Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪಟ್ಟಾಭಿಷೇಕದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಕಸರತ್ತು ತೀವ್ರಗೊಂಡಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎನ್ನುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಡಳಿತ ಪಕ್ಷದಲ್ಲಿ ಸಚಿವ ಸ್ಥಾನಕ್ಕಾಗಿ ಒಳಗೊಳಗೇ ಭಾರಿ ಪೈಪೋಟಿ ಶುರುವಾಗಿದೆ. ಈಗಾಗಲೇ ಪಕ್ಷದಲ್ಲಿರುವ ಹಿರಿಯ ನಾಯಕರು ಹಾಗೂ ಮೂರರಿಂದ ನಾಲ್ಕು ಬಾರಿ ಸತತವಾಗಿ ಗೆದ್ದು ಬಂದಿರುವ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ತಮಗೆ ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲೇಬೇಕು ಎಂದು ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹೇರುತ್ತಿದ್ದು, ರಾಜಧಾನಿ ಬೆಂಗಳೂರಿನಿಂದ ದೆಹಲಿಯವರೆಗೂ ಲಾಬಿ ತಲುಪಿದೆ. ವಿಧಾನಸಭೆ ಶಾಸಕರಷ್ಟೇ ಅಲ್ಲದೆ, ಇದೀಗ ವಿಧಾನ ಪರಿಷತ್ ಸದಸ್ಯರು (ಎಂಎಲ್‌ಸಿ) ಸಹ ತಮಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪರಿಷತ್ ಸದಸ್ಯರ ಕೋಟಾದಡಿ ಕನಿಷ್ಠ…

Read More

ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗೂ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ವಿರುದ್ಧ ಗಂಭೀರ ಸ್ವರೂಪದ ಪಕ್ಷ ವಿರೋಧಿ ಚಟುವಟಿಕೆಯ ಆರೋಪ ಕೇಳಿಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಯನ್ನೇ ಸೋಲಿಸಲು ಆಂತರಿಕವಾಗಿ ಕೆಲಸ ಮಾಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿವೆ. ಈ ಆರೋಪಗಳಿಗೆ ಪುಷ್ಟಿ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ಕ್ಲಿಪ್‌ ಒಂದು ಭಾರಿ ವೈರಲ್ ಆಗುತ್ತಿದೆ. ‘ಕಾಕ್ರೋಚ್ ಪಾರ್ಟಿ’ ಹೆಸರಿನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಈ ಆಡಿಯೋ ಸಂಭಾಷಣೆ ಬಿಡುಗಡೆಯಾಗಿದ್ದು, ಇದರಲ್ಲಿ ಕೇಳಿಬರುವ ಧ್ವನಿ ಸಚಿವ ಜಮೀರ್ ಅಹಮದ್ ಅವರದ್ದೇ ಎನ್ನಲಾಗಿದೆ. ದಾವಣಗೆರೆಯ ಸ್ಥಳೀಯ ಕಾಂಗ್ರೆಸ್ ಮುಖಂಡ ಹಾಗೂ ಕೆಎಂಡಿಸಿ ನಿರ್ದೇಶಕ ಮೊಹಮ್ಮದ್ ಸಿರಾಜ್ ಎಂಬುವವರ ಜೊತೆ ಜಮೀರ್ ನಡೆಸಿರುವ ಮಾತುಕತೆ ಇದಾಗಿದೆ ಎಂದು ಬಿಂಬಿಸಲಾಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನು ಬಿಟ್ಟು, ಪಕ್ಷೇತರ ಹಾಗೂ ಎಸ್‌ಡಿಪಿಐ (SDPI) ಅಭ್ಯರ್ಥಿಗಳಿಗೆ ಬೆಂಬಲ…

Read More

ಬೆಂಗಳೂರು: ದೇಶದಲ್ಲಿ ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದರಗಳ ನಿರಂತರ ಹೆಚ್ಚಳದಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ವಿವಿಧ ಉದ್ಯಮಗಳಲ್ಲಿ ಬಳಸಲಾಗುವ ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರಕಟಿಸಿರುವ ಈ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ ಎಂದು ತಿಳಿದುಬಂದಿದೆ. ದೇಶದ ಪ್ರಮುಖ ಮಹಾನಗರಗಳಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ ಗಣನೀಯವಾಗಿ ಏರಿಕೆಯಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಇದರ ಬಿಸಿ ಜೋರಾಗಿಯೇ ತಟ್ಟಿದೆ. ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ 46 ರೂ.ಗಳಷ್ಟು ಹೆಚ್ಚಳವಾಗಿದ್ದು, ಇದರೊಂದಿಗೆ ಪ್ರತಿ ಸಿಲಿಂಡರ್ ಬೆಲೆ ಭೀಕರ 3,198 ರೂ.ಗಳಿಗೆ ತಲುಪಿದೆ. ಈ ದಿಢೀರ್ ದರ ಹೆಚ್ಚಳವು ನಗರದ ಹೋಟೆಲ್ ಮಾಲೀಕರು ಹಾಗೂ ಸಣ್ಣ ಉದ್ಯಮಿಗಳಲ್ಲಿ ಆತಂಕ ಮೂಡಿಸಿದೆ. ರಾಜಧಾನಿ ದೆಹಲಿಯಲ್ಲೂ ಸಹ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ದೆಹಲಿಯಲ್ಲಿ 19…

Read More

ಬೆಂಗಳೂರು: ದೇಶದ ರಾಜಕಾರಣದಲ್ಲಿ ಅಪರೂಪದ ಮುತ್ಸದ್ದಿ, ‘ಮಣ್ಣಿನ ಮಗ’ ಎಂದೇ ಖ್ಯಾತರಾದ ಹರದನಹಳ್ಳಿ ದೊಡ್ಡಗೌಡ ದೇವೇಗೌಡರು ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 2026ರ ಜೂನ್ 1ಕ್ಕೆ (ಸೋಮವಾರ) ಸರಿಯಾಗಿ 30 ವರ್ಷಗಳು ಪೂರೈಸಿವೆ. ಹಾಸನ ಜಿಲ್ಲೆಯ ಹರದನಹಳ್ಳಿಯ ಸಾಮಾನ್ಯ ಕೃಷಿಕ ಕುಟುಂಬದಲ್ಲಿ ಜನಿಸಿ, ಹಳ್ಳಿಗಾಡಿನ ರಾಜಕಾರಣದಿಂದ ದಿಲ್ಲಿಯ ಗದ್ದುಗೆಯವರೆಗೆ ಬೆಳೆದ ಅವರ ರಾಜಕೀಯ ಯಾನ ಭಾರತೀಯ ಪ್ರಜಾಪ್ರಭುತ್ವದ ವಿಶಿಷ್ಟ ಅಧ್ಯಾಯಗಳಲ್ಲಿ ಒಂದಾಗಿದೆ. ರಾಷ್ಟ್ರ ರಾಜಕಾರಣದ ತೀವ್ರ ಅನಿಶ್ಚಿತತೆಯ ಕಾಲ: ಅದು 1996ರ ಲೋಕಸಭಾ ಚುನಾವಣೆಯ ಸಮಯ. ದೇಶದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ತೀವ್ರ ಅನಿಶ್ಚಿತತೆಯ ವಾತಾವರಣ ನಿರ್ಮಾಣವಾಗಿತ್ತು. ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಾರದೆ ಅತಂತ್ರ ಪರಿಸ್ಥಿತಿ ಎದುರಾಗಿತ್ತು. ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಪರವಾಗಿ ಅಟಲ್ ಬಿಹಾರಿ ವಾಜಪೇಯಿ ಅವರು ಸರ್ಕಾರ ರಚಿಸಿದರಾದರೂ, ಬಹುಮತ ಸಾಬೀತುಪಡಿಸಲಾಗದೆ ಕೇವಲ 13 ದಿನಗಳಲ್ಲಿ ಆ ಸರ್ಕಾರ ಪತನಗೊಂಡಿತು. ದೇಶ ಮತ್ತೊಮ್ಮೆ ರಾಜಕೀಯ ಬಿಕ್ಕಟ್ಟಿಗೆ ಸಿಲುಕಿದ ಸಂದರ್ಭವದು. ಅನಿರೀಕ್ಷಿತವಾಗಿ ಒಲಿದ…

Read More

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇಲೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಈ ಒಂದು ಚರ್ಚೆಯ ವೇಳೆ ರಾಹುಲ್ ಗಾಂಧಿ ನಿಮ್ಮ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿ ಎಂದು ಆಫರ್ ನೀಡಿದ್ದರು ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ನಿಮಗಾಗದಿದ್ದರೆ ನಿಮ್ಮ ಪತ್ನಿ ಅವರನ್ನು ರಾಜ್ಯಸಭೆಗೆ ಕಳುಹಿಸಿ ಅಂತ ರಾಹುಲ್ ಗಾಂಧಿ ಹೇಳಿದ್ದರು. ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ತೀವ್ರ ಒತ್ತಡ ಹೇರಿದ್ದರು.ರಾಷ್ಟ್ರೀಯ ರಾಜಕಾರಣಕ್ಕೆ ಆಗಮಿಸುವಂತೆ ರಾಹುಲ್ ಗಾಂಧಿ ಹೇರಿದ್ದರು. ಆದರೆ ರಾಜ್ಯಸಭೆ ಸ್ಥಾನ ನಿರಾಕರಿಸಿದ ಸಿದ್ದರಾಮಯ್ಯ ರಾಜ್ಯ ರಾಜಕಾರಣದಲ್ಲಿ ಇರುವುದಾಗಿ ಸ್ಪಷ್ಟಪಡಿಸಿದ್ದರು. ಪತ್ನಿಗೂ ರಾಜ್ಯಸಭಾ ಸ್ಥಾನ ನೀಡುವುದಕ್ಕೆ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಈ ಹೊರ ಜಗತ್ತಿಗೆ ನನ್ನ ಪತ್ನಿ ಬಂದಿಲ್ಲ ಹೀಗಾಗಿ ನನ್ನ ಪತ್ನಿ ರಾಜಕೀಯಕ್ಕೆ ಬರುವ ಮಾತೇ ಇಲ್ಲ.ನನ್ನ ಪತ್ನಿ ರಾಜ್ಯ ಸಭೆಯ ಪ್ರವೇಶದ ಮಾತೆ ಇಲ್ಲ ಎಂದು ಕಡ್ಡಿ ಮುರಿದಂತೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಆಫರ್ ತಿರಸ್ಕರಿಸಿದ್ದರು. ಹಿಂದುಳಿದ ಸಮಾಜದವರಿಗೆ…

Read More

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಆರು ಜನರ ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ವಿಜಯಪುರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣ ನಡೆದು ಕೆಲವೇ ದಿನಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ಇದುವರೆಗೆ ಒಟ್ಟು 12 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಇಂದು ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಜಮೀನಿನಲ್ಲಿ ನಡೆದಿದ್ದ ರಕ್ತಪಾತ: ಮೇ 29 ರಂದು ಗೋವಿಂದಪುರ ಗ್ರಾಮದ ಜಮೀನೊಂದರಲ್ಲಿ ಈ ಭೀಕರ ಹತ್ಯಾಕಾಂಡ ನಡೆದಿತ್ತು. ಜಮೀನಿನ ವಿಷಯ ಅಥವಾ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು ಎನ್ನಲಾಗಿದೆ. ದುಷ್ಕರ್ಮಿಗಳು ಡಬಲ್ ಬ್ಯಾರೆಲ್ ಗನ್‌ನಿಂದ ಗುಂಡು ಹಾರಿಸಿ ಹಾಗೂ ಮಚ್ಚು, ಲಾಂಗುಗಳಿಂದ ಮನಬಂದಂತೆ ಕೊಚ್ಚಿ ಆರು ಜನರನ್ನು ಅತ್ಯಂತ ಕ್ರೂರವಾಗಿ ಸ್ಥಳದಲ್ಲೇ ಹತ್ಯೆ ಮಾಡಿದ್ದರು. ಒಂದೇ ಕುಟುಂಬದ ಐವರು ಸೇರಿ ಆರು ಜನ ಬಲಿ: ಚಡಚಣ ಪಟ್ಟಣದ ಪ್ರತಿಷ್ಠಿತ ಕುಟುಂಬವೊಂದರ ಐವರು ಸದಸ್ಯರು ಸೇರಿದಂತೆ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣ್ಯರ ಸಂಚಾರಕ್ಕಾಗಿ ಸಾಮಾನ್ಯ ಜನರನ್ನು ಗಂಟೆಗಟ್ಟಲೆ ರಸ್ತೆಯಲ್ಲಿ ಕಾಯಿಸುವ ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ವಿರುದ್ಧ ಸಾರ್ವಜನಿಕರ ಆಕ್ರೋಶ ಮತ್ತೊಮ್ಮೆ ಸ್ಫೋಟಗೊಂಡಿದೆ. ರಾಜ್ಯಪಾಲರ ಸಂಚಾರಕ್ಕಾಗಿ ಪೊಲೀಸರು ರಸ್ತೆ ಬಂದ್ ಮಾಡಿದ್ದನ್ನು ವಿರೋಧಿಸಿ ವ್ಯಕ್ತಿಯೊಬ್ಬರು ರಡುಗಾಲದಲ್ಲೇ ರಸ್ತೆ ಮಧ್ಯೆ ಕುಳಿತು ಧರಣಿ ನಡೆಸಿದ ಹೈಡ್ರಾಮಾ ನಗರದ ಹೆಚ್.ಎ.ಎಲ್ ಹಳೇ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಪತ್ನಿ ಗರ್ಭಿಣಿ, ಹೆರಿಗೆ ಆಸ್ಪತ್ರೆಗೆ ಹೋಗಬೇಕಿತ್ತು: ತಮ್ಮ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯಬೇಕಾಗಿದ್ದ ಪತಿಯೊಬ್ಬರು ಈ ಟ್ರಾಫಿಕ್ ಜ್ಯಾಮ್‌ನಲ್ಲಿ ಸಿಲುಕಿಕೊಂಡಿದ್ದರು. ಸುಮಾರು 30 ನಿಮಿಷಗಳಿಗೂ ಹೆಚ್ಚು ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರಿಂದ ಆತಂಕಗೊಂಡ ವ್ಯಕ್ತಿ, ಕಾರಿನಿಂದ ಕೆಳಗಿಳಿದು ಪೊಲೀಸರ ನಡೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ನನ್ನ ಪತ್ನಿ ಗರ್ಭಿಣಿಯಾಗಿದ್ದಾಳೆ, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು. ಇಂತಹ ತುರ್ತು ಪರಿಸ್ಥಿತಿಯಲ್ಲೂ ರಸ್ತೆ ಬಂದ್ ಮಾಡಿ ಜನರನ್ನು ಸಾಯಿಸುತ್ತೀರಾ?” ಎಂದು ಕಿಡಿಕಾರಿದ್ದಾರೆ. ರಸ್ತೆ ಮಧ್ಯೆ ಕುಳಿತು ಧರಣಿ: ಪೊಲೀಸರು ರಸ್ತೆ ಬಿಡದಿದ್ದಾಗ ತೀವ್ರ ಆಕ್ರೋಶಗೊಂಡ ವ್ಯಕ್ತಿ, ಗವರ್ನರ್…

Read More

ಅಹಮದಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಪರೂಪದ ಹಾಗೂ ಜಗತ್ತೇ ಹುಬ್ಬೇರಿಸುವಂತಹ ಅದ್ಭುತ ದಾಖಲೆಯೊಂದಕ್ಕೆ ಪ್ರಸಕ್ತ ಟೂರ್ನಿ ಸಾಕ್ಷಿಯಾಗಿದೆ. ಕೇವಲ 15 ವರ್ಷದ ಬಿಹಾರದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕುವ ಮೂಲಕ ‘ಆರೆಂಜ್ ಕ್ಯಾಪ್’ ಮುಡಿಗೇರಿಸಿಕೊಂಡ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ಹಾಗೂ ಕಠಿಣ ಟಿ20 ಲೀಗ್‌ನಲ್ಲಿ ಹಿರಿಯ ಹಾಗೂ ಅನುಭವಿ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ವೈಭವ್ ಈ ಸಾಧನೆ ಮಾಡಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್‌ನಲ್ಲಿ ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ, ಕ್ರಿಕೆಟ್ ಪಂಡಿತರೇ ಮೂಗಿನ ಮೇಲೆ ಬೆರಳಿಡುವಂತೆ ಮಾಡಿದರು. ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಕಣಕ್ಕಿಳಿದ ಇವರು, ಆಡಿದ 16 ಪಂದ್ಯಗಳಿಂದ ಒಟ್ಟು 776 ರನ್ ಸಿಡಿಸಿ ಈ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಇವರ ಬ್ಯಾಟಿಂಗ್ ವೈಖರಿ ಹಾಗೂ ಪಕ್ವತೆ ತಂಡಕ್ಕೆ ಹಲವು…

Read More

ಶ್ರೀ ಸಾಕ್ಷಿ ಪಂಚ ಎರಡನೇ ಬಾರಿಗೆ ಗುರು ಅತಿಚಾರಯೋಗ ಆಗಲಿದೆ. ಅತಿಚಾರ ಯೋಗ ಎಂದರೆ ಗುರುಗ್ರಹದ ಚಲನೆ ಅತಿ ವೇಗವಾಗಿ ಇರುತ್ತದೆ. ಶ್ರೀ ಪರಾಭವನಾಮ ಸಂವತ್ಸರದಲ್ಲಿ ಗುರು ಗ್ರಹದ ಮಿಥುನ, ಕರ್ಕ ಹಾಗೂ ಸಿಂಹ ರಾಶಿಗಳ ಗೋಚಾರವಿದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. 1) ಪ್ರಥಮ ಗೋಚಾರ- ಸಂವತ್ಸರದ ಆರಂಭದಲ್ಲಿ ಗುರು ಮಿಥುನ ರಾಶಿಯಲ್ಲಿದ್ದು ಶ್ರೀಪರಾಭವನಾಮ ಸಂವತ್ಸರ ಅಧಿಕ ಜೇಷ್ಠಮಾಸ ಕೃಷ್ಣಪಕ್ಷ ಪ್ರತಿಪದ ಉಪರಿ ದ್ವಿತಿಯಾ, ಸೋಮವಾರ, ದಿನಾಂಕ 01-06-2026ರಂದು 49ಘಟಿ, 50ಪಳ ಅಂದರೆ ಮಧ್ಯರಾತ್ರಿ 01:51ಕ್ಕೆ ಗುರು ಕರ್ಕರಾಶಿ ಪ್ರವೇಶಿಸುವನು. 2) ದ್ವಿತಿಯ ಗೋಚಾರ- ಅತಿಚಾರ ಯೋಗದ ಫಲವಾಗಿ ಕೇವಲ ಐದು ತಿಂಗಳಲ್ಲಿ ಅಂದರೆ ಅಶ್ವಿನಮಾಸ ಕೃಷ್ಣಪಕ್ಷ ಷಷ್ಠಿ, ಶನಿವಾರ, ದಿನಾಂಕ 31-10-2026ರಂದು ಮಧ್ಯಾಹ್ನ…

Read More

ಬೆಂಗಳೂರು: “ನಾನು ಪಕ್ಷದ ಒಬ್ಬ ಸಾಮಾನ್ಯ ಮತ್ತು ನಿಷ್ಠಾವಂತ ಕಾರ್ಯಕರ್ತ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗುತ್ತಿರುವುದು ನಾನಲ್ಲ, ಬದಲಿಗೆ ರಾಜ್ಯದ ಪ್ರತಿಯೊಬ್ಬ ಕಾರ್ಯಕರ್ತರು ಸಿಎಂ ಆಗುತ್ತಿದ್ದಾರೆ,” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾವುಕರಾಗಿ ನುಡಿದಿದ್ದಾರೆ. ನಗರದ ಕುಮಾರಕೃಪ ಅತಿಥಿಗೃಹದ ಬಳಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ನಡೆಸುತ್ತಿರುವ ಭರ್ಜರಿ ಸಂಭ್ರಮಾಚರಣೆಯ ಬಗ್ಗೆ ತಮ್ಮ ಸಂತಸವನ್ನು ಹಂಚಿಕೊಂಡರು. ಪಕ್ಷದ ಯಶಸ್ಸು ಪ್ರತಿಯೊಬ್ಬ ಕಾರ್ಯಕರ್ತನ ಶ್ರಮಕ್ಕೆ ಸಂದ ಜಯ ಎಂದು ಅವರು ಈ ವೇಳೆ ಬಣ್ಣಿಸಿದರು. ತಮ್ಮ ರಾಜಕೀಯ ಯಾತನೆಯ ದಿನಗಳನ್ನು ಹಾಗೂ ಪಕ್ಷದೊಂದಿಗಿನ ದೀರ್ಘಾವಧಿಯ ಒಡನಾಟವನ್ನು ನೆನೆದ ಡಿ.ಕೆ.ಶಿವಕುಮಾರ್, “ನಾನು 1979ರಿಂದ ಪಕ್ಷದಲ್ಲಿ ಒಬ್ಬ ಸಾಮಾನ್ಯ ವಿದ್ಯಾರ್ಥಿ ನಾಯಕನಾಗಿ ನನ್ನ ರಾಜಕೀಯ ಜೀವನವನ್ನು ಆರಂಭಿಸಿದೆ. ಅಂದಿನಿಂದ ಇಂದಿನವರೆಗೂ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನ್ನ ಈ ಸುದೀರ್ಘ ಪಯಣವನ್ನು ಹತ್ತಿರದಿಂದ ನೋಡಿರುವ ಕಾರ್ಯಕರ್ತರು, ಇಂದು ನನ್ನ ಏಳಿಗೆಯನ್ನು ತಮ್ಮದೇ ಗೆಲುವೆಂದು ಭಾವಿಸಿ ಸಂಭ್ರಮಿಸುತ್ತಿದ್ದಾರೆ,” ಎಂದು ತಿಳಿಸಿದರು.…

Read More