Author: kannadanewsnow05

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಮಳೆಗಾಲದ ವೇಳೆ ಪ್ರತಿ ವಲಯದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು. ಮಳೆಗಾಲದ ವೇಳೆ ರಾಜ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜಕಾಲುವೆ ವಿಭಾಗದಿಂದ ನಿರಂತರವಾಗಿ ಹೂಳು ತೆಗದು ಸ್ವಚ್ಛತೆ ಕಾಪಾಡುವ ಕೆಲಸ ಮಾಡಬೇಕು. ಇನ್ನು ಆರ್‌.ಸಿ.ಸಿ ತಡೆಗೋಡೆ ನಿರ್ಮಾಣ ಮಾಡದ ರಾಜಕಾಲುವೆಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸದರು. ನಗರದಲ್ಲಿ 210 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ ಈಗಾಗಲೇ 166 ಕಡೆ ಸಮಸ್ಯೆಯನ್ನು ಬಗೆಹರಿಸಲಾಗಿದ್ದು, ವಲಯ ಆಯುಕ್ತರು ಅವುಗಳಿಗೆ ದೃಡೀಕರಣ ಮಾಡಿ ನೀಡಬೇಕು. ಇನ್ನು ಬಾಕಿಯಿರುವ 44 ಸ್ಥಳಗಳಲ್ಲಿ ಕೂಡಲೇ ತಾತ್ಕಾಲಿಕ ಕ್ರಮ…

Read More

ಮಂಡ್ಯ : ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಡ್ಯ ಸಂಚಾರಿ ಠಾಣೆಯ ಮೂವರು ASI ಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹೌದು ಇಂದು ಮಂಡ್ಯದಲ್ಲಿ ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಇದೀಗ ಈ ಕೇಸ್ ಗೆ ಸಂಬಂಧಿಸಿದಂತೆ ಸಂಚಾರಿ ಠಾಣೆಯ ಮೂರು ASI ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಎಎಸ್ಐಗಳಾದ ಜಯರಾಮ್ ನಾಗರಾಜ್ ಮತ್ತು ಗುರುದೇವ್ ಅಮಾನತುಗೊಳಿಸಲಾಗಿದೆ  ಎಂದು ಮಂಡ್ಯ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡೆ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ? ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು…

Read More

ಉತ್ತರಕನ್ನಡ : ರಾಜ್ಯದಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಕಾಲು ಜಾರಿಬಿದ್ದು ಕಾಳಿ ನದಿಗೆ ಬಿದ್ದು ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸುಂಕೇರಿ ಗ್ರಾಮದಲ್ಲಿ ನಡೆದಿದೆ. ಕಾಳಿ ನದಿಯಲ್ಲಿ ನಾಪತ್ತೆಯಾದ ಯುವಕನನ್ನು ಸಂತೋಷ್ (35) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ ಸಂತೋಷ್ ಸುಂಕೇರಿ ಸೇತುವೆಯ ಬಳಿ ಕಾಲು ಜಾರಿ ಕಾಳಿ ನದಿಗೆ ಬಿದ್ದಿದ್ದ ಇದೀಗ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಹಾಗು ಸ್ಥಳೀಯರು ಯುವಕನಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ರಬ್ಬರ್ ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಗುತ್ತಿದೆ. ಘಟನೆ ಕುರಿತು ಕಾರವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾಗಲು ಮಗಳು ಮನೆ ಬಿಟ್ಟು ಹೋಗಿದಕ್ಕೆ ಒಂದೇ ಕುಟುಂಬದ ಮೂವರು ಸಾವಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ಬೂದನೂರು ಗ್ರಾಮದ ಮಹದೇವಸ್ವಾಮಿ, ಪತ್ನಿ ಮಂಜುಳಾ ಹಾಗೂ ಕಿರಿಯ ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಾದೇವಸ್ವಾಮಿ ಮತ್ತು ಮಂಜುಳಾ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳು. ಹಿರಿಯ ಮಗಳು ಅರ್ಪಿತಾ ಮೈಸೂರಿನಲ್ಲಿ ಕಾನೂನು ಪದವಿ ಓದುತ್ತಿದ್ದರೆ, ಎರಡನೇ ಮಗಳು ಹರ್ಷಿತಾ ಬಿಸಿಎ ಓದುತ್ತಿದ್ದಳು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮಾದೇವಸ್ವಾಮಿ ತಮ್ಮ ಸ್ವಗ್ರಾಮ ಬಿಟ್ಟು ಮೈಸೂರು ಜಿಲ್ಲೆಯ ಎಚ್.ಡಿ ಕೋಟೆಯಲ್ಲಿ ವಾಸವಿದ್ದರು. ಅಲ್ಲಿಯೇ ಸ್ವಂತ ಮನೆ ಕೂಡ ಖರೀದಿ ಮಾಡಿದ್ದರು. ನಾಲ್ಕು ಜನರ ಈ ಪುಟಾಣಿ ಸಂಸಾರದಲ್ಲಿ ಒಮ್ಮೆಲೆ ಬಿರುಗಾಳಿ ಎದ್ದಿದ್ದು, ಹಿರಿಯ ಮಗಳು ಅರ್ಪಿತಾ ಅನ್ಯ ಜಾತಿಯ ಹುಡುಗನನ್ನು ಪ್ರೀತಿಸಿ ಆತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಾಳೆ. ಇದರಿಂದ ಮರ್ಯಾದೆಗೆ ಹೆದರಿದ ತಂದೆ ಮಹಾದೇವಸ್ವಾಮಿ ಈ ಮದುವೆ ಬೇಡ ಎಂದು ನಿರಾಕರಿಸಿದ್ದಾರೆ.…

Read More

ಕಲಬುರ್ಗಿ : ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರಕ್ಕೆ ಅನುಮತಿ ನೀಡಲ್ಲ ಎಂದು ಕಲಬುರ್ಗಿಯಲ್ಲಿ ವೈದಿಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದರು. ಈ ಮೂಲಕ ಸರ್ಕಾರಿ ಆಸ್ಪತ್ರೆ ಸಮೀಪ ಜನೌಷಧಿ ಕೇಂದ್ರ ಸ್ಥಾಪನೆ ಕುರಿತಂತೆ ಸ್ಪಷ್ಟನೆ ನೀಡಿದರು. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧ ನೀಡುತ್ತಿದ್ದೇವೆ. ಮೆಡಿಕಲ್ ಶಾಪ್ ಇದ್ದರೆ ವೈದ್ಯರು ಅಲ್ಲಿಗೆ ಚೀಟಿ ಬರೆದುಕೊಡುತ್ತಾರೆ. ಅದನ್ನು ತಪ್ಪಿಸಲು ಜನ ಔಷಧಿ ಕೇಂದ್ರಕ್ಕೆ ನಾವು ಅನುಮತಿ ನೀಡುತ್ತಿಲ್ಲ. ಸರ್ಕಾರದ ಉಚಿತ ಔಷಧಿ ಬಡವರಿಗೆ ಸಿಗಲಿ ಎನ್ನುವುದು ನಮ್ಮ ಉದ್ದೇಶ ಎಂದು ಕಲಬುರ್ಗಿಯಲ್ಲಿ ವೈದಿಕ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದರು.

Read More

ವಿಜಯನಗರ : ಇತ್ತೀಚಿಗೆ ದಿನಗಳಲ್ಲಿ ಹೃದಯಾಘಾತಕ್ಕೆ ಯುವಜನತೆ ಬಲಿಯಾಗುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ಅಷ್ಟೆ ರಾಜ್ಯದಲ್ಲಿ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ವಿಜಯನಗರದಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಹೃದಯಾಘಾತದಿಂದ ಸವಣ್ಣಪ್ಪಿದ್ದಾರೆ. ಮೃತರನ್ನು ಪಟ್ಟಣ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಆರ್.ದಾದಾ ಸಾಹೇಬ್‌ (51) ಎಂದು ತಿಳಿದುಬಂದಿದೆ.ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್‌, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

Read More

ಹಾಸನ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಇದೀಗ ಚಿಕ್ಕಮಗಳೂರಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಭಾರಿ ಮಳೆಯಿಂದ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೇಮಾವತಿ ನದಿಗೆ ಉರುಳಿ ಬಿದ್ದಿದೆ. ಹೌದು ಚಕಮಕ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಈ ಒಂದು ದುರಂತ ಸಂಭವಿಸಿದೆ. 1 ಗಂಟೆಯ ಅಂತರದಲ್ಲಿ ನಿಯಂತ್ರಣ ತಪ್ಪಿ 2 ವಾಹನಗಳು ಪಲ್ಟಿಯಾಗಿವೆ. ಘಟನೆಯಲ್ಲಿ ಅದೃಷ್ಟವಶಾತ್ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳೀಯರು ಹಗ್ಗ ಕಟ್ಟಿ ನದಿಗೆ ಇಳಿದು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಇದೀಗ ಕೊರೊನಾ ಆರ್ಭಟ ಮತ್ತೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ನಿನ್ನೆ ಕರೋನ ಸೊಂಕಿಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು 40 ಕೊರೊನ ಪ್ರಕರಣಗಳು ಸಹಕ್ರಿಯವಾಗಿದ್ದು, ಕೊರೊನ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ, ಈ ಹಿನ್ನೆಲೆಯಲ್ಲಿ ಕಠಿಣ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೊನ ತಡೆಗೆ ಎಲ್ಲಾ ರೀತಿಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೊರೊನ ತಡೆಗೆ ಕಠಿಣ ಜಾರಿ ಮಾಡುವುದರ ಕುರಿತು ಸುಳಿವು ನೀಡಲಾಗಿದ್ದು, ಈ ಸಂಬಂಧ ಚರ್ಚೆ ಮಾಡಲಾಗಿದೆ. ಯಾವ ಕ್ರಮ ತೆಗೆದುಕೊಳ್ಳುವುದಕ್ಕೂ ಹಿಂದೆಟು ಬೇಡ ಏನೇನು ಕ್ರಮ ತೆಗೆದುಕೊಳ್ಳಬೇಕು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೊರೊನ ತಡೆಗೆ ಎಲ್ಲ ರೀತಿಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿಸಿದರು. ಅಲ್ಲದೇ ಬೆಂಗಳೂರಿನಲ್ಲಿ ನಿನ್ನೆ ಒಬ್ಬರು ಮೃತಪಟ್ಟಿದ್ದಾರೆ. ಕೊರೋನಗೆ 84 ವರ್ಷದ ವ್ಯಕ್ತಿ…

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಭದ್ರಾ ಡ್ಯಾಮ್ ವೀಕ್ಷಣೆಗೆ ಬಂದಿದ್ದ ವೇಳೆ ತಾಯಿಯ ಕಣ್ಣೆದುರಲ್ಲೇ ಯುವಕನೊಬ್ಬ ಭದ್ರಾ ಹಿನ್ನಿರಿನಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಾಯಿಯ ಕಣ್ಣೆದುರೇ ಶಿವಮೊಗ್ಗ ಮೂಲದ ಗೌತಮ್ (19) ಎಂಬ ಯುವಕ ಸಾವನ್ನಪ್ಪಿದ್ದಾನೆ.ಮಾರಿ ಹಬ್ಬ ನಂತರ ಭದ್ರಾ ಹಿನ್ನಿರು ವೀಕ್ಷಣೆಗೆ ಎಂದು ಬಂದಿದ್ದರು.ತಾಯಿಯ ಜೊತೆ ಗೌತಮ್ ಬಂದಿದ್ದ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಶವ ಹೊರಗಡೆ ತೆಗೆದಿದ್ದಾರೆ. ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಇಂದು ಇಡೀ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂದು ಜನರು ದೃಢನಿಶ್ಚಯ ಮಾಡಿದ್ದಾರೆ.ನಾವು ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂದು ಮನ್ ಕಿ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಭಾರತೀಯನನ್ನೂ ಹೆಮ್ಮೆಪಡುವಂತೆ ಮಾಡಿದೆ.ಇಂದು ಪ್ರತಿಯೊಬ್ಬ ಭಾರತೀಯನೂ ಭಯೋತ್ಪಾದನೆಯನ್ನು ಕೊನೆಗೊಳಿಸಬೇಕು ಎಂಬ ಸಂಕಲ್ಪವನ್ನು ಹೊಂದಿದ್ದಾನೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ನಮ್ಮ ಸೇನೆಯು ಪ್ರದರ್ಶಿಸಿದ ಶೌರ್ಯವು ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದೆ ಎಂದರು. ನಮ್ಮ ಸೈನಿಕರು ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದರು, ಅದು ಅವರ ಅದಮ್ಯ ಧೈರ್ಯ ಮತ್ತು ಇದು ಭಾರತದಲ್ಲಿ ತಯಾರಿಸಿದ ಶಸ್ತ್ರಾಸ್ತ್ರಗಳು, ಉಪಕರಣಗಳು ಮತ್ತು ತಂತ್ರಜ್ಞಾನದ ಶಕ್ತಿಯನ್ನು ಒಳಗೊಂಡಿತ್ತು. ಇದು ‘ಸ್ವಾವಲಂಬಿ ಭಾರತ’ದ ಸಂಕಲ್ಪವನ್ನೂ ಹೊಂದಿತ್ತು. ನಮ್ಮ ಎಂಜಿನಿಯರ್‌ಗಳು, ನಮ್ಮ ತಂತ್ರಜ್ಞರು, ಪ್ರತಿಯೊಬ್ಬರ ಬೆವರು ಈ ವಿಜಯದಲ್ಲಿ ಸೇರಿದೆ. ಆಪರೇಷನ್ ಸಿಂಧೂರ್ ಪ್ರಪಂಚದಾದ್ಯಂತ ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಆಪರೇಷನ್…

Read More