Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಹಿಟ್ಲರ್ ಆಡಳಿತದ ಪದ್ದತಿ, ಮೊಘಲರ ಆಡಳಿತದ ಪದ್ದತಿಯನ್ನು ಕರ್ನಾಟಕ ಎಂದಿಗೂ ಸಹಿಸುವುದಿಲ್ಲ. ಇ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ರಾಜ್ಯದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ಬಂದಿದೆಯಾ ಅನ್ನೊ ಪ್ರಶ್ನೆ ಬಿಟ್ಟುಬಿಡದೆ ಕಾಡುತ್ತಿದೆ. ಸಂವಿಧಾನದ ಕುರಿತು, ಡಾ ಬಾಬಾ ಸಾಹೇಬರ ಬಗ್ಗೆ, ಅವರ ನೀತಿಗಳನ್ನು ಪಾಲಿಸುತ್ತೇವೆ ಅಂತಾ ಹೇಳುವ ಕಾಂಗ್ರೆಸ್ ಸರ್ಕಾರದ ನಡೆ ಹಿಟ್ಲರ್ ಆಡಳಿತಕ್ಕಿಂತಲೂ ಕಡೆಯಾಗಿದೆ. ವಾಕ್ ಸ್ವತಂತ್ರ ಕಿತ್ತುಕೊಳ್ಳುವುದು ಸಂವಿಧಾನದಲ್ಲಿ ಬರೆದಿದೆಯಾ @siddaramaiah ಸಿದ್ದರಾಮಯ್ಯನವರೇ? ನಿಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡಿದರೆ ನಿಮಗೆ ಯಾಕೆ ಸಂಕೋಚ? ಡಿಕೆ ಶಿವಕುಮಾರ್ ರವರೇ @DKShivakumar? ನಿಮ್ಮ ಸರ್ಕಾರದ ದುರಾಡಳಿತವನ್ನು, ಭ್ರಷ್ಟತೆಯನ್ನು, ಸುಭೀಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಹಾಳು ಮಾಡಿದ್ದನ್ನು, ಮಿತಿಮೀರಿದ ಓಲೈಕೆ ರಾಜಕಾರಣದ ಬಗ್ಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ ಬಗ್ಗುವುದು ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 40% ಸರ್ಕಾರ ಎಂಬ ಹಸಿ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಈಗ ಜವಾಬ್ದಾರಿಯುತ ವಿಪಕ್ಷವಾಗಿ ಸರ್ಕಾರದ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ದನಿ ಎತ್ತುತ್ತಿರುವ @BJP4Karnataka ಪಕ್ಷದ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ವಿಪಕ್ಷಗಳ ದನಿ ಅಡಗಿಸುವ ಪ್ರಯತ್ನ ಮಾಡುತ್ತಿದೆ. ಸಿಎಂ @siddaramaiah ನವರೇ ಹಾಗೂ ಡಿಸಿಎಂ @DKShivakumar ಅವರೇ, ನಿಮ್ಮ ಗೊಡ್ಡು ಬೆದರಿಕೆಗಳಿಗೆ, ನಟ್ಟು-ಬೋಲ್ಟು ಟೈಟು ಮಾಡುವ ಧಮ್ಕಿಗಳಿಗೆ ನಾವು ಜಗ್ಗುವುದು ಇಲ್ಲ, ಬಗ್ಗುವುದೂ ಇಲ್ಲ. @INCKarnataka…
ಬೆಂಗಳೂರು : ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ʼಸ್ವಚ್ಛ ವಾಹಿನಿʼ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 3469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದೂ ಈ ಸಂದರ್ಭದಲ್ಲಿ ಸಚಿವರು ಹೇಳಿದರು. ಸಭೆಯಲ್ಲಿ ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಗೂ ಅಧಿಕಾರಿಗಳು ಸಭೆಯಲ್ಲಿ…
ಬೆಂಗಳೂರು : ಕೊರೊನದ ಹೊಸ ರೂಪಾಂತರ ತಳಿ ಇದೀಗ ಭಾರತಕ್ಕೆ ಕಾಲಿಟ್ಟಿದ್ದು, ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲೆ ಕೊರೊನ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ಕಳೆದ ಎರಡು ದಿನಗಳ ಹಿಂದೆ 85 ವರ್ಷದ ವೃದ್ಧರೊಬ್ಬರು ಸಾವನಪ್ಪಿದ್ದಾರೆ. ಇದೀಗ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡುವಂತೆ ಆರೋಗ್ಯ ಇಲಾಖೆ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಟೆಸ್ಟಿಂಗ್ ಹೆಚ್ಚಳ ಮಾಡಿ ಸುತ್ತೋಲೆ ಹೊರಡಿಸಲಾಗಿದೆ. ಪ್ರತಿನಿತ್ಯ 150 ರಿಂದ 200 ಕೋವಿಡ್ ಟೆಸ್ಟ್ ಗಳನ್ನು ನಿಗಧಿಪಡಿಸಿ, ಟೆಸ್ಟಿಂಗ್ ಸ್ಯಾಂಪಲ್ ನಿಗದಿತ ಲ್ಯಾಬ್ ಗೆ ಕಳುಹಿಸುವಂತೆ ಆರೋಗ್ಯ ಇಲಾಖೆ ಅಭಿಯಾನ ನಿರ್ದೇಶಕರು ಇದೀಗ ಸುತ್ತೋಲೆ ಹೊರಡಿಸಿದ್ದಾರೆ.
ಉತ್ತರಪ್ರದೇಶ : ಉತ್ತರ ಪ್ರದೇಶದ ಕುಟುಂಬ ಕಲ್ಯಾಣ ಕಚೇರಿಗೆ ಇದೀಗ ಬೆದರಿಕೆ ಸಂದೇಶವೊಂದು ಬಂದಿದೆ. ಅನಾಮಧೇಯ ಹೆಸರಿನಲ್ಲಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇಂದು ಮಧ್ಯಾಹ್ನ 1:30ಕ್ಕೆ ಕಚೇರಿಗೆ ಇ-ಮೇಲ್ ಸಂದೇಶ ಬಂದಿದೆ. ಕಚೇರಿಗೆ ಬೆದರಿಕೆ ಇ-ಮೇಲ್ ಸಂದೇಶ ನೋಡುತ್ತಿದ್ದಂತೆ ಸಿಬ್ಬಂದಿಗಳು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಲಖನೌನ ಜಗತ್ ನಾರಾಯಣ ರಸ್ತೆಯಲ್ಲಿರುವ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಬಾಂಬ್ ಪತ್ತೆ ಸಂದೇಶ ಹಿನ್ನೆಲೆ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗು ಶ್ವಾನದಳ ಪರಿಶೀಲನೆ ನಡೆಸುತ್ತಿದೆ.
ದಕ್ಷಿಣಕನ್ನಡ : ರಾಜ್ಯದಲ್ಲಿ ಈಗಾಗಲೇ ಮುಂಗಾರು ಪೂರ್ವ ಭಾರಿ ಮಳೆ ಆಗುತ್ತಿದ್ದು, ಬೆಂಗಳೂರು ಮಹಾನಗರ ಸೇರಿದಂತೆ ಮಲೆನಾಡು ಕರಾವಳಿ ಭಾಗ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ವೇಳೆ ಹಲವು ಕಡೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು ಮಹಾಮಳೆಗೆ ಅನೇಕರು ಬರಿಯಾಗಿದ್ದಾರೆ ಇದೀಗ ದಕ್ಷಿಣ ಕನ್ನಡದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ. ಹೌದು ಮಳೆ ನಡೆಯು ದಕ್ಷಿಣ ಕನ್ನಡದಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಐವರು ಪ್ರವಾಸಿಗರನ್ನು ಇದೀಗ ರಕ್ಷಣೆ ಮಾಡಲಾಗಿದೆ. ಮೂಡುಬಿದಿರೆಯ ಪುತ್ತಿಗೆ ಎರಗುಂಡಿ ಫಾಲ್ಸ್ ಬಳಿ ಈ ಒಂದು ಘಟನೆ ನಡೆದಿದೆ. ದುಮ್ಮಿಕ್ಕಿ ಹರಿಯುತ್ತಿರೋ ಫಾಲ್ಸ್ ಬಳಿ ಪ್ರವಾಸಿಗರು ಹುಚ್ಚಾಟ ಮೆರೆದಿದ್ದಾರೆ. ಜಲಪಾತದ ಮೇಲ್ಭಾಗದಲ್ಲಿ ಪ್ರವಾಸಿಗರು ಹುಚ್ಚು ಸಾಹಸ ನಡೆಸಿದ್ದಾರೆ. ಈ ವೇಳೆ ಜಲಪಾತದ ಮಧ್ಯದಲ್ಲಿ ಸಿಲುಕಿದ್ದ ಐವರು ಪ್ರವಾಸಿಗರನ್ನು ಸ್ಥಳೀಯರು ಹಗ್ಗ ಕಟ್ಟಿ ರಕ್ಷಣೆ ಮಾಡಿದ್ದಾರೆ.
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ಖಂಡಿಸಿ ಬಿಜೆಪಿಯು ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ್ದ ಜಾಹೀರಾತು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಖಂಡನೆ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ…
ಬೆಂಗಳೂರು : UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು KEA ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ. ಅಂಕ ದಾಖಲಿಸಿದವರಿಗೆ ಮೇ 29ರ ನಂತರ #SpotRank ನೀಡಲಾಗುವುದು. ಹಾಗಾಗಿ UGCET-25 ಫಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳಿಗೆ ತಮ್ಮ ಅರ್ಹತಾ ಪರೀಕ್ಷೆಯ ಅಂಕಗಳನ್ನು ದಾಖಲಿಸಲು ಈ ಕೆಳಗಿನ ಲಿಂಕ್ ಅನ್ನು ಒತ್ತಿ. http://cetonline.karnataka.gov.in/ugcetmarksentr%E2%80%A6 https://twitter.com/KEA_karnataka/status/1926867515415613901?t=3caQdEp8-jVjOeYzwHjybw&s=19
ಬೆಂಗಳೂರು : ರಾಜಕೀಯ ಇದೀಗ ಕೊರೊನಾ ರೂಪಾಂತರೀಯ ಹೊಸ ತಳಿ ಎಂಟ್ರಿ ಕೊಟ್ಟಿದ್ದು ಈಗಾಗಲೇ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದೆ. ಇದೀಗ ಶಾಲಾ ಮಕ್ಕಳಿಗೆ ಕೂಡ ಆರೋಗ್ಯ ಇಲಾಖೆ ಇಂದು ಸಂಜೆ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಆರೋಗ್ಯ ಇಲಾಖೆ ಇಂದು ಸಂಜೆ ಗೈಡ್ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆರೋಗ್ಯ ಇಲಾಖೆ ಪ್ರಕಟಿಸುವ ಮಾರ್ಗಸೂಚಿಯಲ್ಲಿ ಪ್ರಮುಖವಾಗಿ, ಮಾಸ್ಕ್ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಸೂಚನೆ ನೀಡಲಾಗುತ್ತದೆ. ಶಿಕ್ಷಕರು ಹಾಗೂ ಸಿಬ್ಬಂದಿಗಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುತ್ತದೆ. ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಜ್ವರದ ಲಕ್ಷಣ ಕಂಡು ಬಂದರೆ ಮಕ್ಕಳಿಗೆ ರಜೆ ನೀಡುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಹಾಗಾಗಿ ಇಂದು ಶಾಲಾ ಮಕ್ಕಳಿಗೆ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಮಾಸ್ಕ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಗೈಡ್ ಲೈನ್ಸ್ ನಲ್ಲಿ ಸೂಚನೆ…
ಬೆಂಗಳೂರು : ಇದೀಗ ರಾಜ್ಯಕ್ಕೆ ಕೋರೊನಾ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಬೆಂಗಳೂರಿನಲ್ಲಿ ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 71 ಕ್ಕೆ ಏರಿಕೆಯಾಗಿದೆ. ಅದರಲ್ಲೂ ಬೆಂಗಳೂರಿನ ಮಹದೇವಪುರ ವಲಯ ಕೊರೋನಾದ ಹಾಟ್ ಸ್ಪಾಟ್ ಎಂದು ಹೇಳಲಾಗಿದ್ದು ಏಕೆಂದರೆ ಅಲ್ಲಿಯೇ ಅತಿ ಹೆಚ್ಚು ಕೇಸ್ ಗಳು ಪಾಸಿಟಿವ್ ವರದಿ ಬಂದಿವೆ. ಬೆಂಗಳೂರಿನಲ್ಲಿ 71ಕ್ಕೆ ಏರಿಕೆಯಾದ ಕೊರೊನ ಸೋಂಕಿತರ ಸಂಖ್ಯೆ ಮಹಾದೇವಪುರ ವಲಯ ಕೊರೋನ ಹಾಟ್ ಸ್ಪಾಟ್ ಆಗಿದ್ದು ಮಹದೇವಪುರ ಬೆಂಗಳೂರು ದಕ್ಷಿಣದಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ. ಇದೀಗ ಬೆಂಗಳೂರಿನಲ್ಲಿ ಕರೋನ ಆರ್ಭಟ ಮುಂದುವರೆದಿದೆ. ಯಾವ್ಯಾವ ವಲಯದಲ್ಲಿ ಎಷ್ಟು ಕೇಸ್? ಬೊಮ್ಮನಹಳ್ಳಿಯಲ್ಲಿ 7, ಬೆಂಗಳೂರು ಕೇಂದ್ರ 5, ಯಲಹಂಕ 4, ದಾಸರಹಳ್ಳಿಯಲ್ಲಿ 1 ಆರ್ ಆರ್ ನಗರ 1, ಮಾದೇವಪುರದಲ್ಲಿ 16, ಬೆಂಗಳೂರು ದಕ್ಷಿಣ 14, ಬೆಂಗಳೂರು ಪೂರ್ವ 13, ಬೆಂಗಳೂರು ಪಶ್ಚಿಮ 10 ಪ್ರಕರಣಗಳು ಬೆಳಗೆಗೆ ಬಂದಿವೆ.