Subscribe to Updates
Get the latest creative news from FooBar about art, design and business.
Author: kannadanewsnow05
ಲ್ಲಿ ಯುವಕ ಯುವತಿ ಸಾವು ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಮೃತ ಕಾವೇರಿಗೆ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ಪತಿ ಮತ್ತು ಮಕ್ಕಳನ್ನು ಬಿಟ್ಟು ಕಾವೇರಿ ಕೆಲಸಕ್ಕೆ ಅಂತ ಬೆಂಗಳೂರಿಗೆ ಬಂದಿದ್ದಾಳೆ. ಗದಗ ಮೂಲದ ರಮೇಶ್ ಜೊತೆಗಿದ್ದಾಗಲೇ ಕಾವೇರಿ ಸಾವನಪ್ಪಿದ್ದಾಳೆ. ಗದಗ ಮೂಲದ ರಮೇಶ್ ಜೊತೆಗೆ ಹುನಗುಂದ ಮೂಲದ ಕಾವೇರಿ ಸಾವನ್ನಪ್ಪಿದ್ದು, ರಮೇಶ್ ಜೊತೆಗೆ ಕಾವೇರಿ ಅನೈತಿಕ ಸಂಬಂಧ ಹೊಂದಿದ್ದಳು. ಮದುವೆ ವಿಚಾರವಾಗಿ ಕಾವೇರಿಗೆ ರಮೇಶ್ ಒತ್ತಡ ಹೇರಿರುವ ಅನುಮಾನ ವ್ಯಕ್ತವಾಗುತ್ತಿದೆ. ಆದರೆ ಕಾವೇರಿ ಒಪ್ಪದೇ ಇದ್ದ ಸಂದರ್ಭದಲ್ಲಿ ಪೆಟ್ರೋಲ್ ಸುರಿದು ಬೆದರಿಕೆ ಹಾಕಲಾಗಿತ್ತು ಎಂದು ತಿಳಿದು ಬಂದಿದೆ. ಬೆದರಿಕೆ ಹಾಕಲು ಹೋಗಿ ಇಬ್ಬರು ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದ್ದು ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದ್ದು ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಇದೀಗ ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಸಹ ಕಡಿಮೆಯಾಗಿಲ್ಲ. ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚುರುಕು ಪಡೆದಿದ್ದು, ಕಳೆದ ಎರಡು ದಿನಗಳಿಂದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಗುರುವಾರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 15ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದಿರುವ ಹವಾಮಾನ ಇಲಾಖೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು…
ಕಲಬುರ್ಗಿ : ಕಲಬುರ್ಗಿಯಲ್ಲಿ ಘೋರ ದುರಂತವೊಂದು ನಡೆದಿದ್ದು, ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಶಾಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನಲೆ ಭಾಗ್ಯಶ್ರೀ (31) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು ಸಲ್ಲಿಸಿದ ವಿಚಾರಣೆ ನಡೆಯಿತು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿ ನಾಳೆಗೆ ಆದೇಶ ಕಾಯ್ದೆಸಿದರು. ಪ್ರಾಸಿಕ್ಯೂಷನ್ ವಾದಕ್ಕೆ ದರ್ಶನ್ ಪರ ವಕೀಲ ಸುನಿಲ್ ಪಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ನಿಂದನೆ ಅಪರಾಧ ಘಟಿಸಿದೆಯೇ ಇಲ್ಲವೇ ಪರಿಶೀಲಿಸಬೇಕು. ದರ್ಶನ್ ಸಲ್ಲಿಸಿದ ಮೆಮೊ ಸಂಬಂಧ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಜಡ್ಜ್ ಖುದ್ದು ಪರಿಶೀಲಿಸಿದರೆ ಪ್ರಾಸಿಕ್ಯೂಷನ್ ಗೆ ಭಯ ಏಕೆ? ಸವಲತ್ತು ನೀಡಿದೆಯೋ ಇಲ್ಲವೋ ಕೋರ್ಟ್ ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲೇಖಿಸಿ ಸುನಿಲ್ ವಾದಿಸಿದರು. ಆಗ ಕೇಂದ್ರದ ಮಾರ್ಗ ಸೂಚಿ ರಾಜ್ಯಕ್ಕೆ ಅನ್ವಯ ಆಗುವುದಿಲ್ಲ ಎಂದು ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಜಡ್ಜ್ ಗೆ…
ಚಿತ್ರದುರ್ಗ : ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಹಗರಣ ಸಂಬಂಧ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಉದ್ಯಮಿ ಕೆ.ಸಿ.ವೀರೇಂದ್ರ ಅಲಿಯಾಸ್ ಪಪ್ಪಿ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ ಇದರ ಬೆನ್ನಲ್ಲೇ ಇಂದು ಇಡೀ ಅಧಿಕಾರಿಗಳು ಮತ್ತೆ ಚಳ್ಳಕೆರೆಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಹೌದು ಇಡಿ ಇಂದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಬಂಧನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಚಳ್ಳಕೆರೆಯಲ್ಲಿ ಮತ್ತೆ ದಾಳಿ ಮಾಡಿದ್ದಾರೆ. ಚಳ್ಳಕೆರೆಯ ಫೆಡರಲ್ ಬ್ಯಾಂಕ್ ನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ವಿವಿಧಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಪ್ರಕರಣ ಹಿನ್ನೆಲೆ? ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ನಡೆಸಿ ಬಹುಕೋಟಿ ಹಣ ಗಳಿಸಿರುವ ಬಗ್ಗೆ ಶಾಸಕ ವೀರೇಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಪ್ರಕರಣ…
ಕೊಡಗು : ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಇಂದು ನಸುಕಿನ ಜಾವ ವಸತಿ ಶಾಲೆಯಲ್ಲಿ 6 ವರ್ಷದ ಬಾಲಕ ಸಜೀವ ದಹನ ಆಗಿರುವ ಘಟನೆ ನಡೆದಿದ್ದು ಇನ್ನು ಶಾಲೆಯ ಇಬ್ಬರು ಬಾಲಕರು 51 ಮಕ್ಕಳನ್ನ ರಕ್ಷಣೆ ಮಾಡಿದ್ದಾರೆ. ಜೀವದ ಹಂಗು ತೊರೆದು ಬಾಲಕರು ರಕ್ಷಣೆ ಮಾಡಿದ್ದಾರೆ 10 ವರ್ಷದ ಬಬಿನ್ ಮತ್ತು 11 ವರ್ಷದ ಯಶ್ವಿನ್ ಸಾಹಸಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ. ಮಡಿಕೇರಿಯಲ್ಲಿರುವ ಹರಿಮಂದಿರ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ ಈ ಒಂದು ಘಟನೆ ಸಂಭವಿಸಿದ್ದು, 2ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಪುಷ್ಪಕ್ ಈ ಒಂದು ಘಟನೆಯಲ್ಲಿ ಸಾವನಪ್ಪಿದ್ದಾನೆ. ಹರಿ ಮಂದಿರದ ವಸತಿ ಶಾಲೆಯಲ್ಲಿ ಬೆಳಗಿನ ಜಾವ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು 4:15 ರ ಸುಮಾರಿಗೆ ಹೊಗೆಯಿಂದ ಬಬೀನ್ ಗೆ ಎಚ್ಚರವಾಗಿದೆ. ಬೆಂಕಿ ಬಿದ್ದ ವಿಚಾರ ಅರಿತು ಆತ ಯಶ್ವಿನ್ ಗೆ ಕರೆದಿದ್ದಾನೆ. ಆಗ ಎಲ್ಲ ಮಕ್ಕಳನ್ನು ಕಿರುಚಿ ಇಬ್ಬರು ಬಾಲಕರು ಎಬ್ಬಿಸಿದ್ದಾರೆ. ಬೆಂಕಿಯಿಂದಾಗಿ ಬಾಲಕರು ಬಾಗಿಲಿನತ್ತ ಓಡುವ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದರು. ಇದೀಗ ನ್ಯಾ. ಎಂ. ಐ ಅರುಣ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ತಮ್ಮ ತಪ್ಪನ್ನು ವಿಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಒಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಅವಳು ನನ್ನ ಮೊಮ್ಮಗಳು ಇದ್ದಂತೆ ಚೆಕ್ ಮಾಡಿದೆ ಅಂತ ಹೇಳಿದ್ದಾರೆ. ಹಳೆಯ ಪೋಕ್ಸೋ ಪ್ರಕರಣಕ್ಕೆ ನ್ಯಾಯ ಕೊಡಿಸುವಂತೆ ಬಂದಿದ್ದರು ಮಹಿಳೆ ತನ್ನ ಮಗಳ ಬಗ್ಗೆ ಬೇಕಿದ್ದರೆ ಚೆಕ್ ಮಾಡಿಕೊಳ್ಳಿ ಎನ್ನುತ್ತಿದ್ದರು. ಅದನ್ನೇ ಚೆಕ್ ಮಾಡಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯವನ್ನು ಒಪ್ಪಿಕೊಂಡಿಲ್ಲವೆಂದು ಸಿವಿ ನಾಗೇಶ್ ವಾದ ಮಂಡಿಸಿದರು. ಈ ವೇಳೆ ಪ್ರಾಜಿಕ್ಯೂಷನ್ ಪರವಾಗಿ ವಾದ ಮಂಡನೆಗೆ 15 ನಿಮಿಷ ಸಾಕು ಪ್ರೊ. ರವಿವರ್ಮ ಕುಮಾರ್ ಮನವಿ ಮಾಡಿದ್ದು, ಈ ವೇಳೆ ಯಡಿಯೂರಪ್ಪ ಅರ್ಜಿ ವಿಚಾರಣೆ ಹೈಕೋರ್ಟ್ ನಾಳೆ ಮುಂದೂಡಿತು.
ಕೊಪ್ಪಳ : ಕಿರ್ಲೋಸ್ಕರ್ ಕಾರ್ಖಾನೆಯ ಮೇಲಾಧಿಕಾರಿಗಳ ನಿಂದನೆ ಹಿನ್ನೆಲೆಯಲ್ಲಿ ಕೆಮಿಕಲ್ ಸೇವಿಸಿ ಸಹಾಯಕ ಎಂಜಿನಿಯರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪಳ ತಾಲೂಕಿನ ಗಿಣಿಗೇರ ಬಳಿಯ ಕಿರ್ಲೊಸ್ಕರ್ ಕಾರ್ಖಾನೆಯಲ್ಲಿ ನಡೆದಿದೆ. ಬಸವರಾಜ ಅಡಗಿ ಆತ್ಮಹತ್ಯೆಗೆ ಎಬ್ಬಿಸಿದ ಸಹಾಯಕ ಇಂಜಿನಿಯರ್ ಎಂದು ತಿಳಿದುಬಂದಿದೆ ನಿನ್ನೆ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಮಷೀನ್ ಸಮಸ್ಯೆ ಆಗಿತ್ತು ಬಸವರಾಜ ಕೆಲಸ ಮಾಡುವ ವೇಳೆ ಬಸವರಾಜ್ ಅವರನ್ನು ಬೈದಿದ್ದಾರೆ ನೀನು ಸರಿಯಾಗಿ ಕೆಲಸ ಮಾಡಿಲ್ಲವೆಂದು ಬೈದಿದ್ದಾರೆ ಇದರಿಂದ ಮಾನವೊಂದು ಕೆಮಿಕಲ್ ಸೇವಿಸಿ ಬಸವರಾಜ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನನ್ನು ರಸ್ತೆಯಲ್ಲಿಯೇ ಮಾರಕಾಯಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ಸಂಕಷ್ಟ ಎದುರಾಗಿದ್ದು ಬಂಧನದಿಂದ ರಕ್ಷಣೆ ಆದೇಶ ತೆರವಿಗೆ ರಾಜ್ಯ ಸರ್ಕಾರ ಇದೀಗ ಅರ್ಜಿ ಸಲ್ಲಿಸಿದೆ. ಈ ವೇಳೆ ಭೈರತಿ ಬಸವರಾಜ್ ಪರ ಹಿರಿಯ ವಕೀಲ ಸಂದೇಶ ಚೌಟ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಪೊಲೀಸರು ಕೋಕಾ ಕಾಯಿದೆ ಹಾಕಿದ್ದಾರೆ. ಸಂಘಟಿತ ಅಪರಾಧಕ್ಕೆ ಮಾತ್ರ ಕೋಕ ಕಾಯ್ದೆ ಹಾಕಬಹುದು. ಕೋಕ ಕಾಯಿದೆಯ ಅಡಿ ನಿರೀಕ್ಷಣಾ ಜಾಮೀನಿಗೆ ಅವಕಾಶವಿಲ್ಲ. ಮಧ್ಯಂತರ ರಕ್ಷಣೆ ತೆರೆವುಗೊಳಿಸಿದರೆ ನಿರೀಕ್ಷಣ ಜಾಮೀನಿಗೂ ಅವಕಾಶ ಇಲ್ಲ. ರಾಜಕೀಯ ದ್ವೇಷದಿಂದ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಸ್ವತಂತ್ರ ನಿಖಾ ಸಂಸ್ಥೆಯಿಂದ ತನಿಖೆ ಕೋರಲು ಚಿಂತಿಸುತ್ತಿದ್ದೇವೆ. ಹೀಗಾಗಿ ಮಧ್ಯಂತರ ರಕ್ಷಣೆ ತೆರವುಗೊಳಿಸಿದಂತೆ ಮನವಿ ಮಾಡಿದರು. ಭೈರತಿ ಬಸವರಾಜ್ ಪರ ವಕೀಲರ ವಾದಕೆ ಎಸ್ ಪಿ ಪಿ ಬಿ ಎನ್…
ಬೆಂಗಳೂರು : ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ SBI ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ. ಸದ್ಯಕ್ಕೆ 9 ಕೆಜಿ ಚಿನ್ನ 86.31 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಡಚಣ SBI ಬ್ಯಾಂಕ್ ದರೋಡೆಗೆ ಆರೋಪಗಳಿಗೆ ನೇರವಾಗಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ರಾಕೇಶ್ ಕುಮಾರ್ ಸಹಾನಿ (22) ರಾಜಕುಮಾರ ಪಾಸ್ವನ್ (21) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.














