಮತ್ತೆ ಮರು ಎಣಿಕೆ ಆರಂಭವಾಗಿದ್ದು, ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಇರಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಏಜೆಂಟ್‌ಗಳನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗಿದೆ.ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಮಾಧ್ಯಮದವರಿಗೂ ಚುನಾವಣಾಧಿಕಾರಿಗಳು ನಿಷೇಧ ಹೇರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ 248 ಮತಗಳ ಅಂತರದಿಂದ ಕಾಂಗ್ರೆಸ್‍ನ ಕೆ.ವೈ. ನಂಜೇಗೌಡ ಜಯಗಳಿಸಿದ್ದರು. ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಕೆ ನಡೆಯುತ್ತಿದೆ.
ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಮಾಡಿದ ಆರೋಪ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣದಲ್ಲಿ ಗುರುವಾರದವರೆಗೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ. ಅಲ್ಲದೇ, ಸೈಲ್ ಅವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲು ವೃತ್ತಿಪರ ವೈದ್ಯರ ಹೆಸರನ್ನು ಜಾರಿ ನಿರ್ದೇಶನಾಲಯ ಸೂಚಿಸಬೇಕು ಎಂದು ಪೀಠ ಇದೇ ವೇಳೆ ತಿಳಿಸಿದೆ. ಸತೀಶ್ ಸೈಲ್‌ಗೆ ಮಂಜೂರು ಮಾಡಲಾಗಿರುವ ವೈದ್ಯಕೀಯ ಮಧ್ಯಂತರ ಜಾಮೀನನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಈ ಮಧ್ಯೆ, ಸೈಲ್ ಅವರ ಆರೋಗ್ಯ ಪರಿಸ್ಥತಿಗೆ ಸಂಬಂಧಿಸಿದ ದಾಖಲೆಯನ್ನು ಪರಿಶೀಲಿಸಿ ಅದನ್ನು ಖಾತರಿಪಡಿಸಲು ಯಾವ ವೈದ್ಯರನ್ನು ನೇಮಿಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲಹೆ ನೀಡಬೇಕು ಎಂದು ಇದೇ ವೇಳೆ ಪೀಠ ಹೇಳಿದೆ. ವಿಚಾರಣೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ವೈದ್ಯಕೀಯ ಜಾಮೀನು…
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೇಲಿನಲ್ಲಿ ಕೈದಿಗಳಿಗೆ ರಾಜಾಜಿತ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಈ ಒಂದು ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲು ನಿರ್ಧರಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ ಪರಮೇಶ್ವರ್ ಕಾರಾಗೃಹ ಕಚೇರಿಯಲ್ಲಿ ಜೈಲಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ, ಸಂದೀಪ್ ಪಾಟೀಲ್ ಅಮರನಾಥ ರೆಡ್ಡಿ ಹಾಗೂ ರಿಷಣ್ ಅವರನ್ನು ಒಳಗೊಂಡ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದ್ದು ತನಿಖೆ ನಡೆಸಿ ಒಂದು ತಿಂಗಳ ಒಳಗಾಗಿ ವರದಿ ನೀಡುವಂತೆ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಇದರ ಬೆನ್ನಲ್ಲೇ, ಕೆಪಿಎಸ್‌ಸಿ ಮೂಲಕ 1000 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ ಪರಮೇಶ್ವರ್ ಕಾರಾಗೃಹ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಲಾಗಿದೆ. ಕೆಪಿಎಸ್ಸಿ ಮೂಲಕ ಅಧಿಕಾರಿಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಹಾಯಕ ಅಧೀಕ್ಷಕರು ಸೇರಿದಂತೆ 1000 ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತದೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ನಡೆಯಲಿದೆ ಸಿಬ್ಬಂದಿ ಕೊರತೆ ನೀಗಿದರೆ ಸಮರ್ಪಕವಾಗಿ ನಿರ್ವಹಿಸಬಹುದು ಎಂದು ಜಿ ಪರಮೇಶ್ವರ್ ತಿಳಿಸಿದರು.
BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ : ಇಬ್ಬರು ಅಧಿಕಾರಿಗಳು ಸಸ್ಪೆಂಡ್ : ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ ಜೈಲಲ್ಲಿ ಅಕ್ರಮ ಚಟುವಟಿಕೆ ಕಾನೂನುಬಾಹಿರ ಚಟುವಟಿಕೆ ವಿಡಿಯೋಗಳು ವೈರಲ್ ಆಗಿರುವ ಕುರಿತಂತೆ ಇಂದು ಕಾರಾಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಸಭೆಯ ಬಳಿಕ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿದರು. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ, ಅವರು, ಜೈಲು ಅಧಿಕ್ಷಕ ಮ್ಯಾಗೇರಿ ಹಾಗೂ ಉಪಾಧಿಕ್ಷಕ ಅಶೋಕ್ ಬಜಂತ್ರಿ ಸಸ್ಪೆಂಡ್ ಮಾಡಲಾಗಿದೆ.ಕೆಲ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದು ಪ್ರಸಾರ ಆಗಿದೆ. ಮಾಧ್ಯಮದಲ್ಲಿ ಪ್ರಸಾರ ಆಗಿರುವಂತಹ ವಿಡಿಯೋಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯವಾದ ಕೆಲವು ವಿಡಿಯೋಗಳು 2023 ರಲ್ಲಿ ಆಗಿರುವುದು ಬೆಳಕಿಗೆ ಬಂದಿದೆ. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ವಿಡಿಯೋಗಳು ತನಿಖೆಗೆ ಸಮಿತಿ ರಚನೆ ಮಾಡಿದ್ದೇವೆ. ಇನ್ನು ಪರಪ್ಪನ ಅಗ್ರಹಾರ ದಿನ ಮುಖ್ಯ ಅಧ್ಯಕ್ಷಕ ಸುರೇಶ್ ಎತ್ತಂಗಡಿ ಮಾಡಲಾಗಿದ್ದು,…
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ ಜೈಲಲ್ಲಿ ಅಕ್ರಮ ಚಟುವಟಿಕೆ ಕಾನೂನುಬಾಹಿರ ಚಟುವಟಿಕೆ ವಿಡಿಯೋಗಳು ವೈರಲ್ ಆಗಿರುವ ಕುರಿತಂತೆ ಇಂದು ಕಾರಾಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆಗೆ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಸಭೆಯ ಬಳಿಕ ಪರಮೇಶ್ವರ್ ಅವರು ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಕೆಲ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದು ಪ್ರಸಾರ ಆಗಿದೆ. ಮಾಧ್ಯಮದಲ್ಲಿ ಪ್ರಸಾರ ಆಗಿರುವಂತಹ ವಿಡಿಯೋಗಳ ಬಗ್ಗೆ ಪರಿಶೀಲನೆ ನಡೆಸಿದ್ದೇವೆ. ಮುಖ್ಯವಾದ ಕೆಲವು ವಿಡಿಯೋಗಳು 2023 ರಲ್ಲಿ ಆಗಿರುವುದು ಬೆಳಕಿಗೆ ಬಂದಿದೆ. ಒಂದೆರಡು ವಿಡಿಯೋಗಳು ಮಾತ್ರ 3-4 ತಿಂಗಳ ಹಿಂದೆ ಆಗಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ವಿಡಿಯೋಗಳು ತನಿಖೆಗೆ ಸಮಿತಿ ರಚನೆ ಮಾಡಿದ್ದೇವೆ.
ಬೆಂಗಳೂರು : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಸಿ ಆರ್ ಪಿ ಸಿ ಸೆಕ್ಷನ್ 294 ಅಡಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದ್ದು, ಬೆಂಗಳೂರಿನ 57ನೇ CCH ಕೋರ್ಟಿಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಲಿದ್ದಾರೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿ ದರ್ಶನ್ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಆರ್ಪಿಸಿ ಸೆಕ್ಷನ್ 294 ಅಡಿ ಸಹಾಯಕ ಎಸ್ ಪಿ ಪಿ ಸಚಿನ್ ಅರ್ಜಿ ಸಲ್ಲಿಸಿದ್ದಾರೆ ಈ ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಲೆ ಆರೋಪಿ ನಟ ದರ್ಶನ್ ಹಾಜರಾಗಿದ್ದಾರೆ. ಮರುನ್ ಬಣ್ಣದ ಟಿ-ಶರ್ಟ್ ಹಾಗೂ ಹಣೆಗೆ ಕುಂಕುಮ ಹಚ್ಚಿ ದರ್ಶನ್ ಹಾಜರಾಗಿದ್ದಾರೆ. ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್ ಸೇರಿದಂತೆ ಆರೋಪಿಗಳ ಪರ ವಕೀಲರು ಕಾಲಾವಕಾಶ ಕೋರಿದರು. 5000ಕ್ಕೂ ಹೆಚ್ಚಿನ ದಾಖಲೆಗಳು ಇರುವುದರಿಂದ 15 ದಿನ ಸಮಯಕ್ಕೆ ಮನವಿ ಮಾಡಿದರು. ಬಳಿಕ 57ನೇ CCH ಕೋರ್ಟ್ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿತು.













