Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ನಟ ದರ್ಶನ್ ಅವರು ಡೆವಿಲ್ ಸಿನಿಮಾ ಶೂಟಿಂಗ್ ಗೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿದೆ. ಹೌದು ಡೆವಿಲ್ ಸಿನಿಮಾ ಶೂಟಿಂಗಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡುವಂತೆ ಕೋರಿ ನಟ ದರ್ಶನ್ ಕಳೆದ ಎರಡು ದಿನಗಳ ಹಿಂದೆ ಅರ್ಜಿ ಸಲ್ಲಿಸಿದ್ದರು ಇಂದು ವಿಚಾರಣೆ ನಡೆಸಿದ ಕೋರ್ಟ್ ಜುಲೈ 1 ರಿಂದ ಜುಲೈ 27 ರವರೆಗೆ ತೆರಳಲು ಅನುಮತಿ ನೀಡಿದ್ದು, ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಿಂದ ಅನುಮತಿ ದೊರಕಿದೆ. ಮುಂದಿನ ವಿಚಾರಣೆಯಂದು ತಪ್ಪದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.
ಮಂಗಳೂರು : ಮಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಇಂದು ಒಂದೇ ಕುಟುಂಬದ ಮೂವರು ಹಾಗೂ ಓರ್ವ ಬಾಲಕಿ ಸೇರಿದಂತೆ ನಾಲ್ವರು ಬಲಿಯಾಗಿದ್ದಾರೆ. ಇದೀಗ ಮಹಾ ಮಳೆಗೆ ಐದನೇ ಬಲಿಯಾಗಿದ್ದು ಟಿಸಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಮೆಸ್ಕಾಂ ನೌಕರರೊಬ್ಬ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳದಲ್ಲಿ ನಡೆದಿದೆ. ಲೈನ್ ದುರಸ್ತಿಯ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ. ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಓಡಿನ್ಮಾಳ ಗ್ರಾಮದ ಕುಲಮುಂಜ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ವೀರೇಶ್ ಜೈನ್ (27) ದುರ್ಮರಣ ಹೊಂದಿದ್ದಾನೆ. ಮಳೆಯಿಂದ ಟಿಸಿ ಕೆಟ್ಟು ಹೋಗಿತ್ತು. ಇದನ್ನು ದುರಸ್ತಿ ಮಾಡುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ವೀರೇಶ್ ಸಾವನ್ನಪ್ಪಿದ್ದಾನೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಗಲಕೋಟೆ : ಇತ್ತೀಚಿಗೆ ಯುವಜನತೆಯಲ್ಲಿ ಹೃದಯಾಘಾತ ಎನ್ನುವುದು ಬಹಳವಾಗಿ ಕಾಡುತ್ತಿದೆ. ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಬಾಗಲಕೋಟೆ ಜಿಲ್ಲೆ ಮೂಲದ ಯೋಧರೊಬ್ಬರು, ಚಂಡಿಘಡ ನಲ್ಲಿ ಸೇನಾ ತರಬೇತಿ ಪಡೆಯುವ ವೇಳೆ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಿಂಚಲಕಟ್ಟಿ ಎಲ್‌ಎಟಿ ಗ್ರಾಮದ ಯೋಧ ಉಪೇಂದ್ರ ಸೋಮನಾಥ ರಾಠೋಡ (23) ಬುಧವಾರ ಸೇನಾ ತರಬೇತಿ ವೇಳೆ ಹೃದಯಾಘಾತದಿಂದ ಚಂಡೀಗಢದಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾರ್ಚ್‌ನಲ್ಲಿ ಅಸ್ಸಾಂ ರೈಫಲ್ಸ್‌ನಲ್ಲಿ ಸೇನೆಗೆ ಆಯ್ಕೆಯಾಗಿದ್ದ ಉಪೇಂದ್ರ, ಮೂರು ತಿಂಗಳಿನಿಂದ ಚಂಡೀಗಢದಲ್ಲಿ ಸೇನಾ ತರಬೇತಿ ಪಡೆಯುತ್ತಿದ್ದರು. ಕಳೆದ ಬುಧವಾರ ತರಬೇತಿ ವೇಳೆ ಸೋಮನಾಥ ಅವರಿಗೆ ಹೃದಯಘಾತ ಸಂಭವಿಸಿ ಸಾವನಪ್ಪಿದ್ದಾರೆ. ಇಂದು ಪಾರ್ಥಿವ ಶರೀರ ಸ್ವಗ್ರಾಮಕ್ಕೆ ಆಗಮಿಸಲಿದ್ದು, ಅಂತ್ಯಕ್ರಿಯೆ ನೆರವೇರಲಿದೆ.
ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಇದೀಗ ಶಿರಾಡಿ ಘಾಟ್ ತಿರುವಿನಲ್ಲಿ ಸರ್ಕಾರಿ ಬಸ್ ಹಾಗೂ ಕಂಟೇನರ್ ನಡುವೆ ಭೀಕರ ಅಪಘಾತವಾಗಿದ್ದು, ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಬಚಾವಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಕಂಟೇನರ್ ವಾಹನ ತೆರಳುತ್ತಿತ್ತು. ಸಕಲೇಶಪುರದಿಂದ ಸರ್ಕಾರಿ ಬಸ್ ಬೆಂಗಳೂರಿನ ಕಡೆಗೆ ತೆರಳುತ್ತಿತ್ತು. ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಬಂದು ಸರ್ಕಾರಿ ಬಸ್ ಅಡಿಕೆ ಹೊಡೆದಿದೆ. ನಿಯಂತ್ರಣಕ್ಕೆ ಸಿಗದೇ ಕಂಟೇನರ್ ಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಿಂದ NH 75 ರಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೂಡಲೇ ಸಿಬ್ಬಂದಿಗಳು ಪ್ರಯಾಣಿಕರನ್ನು ಬೇರೆ ಬಸ್ ಗಳಲ್ಲಿ ತೆರಳುವ ವ್ಯವಸ್ಥೆ ಮಾಡಿದರು. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಕನ್ನಡವು ತಮಿಳಿನಿಂದ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು ರಾಜ್ಯದಲ್ಲಿ ಕಮಲಹಾಸನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಇದೀಗ ಅನುಮತಿ ಇಲ್ಲದೆ ಕಮಲ್ ಹಾಸನ್ ಭಾವಚಿತ್ರ ಸುಟ್ಟು ಹಾಕಿ ಪ್ರತಿಭಟನೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ. ಹೌದು ಬಸವೇಶ್ವರ ಠಾಣೆ ಪೋಲಿಸರಿಂದ ಅನುಮತಿ ಇಲ್ಲದೆ ಪ್ರತಿಭಟನೆ ಮಾಡಿದ್ದಕ್ಕೆ ಪ್ರತಿಭಟನಾಕಾರರ ವಿರುದ್ಧ ಸಮೋಟೋ ಕೇಸ್ ದಾಖಲಾಗಿದೆ. ಕಮಲ್ ಹಾಸನ್ ಭಾವಚಿತ್ರ ಹಿಡಿದು ಪ್ರತಿಭಟಸುತ್ತಿದ್ದರು. ನಮ್ಮ ಕರುನಾಡು ಯುವ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಅನುಮತಿ ಇಲ್ಲದೆ ಪ್ರತಿಭಟಿಸಿದ್ದಾರೆ ಎಂದು ಇದೀಗ FIR ದಾಖಲಾಗಿದೆ. ಇದೀಗ ಕಮಲ್ ಹಾಸನ್ ವಿರುದ್ಧ ಧರಣಿ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಮಲ್ ಹಾಸನ ವಿರುದ್ಧ ಪ್ರತಿಭಟಿಸಿದವರಿಗೆ ಬಿಗ್ ಶಾಕ್ ಎದುರಾಗಿದೆ. ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ ಹಾಕಿದ್ದಕ್ಕೆ FIR ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಪೊಲೀಸರಿಂದ ಅಕ್ರಮವಾಗಿ ಐಪಿಎಲ್ ಟಿಕೆಟ್ ಮಾರಾಟ ದಂಧೆ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಸಸ್ಪೆಂಡ್ ಮಾಡಿ ಇದೀಗ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಅವರು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರವಿಚಂದ್ರ ಹಾಗೂ ಟಿ ಎಂ ಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಅನುಚೇತ್ ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಬ್ಲಾಕ್ ನಲ್ಲಿ ಐಪಿಎಲ್ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿದ್ದರು. ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ಕೂಡ ದಾಖಲಾಗಿತ್ತು. 20,000 ನಗದು 61 ಐಪಿಎಲ್ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆರೋಪಿಗಳಿಗೆ ಗೋವಿಂದರಾಜ ನಗರ ಪೊಲೀಸರು ನೋಟಿಸ್ ನೀಡಿದ್ದರು. ಬಂಧನದ ಭೀತಿಯಿಂದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಮೇ 17ರಂದು ಆರ್ಸಿಬಿ ಮತ್ತು ಕೆಕೆಆರ್ ನಡುವೆ ಪಂದ್ಯ ಇತ್ತು. ಈ ಪಂದ್ಯದ ಟಿಕೆಟ್ಗಳನ್ನು ವಿಜಯನಗರದ ಪಾರ್ಕ್ ಬಳಿ…
ಮಂಗಳೂರು : ರಾಜ್ಯದಲ್ಲಿ ಮಹಾಮಳೆಗೆ ಬಾರಿ ಅವಾಂತರಗಳು ಸೃಷ್ಟಿಯಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗುಡ್ಡ ಕುಸಿದು ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಮಂಗಳೂರಿನಲ್ಲಿ ಮತ್ತೊಂದು ದುರಂತ ನಡೆದಿದ್ದು, ಮೀನುಗಾರಿಕೆಗೆ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಮೀನುಗಾರರು ನೀರು ಪಾಲಾಗಿರುವ ಘಟನೆ ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೌದು ಮಂಗಳೂರಿನಲ್ಲಿ ಮಳೆಗೆ ಮತ್ತೊಂದು ಭೀಕರ ದುರಂತ ಸಂಭವಿಸಿದ್ದು, ಸಮುದ್ರದಲ್ಲಿ ನಾಡ ದೋಣಿ ಮುಗುಚಿ ಇಬ್ಬರು ನೀರು ಪಾಲಾಗಿದ್ದಾರೆ. ಸಮುದ್ರದಲ್ಲಿ ಇಬ್ಬರು ಮೀನುಗಾರರು ಕೊಚ್ಚಿ ಹೋಗಿದ್ದಾರೆ. ತೋಟಬೇಂಗ್ರೇ ಅಳಿವೇ ಬಾಗಿಲುವಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಯಶವಂತ ಮತ್ತು ಕಮಲಾಕ್ಷ ಇಬ್ಬರೂ ಮೀನುಗಾರರು ನೀರುಪಾಲಾಗಿದ್ದಾರೆ. ನಾಡ ದೋಣಿಯಲ್ಲಿ ಮೀನುಗಾರಿಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಕಡಲಿನ ಅಲೆಯ ಅಬ್ಬರಕ್ಕೆ ನಾಡ ದೋಣಿ ಮುಗುಚಿದೆ. ಈ ವೇಳೆ ನಾಡ ದೋಣಿಯ ಅವಶೇಷಗಳು ಕಡಲ ತೀರದಲ್ಲಿ ಬಂದು ಬಿದ್ದಿವೆ. ಇದೀಗ ಇಬ್ಬರು ಮೀನುಗಾರರಿಗಾಗಿ ಶೋಧ…
ಹುಬ್ಬಳ್ಳಿ : ಅಣ್ಣ ತಮ್ಮನ ಜಗಳ ಬಿಡಿಸಲು ಬಂದಿದ್ದ ತಾಯಿಯನ್ನು ಪಾಪಿ ಮಗನೋಬ್ಬ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪದ್ಮ (46) ಎಂದು ತಿಳಿದುಬಂದಿದೆ. ಮಂಜುನಾಥ್ ಮತ್ತು ಲಕ್ಷ್ಮಣ ಎನ್ನುವ ಸಹೋದರರು ಕಟಿಂಗ್ ಶಾಪ್ ಇಟ್ಕೊಂಡು ಜೀವನ ನಡೆಸುತ್ತಿದ್ದರು. ಕಟಿಂಗ್ ಮಾಡಿದ ಹಣ ಹಂಚಿಕೆ ವಿಚಾರದಲ್ಲಿ ಇಬ್ಬರ ಸಹೋದರರ ನಡುವೆ ಜಗಳ ನಡೆದಿದೆ. ಸಹೋದರರಾದ ಮಂಜುನಾಥ್ ಮತ್ತು ಲಕ್ಷ್ಮಣ ನಡುವೆ ಹಣದ ವಿಚಾರವಾಗಿ ಗಲಾಟೆ ನಡೆದಿದೆ. ಜಗಳ ಬಿಡಿಸಲು ಬಂದಿದ್ದ ತಾಯಿಯ ಹೊಟ್ಟೆಗೆ ಮಂಜುನಾಥ್ ಕಿಟಕಿ ಗಾಜಿನಿಂದ ಇರಿದಿದ್ದಾನೆ. ತಾಯಿ ಪದ್ಮ ಹೊಟ್ಟೆಗೆ ಮಂಜುನಾಥ ಕಿಟಕಿಯ ಗಾಜಿನಿಂದ ಇರಿದಿದ್ದಾನೆ. ತಕ್ಷಣ ಪದ್ಮಾವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೆ ನರಳಾಡಿ ಪದ್ಮ ಚಲೂರಿ ಸಾವನಪ್ಪಿದ್ದಾರೆ. ಸದ್ಯ ಅವರ ಮಕ್ಕಳಾದ ಮಂಜುನಾಥ್ ಮತ್ತು ಲಕ್ಷ್ಮಣನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಹಾಸ್ಟೆಲ್ ನಲ್ಲಿದ್ದ ಐವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಮಕ್ಕಳ ಆಸರೆ ಬಾಲ ಮಂದಿರದಿಂದ ಬಾಲಕಿಯರು ಇದೀಗ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹಾಸ್ಟೆಲ್ ನವರು ಚಿಕ್ಕಬಳ್ಳಾಪುರ ಗ್ರಾಮ ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಬಳಿಯಿರುವ ಹಾಸ್ಟೆಲ್ನಿಂದ ಐವರು ಬಾಲಕಿಯರು ನಾಪತ್ತೆಯಾಗಿದ್ದಾರೆ. ಮದರ್ ತೆರೇಸಾ ಟ್ರಸ್ಟ್ ಅನ್ನು ಈ ಹಾಸ್ಟೆಲ್ ನಡೆಸುತ್ತಿದೆ. ಅನಾಥ ಹೆಣ್ಣುಮಕ್ಕಳು, ಸಿಂಗಲ್ ಪೇರೆಂಟ್ ಮಕ್ಕಳಿಗೆ ಈ ಒಂದು ಹಾಸ್ಟೆಲ್ ನಲ್ಲಿ ಆಶ್ರಯ ನೀಡಲಾಗುತ್ತದೆ. ಐವರು ಬಾಲಕಿಯರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಟ್ರಸ್ಟ್ ನಿಂದ ಚಿಕ್ಕಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗ್ಯಾಸ್ ಸಿಲೆಂಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ನಿಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತಮಾರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮೇ 21ರಂದು ಮಧ್ಯಾಹ್ನದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಮಹೇಶ್ ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಹಿಳೆ ಮೈಸೂರಿಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಮಹೇಶ್ ಮನೆಗೆ ಬಂದಿದ್ದಾನೆ. ಮನೆಯ ಬಳಿ ಗ್ಯಾಸ್ ಸಿಲಿಂಡರ್ ವಾಹನ ತಂದು ನಿಲ್ಲಿಸಿದ್ದ. ಮನೆ ಬಾಗಿಲು ಬಡಿದು ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳಿ ಅಂದಿದ್ದ. ಈ ವೇಳೆ ನಾವು ಸಿಲಿಂಡರ್ ಬುಕ್ ಮಾಡಿಲ್ಲ ಎಂದು ಮಹಿಳೆ ನಿರಾಕರಿಸಿದ್ದಾರೆ. ಸಿಲಿಂಡರ್ ಖಾಲಿಯಾಗಿದ್ದರೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದ. ಆತನ ಮಾತು ನಂಬಿ 950 ನೀಡಿ ಸಿಲಿಂಡರ್ ಪಡೆದಿದ್ದರು. ಈ ವೇಳೆ ಅಡುಗೆಮನೆ ಫೋಟೋ ತೆಗೆಯಬೇಕು ಅಂತ ಮಹೇಶ್ ಹೇಳಿದ್ದಾನೆ. ಫೋಟೋ ತೆಗೆದು ಆನ್ಲೈನ್…