Author: kannadanewsnow05

ಉಡುಪಿ : ರಾಜ್ಯದಲ್ಲಿ RSS ಚಟುವಟಿಕೆ ಕಡಿವಾಣ ಹಾಕುವ ಬಗ್ಗೆ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಈ ವಿಚಾರವಾಗಿ ತಾಕತ್ತಿದ್ದರೆ ಆರ್‌ಎಸ್‌ಎಸ್‌ (RSS) ನಿಷೇಧ ಮಾಡಿ ಚುನಾವಣೆಗೆ ಬನ್ನಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆಗೆ ಮಾಜಿ ಸಚಿವ ಸುನಿಲ್‌ ಕುಮಾರ್‌ ಸವಾಲು ಹಾಕಿದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ಬ್ಯಾನ್‌ ಮಾಡುವಂತೆ ಸಿಎಂಗೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಈ ಕುರಿತು ಮಾತನಾಡಿದ ಸುನಿಲ್‌ ಕುಮಾರ್‌, ಆರ್‌ಎಸ್‌ಎಸ್ ನಿಷೇಧ ಹೇಳಿಕೆ ನಾಚಿಕೆ ಸಂಗತಿ.‌ ಪ್ರಿಯಾಂಕ್ ಖರ್ಗೆ ಅವಿವೇಕಿತನದ ಪತ್ರ ಬರೆದಿದ್ದಾರೆ. ಇವರ ತಂದೆ ಗೃಹ ಸಚಿವರವಾಗಿದ್ದಾಗಲೇ ಆರ್‌ಎಸ್‌ಎಸ್ ಅನ್ನು ಏನೂ ಮಾಡಲು ಆಗಿಲ್ಲ. ಅಧಿಕಾರದ ಮದ, ಸೊಕ್ಕಿನಿಂದ ಈ ರೀತಿಯ ಹೇಳಿಕೆ ಕೊಡುತ್ತಿದ್ದೀರಿ. ನಿಮ್ಮ ತಂದೆ ಎಐಸಿಸಿ ಅಧ್ಯಕ್ಷರಾಗಿ ಬರಬಹುದು ಪದೇ ಪದೇ ದುರಹಂಕಾರದಿಂದ ಮಾತನಾಡಬೇಡಿ. ಇದು ನಿಮ್ಮ ಬೆಳವಣಿಗೆಗೆ ಒಳ್ಳೆಯದಲ್ಲ ಎಂದು ಕಿಡಿಕಾರಿದರು. ಕರ್ನಾಟಕದಲ್ಲಿ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿಗಳಿಗೆ ಸಂಪುಟದಲ್ಲಿ ಹಿಡಿತ ಇಲ್ಲ. ಯಾರು ಏನು…

Read More

ಬೆಂಗಳೂರು : ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತೀದ್ದ ಕ್ಯಾಂಟರ್ ಒಂದು ಉರಿದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಪೂರ್ವ ತಾಲೂಕಿನ ಬೂದಿಗೆರೆ ರಸ್ತೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕ್ಯಾಂಟರ್ ಚಾಲಕ ವಾಹನದಿಂದ ತಕ್ಷಣ ಇಳಿದು ಪ್ರಣ ಉಳಿಸಿಕೊಂಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಕ್ಯಾಂಟರ್ ನ ಇಂಜಿನ್ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ರೀತಿಯಾಗಿ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ನಾಳೆ ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ನಾಳೆ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ…

Read More

ಮಂಡ್ಯ : ಡಿಕೆ ಶಿವಕುಮಾರರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ. ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಎಂದು ಮಂಡ್ಯದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತ್ತಿರುವ ಪ್ಲಾನ್ ನಡೆದಿತ್ತು ಉದ್ಘಾಟನೆ ಆದ ದಿನವೇ ರಾಷ್ಟ್ರೀಯ ನಾಯಕರು ಒಬ್ಬರು ಕರೆ ಮಾಡಿದರು ಡಿಕೆಸಿಎಂ ಹಾಗೂ ಬಿ ವೈ ವಿಜೇಂದ್ರ ಡಿಸಿಎಂ ಆಗುವ ಪ್ಲಾನ್ ನಡೆಯುತ್ತಿದೆ ಎಂದಿದ್ದರು. ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ 90 ಶಾಸಕರನ್ನು ಕರೆತರುತ್ತಾರೆ ಅಂದುಕೊಂಡಿದ್ದರು. ಆದರೆ 15 ಶಾಸಕರಷ್ಟೇ ಡಿಕೆ ಶಿವಕುಮಾರ್ ಅವರ ಪರವಾಗಿ 15 ಶಾಸಕರಷ್ಟೇ ಅಂತ ಗೊತ್ತಾದ ಮೇಲೆ ಪ್ಲಾನ್ ಕೈ ಬಿಟ್ಟರು.ಈ ಹಿಂದೆ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ ಇದನ್ನು ನಾನು ವಿರೋಧಿಸುತ್ತೇನೆ ಎಂದು ನನ್ನನ್ನು ಬಿಜೆಪಿಯಿಂದ ಉಚ್ಛಾಟಿಸಿದ್ದಾರೆ ಎಂದು ಮಂಡ್ಯದಲ್ಲಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕವಾದ ಹೇಳಿಕೆ ನೀಡಿದರು.

Read More

ಮಂಡ್ಯ : ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಡಿಕೆ ಶಿವಕುಮಾರರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ ಎಂದು ಮಂಡ್ಯದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತ್ತಿರುವ ಪ್ಲಾನ್ ನಡೆದಿತ್ತು ಉದ್ಘಾಟನೆ ಆದ ದಿನವೇ ರಾಷ್ಟ್ರೀಯ ನಾಯಕರು ಒಬ್ಬರು ಕರೆ ಮಾಡಿದರು ಡಿಕೆಸಿಎಂ ಹಾಗೂ ಬಿ ವೈ ವಿಜೇಂದ್ರ ಡಿಸಿಎಂ ಆಗುವ ಪ್ಲಾನ್ ನಡೆಯುತ್ತಿದೆ ಎಂದಿದ್ದರು. ಡಿಕೆ ಶಿವಕುಮಾರ್ ಕಾಂಗ್ರೆಸ್ ನಿಂದ 90 ಶಾಸಕರನ್ನು ಕರೆತರುತ್ತಾರೆ ಅಂದುಕೊಂಡಿದ್ದರು. ಆದರೆ 15 ಶಾಸಕರಷ್ಟೇ ಡಿಕೆ ಶಿವಕುಮಾರ್ ಅವರ ಪರವಾಗಿ 15 ಶಾಸಕರಷ್ಟೇ ಅಂತ ಗೊತ್ತಾದ ಮೇಲೆ ಪ್ಲಾನ್ ಕೈ ಬಿಟ್ಟರು.ಈ ಹಿಂದೆ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿಗೆ ಕರೆತರಲು ಪ್ಲಾನ್ ಮಾಡಿದ್ದು ನಿಜ ಇದನ್ನು ನಾನು ವಿರೋಧಿಸುತ್ತೇನೆ ಎಂದು ನನ್ನನ್ನು ಬಿಜೆಪಿಯಿಂದ ಉಚ್ಛಾಟಿಸಿದ್ದಾರೆ ಎಂದು ಮಂಡ್ಯದಲ್ಲಿ ಶಾಸಕ ಬಸನಗೌಡ ಪಾಟೀಲ ಸ್ಫೋಟಕವಾದ ಹೇಳಿಕೆ ನೀಡಿದರು.

Read More

ಹಾಸನ : ಹಾಸನದಲ್ಲಿ ಭೀಕರ ಕೊಲೆಯಾಗಿದ್ದು, ಲವ್ ಬ್ರೇಕಪ್ ಸಂಬಂಧ ಪ್ರೇಮಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಸಂದೀಪ್ (24) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ. 3 ವರ್ಷಗಳಿಂದ ಮೈಸೂರು ಜಿಲ್ಲೆಯ ಯುವತಿಯನ್ನು ಪ್ರೀತಿಸುತ್ತಿದ್ದ. ಲವ್ ಬ್ರೇಕಪ್ ಹಿನ್ನೆಲೆ ಹುಡುಗಿ ಕಡೆಯವರಿಂದ ಕೊಲೆ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ ಮನೆಯಿಂದ ಬೈಕ್ ನಲ್ಲಿ ತೆರಳಿದ್ದ ಸುದೀಪ್ ಶವವಾಗಿ ಪತ್ತೆಯಾಗಿದ್ದಾನೆ. ಮಚ್ಚಿನಿಂದ ಕೊಚ್ಚಿ ಕೊಲೆಗೈದು ಅಪಘಾತದ ರೀತಿ ಬಿಂಬಿಸುವ ಯತ್ನಿಸಲಾಗಿದೆ. ಕೊಲೆ ಮಾಡಿ ಶವ ಬೈಕ್ ನ್ನು ಮುಚ್ಚಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯಗೆ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಸಂಘ ದೇಶ ಸೇವೆ ನಿರಂತವಾಗಿ ಮಾಡುತ್ತ ನೂರು ವರ್ಷ ಪೂರೈಸಿದೆ. ಜಮ್ಮು ಕಾಶ್ಮೀರದಲ್ಲಿ ಸಂವಿಧಾನ ಜಾರಿಯಲ್ಲಿರಲಿಲ್ಲ ಅಲ್ಲು ಜಾರಿಯಾಗಬೇಕೆಂದು ಶ್ಯಾಮ್ ಪ್ರಕಾಶ್ ಮುಖರ್ಜಿ ಹುತಾತ್ಮರಾದರು. ಸಂಘ ವಂಶಪಾರಂಪರ್ಯ ಇಲ್ಲ, ಸ್ವಾರ್ಥ ಇಲ್ಲ. ಇದನ್ನು ತಿಳಿದುಕೊಳ್ಳಲು ಪ್ರಿಯಾಂಕ್ ಅಪ್ರಬುದ್ಧ ಪತ್ರ ಬರೆದಿದ್ದಾರೆ. ಓರ್ವ ವ್ಯಕ್ತಿ ಒಬ್ಬರನ್ನು ಟೀಕಿಸಬೇಕು ಅಂದ್ರೆ ಎರಡು ಕಾರಣಗಲಿರುತ್ತೆ. ಒಂದು ಸೈದ್ದಂತಿಕಾ ಮತ್ತೊಂದು ಅರಿವಿನ ಕೊರತೆ ಕಾರಣವಾಗಿರುತ್ತದೆ. ಇಲ್ಲಿ ಪ್ರಿಯಾಂಕ್ ಖರ್ಗೆ ಕೂಡ ಅರಿವಿನ ಕೊರತೆ ಇದೆ. ಪ್ರಿಯಾಂಕ್ ಖರ್ಗೆ ಅವರು ಆರ್ಟಿಕಲ್ 19ನ್ನು ಉಲ್ಲಂಘನೆ ಮಾಡಿದ್ದಾರೆ. ಆರ್ಟಿಕಲ್ 19 ಪ್ರಕಾರ ಮುಕ್ತವಾಗಿ ಸಭೆ ಸೇರಬಹುದು, ಮಾತಾಡಬಹುದು. ಹಾಗಾಗಿ ಪ್ರಿಯಾಂಕ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಸಂವಿಧಾನ ಆಶಾಯಕ್ಕೆ ವಿರುದ್ಧವಾಗಿ ನಕಾರಾತ್ಮಕ ಆಲೋಚನೆ ತುಂಬುತ್ತಾರೆ. ನಕಾರಾತ್ಮಕ ಆಲೋಚನೆ…

Read More

ಹಾವೇರಿ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಗುವ ವಿಚಾರಕ್ಕೆ ಸಂಬಂಧಪಟ್ಟಂತೆ ಇಂತಹ ಪತ್ರಗಳು ಬಂದು ಹೋಗಿವೆ ಆದರೆ ಇದು ಪ್ರಿಯಾಂಕ ಖರ್ಗೆ ಗೊತ್ತಿಲ್ಲ ಎಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ ಪ್ರಹ್ಲಾದ ಜೋಶಿ ಹೇಳಿಕೆ ನೀಡಿದರು. ಮುತ್ತಾತ ಅವರು ಆಕ್ರಮಣಕ್ಕೆ ಒಳಗಾಗಿದ್ದರು. ರಾಹುಲ್ ಗಾಂಧಿ ಮುತ್ತಾತ ನರಸಿಂಹರಾವ್ ಕಡಿವಾಣಕ್ಕೆ ಮುಂದಾಗಿದ್ದರು. ದೇಶದಲ್ಲಿ ಮೂರನೇ ಸಲ ಬಿಜೆಪಿ ಅಧಿಕಾರಕ್ಕೆ ಬಂದಿದೆ ಒಂದು ವೇಳೆ ಆರ್ ಎಸ್ ಎಸ್ ಕೆ ನಿರ್ಬಂಧ ಹಾಕಿದರೆ ನಾವು ಸುಮ್ಮನಿರಲ್ಲ ಕುಕ್ಕರ್ ಹಿಡಿದವರು, ತಲ್ವಾರ್ ಇವರಿಗೆ ಬ್ರದರ್ಸ್ ಇದ್ದಂತೆ. ತಲ್ವಾರ್ ಹಿಡಿದು ತಿರುಗಾಡುವವರನ್ನು ಬಂಧಿಸಿ ನೋಡೋಣ ಎಂದು ಸವಾಲು ಹಾಕಿದರು. ಆರ್ ಎಸ್ ಎಸ್ ಭಾರತದ ತಾಲಿಬಾನಿಗಳು ಎಂದು ಎಂಎಲ್ಸಿ ಬಿ ಕೆ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಆರ್ ಎಸ್ ಎಸ್ ಗೆ ಬೈದರೆ ಮಂತ್ರಿ ಮಾಡುತ್ತಾರೆ ಅಂತ ಹರಿಪ್ರಸಾದ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಯಾವ ಚಡ್ಡಿ ಹಾಕ್ಕೊಂಡಿದ್ದನ್ನ ತಿಳಿಯಬೇಕು. ಅದು ಖಾಕಿ…

Read More

ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆಯ ಮೇಲೆ ಕ್ರೇನ್ ಟವರ್ ಬಿದ್ದು ಭಾರೀ ಅನಾಹುತ ಒಂದು ಸಂಭವಿಸಿದೆ. ಮನೆಯ ಮೇಲೆ ಬಿದ್ದ ಕ್ರೇನ್ ಟವರ್ ನಿಂದ ಒಬ್ಬನ ಸ್ಥಿತಿ ಗಂಭೀರವಾಗಿದ್ದು ಘಟನೆಯಲ್ಲಿ ಮನೆಯಲ್ಲಿದ್ದ ಐವರಿಗೆ ಕೆಆರ್ ಪುರಂ ನಲ್ಲಿ ಬೃಹತ್ ಕ್ರೇನ್ ಒಂದು ಕುಸಿದು ಬಿದ್ದಿದೆ. ಕ್ರೇನ್ ರಿಪೇರಿ ಮಾಡಲು ಬಳಸುವ ಲ್ಯಾಡರ್ ಗಳು ಕುಸಿತವಾಗಿವೆ, ಮೆಡಹಳ್ಳಿ ಬಡಾವಣೆಯಲ್ಲಿ ಮಧ್ಯಾಹ್ನ ಈ ಒಂದು ಘಟನೆ ನಡೆದಿದ್ದು ಬಾಡಿಗೆ ಮನೆಯಲ್ಲಿ ನೆಲೆಸಿದ ಇವರಿಗೆ ಗಂಭೀರವಾದ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.ಸದ್ಯಕ್ಕೆ ಅವಲಹಳ್ಳಿ ಠಾಣೆ ಪೋಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಮಧ್ಯಪ್ರದೇಶ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 15ಕ್ಕೂ ಹೆಚ್ಚು ಮಕ್ಕಳ ಸರಣಿ ಸಾವಿನ ಬೆನ್ನಲ್ಲೇ, ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಇದುವರೆಗೂ 390ಕ್ಕೂ ಹೆಚ್ಚು ಕೆಮ್ಮಿನ ಸಿರಪ್ ಸ್ಯಾಂಪಲ್ ತಪಾಸಣೆ ನಡೆಸಿದ್ದು, ಅವುಗಳಲ್ಲಿ ಯಾವುದೇ ರೀತಿಯಾದ ನೆಗೆಟಿವ್ ಅಂಶ ವರದಿಯಾಗಿಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಬೆಂಗಳೂರಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಮ್ಮಿನ ಸಿರಪ್ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, 390 ಸ್ಯಾಂಪಲ್ ತಪಾಸಣೆ ಮಾಡಿಸುತ್ತಿದ್ದೇವೆ. ವರದಿಯ ಯಾವುದರಲ್ಲೂ ನೆಗೆಟಿವ್ ಬಂದಿಲ್ಲ. ಎಲ್ಲಾ ಡ್ರಗ್ ಮ್ಯಾನಿಫ್ಯಾಕ್ಟರ್​ಗಳ ಮಾನದಂಡವನ್ನು ಮತ್ತೊಮ್ಮೆ ಪರಿಶೀಲನೆ ಮಾಡಲಾಗ್ತಿದೆ. ಅವ್ಯವಸ್ಥೆ ಇರಬಾರದು, ನಿಯಮ‌ ಪ್ರಕಾರ ಔಷಧ ತಯಾರು ಮಾಡಬೇಕು. ಅದನ್ನೆಲ್ಲಾ ಪರಿಶೀಲನೆ ಮಾಡಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

Read More