Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ರಾತ್ರಿ ಭೀಕರವಾದ ಹತ್ಯೆ ನಡೆದಿದ್ದು, ಮದ್ಯ ಸೇವಿಸಲು ಎಂದು ಬಾರ್‌ಗೆ ಬಂದಿದ್ದ ರೌಡಿ ಶೀಟರ್ ನನ್ನು ನಾಲೈದು ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಯಲಹಂಕದ ಕೊಡಗಿ ತಿರುಮಲಪುರ ನಿವಾಸಿ ಜಯರಾಮ್ (42) ಹತ್ಯೆಯಾದ ರೌಡಿ ಶೀಟರ್ ಎಂದು ತಿಳಿದುಬಂದಿದೆ. ಮಂಗಳವಾರ ರಾತ್ರಿ ಸುಮಾರು 9.30ಕ್ಕೆ ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ ಸಾಯಿ ಬಾರ್‌ನಲ್ಲಿ ಈ ಘಟನೆ ನಡೆದಿದೆ. ಹತ್ಯೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹತ್ಯೆಯಾದ ಜಯರಾಮ್ ಯಲಹಂಕ ಉಪನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ಧ ಕೊಲೆ, ದರೋಡೆ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಯಲಹಂಕದ ಕೊಡಗಿ ತಿರುಮಲಪುರದಲ್ಲಿ ಪತ್ನಿ ಮತ್ತು ಮಕ್ಕಳ ಜತೆ ನೆಲೆಸಿದ್ದ. ಕೋಳಿ ಅಂಗಡಿ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಮಂಗಳವಾರ ರಾತ್ರಿ ಮದ್ಯ ಸೇವಿಸಲು ಹೆಸರಘಟ್ಟ ರಸ್ತೆಯ ತಿರುಮಲಪುರ ವಿಲೇಜ್‌ನ…
ಬೆಂಗಳೂರು : ಶಿವಮೊಗ್ಗದಲ್ಲಿ ಲವ್ ಜಿಹಾದ್ ಪುಸ್ತಕ ಬಿಡುಗಡೆಗೆ ಪಾಲ್ಗೊಳ್ಳಲು ನಗರಕ್ಕೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ 7 ದಿನಗಳ ನಿರ್ಬಂಧ ವಿಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಬಂಧ ತೆರವುಗೊಳಿಸುವಂತೆ ಕ್ರಮದ ಮುತಾಲಿಕ್ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ನಗರಕ್ಕೆ ತೆರಳಲು ಅನುಮತಿ ನೀಡಿದೆ. ಘಟನೆ ಹಿನ್ನೆಲೆ? ಶಿವಮೊಗ್ಗದಲ್ಲಿ ಮಾರ್ಚ್ 1ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಪ್ರಮೋದ್ ಮುತಾಲಿಕ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದರು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅವರನ್ನು ಶಿವಮೊಗ್ಗ ಹೊರವಲಯದ ರಾಗಿಗುಡ್ಡದ ಬಳಿ ತಡೆದು ವಾಪಸ್ ಕಳುಹಿಸಲಾಗಿತ್ತು. ಫೆಬ್ರವರಿ 28 ರಿಂದ 7 ದಿನಗಳ ಕಾಲ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಜಿಲ್ಲೆ ಪ್ರವೇಶಿಸದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಶ್ರೀರಾಮ ಸೇನೆ ವತಿಯಿಂದ ಪ್ರಕಟಿಸಲಾದ ಲವ್ ಜಿಹಾದ್ ಪುಸ್ತಕ ಬಿಡುಗಡೆಗಾಗಿ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಇದಕ್ಕೂ ಮುನ್ನ ಅವರು ಪತ್ರಿಕಾಗೋಷ್ಠಿ ಕರೆದಿದ್ದರು. ನಂತರ ಭದ್ರಾವತಿಯಲ್ಲಿ…
ಕೊಪ್ಪಳ : ಪೊಲೀಸ್ ಸಿಬ್ಬಂದಿಗಳಿಗೆ ಬಂದೂಕು ತರಬೇತಿ ನೀಡುತ್ತಿದ್ದ ವೇಳೆ, ಆಕಸ್ಮಿಕವಾಗಿ ಗುಂಡು ಸಿಡಿದು ಕುರಿ ಕಾಯುತ್ತಿದ್ದ ಮಹಿಳೆಗೆ ತಗೋಳಿ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಬ್ಬಲಗುಡ್ಡ ಗ್ರಾಮದಲ್ಲಿ ನಡೆದಿದೆ. ದ್ರಾಕ್ಷಾಯಿನಿ ರೇಣುಕಾ ( 34) ಗುಂಡು ತಗುಲಿ ಗಾಯಗೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುನಿರಾಬಾದ್ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ದ್ರಾಕ್ಷಾಯಿನಿ ಹೊಲದಲ್ಲಿ ಕುರಿಹಟ್ಟಿಯಿಂದ ಪಾತ್ರೆಗಳನ್ನು ಸ್ವಚ್ಛಗೊಳಿಸಲು ಬಂದಿದ್ದ ವೇಳೆ, ಪೊಲೀಸರಿಂದ ಹಾರಿಸಲಾದ ಗುಂಡು ಅಚಾನಕ್ ಎಡ ಕೈ ಗೆ ತಗುಲಿದ್ದು, ಮಹಿಳೆಯ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳು ಮಹಿಳೆಯ ಆರೋಗ್ಯವನ್ನು ವಿಚಾರಿಸಿದ್ದಾರೆ.
ಕೊಪ್ಪಳ : ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಬಲ್ಡೋಟ ಕಾರ್ಖಾನೆಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಹಾಕಿದ್ದಾರೆ. ಕೆಲಸ ನಿಲ್ಲಿಸುವಂತೆ ಕೊಪ್ಪಳದ ಜಿಲ್ಲಾಧಿಕಾರಿಗೆ ಇದೀಗ ಸೂಚನೆ ನೀಡಿದ್ದಾರೆ. ಹೌದು ಬಲ್ಡೋಟ ಕಾರ್ಖಾನೆ ವಿಸ್ತರಣೆ ವಿರೋಧಿಸಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋರಾಟಗಾರರ ನಿಯೋಗ ಭೇಟಿಯಾಗಿತ್ತು. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ಮಾಡಿದ್ದರು. ನಿಯೋಗದ ಮನವಿಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಕಾರ್ಖಾನೆ ಕೆಲಸ ನಿಲ್ಲಿಸಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ವಿಸ್ತರಣೆಗೆ ಜಿಲ್ಲಾಡಳಿತ ಆರಂಭಿಸುವುದಕ್ಕೆ ಮುಂದಾಗಿತ್ತು.ಆದರೆ ಕೊಪ್ಪಳ ಜನತೆ ಇದೀಗ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.ಇದೀಗ ಕ್ಷಮಿಸಿದ್ದರಾಮಯ್ಯ ಅವರು ಈ ಒಂದು ಕಾರ್ಖಾನೆಗೆ ಬ್ರೇಕ್ ಹಾಕಿದ್ದಾರೆ. ಇದೀಗ ಕೊಪ್ಪಳ ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಬೆಂಗಳೂರು : ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಬೆಂಗಳೂರು ವಿವಿಯ ಕಟ್ಟಡ ಶಂಕು ಸ್ಥಾಪನೆ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಮತ್ತು ಸಂಶೋಧನಾ ಕಟ್ಟಡ ನಿರ್ಮಾಣಕ್ಕೆ ಇಂದು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಕೇವಲ 2 ಕೋಟಿ ದುಡ್ಡಿಟ್ಟು ವಿಶ್ವವಿದ್ಯಾಲಯ ಮಾಡಿದರು ಹೊಸ ವಿಶ್ವವಿದ್ಯಾಲಯಗಳನ್ನು ಮಾಡಬೇಕಾದರೆ ನೂರಾರು ಎಕರೆ ಭೂಮಿ ಬೇಕಾಗುತ್ತದೆ ಎಂದರು. ಬೆಂಗಳೂರು ವಿಶ್ವವಿದ್ಯಾಲಯ ಶುರು ಮಾಡುವಾಗ 1,200 ಎಕ್ರೆ ಭೂಮಿ ಇತ್ತು.ಬಿಜೆಪಿಯವರು ಸುಮ್ಮನೆ ಏನು ಹೆಸರಿಗಷ್ಟೇ ವಿವಿಗಳನ್ನು ಮಾಡಿದರು. ಮೈಸೂರು ವಿಶ್ವವಿದ್ಯಾಲಯ ಅಂತ ಹೇಳಿದರೆ ಒಂದು ಹೆಸರಿದೆ. ನಮಗೆಲ್ಲ ಮೈಸೂರು ವಿಶ್ವವಿದ್ಯಾಲಯ ಅಂದರೆ ಹೆಮ್ಮೆ ಇದೆ. ಹೊಸ ವಿಶ್ವವಿದ್ಯಾಲಯಗಳಿಗೆ ಹೋಗಲು ಸಿಬ್ಬಂದಿ ಹಿಂದೆ ಮುಂದೆ ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಿತಿ ರಚನೆಯಾಗಿತ್ತು.ಅವರು ವರದಿ ಕೊಟ್ಟರು. ವರದಿ ಆಧಾರದಲ್ಲಿ ಕ್ಯಾಬಿನೆಟ್ ಸಬ್ ಕಮಿಟಿಯಲ್ಲಿ ಈ ಕುರಿತು ಚರ್ಚೆ ಆಯಿತು. ರಾಜಕೀಯ ಲಾಭಕ್ಕಾಗಿ ಒಂದಷ್ಟು…
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಎರಡು ಬಾರಿ ಮದ್ಯದ ಬೆಲೆ ಏರಿಕೆಯಾಗಿದೆ. ಇದರ ನಡುವೆ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಒಂದು ಬಜೆಟ್ ನಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಮದ್ಯಪ್ರಿಯರಿಗೆ ಆತಂಕ ಶುರುವಾಗಿದೆ. ಹೌದು ರಾಜ್ಯ ಸರ್ಕಾರವು ಅನುದಾನವನ್ನು ಹೊಂದಿಸುವ ಕಾರಣಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಡ್ರಿಂಕ್ಸ್ ಸೇರಿದಂತೆ ವಿವಿಧ ವಸ್ತುಗಳ ಮೇಲಿನ ಬೆಲೆಯನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬೆಲೆ ಪರಿಷ್ಕರಣೆ ಮಾಡಬೇಕು ಅಂತ ಸ್ಟ್ರಾಂಗ್ ಬಿಯರ್ ಬೆಲೆ ಹೆಚ್ಚಳವಾದಾಗಲೇ ಬಿಯರ್ ಮಾರಾಟಗಾರರು ಆಗ್ರಹಿಸಿದ್ದರು.ಕರ್ನಾಟಕದಲ್ಲಿ ಉಳಿದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಬಿಯರ್ ಬೆಲೆ ಹಾಗೂ ಕೆಲವು ಮದ್ಯದ ಬೆಲೆ ಹೆಚ್ಚಾಗಿದೆ. ಹೀಗಾಗಿ, ಈ ಬಾರಿಯೂ ಮದ್ಯದ ಬೆಲೆ ಹೆಚ್ಚಳವಾಗುವುದು ಬಹುತೇಕ ಖಚಿತ ಅಂತಲೇ ಹೇಳಲಾಗುತ್ತಿದೆ.
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿವೈ ವಿಜಯೇಂದ್ರ ವಿರುದ್ಧ ಇತ್ತೀಚಿಗೆ ಸರಣಿ ವಾಗ್ದಾಳಿ ನಡೆಸಿದ್ದರು. ಬಳಿಕ ಹೈಕಮಾಂಡ್ ಒಂದು ಕಠಿಣ ಎಚ್ಚರಿಕೆ ನೀಡಿದ ಬಳಿಕ ಸೈಲೆಂಟಾಗಿದ್ದರು. ಇದೀಗ ಮತ್ತೆ ಬಿಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಯಡಿಯೂರಪ್ಪ ಲಿಂಗಾಯತ ಅಲ್ಲ, ಬಿಜೆಪಿಯ ಬ್ಲಾಕ್ ಮೇಲರ್ ಎಂದು ಮತ್ತೆ ಗುಡುಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ವೀರಶೈವ ಲಿಂಗಾಯತ ಎಂದು ಬೇರೆ ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಲಿಂಗಾಯತ ಅಲ್ಲ ಬಿಜೆಪಿಯ ಬ್ಲಾಕ್ ಮೇಲರ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಬಿ ಎಸ್ ವೈ ಕರೆದ ಯಾವುದೇ ಸಭೆಗಳಿಗೆ ಹೋಗಬೇಡಿ ಎಂದು ಹೇಳುತ್ತೇವೆ. ಬಿಎಸ್ ವೈ ಸಭೆಗೆ ವೀರಶೈವ ಲಿಂಗಾಯತರು ಹೋಗಬೇಡಿ ಎನ್ನುತ್ತೇವೆ.ವೀರಶೈವ ಲಿಂಗಾಯತರು ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪ ಮತ್ತು ಪುತ್ರ ಬೀ ವೈ ವೀರೇಂದ್ರ ಅನ್ಯಾಯ…
ಬೆಂಗಳೂರು : ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಆಪರೇಷನ್ ಎಂದರೆ ತಪ್ಪಾಗಲಿಕ್ಕಿಲ್ಲ. ಏಕೆಂದರೆ ಐಪಿಎಸ್ ಅಧಿಕಾರಿ ಮಗಳು ಹಾಗೂ ನಟಿ ರನ್ಯಾರಾವ್ ಅವರು ದುಬೈ ನಿಂದ ಸುಮಾರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುವಾಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿ ಆರ್ ಐ ಅಧಿಕಾರಿಗಳ ಕೈಗೆ ಸಿಗಿಬಿದ್ದಿದ್ದಾರೆ. ಇದೀಗ ಅಧಿಕಾರಿಗಳು ಅವರನ್ನು ಅರೆಸ್ಟ್ ಮಾಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಹೌದು 12 ಕೋಟಿ ಮೌಲ್ಯದ ಗೋಲ್ಡ್ ಸ್ಮರ್ಲಿಂಗ್ ಗೆ ಯತ್ನ ನಡೆಸಿದ್ದು,, ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಆಪರೇಷನ್ ನಡೆದಿದೆ. ಡಿ ಆರ್ ಐ ಅಧಿಕಾರಿಗಳು ಮೊದಲ ಬಾರಿಗೆ ಐಪಿಎಸ್ ಅಧಿಕಾರಿ ಮಗಳನ್ನು ಬಂಧಿಸಿದ್ದಾರೆ.14.8 ಕೆಜಿ ಚಿನ್ನ ಸಾಗಿಸುತ್ತಿದ್ದ ನಟಿ ರನ್ಯಾ ರಾವ್ ದುಬೈ ನಿಂದ ಬೆಂಗಳೂರಿಗೆ ಬಂದಾಗ ನಟಿ ಲಾಕ್ ಆಗಿದ್ದಾರೆ.ನಿನ್ನೆ ರಾತ್ರಿ ನಟಿಯನ್ನು ದೆಹಲಿ ಅಧಿಕಾರಿಗಳು ಬಂಧಿಸಿದ್ದಾರೆ. 12 ಕೋಟಿ ಮೌಲ್ಯದ ಗೋಲ್ಡ್ ಸ್ಮಗ್ಲಿಂಗ್ ಗೆ ಯತ್ನಿಸಿದ್ದು ಇದೇ ಮೊದಲ ಬಾರಿ ರಾಜ್ಯದ ಇತಿಹಾಸದಲ್ಲಿ ಅತಿ…
ವಿಜಯಪುರ : ನನ್ನ ಮಗನಿಗೆ ಚಿಕಿತ್ಸೆ ನೀಡಲು ರಜೆ ಸಿಗಲಿಲ್ಲ, ಕಡೆಗೂ ನನ್ನ ಮಗ ಉಳಿಯಲಿಲ್ಲ… ನನಗೆ ಬಂದ ಪರಿಸ್ಥಿತಿ ಯಾರಿಗೂ ಬರಬಾರದು… ನನಗೆ ಬಹಳ ನೋವಾಗಿದೆ ಈ ರೀತಿ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ವಾಟ್ಸಪ್ ಗ್ರೂಪ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಘಟನೆ ನಡೆದಿದೆ. ಹೌದು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ವಾಟ್ಸಪ್ ಗ್ರೂಪ್‌ನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಎ.ಎಸ್ ಬಂಡುಗೊಳ ಈ ಒಂದು ಮನಕಲಕುವ ಸಂದೇಶವನ್ನು ಕಳುಹಿಸಿದ್ದಾರೆ.ಕಾನ್ಸಸ್ಟೇಬಲ್ ಎಎಸ್ ಬಂಡುಗೋಳ ಅವರ ನವಜಾತ ಶಿಶು ಅನಾರೋಗ್ಯದ ಕಾರಣ ಐಸಿಯುನಲ್ಲಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಮಗು ನಿಧನ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಬಂಡುಗೊಳ ಅವರು ವಿಜಯಪುರ ಜಿಲ್ಲಾ ಪೊಲೀಸ್ ಸಿಬ್ಬಂದಿಗಳಿರುವ ಗ್ರೂಪ್ಗೆ ಮೆಸೇಜ್ ಹಾಕಿದ್ದಾರೆ. ಅದರಲ್ಲಿ ನನಗೆ ರಜೆ ಸಿಗಲಿಲ್ಲ. ಅದರಿಂದ ಮಗನಿಗೆ ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಎಂದು ಆರೋಪಿಸಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, AS ಬಂಡುಗೋಳ ಯಾವುದೇ…
ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ಕೆರೆಗೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ದೇವಗಿರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಉಲ್ಲಾಸ್ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ 2ನೇ ಸೆಮಿಸ್ಟರ್ ಓದುತ್ತಿದ್ದ ಮೃತ ಉಲ್ಲಾಸ್, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.