Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ದುಬೈ ನಿಂದ ಅಕ್ರಮವಾಗಿ ಚಿನ್ನ ಸಾಗಾಟ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟಿ ರಮ್ಯಾ ರಾವ್ ಗೆ ಇದೀಗ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮೂರು ದಿನಗಳ ಕಾಲ ಡಿ ಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ ಯಾರಾವ್ ಅವರು ಇತ್ತೀಚಿಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಇಂದು ನಟಿ ರನ್ಯಾರಾವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ನಟಿ ರನ್ಯಾ ರಾವ್ ಅವರಿಗೆ ಮೂರು ದಿನ ಡಿ ಆರ್ ಐ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಸಿದೆ. ದುಬೈ ನಿಂದ ಸುಮಾರು 14 ಕೆಜಿ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಇತ್ತೀಚಿಗೆ ಅರೆಸ್ಟ್ ಆಗಿದ್ದರು. ಇದೀಗ ಮೂರು ದಿನಗಳ ಕಾಲ ನೀಡಿ DRI ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ
ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣದ ಹಾಗೂ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆದಂತೆ ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆ ಆಗಲಿದೆ. ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆ ಆಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನಗರ ಏರಿಕೆ ಆಗಲಿದೆ. ಹೆಚ್ಚಳ ಮಾಡಿರುವ ಹಾಲಿನ ದರದ ಹಣ ರೈತರಿಗೆ ಹೋಗಲಿದೆ. ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಥವಾ ಅಧಿವೇಶನ ಮುಗಿದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಅಭಿಮಾನಿ ಹೇಳಿಕೆ ನೀಡಿದರು.
ಬೆಂಗಳೂರು : ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ರಾಜ್ಯದ ಯಜಮಾನಿಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಒಂದು ತಿಂಗಳ ಗೃಹಲಕ್ಷ್ಮಿ ಹಣ ಖಾತಿಗೆ ಜಮೆ ಆಗಿತ್ತು. ಇದೀಗ ಗೃಹಲಕ್ಷ್ಮೀ ಯೋಜನೆಯನ್ನು ಯಾವುದೇ ಕಾರಣಕ್ಕೂ ಪರಿಷ್ಕರಣೆ ಮಾಡುವುದಿಲ್ಲ, ಜನೆವರಿ ಮತ್ತು ಫೆಬ್ರುವರಿ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರ ಖಾತೆಗೆ ಜಮೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆಯು ಸದ್ಯ ಈಗ ಯಾವ ರೀತಿ ನಡೆದುಕೊಂಡು ಹೋಗುತ್ತಿದೆಯೇ; ಹಾಗೆಯೇ ಮುಂದುವರೆದುಕೊಂಡು ಹೋಗಲಿದೆ; ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅನುದಾನ ಸರಿಯಾಗಿ ಸದ್ಭಳಕೆ ಕೆಲವೊಂದು ಇಲಾಖೆಗಳಲ್ಲಿ ಕಳೆದ ಬಜೆಟ್ ನಲ್ಲಿ ನೀಡಿದ ಹಣವೇ ಖರ್ಚಾಗುತ್ತಿಲ್ಲವೆಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿಯಲ್ಲಿ ಇತ್ತು.…
ಬೆಳಗಾವಿ : ಕಳೆದ ವರ್ಷ ರಾಜ್ಯದಲ್ಲಿ ಬಳ್ಳಾರಿ ಬೆಳಗಾವಿ ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೆಳೆಸಿದ್ದು ಇದೀಗ ಬೆಳಗಾವಿಯ ಬಿಮ್ಸ್ ನಲ್ಲಿ ಮತ್ತೊರ್ವ ಬಾಣಂತಿಯ ಸಾವಾಗಿರುವುದು ಪ್ರಕರಣ ವರದಿಯಾಗಿದೆ. ಮೃತ ಬಾಣಂತಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಲಗಮೇಶ್ವರ ಗ್ರಾಮದ ಕೀರ್ತಿ ನೇಸರಗಿ(19) ಮೃತ ಬಾಣಂತಿ ಎನ್ನಲಾಗಿದ್ರ್. ಕೀರ್ತಿಗೆ ಎರಡು ದಿನದ ಹಿಂದೆ ವೈದ್ಯರು ಸಿಜರಿನ್ ಮಾಡಿ ಹೆರಿಗೆ ಮಾಡಿದ್ದರು. ಆದರೆ ಕೀರ್ತಿಗೆ ತೀವ್ರ ರಕ್ತಸ್ರಾವವಾಗಿ ಇದೀಗ ಸಾವನಪ್ಪಿದ್ದಾರೆ. ಬಾಣಂತಿ ಕೀರ್ತಿಗೆ ರಕ್ತಸ್ರಾವ ಆಗುತ್ತಿದ್ದರೂ ಕೂಡ ಯಾವುದೇ ಐಸಿಯು ನಲ್ಲಿ ಚಿಕಿತ್ಸೆ ಕೊಡಿಸದೆ ವಾರ್ಡ್ ಗೆ ಶಿಫ್ಟ್ ಮಾಡಿದ್ದರು. ಹಾಗಾಗಿ ಕೀರ್ತಿ ಸಾವನಪ್ಪಿದ್ದಾಳೆ ಎಂದು ಮೃತ ಕೀರ್ತಿಯ ಕುಟುಂಬಸ್ಥರು ವೈದ್ಯರ ವಿರುದ್ಧ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಘಟನೆ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ಇತ್ತೀಚಿಗೆ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಯಸ್ಸಿನ ಮಿತಿ ಎನ್ನದೆ ಹೃದಯಘಾತಕ್ಕೆ ಅನೇಕರು ಬಲಿಯಾಗುತ್ತಿದ್ದಾರೆ. ಇದೀಗ ರೈಲಲ್ಲಿ ಪ್ರಯಾಣಿಸುತ್ತಿರುವಾಗಲೇ ಗ್ರಾಮ ಪಂಚಾಯಿತಿ ಸದಸ್ಯರು ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿಯನ್ನು ಕುತ್ತಾರು ಮದನಿನಗರ ನಿವಾಸಿ ಮುನ್ನೂರು ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ಅಝೀಝ್ ಆರ್.ಕೆ.ಸಿ (42) ಎಂದು ತಿಳಿದುಬಂದಿದೆ.ವ್ಯವಹಾರ ನಿಮಿತ್ತ ದೆಹಲಿಗೆ ತೆರಳಿ ವಾಪಸ್ಸಾಗುತ್ತಿದ್ದಾಗ ದಾರಿ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ಸಮೀಪ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಮುಂದಿನ ನಿಲ್ದಾಣ ಕುಮಟಾದಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಪ್ರಯತ್ನ ಮಾಡಲಾಯಿತಾದರೂ ಅದಾಷ್ಟರಲ್ಲಾಗಲೇ ಅಬ್ದುಲ್ ಅಝೀಝ್ ನಿಧನರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಮೃತರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ವಿಶ್ವವಿದ್ಯಾಲಯಗಳ ಸ್ಥಗಿತ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ಚಾಮರಾಜನಗರ, ಮಂಡ್ಯ ವಿಶ್ವವಿದ್ಯಾಲಯ ಸರ್ಟಿಫಿಕೇಟ್ ತೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಬಿವೈ ವಿಜಯೇಂದ್ರ ಅಕ್ಕನ ಮಗ ಪಿಇಎಸ್ ವಿಶ್ವವಿದ್ಯಾಲಯ ಓದಿದ್ದರು ಪ್ರವೇಶ ಸಿಗಲಿಲ್ಲ ಎಂದು ತಿಳಿಸಿದರು. ವಿದೇಶಿ ವಿಶ್ವವಿದ್ಯಾಲಯದಲ್ಲಿ ಬಿವೈ ವಿಜಯೇಂದ್ರ ಅಕ್ಕನ ಮಗನಿಗೆ ಪ್ರವೇಶ ಸಿಗಲಿಲ್ಲ. ಎಸ್ ಎಂ ಕೃಷ್ಣ ವಿದೇಶಾಂಗ ಸಚಿವರಾಗಿದ್ದಾಗ ವಿದೇಶಿ ವಿಶ್ವ ವಿದ್ಯಾಲಯದಲ್ಲೂ ಪ್ರವೇಶ ಸಿಗಲಿಲ್ಲ. ಕೆಲವು ವಿವಿಗಳನ್ನು ಬೇರೆ ವಿವಿಗಳ ಜೊತೆ ವಿಲೀನ ಮಾಡುತ್ತಿದ್ದೇವೆ ಅಷ್ಟೇ. ವಿಶ್ವವಿದ್ಯಾಲಯಗಳು ನಾವು ಮುಚ್ಚುತ್ತಿದ್ದೇವೆ ಅಂತ ಅಲ್ಲ ಎಂದು ತಿಳಿಸಿದರು. ಬೆಂಗಳೂರು ವಿವಿ, ಮೈಸೂರು ವಿವಿಗೆ ಅವುಗಳದ್ದೇ ಆದಂತಹ ಸ್ಥಾನ ಮತ್ತು ಮೌಲ್ಯವಿದೆ. ಹೊಸ ವಿಶ್ವವಿದ್ಯಾಲಯಗಳನ್ನು ವಿಲೀನ ಮಾಡುತಿದ್ದೇವೆ.ಆದರೆ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚಿಲ್ಲ ಹೊಸ ವಿಶ್ವವಿದ್ಯಾಲಯಗಳಿಗೆ ಯಾವುದೇ ಉಪನ್ಯಾಸಕರು ಹೋಗುತ್ತಿರಲಿಲ್ಲ.ನೀವು ವಿಭಜನೆ ಮಾಡುತ್ತೀರಿ, ನಾವು ವಿಲೀನ ಮಾಡುತ್ತೇವೆ. ನಮಗೂ ನಿಮಗೂ ಇಷ್ಟೆ ವ್ಯತ್ಯಾಸವಿದೆ ನೀವು…
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಜಮೀನಿನಲ್ಲಿ ಇರುವಂತಹ ಕೃಷಿ ಹೊಂಡಕ್ಕೆ ಈಜಲು ತೆರಳಿದ್ದ ಇಬ್ಬರು ವ್ಯಕ್ತಿಗಳು ಮುಳುಗಿ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ನೆಲ್ಲಿಕಟ್ಟೆ ಎಂಬ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ವ್ಯಕ್ತಿಗಳು ಸಾವನಪ್ಪಿದ್ದಾರೆ. ಮೃತರನ್ನು ನಾಗರಾಜು (35) ಶ್ರೀನಿವಾಸ (40) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ಗ್ರಾಮದ ಅಜ್ಜಪ್ಪ ಎಂಬುವವರ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್ : ಬೀದರ್ ನಲ್ಲಿರುವ ಬ್ರಿಮ್ಸ್ ಆಸ್ಪತ್ರೆ ಸೂಪರ್ ವೈಸರ್ ನಿಂದ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಹಿಳಾ ಆಯೋಗ ಅಧ್ಯಕ್ಷರ ಕಾಲಿಗೆರಗಿ ಸಂತ್ರಸ್ತ ಮಹಿಳೆ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ. ಬ್ರಿಮ್ಸ್ ಆಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ ನೀಡಿದ ವೇಳೆ ಮಹಿಳೆ ತನಗೆ ಕಿರುಕುಳ ನೀಡಿರುವ ಬಗ್ಗೆ ದೂರು ನೀಡಿದ್ದಾರೆ.ಆರೋಪಿ ಪ್ರಕಾಶ್ ತನ್ನ ಮಾತು ಕೇಳದಿದ್ದರೆ ಕೆಲಸದಿಂದ ತೆಗೆದುಹಾಕುವ ಬೆದರಿಕೆಯನ್ನೂ ಹಾಕಿದ್ದಾಗಿ ತಿಳಿಸಿದ್ದಾರೆ. ಕೆಲಸ ಮಾಡಿದರೂ ಸಂಬಳ ನೀಡುತ್ತಿಲ್ಲ, ಹಾಜರಿ ಹಾಕುತ್ತಿಲ್ಲ ಎಂದಿದ್ದಾರೆ. ನಾನು ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆದರೆ, ಕಳೆದ ಒಂದು ವರ್ಷದಿಂದ ಬ್ರಿಮ್ಸ್ ಸೂಪರ್ ವೈಸರ್ ಪ್ರಕಾಶ ಮಾಳಗೆ ನನಗೆ ಕಿರುಕುಳ ನೀಡುತ್ತಿದ್ದಾರೆ. ನನ್ನ ಮಾತು ಕೇಳಬೇಕು ಇಲ್ಲವಾದರೆ ನೋಡಿಕೊಳ್ಳುತ್ತೇನೆ ಎಂದು ಹೆದರಿಸಿ ಹಾಜರಿ ಸಹ ಕೊಡುತ್ತಿಲ್ಲ ಎಂದು ಆರೋಪಿಸಿದರು. ಈ ಸಂಬಂಧಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಿಳಾ ಪೊಲೀಸ್ ಠಾಣೆ ಹಾಗೂ ನ್ಯೂ…
ಬೆಂಗಳೂರು : ಈಗಾಗಲೇ ಸರಕಾರ ಕೆಎಸ್ಆರ್ಟಿಸಿ ಬಸ್ ಹಾಗು ಮೆಟ್ರೋ ಟಿಕೆಟ್ ಪ್ರಯಾಣದ ಅದರ ಏರಿಕೆ ಮಾಡಿ ರಾಜ್ಯದ ಜನರಿಗೆ ಬಿಗ್ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆಯುವಂತೆ ಇದೀಗ ಮತ್ತೆ ದರ ಏರಿಕೆಯ ಶಾಕೆ ನೀಡುತ್ತಿದ್ದು, ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ನಿನ್ನೆ ಪಶುಸಂಗೋಪನಾ ಸಚಿವರು ಹಾಲಿನ ದರದ ಬಗ್ಗೆ ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಗಳ ಜೊತೆ ಕೂಡ ಹಾಲಿನ ದರ ಏರಿಕೆ ಆಗುವ ಕುರಿತು ಚರ್ಚೆಯಾಗಿದೆ ಎಂದರು. ಅಲ್ಲದೆ ಹಾಲಿನ ದರ ಏರಿಕೆಯಾಗುವ ಕುರಿತು ಇನ್ನು ಅಂತಿಮ ನಿರ್ಣಯ ಆಗಿಲ್ಲ. ಏರಿಕೆಯಾದಂತಹ ಅಷ್ಟು ಹಣ ರೈತರಿಗೆ ಹೋಗುತ್ತದೆ. ಹಾಲು ಉತ್ಪಾದನೆ ದರ ಹೆಚ್ಚಳವಾಗಿದೆ. ಹೆಚ್ಚುವರಿ ದರದ ಮೊತ್ತ ರೈತರಿಗೆ ತಲುಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಅತಿ ಶೀಘ್ರದಲ್ಲಿ ದರ ಏರಿಕೆ ಆಗಲಿದೆ ಎಂದು ತಿಳಿಸಿದರು.
ಬೆಂಗಳೂರು : ಅಪಾಯಕಾರಿ ವ್ಹೀಲಿಂಗ್ ಮಾಡಿ ಚಾಕು, ಚೂರಿ ತೋರಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದವರ ವಿರುದ್ಧ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಬಂಧಿಸಲಾಗುತ್ತಿದೆ.ಅಲ್ಲದೇ ಇನ್ಮುಂದೆ ಅಪಾಯಕಾರಿ ವ್ಹೀಲಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 1342 ಪ್ರಕರಣಗಳು ದಾಖಲಾಗಿದ್ದು, 1046 ಜನರನ್ನು ಬಂಧಿಸಲಾಗಿದೆ ವ್ಹೀಲಿಂಗ್ ಮಾಡುವುದಲ್ಲದೆ ಚಾಕು, ಚೂರಿ ಹಾಗೂ ಲಾಂಗ್ ಹಿಡಿದುಕೊಂಡು ಓಡಾಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದೆಲ್ಲೆಡೆ ದಾಖಲಾದ ಒಟ್ಟು ವ್ಹೀಲಿಂಗ್ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ 893 ಪ್ರಕರಣ ದಾಖಲಾಗಿದ್ದು, 788 ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದ ಇತರೆಡೆ 449 ಪ್ರಕರಣ ದಾಖಲಾಗಿದ್ದು, 258 ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ ಎಂದು ಪ್ರಶೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ಎಲ್.ಬೋಜೇಗೌಡ ಪ್ರಶ್ನೆಗೆ ಸಚಿವರು ಮಾಹಿತಿ ನೀಡಿದರು.