Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಿಜೆಪಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್ ಎಂಎಲ್ಸಿ ಸಿಟಿ ರವಿ ಎನ್ ರವಿಕುಮಾರ್ ಚಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಶಿವಾನಂದ್ ಸರ್ಕಲ್ ನಿಂದ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಿಎಂ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರು ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡರು ಬಳಿಕ ಬಿಎಂಟಿಸಿ ಬಸ್ ನಲ್ಲಿ ಬಿಜೆಪಿ ನಾಯಕರನ್ನು ಕರೆದೊಯ್ದರು.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜ್ಯಾತೀತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ಹಿನ್ನೆಲೆ ಸಿದ್ದರಾಮಯ್ಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸ ಹಾಗೂ ಗೃಹಕಚೇರಿ ಕೃಷ್ಣಬಳಿ ಪೊಲೀಸರ ಬಿಗಿ ಭದ್ರತೆ ನಿಯೋಜನೆಗೊಳಿಸಲಾಗಿದ್ದು, ಒಂದು ಕೆ ಎಸ್ ಆರ್ ಪಿ ತುಕಡಿ ಸೇರಿದಂತೆ 80ಕ್ಕೂ ಹೆಚ್ಚು ಪೋಲಿಸರಿಂದ ಭದ್ರತೆ ಒದಗಿಸಲಾಗಿದೆ. ಕುಮಾರ ಕೃಪ ಗೆಸ್ಟ್ ಹೌಸ್ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಿದ್ದಾರೆ. ವಶಕ್ಕೆ ಪಡೆದು ಎರಡು ಬಿಎಂಟಿಸಿ ಬಸ್ಗಳಲ್ಲಿ ಸಾಗಿಸಲು ವ್ಯವಸ್ಥೆ ಸಹ ಮಾಡಲಾಗಿದೆ. ಸದ್ಯ ಶಿವಾನಂದ ಸರ್ಕಲ್ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ನಟ ದರ್ಶನ್ ಆಪ್ತ ನಟ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೈಲಿನ ವಿಡಿಯೋ ಹೊರಗಡೆ ಬಂದಿರುವ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ದರ್ಶನ್ ಆಪ್ತ ಧನ್ವೀರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಡರಾತ್ರಿ ಒಂದು ಗಂಟೆಗೆ ಮನೆಯ ಬಳಿ ಧನ್ವೀರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಹಿನ್ನೆಲೆಯಲ್ಲಿ ದರ್ಶನ್ ಆಪ್ತ ಧನ್ವಿರ್ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.a
ಬೆಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ರೌಡಿಶೀಟರ್ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬೇಕಾರವಾಗಿ ಕೊಲೆ ಮಾಡಲಾಗಿತ್ತು ಈ ಒಂದು ಕೊಲೆ ಪ್ರಕರಣದ A1 ಆರೋಪಿಯಾಗಿದ್ದ ಜಗ್ಗ ಅಲಿಯಾಸ್ ಜಗದೀಶ್ ವಿದೇಶಕ್ಕೆ ಪರಾರಿಯಾಗಿದ್ದ. ಇದೀಗ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಜಗದೀಶನ ಆಪ್ತ ಅಜೀತ್ ನನ್ನ ಅರೆಸ್ಟ್ ಮಾಡಿದ್ದಾರೆ. ಹೌದು ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಆಪ್ತ ಅಜಿತ್ ನನ್ನು ಸಿಐಡಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಅಜಿತ್ ನನ್ನು ಬಂಧಿಸಿದ್ದಾರೆ ಪ್ರಕರಣದಲ್ಲಿ ಅಜಿತ್ ವಿರುದ್ಧ ಸಿಐಡಿ ಪೋಲೀಸರು ಹೆಚ್ಚುವರಿ ಸಾಕ್ಷಿ ಕಲೆ ಹಾಕಿದ್ದರು ಇಂದು ಬೆಳಿಗ್ಗೆ ರಾಮಮೂರ್ತಿ ನಗರದಲ್ಲಿ ಸಿಐಡಿ ಪೋಲೀಸರು ಅಜಿತ್ ವಶಕ್ಕೆ ಪಡೆದುಕೊಂಡಿದ್ದು ಕಚೇರಿಗೆ ಕರೆತಂದು ಆರೋಪಿ ಅಜಿತ್ ನನ್ನು ಅರೆಸ್ಟ್ ಮಾಡಿದ್ದಾರೆ ಮಧ್ಯಾಹ್ನ 3 ಗಂಟೆಯ ಬಳಿಕ ಕೋರ್ಟಿಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಪರಪ್ಪನ ಅಗ್ರಹಾರದಲ್ಲಿ ಅಕ್ರಮದ ವಿಡಿಯೋ ವಿಚಾರಕ್ಕೆ ಸಂಬಂಧಪಟ್ಟಂತೆ ಪೊಲೀಸ ಅಧಿಕಾರಕ್ಕೆ ಗೃಹ ಸಚಿವ ಜಿ ಪರಮೇಶ್ವರಿ ಸಭೆ ನಡೆಸಿದ್ದು ಸಭೆಯಲ್ಲಿ ಜೈಲು ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ ಅವರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ ಜೊತೆ ಜೈಲಾಧಿಕಾರಿಗಳ ಸಭೆ ನಡೆಯುತ್ತಿದ್ದು, ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ ವಿಡಿಯೋ ಬಗ್ಗೆ ತರಾಟೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳಿಗೆ ಪರಮೇಶ್ವರ್ ಅವರು ಹಿಗ್ಗಾಮುಗ್ಗ ಕ್ಲಾಸ್ ತೆಗೆದುಕೊಂಡಿದ್ದಾರೆ. ವಿಡಿಯೋ ಫೋಟೋಗಳನ್ನು ತೋರಿಸಿ ಪರಮೇಶ್ವರ್ ಕೆಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಾಜೆಕ್ಟ್ ನಲ್ಲಿ ಪ್ರದರ್ಶಿಸಿ ಸಚಿವರು ವಿವರಣೆ ಕೇಳಿದ್ದಾರೆ ಎಲ್ಲಾ ಫೋಟೋ ವಿಡಿಯೋಗಳನ್ನು ತೋರಿಸಿ ಪ್ರಶ್ನೆ ಕೇಳಿದ್ದಾರೆ ಜೈಲು ಅಧಿಕಾರಿಗಳು ಎದ್ದುನಿಂತು ಗೃಹ ಸಚಿವರಿಗೆ ಉತ್ತರ ನೀಡಿದ್ದಾರೆ ಯಾವ್ಯಾವ ಫೋಟೋ ಯಾವಾಗ ತೆಗೆದಿರುವುದು ಎಂಬುದರ ಕುರಿತು ಎಲ್ಲಾ ಮಾಹಿತಿಯನ್ನು ಗೃಹ ಸಚಿವ ಪರಮೇಶ್ವರ್ ಸಂಗ್ರಹಿಸುತ್ತಿದ್ದಾರೆ. ಬೆಂಗಳೂರಿನ ಕಾರಾಗೃಹ ಕಚೇರಿಯಲ್ಲಿ ಈ ಒಂದು ಮಹತ್ವದ ಸಭೆ ನಡೆಯುತ್ತಿದೆ.
ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ 15 ಜನರಿಗೆ ಗಂಭೀರವಾಗಿರುವ ಘಟನೆ ರಾಯಚೂರು ತಾಲೂಕಿನ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ರಾಯಚೂರು ತಾಲೂಕಿನ ಸಾತ್ ಮೈಲ್ ಕ್ರಾಸ್ ಬಳಿ, ಹೊಸಪೇಟೆಯಿಂದ ಹೈದರಾಬಾದ್ಗೆ ಕೆಕೆಆರ್ಟಿಸಿ ಸ್ಲೀಪರ್ ಕೋಚ್ ಬಸ್ ತಿರುಳುತ್ತಿತ್ತು. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಪಲ್ಟಿಯಾಗಿದೆ ಘಟನೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆ ನಡೆದಿದ್ದು, ಶಿವಮೊಗ್ಗ ನಗರದ ಬ್ಯಾಂಕ್ವೊಂದರ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಮೇಲೆ ಅದೇ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಚೇರಿ ಕೆಲಸಕ್ಕೆ ಒಬ್ಬರನ್ನೇ ಕರೆಯುವುದು, ಮೈ ಸವರುವುದನ್ನು ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬ್ಯಾಂಕಿನ ವ್ಯವಹಾರ ಸಂಬಂಧ ಮೀಟಿಂಗ್ ಎಂದು ಶಿವಮೊಗ್ಗದ ಹೋಟೆಲ್ ಒಂದಕ್ಕೆ ಕರೆಯಿಸಿಕೊಂಡು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದೇ ರೀತಿ ಮೂರು ಬಾರಿ ಮಾಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಹರಿಯಾಣ : ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹರಿಯಾಣದ ಫರಿದಾಬಾದ್ನಲ್ಲಿರುವ ವೈದ್ಯರ ಕೊಠಡಿಯಿಂದ 300 ಕೆಜಿ ಆರ್ಡಿಎಕ್ಸ್, ಎಕೆ -47 ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಶ್-ಎ-ಮೊಹಮ್ಮದ್ ಜೊತೆಗಿನ ಅವನ ಸಂಪರ್ಕದ ಬಗ್ಗೆ ತನಿಖೆ ಮುಂದುವರೆದಿದೆ. ಪೊಲೀಸರು ಭಾನುವಾರ ಕೊಠಡಿಯ ಮೇಲೆ ದಾಳಿ ನಡೆಸಿ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸರಣಿ ಸಂಘಟಿತ ದಾಳಿಗಳ ನಂತರ ಪ್ರಮುಖ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದಾರೆ. ಡಾ. ಆದಿಲ್ ಅಹ್ಮದ್ ರಾಥರ್ ಬಂಧನದ ನಂತರ ಪಡೆದ ಮಾಹಿತಿಯ ಮೇರೆಗೆ, ಹರಿಯಾಣದ ಫರಿದಾಬಾದ್ನಿಂದ ಸುಮಾರು 350 ಕಿಲೋಗ್ರಾಂಗಳಷ್ಟು ಸ್ಫೋಟಕಗಳು, ಎರಡು ಎಕೆ -47 ರೈಫಲ್ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು, ಕಾಶ್ಮೀರ ಕಣಿವೆಯಲ್ಲಿ ಡಾ. ಆದಿಲ್ಗೆ ಸಂಬಂಧಿಸಿದ ಲಾಕರ್ನಿಂದ ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಂಧಿತ ಮತ್ತೊಬ್ಬ ವೈದ್ಯನ ಬಹಿರಂಗಪಡಿಸುವಿಕೆಯ ಆಧಾರದ ಮೇಲೆ, ಅವರ ಗುರುತು ಇನ್ನೂ ಬಹಿರಂಗಪಡಿಸಲಾಗಿಲ್ಲ… ಪೊಲೀಸರು ಕಾರ್ಯಾಚರಣೆಗಳನ್ನು ನಡೆಸಿ ಶಸ್ತ್ರಾಸ್ತ್ರ ಮತ್ತು…
ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜಾರಿನಲ್ಲಿ ಕೈದಿಗಳ ಮೋಜು ಮಸ್ತಿ ಮಾಡುತ್ತಿರುವ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದ್ದು ಈಗಾಗಲೇ ವರದಿ ಕೊಡುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಈ ಒಂದು ಪ್ರಕರಣ ಬಹಳ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಬೆಂಗಳೂರಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಸರ್ಕಾರ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಯಾರ್ಯಾರು ಸಂಬಂಧಪಟ್ಟ ಅಧಿಕಾರಿಗಳು ಇದ್ದಾರೋ ಯಾವ ಜೈಲಿನಲ್ಲಿ ಜೈಲಾಧಿಕಾರಿಗಳಿದ್ದರೊ ಅವರೇ ಇದಕ್ಕೆ ಹೊಣೆಗಾರರಾಗಿದ್ದಾರೆ. ಸರಿಯಾದ ರೀತಿ ಆಡಳಿತ ಮಾಡುವಂತದ್ದು ಜೈಲಾಧಿಕಾರಿಗಳ ಕರ್ತವ್ಯ. ಮೊಬೈಲ್ ಫೋನ್ ಗಾಂಜ ಮದ್ಯ ಹಗ್ ಬೇರೆ ಯಾವುದೇ ಚಟುವಟಿಕೆಗಳು ನಡೆಯುತ್ತವೆ ಅಂದಾಗ ಅದಕ್ಕೆ ಹೊಣೆ ಜೈಲಾಧಿಕಾರಿಗಳೇ ಹೊಣೆ. ಇವತ್ತು ನಾನು ಪ್ರಮುಖವಾದ ಸಭೆ ಕರೆದಿದ್ದು ಸಭೆಯಲ್ಲಿ ಯಾವ ಪ್ರಮುಖ ಮಾಹಿತಿ ನೀಡುತ್ತಾರೋ ಅನೇಕ ಮಾಹಿತಿ ನಮಗೂ ಸಹ ಈಗಾಗಲೇ ಬಂದಿವೆ…
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಆಪ್ತ ಧನ್ವೀರ್ ವಿಡಿಯೋ ರಿಲೀಸ್ ಮಾಡಿದ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ಆರೋಪಿ ದರ್ಶನ ಧನ್ವೀರನನ್ನು ಕರೆಸಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಿನ್ನೆ ನಟ ಧನ್ವೀರ್ ನನ್ನು ಸಿಸಿಬಿ ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಈ ಒಂದು ವಿಡಿಯೋ ಕುರಿತಂತೆ ಕೊಲೆ ಆರೋಪಿ ದರ್ಶನ್ ಆಪ್ತ ಧನ್ವಿರ್ ನನ್ನ ಕರೆಸಿ ವಿಚಾರಣೆ ನಡೆಸಿದ್ದಾರೆ. ಆದರೆ ಆ ರೀತಿ ಯಾವುದೇ ವಿಡಿಯೋ ಧನ್ವೀರ್ ಬಳಿ ಪತ್ತೆ ಆಗಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ಧನ್ವೀರನನ್ನು ವಿಚಾರಣೆ ನಡೆಸಿ ಕಳುಹಿಸಿದ್ದಾರೆ.













