Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರ ಹೊಸ ತಳಿ ವೈರಸ್ ಹರಡುತ್ತಿದ್ದು, ಇದೀಗ ಬೆಂಗಳೂರಿನಲ್ಲಿ ಸುಮಾರು 80ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ವಿಷಯದ ಕುರಿತು ಸಿಎಂ ಸಿದ್ದರಾಮಯ್ಯ ಕೊರೊನ ವೈರಸ್ ಬಗ್ಗೆ ಯಾವುದೇ ನಿರ್ಲಕ್ಷ ವಹಿಸಬೇಡಿ, ಅನಾರೋಗ್ಯ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ.ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು.
ಬೆಂಗಳೂರು : ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಈಗಾಗಲೇ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಹಾಗೂ ಭೂಕುಸಿತ ಘಟನೆಗಳು ನಡೆದಿದೆ.ಇಂದು ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಮರ ಬಿದ್ದು ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲಾಗಿದೆ. ಹೌದು ಬೆಂಗಳೂರಿನಲ್ಲಿ ಮರ ಬಿದ್ದು ಬೈಕ್ ಸವಾರನಿಗೆ ಗಂಭಿರವಾಗಿ ಗಾಯವಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಬಿಎಂಪಿ ಹಾಗೂ ಅರಣ್ಯ ಇಲಾಖೆಯ ಮೇಲೆ ಇದೀಗ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಹಾಗು ಅರಣ್ಯ ಇಲಾಖೆಯ ಮೇಲೆ FIR ದಾಖಲು ಮಾಡಲಾಗಿದೆ.
ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರ ಕುರಿತಂತೆ ಅವರೇನು ವಿಧಾನಸೌಧದಲ್ಲಿ ಯಾರನ್ನು ರೇಪ್ ಮಾಡಿರಲಿಲ್ಲ ಅಲ್ವಾ? ಅವರು ಏನು ಯಾರಿಗೂ ಎಚ್ ಐ ವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈ ಅಂಶಗಳೇ ಉಚ್ಚಟನೆಗೆ ಕಾರಣ ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಹಲವು ಪ್ರಮುಖ ಅಂಶಗಳಿವೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ.…
ಬೆಂಗಳೂರು : ಬೆಂಗಳೂರಿನ ಯಶವಂತಪುರದ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಹಲವು ಪ್ರಮುಖ ಅಂಶಗಳಿವೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್ ನೋಟಿಸ್ ನೀಡಲಾಗಿತ್ತು. ಶೋಕಾಸ್ ನೋಟಿಸ್ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡರು. ಕಳೆದ ವರ್ಷ ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಹಿರಂಗವಾಗಿಯೇ ಕಾಂಗ್ರೆಸ್ ಜೊತೆಗೆ ಇಬ್ಬರು ಹೊಂದಾಣಿಕೆ ಮಾಡಿಕೊಂಡಿದ್ದರು. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿಯೇ ಮತ ಚಲಾಯಿಸಿದ್ದರು. ಅಲ್ಲದೆ ಪಕ್ಷದಿಂದ ಬಹುತೇಕ ದೂರ ಉಳಿದಿದ್ದರು. ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರವನ್ನು ಶಿವರಾಮ ಹೆಬ್ಬಾರ್ ಹೊಗಳುತ್ತಿದ್ದರು. ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿದ್ದರು. ಅಲ್ಲದೆ ಬಿಜೆಪಿ ಶಾಸಕಾಂಗ…
ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಅಡಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಈ ಒಂದು ನಿರ್ಧಾರ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಬಗ್ಗೆ ಅವರಿಗೂ ಸಹ ಗೊತ್ತಿದೆ. 6 ವರ್ಷಗಳ ಕಾಲ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತುಕ್ರಮ ಆಗಬೇಕು ಅಂತ ನಮ್ಮ ಅಭಿಪ್ರಾಯ ತಿಳಿಸಿದ್ದೆವು ಹಾಗಾಗಿ ಇದೀಗ ಇಬ್ಬರನ್ನು ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಮಾಡಿದೆ. ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರ ಉಚ್ಚಾಟನೆ ಸ್ವಾಗತಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಇಬ್ಬರಿಗೂ ಕೂಡ ಅವಕಾಶ ಸಿಕ್ಕಿತ್ತು. ಆದರೆ ವಿಪಕ್ಷದಲ್ಲಿ…
ಬೆಂಗಳೂರು : ವಾಹನ ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು. ಇಂದು ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದ್ರೆ ಮಾತ್ರ ಜಾರಿಗೆ ತರುತ್ತೇವೆ. ಆದರೆ ವಾಹನಗಳ ಟೋಯಿಂಗ್ನಿಂದ ಸಾರ್ವಜನಿಕರಿಗೆ ತೊಂದರೆಯಾದರೆ ಜಾರಿಗೊಳಿಸುವುದಿಲ್ಲ.ವಾಹನಗಳ ಟೋಯಿಂಗ್ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಈ ಹಿಂದೆ ನನ್ನ ಗಮನಕ್ಕೆ ತರಲಾಗಿದೆ ಎಂದರು. ಟೋಯಿಂಗ್ ಸಾರ್ವಜನಿಕರಿಗೆ ಉಪಯೋಗ ಆದರೆ ಜಾರಿಗೆ ತರುತ್ತೇವೆ. ಅದು ಸಾರ್ವಜನಿಕರಿಗೆ ತೊಂದರೆ ಆದರೆ ಜಾರಿಗೊಳಿಸಲ್ಲ. ಏನೇ ನಿರ್ಧಾರ ಮಾಡಿದರೂ ಸಾರ್ವಜನಿಕರಿಗೆ ಉಪಯೋಗ ಆಗಬೇಕು. ಸಾಧಕ ಬಾಧಕ ಚರ್ಚೆ ಮಾಡಿ ತೀರ್ಮಾನ ತಗೋತೇವೆ. ಸಾರ್ವಜನಿಕರಿಗೆ ನಮ್ಮ ಕ್ರಮದಿಂದ ಒಳ್ಳೆಯದಾಗಬೇಕೇ ಹೊರತು ಕೆಟ್ಟದಾಗಬಾರದು ಎಂದರು.
ಚಿಕ್ಕಬಳ್ಳಾಪುರ : ಯುವಕ ಮತ್ತು ಯುವತಿಯರಿಬ್ಬರು ನೀರು ಕೇಳುವ ನೆಪದಲ್ಲಿ ಬಂದು ವೃದ್ಧೆಯ ಬಾಯಿಗೆ ಬಟ್ಟೆ ತುರುಕಿ ಹಲ್ಲೆ ಮಾಡಿ ಸರಗಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಸುದ್ದಹಳ್ಳಿ ಗೇಟ್ ಬಳಿ ಈ ಒಂದು ಕೃತ್ಯ ನಡೆದಿದೆ. ನಿರ್ಮಾಣ ಹಂತದ ತೋಟದ ಮನೆಯಲ್ಲಿ ಇದ್ದಂತಹ ವೃದ್ಧೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಕಳವಾರ ಗ್ರಾಮದ ಅಂಜಿನಮ್ಮ ಎಂಬ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಯುವಕ ಯುವತಿ ಸರಗಳ್ಳತನ ಮಾಡಿದ್ದಾರೆ. ವೃದ್ಧೆಯ ಬಳಿ ಇದ್ದಂತಹ 50 ಗ್ರಾಂ ತೂಕದ ಚಿನ್ನ ಸರವನ್ನು ಕದ್ದು ಇಬ್ಬರು ಪರಾರಿಯಾಗಿದ್ದಾರೆ.
BIG NEWS : ನಿಯಮಾನುಸಾರ ಕಲ್ಯಾಣ ಕರ್ನಾಟಕ ಭಾಗದ 371 ಜೆ ಅಡಿ ಹುದ್ದೆಗಳ ಆಯ್ಕೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂಬಂಧಿಸಿದಂತೆ 371 ಜೆ ಅಡಿ ಸರ್ಕಾರದ ವಿವಿಧ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿಗಳು ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳಂತೆ ನಡೆಯುತ್ತಿಲ್ಲ, 2023ರ ಸರ್ಕಾರದ ಆದೇಶದಂತೆ ಕಟ್ಟುನಿಟ್ಟಾಗಿ ಎಲ್ಲ ಆಯ್ಕೆಗಳನ್ನು ಮಾಡಬೇಕು ಎಂದು ಸರ್ಕಾರ ಸೂಚಿಸಿದೆ. ವಿಕಾಸಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರೂ ಆದ 371-ಜೆ ಅನುಷ್ಟಾನ ಕುರಿತಾದ ಸಚಿವ ಸಂಪುಟದ ಉಪ ಸಮಿತಿಯ ಅಧ್ಯಕ್ಷರಾದ ಪ್ರಿಯಾಂಕ್ ಖರ್ಗೆ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಅವರೂ ಪಾಲ್ಗೊಂಡು ಸರ್ಕಾರದ ವಿವಿಧ ಸಂಸ್ಥೆಗಳು ಸರ್ಕಾರದ ಸೂಚನೆಯನ್ನು ಪಾಲಿಸುವಲ್ಲಿ ಲೋಪ ಮಾಡುತ್ತಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ ನಿಯಮಬಾಹಿರವಾಗಿ ಮಾಡಿರುವ ಆಯ್ಕೆಗಳನ್ನು ಹಿಂಪಡೆಯಬೇಕೆಂದು ಸೂಚಿಸಿದರು. ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಸ್ಪಷ್ಟ ನಿರ್ದೇಶನಗಳನ್ನು ನೀಡಿದಾಗ್ಯೂ ವಿವಿಧ ಇಲಾಖೆಗಳಲ್ಲಿ ಗೊಂದಲ ಇರುವುದರಿಂದ ಮತ್ತೊಮ್ಮೆ ಸೂಕ್ತ ಮಾರ್ಗದರ್ಶನಗಳನ್ನು ನೀಡುವಂತೆ ಸಚಿವರುಗಳುಸಭೆಯಲ್ಲಿದ್ದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ…
ಬೆಂಗಳೂರು : ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು. ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ. ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ…
ಬಳ್ಳಾರಿ : ಇಂದು ಬೆಳಿಗ್ಗೆ ಟಿಪ್ಪರ್ ಹಾಗೂ ಕಾರು ಮಧ್ಯ ಬೀಗರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದಿತ್ತು. ಇದೀಗ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಸವಾರ ಬಾಲಕಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಮೃತರನ್ನು ಅಬ್ದುಲ್ ಅರ್ಮಾನ್ (21) ಸಹೋದರನ ಪುತ್ರಿ ಹಸೀನಾ (5) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಅಬ್ದುಲ್ ಮತ್ತು ಹಸೀನಾ ಬಳ್ಳಾರಿ ನಗರದ ಗೊಬ್ಬರಹಟ್ಟಿಯ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ಪೊಲೀಸರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.