Author: kannadanewsnow05

ಇಂದಿನ ಯುಗದಲ್ಲಿ ಎಲ್ಲರೂ ಹಣ ಎಂಬ ಕಾಗದದ ಕಡೆಗೆ ಓಡುತ್ತಿದ್ದಾರೆ. ಶಾಂತಿ ನೆಮ್ಮದಿಯಿಂದ ಬದುಕಲು ಹಣ ಸಂಪಾದಿಸುವ ಪರಿಸ್ಥಿತಿ ಬದಲಾಗಿದೆ, ಇಂದು ನಾವು ಹಣ ಸಂಪಾದಿಸಲು ಇವೆಲ್ಲವನ್ನೂ ಕಳೆದುಕೊಳ್ಳುತ್ತೇವೆ. ಇವೆಲ್ಲ ಗೊತ್ತಿದ್ದರೂ ಬೇರೆ ದಾರಿಯಿಲ್ಲದೆ ಓಡಬೇಕಾದ ಪರಿಸ್ಥಿತಿ ನಮ್ಮದು. ಹೀಗೇ ಓಡುತ್ತಿದ್ದರೂ ಹಣ ಬರುತ್ತಿದ್ದರೆ ಅದೂ ಇಲ್ಲ. ಇಂದು ಕಷ್ಟಪಟ್ಟು ದುಡಿಯುವವರೆಲ್ಲ ಕೈಯಲ್ಲಿ ಹಣ ಉಳಿದಿಲ್ಲ. ಇದಕ್ಕೆಲ್ಲ ಕಾರಣ ನಮ್ಮ ದುಷ್ಟ ಗ್ರಹದೋಷ ಮತ್ತು ಇವೆಲ್ಲವನ್ನೂ ಮೀರಿ ಹಣವನ್ನು ಆಕರ್ಷಿಸುವ ಸಾಮರ್ಥ್ಯ ನಮಗಿಲ್ಲ ಎಂದೂ ಹೇಳಲಾಗುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆಯನ್ನು ಬಳಸಿದ್ದಕ್ಕೆ ವ್ಯಕ್ತವಾಗಿರುವ ಟೀಕೆಗಳ ವಿರುದ್ಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಉರ್ದು ಕೂಡ ಭಾರತದ ಒಂದು ಭಾಷೆ ತಾನೇ?” ಎಂದು ಪ್ರಶ್ನಿಸುವ ಮೂಲಕ ಅವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ: ಇತ್ತೀಚೆಗೆ ನಡೆದ ಸರ್ಕಾರಿ ಕಾರ್ಯಕ್ರಮವೊಂದರ ಆಹ್ವಾನ ಪತ್ರಿಕೆಯಲ್ಲಿ ಕನ್ನಡದ ಜೊತೆಗೆ ಉರ್ದು ಭಾಷೆಯನ್ನು ಬಳಸಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿತ್ತು. ಅನೇಕರು ಇದು ‘ಭಾಷಾ ತುಷ್ಟೀಕರಣ’ ಎಂದು ಆರೋಪಿಸಿದ್ದರು. ದಿನೇಶ್ ಗುಂಡೂರಾವ್ ಹೇಳಿದ್ದೇನು?: ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಭಾಷೆಯ ವಿಷಯದಲ್ಲಿ ಅನಗತ್ಯ ವಿವಾದ ಸೃಷ್ಟಿಸುವುದು ಸರಿಯಲ್ಲ. ಉರ್ದು ಈ ದೇಶದ ಭಾಷೆಯಲ್ಲವೇ? ಆ ಭಾಷೆ ಮಾತನಾಡುವ ಜನರಿಗಾಗಿ ಅವರ ಭಾಷೆಯಲ್ಲಿ ಆಹ್ವಾನ ನೀಡುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು. “ನಾವು ಕನ್ನಡಕ್ಕೆ ಮೊದಲ ಆದ್ಯತೆ ನೀಡುತ್ತೇವೆ, ಅದರಲ್ಲಿ ಸಂಶಯವಿಲ್ಲ. ಆದರೆ ಬೇರೆ ಭಾಷೆಯ ಬಳಕೆ ಅಕ್ಷಮ್ಯ ಅಪರಾಧ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ. ಮೃತ ಮಹಿಳೆಯನ್ನ ಕುಂದಲಗುರ್ಕಿ ಗ್ರಾಮದ ರೇಖಾ (37) ಎಂದು ತಿಳಿದುಬಂದಿದೆ. ರೇಖಾ ಎನ್‌ಜಿಓ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ರೆಸಾರ್ಟ್ ಕಂ ಹೋಟೆಲ್‌ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದರೆ ದುರಾದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ. ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ. ಆದರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತಿಕೊಂಡು ಬಂದಿದ್ದಾರೆ. ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ…

Read More

ಚೈನ್ನೈ : ಚೆನ್ನೈನಿಂದ ಸಿಂಗಾಪುರಕ್ಕೆ ತೆರಳಬೇಕಿದ್ದ ಇಂಡಿಗೋ ವಿಮಾನದಲ್ಲಿ ವಿಳಂಬ ಉಂಟಾಗಿದೆ. ಇಂಡಿಗೋ ವಿಮಾನದ ಒಳಗೆ 5 ಗಂಟೆಗಳ ಕಾಲ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ವಿಮಾನದ ಕ್ಯಾಬಿನ್ ನಲ್ಲಿ ತಾಪಮಾನ ಹೆಚ್ಚಾಗಿರುವುದರಿಂದ ಸಮಸ್ಯೆ ಉಂಟಾಗಿದೆ. ಸುಮಾರು ಐದು ಗಂಟೆಗಳ ಕಾಲ ಏರ್ಪೋರ್ಟ್ ನಲ್ಲಿ ಇಂಡಿಗೋ ವಿಮಾನ ನಿಂತಿತ್ತು. ನಿಗದಿತ ಸಮಯಕ್ಕೆ ವಿಮಾನ ತೆರಳದ ಹಿನ್ನೆಲೆ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಏರ್ಪೋರ್ಟ್ ನಲ್ಲಿಯೇ ಇಂಡಿಗೋ ವಿಮಾನ ನಿಂತಿದೆ. ಇಂಡಿಗೋ ಏರ್ಲೈನ್ಸ್ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್‌ಗೆ 50 ರೂಪಾಯಿ ಆರ್ಥಿಕ ನೆರವಿನ ಮೊತ್ತವಾಗಿ 300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಇಲಾಖೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ಕಳೆದ ನವೆಂಬರ್‌ 8ರಂದು ಕರೆದಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿ ಟನ್‌ ಕಬ್ಬಿಗೆ ಎಫ್‌ಆರ್‌ಪಿ ಮೇಲೆ 100 ರೂ. ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಿದ್ದರು. ಈ 100 ರೂ. ಆರ್ಥಿಕ ನೆರವಿನಲ್ಲಿ ರಾಜ್ಯ ಸರ್ಕಾರ 50 ರೂ. ಹಾಗೂ ಸಕ್ಕರೆ ಕಾರ್ಖಾನೆಗಳು 50 ರೂ. ನೀಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಅದರದಂತೆ ರಾಜ್ಯ ಸರ್ಕಾರ ತನ್ನ ಪಾಲಿನ ಆರ್ಥಿಕ ನೆರವಿನ 300 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಈ ನಿರ್ಧಾರದ ಪ್ರಮುಖ…

Read More

ಉಡುಪಿ, ಫೆಬ್ರವರಿ 25: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು. ಅನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು. ಮಾದಕವಸ್ತುಗಳ ನಿಗ್ರಹ ಶಿವಮೊಗ್ಗ ವಿದ್ಯಾರ್ಥಿ ಹತ್ಯೆ ಹಾಗೂ ಅಪ್ರಾಪ್ತರಲ್ಲಿ ಗಾಂಜಾ ಸೇವೆನೆ ವ್ಯಾಪಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿಗ್ರಹಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು. ಕಾನೂನು ಕ್ರಮ ಅಜೀಂಪ್ರೇಂಜಿ ವಿವಿಯ ಮೇಲೆ ಎಬಿವಿಪಿ ವಿದ್ಯಾರ್ಥಿಗಳು ದಾಂಧಲೆ ನಡೆಸಿರುವ ಬಗ್ಗೆ ಉತ್ತರಿಸಿ,…

Read More

ಉಡುಪಿ : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಇದೀಗ ಉದ್ಯೋಗಾಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಯುವಕರಿಗೆ ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹೇಳಿದರು. ಈ ಕುರಿತು ಮಾತನಾಡಿದ ಅವರು ಉದ್ಯೋಗ ಕೊಡಬೇಕು ಎನ್ನುವುದು ನಮ್ಮ ಸರ್ಕಾರದ ಭರವಸೆ. ಯುವಕರಿಗೆ ಉದ್ಯೋಗ ಕೊಡುತ್ತೇವೆ ಈ ಬಗ್ಗೆ ಚರ್ಚಿಸಿದ್ದೇನೆ. ಒಳ ಮೀಸಲಾತಿ ಕಾರಣದಿಂದ ಕೆಲಸ ಆಗಿಲ್ಲ ಆ ಕೆಲಸ ಪ್ರಾರಂಭ ಮಾಡಿದ್ದೇವೆ. ಬಜೆಟ್ ನಲ್ಲಿ ಘೋಷಣೆ ಮಾಡುತ್ತೇವೆ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಎರಡುವರೆ ಲಕ್ಷಕ್ಕಿಂತಲೂ ಹೆಚ್ಚು ಹುದ್ದೆಗಳು ಖಾಲಿ ಇವೆ ಹಾಗಾಗಿ ಎಲ್ಲವನ್ನು ಹಂತ ಹಂತವಾಗಿ ಭರ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಗೀಗ ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದ್ದು 500 ಕೋಟಿ ಹವಾಲ ಅವರ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ತನಿಖೆಯಲ್ಲಿ ಇದೀಗ ಸ್ಪೋಟಕ ಅಂಶ ಬಯಲಾಗಿದೆ. ಹೌದು 500 ಕೋಟಿ ಹವಾಲಾ ಹಣದ ಅವ್ಯವಹಾರವೇ ಇದೀಗ ಸಿಜೆ ರಾಯ್ ಗೆ ಮುಳುವಾಗಿದೆ. 500 ಕೋಟಿ ಬಗ್ಗೆ ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಲಾಗಿದೆ ಕಂಗಾಲಾಗಿದ್ದರು. ಲೆಕ್ಕ ನೀಡಲಾಗದೆ ಸಿಜೆ ರಾಯ್ ಮಾನಸಿಕವಾಗಿ ಕುಗ್ಗಿದ್ದರು. ಹೋಟೆಲ್ ಬದಲು ಕಚೇರಿಯಲ್ಲಿಯೇ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 500 ಕೋಟಿ ಹಣದ ವ್ಯವಹಾರ ಇಕ್ಕಟ್ಟಿಗೆ ರಾಯಿ ಸಿಲುಕಿದ್ದರು. ಆತ್ಮಹತ್ಯೆಯ ದಿನ ಐಟಿಗೆ ಉತ್ತರಿಸುವುದಾಗಿ ರಾಯ್ ಹೇಳಿದ್ದರು. ಆದರೆ ಮಾನಸಿಕ ಖಿನ್ನತೆಯ ಟ್ಯಾಬ್ಲೆಟ್ ಕೂಡ ಸೇವಿಸದೆ ಮತ್ತಷ್ಟು ಟೆನ್ಶನ್ ಹೆಚ್ಚಾಗಿದೆ. ಇನ್ನು 500 ಕೋಟಿ ರಹಸ್ಯ ನಾಲ್ವರಿಗೆ ಮಾತ್ರ ಗೊತ್ತಿತ್ತು ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಸಿಜೆ ರಾಯ್ ಕೇರಳ ಮೂಲದ ಬಿಜಿನೆಸ್ ಪಾರ್ಟ್ನರ್ ಐಟಿ ಅಧಿಕಾರಿಗಳು ಹಾಗೂ…

Read More

ಉಡುಪಿ : ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಯಾವುದೇ ರೀತಿಯಾದ ಔಷಧಿ ಕೊರತೆ ಇಲ್ಲ ಯಾವುದೇ ಆಸ್ಪತ್ರೆಯಲ್ಲಿ ಸಮಸ್ಯೆ ಇಲ್ಲ ಎಂದು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇಲ್ಲ ಎಂಬುದು ಸರ್ಕಾರದ ಅಧಿಕೃತ ನಿಲುವು ಮತ್ತು ಗುರಿಯಾಗಿದ್ದರೂ, ಇತ್ತೀಚಿನ ವರದಿಗಳ ಪ್ರಕಾರ ಕೆಲವು ಕಡೆ ಪ್ರಾಯೋಗಿಕವಾಗಿ ಸವಾಲುಗಳು ಎದುರಾಗಿರುವುದು ಕಂಡುಬಂದಿದೆ. ಫೆಬ್ರವರಿ 2026ರ ಅಂಕಿಅಂಶಗಳು ಮತ್ತು ವಿದ್ಯಮಾನಗಳ ಆಧಾರದ ಮೇಲೆ ಪ್ರಸ್ತುತ ಸ್ಥಿತಿಗತಿ ಇಲ್ಲಿದೆ: 1. ಸರ್ಕಾರದ ಕ್ರಮಗಳು ಮತ್ತು ಇತ್ತೀಚಿನ ಅನುದಾನ ಸರ್ಕಾರವು ಔಷಧಿಗಳ ಕೊರತೆಯನ್ನು ನೀಗಿಸಲು ಹಲವಾರು ತುರ್ತು ಕ್ರಮಗಳನ್ನು ಕೈಗೊಂಡಿದೆ: ರೂ. 30-50 ಕೋಟಿ ಅನುದಾನ: ಔಷಧಿಗಳ ತುರ್ತು ಖರೀದಿಗೆ ಸರ್ಕಾರವು ಹೆಚ್ಚುವರಿಯಾಗಿ ರೂ. 30 ರಿಂದ 50 ಕೋಟಿಗಳಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಸ್ಥಳೀಯ ಮಟ್ಟದಲ್ಲಿ (ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ) ಔಷಧಿ ಖರೀದಿಸಲು ಸಹಕಾರಿಯಾಗಿದೆ. 496 ಔಷಧಿಗಳ ಖರೀದಿ: ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು…

Read More

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಆದರೆ ಇದೀಗ ರಾಜ್ಯ ಸರ್ಕಾರ ಮಹಾ ಎಡವಟ್ಟು ಮಾಡಿದ್ದು ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದುವಿನಲ್ಲು ಆಹ್ವಾನ ಪತ್ರಿಕೆಯನ್ನು ಸರ್ಕಾರ ಪ್ರಕಟಿಸಿದೆ. ಹೌದು ಆಡಳಿತ ಭಾಷೆ ಕನ್ನಡವನ್ನೇ ರಾಜ್ಯ ಸರ್ಕಾರ ಮರೆತುಬಿಟ್ಟಿದೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆ ಉರ್ದುವಿನಲ್ಲೂ ಪ್ರಕಟ ಮಾಡಿದ್ದಾರೆ. ರೋಗ ನಿರೋಧಕ ಕಿಚ್ಚ ಮತ್ತು ಆಂಬುಲೆನ್ಸ್ ಸೇವೆಗೆ ಚಲನೆ ನೀಡುವಂತಹ ಒಂದು ಮಹತ್ವದ ಕಾರ್ಯಕ್ರಮ ನೆಹರುತಾರಾಲಯದಲ್ಲಿ ಆಯೋಜನೆ ಮಾಡಲಾಗಿತ್ತು. ಉರ್ದು ಭಾಷೆಯಲ್ಲಿ ಸರ್ಕಾರದಿಂದ ಆಹ್ವಾನ ಪತ್ರಿಕೆ ಪ್ರಕಟ ಆಗಿದೆ. ಕರ್ನಾಟಕದಲ್ಲಿ ಇದ್ದೀರೋ ಅಥವಾ ಪಾಕಿಸ್ತಾನದಲ್ಲಿ ಇದ್ದೀರೋ ಎಂದು ಸಚಿವ ದಿನೇಶ್ ಗುಂಡೂರಾವ್ಗೆ ಸಾ.ರಾ ಗೋವಿಂದ್ ಪ್ರಶ್ನೆ ಮಾಡಿದ್ದಾರೆ. ಅಂದು ನಿಮ್ಮ ಅಪ್ಪ ಇಂದು ನೀವು ಮಾಡುತ್ತಿರುವುದು ಸರಿಯಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಸಾ.ರಾಗೋವಿಂದು ಆಕ್ರೋಶ ಹೊರಹಾಕಿದ್ದಾರೆ.ಈ ಕೂಡಲೇ ಸಚಿವ ದಿನೇಶ್ ಗುಂಡೂರಾವ್ ಬೇಷರತ್ತು ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೇರೆ ರೂಪದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Read More