Author: kannadanewsnow05

ಉಡುಪಿ : ಉಡುಪಿಯಲ್ಲಿ ವಾಹನಗಳ ದಟ್ಟಣೆ ನಡುವೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ್ದಾನೆ. ಉಡುಪಿ ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಈ ಒಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಸ್ಥಳೀಯ ಪೊಲೀಸರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ಒಂದು ತಪ್ಪಿದೆ. ಗದಗ ಮೂಲದ ವ್ಯಕ್ತಿ ಒಬ್ಬ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ರಸ್ತೆಯಲ್ಲಿ ಯುವಕನ ಹುಚ್ಚಾಟಕ್ಕೆ ಕೆಲ ಹೊತ್ತು ಭಯದ ವಾತಾವರಣ ನಿರ್ಮಾಣವಾಗಿತ್ತು. ಪೆಟ್ರೋಲ್ ಬಾಟಲ್ ಅನ್ನು ವ್ಯಕ್ತಿ ಕೈಯಲ್ಲಿ ಹಿಡಿದುಕೊಂಡು ಬಂದಿದ್ದ ಹಲವು ಬಾರಿ ಪೆಟ್ರೋಲ್ ಬಾಟಲಿಯನ್ನು ಸಂಚಾರಿ ಪೊಲೀಸರು ಕಸಿದುಕೊಂಡಿದ್ದರು. ಮತ್ತೆ ಬಾಟಲಿಯಲ್ಲಿ ಪೆಟ್ರೋಲ್ ತಂದು ಯುವಕ ಮೈ ಮೇಲೆ ಸುರಿದುಕೊಂಡಿದ್ದಾನೆ. ಕುಟುಂಬ ಕಲಹದಿಂದ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ. ಯುವಕನನ್ನು ಉಡುಪಿ ನಗರ ಪೊಲೀಸ್ರು ರಕ್ಷಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಇದೀಗ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಯುವಕನನ್ನು ಗದಗ…

Read More

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಾಜನೀಶ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ, ಸ್ನೇಹಮಯಿ ಆಡಿಯೋ ಬಾಂಬ್ ಗೆ ಸ್ಪೋಟಕವಾದ ಟ್ವಿಸ್ಟ್ ಸಿಕ್ಕಿದೆ. ಸ್ನೇಹಮಯಿ ಕೃಷ್ಣ ಸಿಲುಕಿಸಲು ಇಬ್ಬರು ಸೇರಿ ಬಲೆ ಹೆಣದಿದ್ದು, ಇದೀಗ ಆ ಒಂದು ಬಲೆಗೆ ಮುಡಾ ಮಾಜಿ ಆಯುಕ್ತ ನಟೇಶ್ ಹಾಗೂ ವಿನೋದ್ ಬಲೆಗೆ ಬಿದ್ದಿದ್ದಾರೆ. ಹೌದು ನಟೇಶ್ ಹಾಗೂ ಚಿನ್ನದ ಉದ್ಯಮಿ ವಿನೋದ್ ಸೇರಿ ಸ್ನೇಹಮಯಿ ಕೃಷ್ಣ ಅವರನ್ನು ಕಾನೂನು ಕುಣಿಕೆಯಲ್ಲಿ ಸಿಲುಕಿಸಲು ಪ್ಲಾನ್ ಮಾಡಿದ್ದರು. ಆದರೆ ಇದೀಗ ಸಿಸಿಬಿಗೆ ವಿನೋದ್ ಮತ್ತು ನಟೇಶ್ ಜೊತೆಗಿರುವ ಫೋಟೋ ಲಭ್ಯವಾಗಿದ್ದು, ಸ್ನೇಹಮಯಿ ಕೃಷ್ಣ ಅವರನ್ನು ಟ್ರ್ಯಾಕ್ ಮಾಡಲು ನಟೇಶ್ ಮತ್ತು ವಿನೋದ್ ಇಬ್ಬರು ಪ್ಲಾನ್ ಮಾಡಿದ್ದರು ಎನ್ನುವುದು ಸಿಸಿಬಿ ತನಿಖೆಯಲ್ಲಿ ಬದಲಾಗಿದೆ. ನಟೇಶ್ ಮಾತನಾಡಿದ್ದು ಎನ್ನಲದ ಆಡಿಯೋವನ್ನು ವಿನೋದ್ ಕೊಟ್ಟಿದ್ದ. ಈ ಮೂಲಕ ಸ್ನೇಹಮಯಿ ಕೃಷ್ಣ ಅವರ ವಿಶ್ವಾಸ ಗಳಿಸಿದ್ದ. ವಿನೋದ್ ಸಿಎಸ್ ಗೆ ನಟೇಶ್ ಲಂಚ ಕೊಟ್ಟ ಬಗ್ಗೆಯೂ ವಿನೋದ್ ಹೇಳಿದ್ದ.…

Read More

ಹಾಸನ : ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಚಲಾಯಸುತ್ತಿದ್ದ ಬೈಕ್‌ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್‌ನಲ್ಲಿದ್ದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಯುವತಿಯರಿಬ್ಬರು ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪ್ರಿಯಾ ಮತ್ತು ಸ್ವಾತಿ ಹೆಲ್ಮೆಟ್ ಧರಿಸದೆ ಬುಲೆಟ್ ರೈಡ್ ಮಾಡುತ್ತಿದ್ದರು. ಯುವತಿಯರಿಬ್ಬರು ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪವಿಶಾಚಿಕ ಕೃತ್ಯ ನಡೆದಿದ್ದು ಮಾದಕ ಮಾತ್ರೆಗಳನ್ನು ನೀಡಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತರೆ, ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು 19 ವರ್ಷದ ವಿದ್ಯಾರ್ಥಿನಿ ಬೆಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದ್ದು ಈ ಕುರಿತು ಬೆಂಗಳೂರಿನ ಅಮೃತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬನ್ನೇರುಘಟ್ಟ ಖಾಸಗಿ ಕಾಲೇಜು ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಪಶ್ಚಿಮ ಬಂಗಾಳ ಮೂಲದ ಡಿಕ್ಸಿನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಡಿಕ್ಸಿನ್ ಮತ್ತು ಮತ್ತೋರ್ವ ಗೆಳೆಯ ನಿಖಿಲ್ ಎಂಬಾತನೊಂದಿಗೆ ಸಂತ್ರಸ್ತೆ ವಿಲ್ಲಾಗೆ ತೆರಳಿದ್ದಳು. ಈ ವೇಳೆ ಯುವತಿಗೆ ನಶೆ ಮತ್ತು ಮಾದಕ ಮಾತ್ರೆಗಳನ್ನು ನೀಡಿ ಡಿಕ್ಸಿನ್ ಮತ್ತು ನಿಖಿಲ್ ಅತ್ಯಾಚಾರಗೈದು ಹಲ್ಲೆ ನಡೆಸಿದ್ದಾರೆ. ಪ್ರೀತಿಯ ಹೆಸರಲ್ಲಿ ಇಬ್ಬರಿಂದ ಅತ್ಯಾಚಾರ ನಡೆದಿದಿ ಎಂಬ ಗಂಭೀರ ಆರೋಪವನ್ನು ಯುವತಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಬೆಚ್ಚಿಬಿಳಿಸುವ ಘಟನೆ ಒಂದು ನಡೆದಿದ್ದು, ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹಾನಿಕಾರಕ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ನಗರದ ಎಂಸಿಸಿ ‘ಬಿ’ ಬ್ಲಾಕ್‌ನಲ್ಲಿರುವ ಹಾಸ್ಟೆಲ್‌ನಲ್ಲಿ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚರ್ಮರೋಗ ವಿಭಾಗದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಮಹಾರಾಷ್ಟ್ರದ ಸಿದ್ದಾರ್ಥ್ ತ್ರಯಂಬಕೆ (30) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ರಾತ್ರಿಯಿಂದ ವಿದ್ಯಾರ್ಥಿ ಕೊಠಡಿಯ ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡು ಕೊಠಡಿಯ ಬಾಗಿಲು ತೆರೆದು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಬಡಾವಣೆ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕುಟುಂಬಸ್ಥರ ದೂರಿನನ್ವಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಡ್ಯ : ಮಂಡ್ಯದಲ್ಲಿ ಭೀಕರ ಮತ ಅಪಘಾತ ಸಂಭವಿಸಿದ್ದು ಬ್ರೇಕ್ ಆಗಿ ರೈಲಿಂಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ ಅದೃಷ್ಟ ಬಸ್ನಲ್ಲಿ ಇದ್ದಂತಹ 60 ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಕ್ಕಿ ಹೆಬ್ಬಾಳು ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. KSRTC ಬಸ್ ಕೆ.ಆರ್ ಪೇಟೆಯಿಂದ ಬೇರಿಯ ಕಡೆಗೆ ತೆರಳುತ್ತಿತ್ತು. ಡಿಕ್ಕಿ ರಬಸಕ್ಕೆ ಕೆಎಸ್ಆರ್ಟಿಸಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಕಮ್ ಗೊಂಡಿದೆ. ಕೆಆರ್ ಪೇಟೆ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮದುವೆ ಹೆಸರಿನಲ್ಲಿ ಕ್ರಿಪ್ಟೋದಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಎಸಗಲಾಗಿದೆ. ಯುವತಿಯೊಬ್ಬಳು ಯುವಕನಿಗೆ ಮದುವೆ ಹೆಸರಲ್ಲಿ 21.22 ಲಕ್ಷ ವಂಚಿಸಿದ್ದಾಳೆ. ಬೆಂಗಳೂರಿನ ಟಿ ದಾಸರಹಳ್ಳಿ ಮೂಲದ ಯುವಕನಿಗೆ ಯುವತಿ ವಂಚನೆ ಎಸಗಿದ್ದಾಳೆ. ಮ್ಯಾಟ್ರಿಮೋನಿಯಲ್ಲಿ ವಧು ಹುಡುಕುತ್ತಿದ್ದ ಸಿ.ಎಸ್ ರಾಕೇಶ್ ಎಂಬ ಯುವಕನಿಗೆ ಶಿರಿಷ ಎಂಬಾಕೆ ಪರಿಚಯವಾಗಿದ್ದಳು. ಇಬ್ಬರು ಪರಸ್ಪರ ಸ್ನೇಹಿತರಾಗಿ ಫೋನ್ ಕಾಂಟಾಕ್ಟ್ ನಲ್ಲಿದ್ದರು. ನಂತರ ಮದುವೆಯಾಗೋಣ ಎಂದು ಯುವಕನಿಗೆ ಶಿರೀಶ ಆಮಿಷ ಒಡ್ಡಿದ್ದಾಳೆ. ಕ್ರಿಪ್ಟೋದಲ್ಲಿ ಟ್ರೇಡಿಂಗ್ ಮಾಡಲು ಹೇಳಿದ್ದಳು. ವೆಬ್ಸೈಟ್ ಲಿಂಕ್ ಹಾಗೂ ಬ್ಯಾಂಕ್ ಖಾತೆ ನೀಡಿ ಹಣ ಹೂಡಿಕೆ ಮಾಡಲು ಹೇಳಿದ್ದಾಳೆ. ಕೆಲ ದಿನಗಳ ಕಾಲ ಲಾಭದ ಅಂಶ ತೋರಿಸಿದ್ದ ಶಿರೀಶ ನಂತರ ಹಣ ಡ್ರಾ ಮಾಡಲು ಕಮಿಷನ್ ಕಟ್ಟಬೇಕು ಎಂದು ಸೂಚನೆ ನೀಡಿದ್ದಾಳೆ. ಹಂತ ಹಂತವಾಗಿ 21. 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚನೆ ಎಸಗಿದ್ದಾಳೆ. ಬಳಿಕ ಹೂಡಿಕೆ ಮಾಡಿದ ಹಣ ನೀಡದೆ ಲಾಭವು ನೀಡದೆ ವಂಚನೆ ಎಸಗಿದ್ದಾಳೆ. ಮೋಸ ಹೋದ ವಿಚಾರ ತಿಳಿದು…

Read More

ಬೆಂಗಳೂರು : ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧ ಆರೋಪ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನಲ್ಲಿ ಮತ್ತೊಂದು ಎಫ್‌ಐಆ‌ರ್ ದಾಖಲಾಗಿದೆ. ಇದಕ್ಕೆ ಕಾರಣ ಅಂದರೆ ಪವಿತ್ರಾ ಎಂಬುವರ ಮನೆಗೆ ಬೆದರಿಕೆ ಪತ್ರ ಕಳುಹಿಸಿದ ಆರೋಪದಡಿ ಬಸವೇಶ್ವರ ನಗರ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಮೈಲಾರಪ್ಪ ಎಂಬವರ ಮೇಲೆ ನೀಡಿರುವ ದೂರು ವಾಪಸ್ ತೆಗೆದುಕೊಳ್ಳಲು ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕಳೆದೆರಡು ತಿಂಗಳ ಹಿಂದೆ ದೂರು ಕೊಟ್ಟಿದ್ದು, ಎನ್ ಸಿಆ‌ರ್ ಕೂಡ ದಾಖಲಾಗಿತ್ತು. ಇದೀಗ ಕೋರ್ಟ್ ಅನುಮತಿ ಪಡೆದು ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪೊಲೀಸರು ಬಹುದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ಜೈಲಿನಲ್ಲಿ ಕೈದಿಗಳು ಬಳಸುತ್ತಿದ್ದ ವಸ್ತುಗಳೆಲ್ಲ ಸೀಜ್ ಮಾಡಿದ್ದಾರೆ. ಫೈವ್ ಸ್ಟಾರ್ ಹೋಟೆಲ್ ಅಂತೆ ಕೈದಿಗಳು ಜೈಲನ್ನು ದುರುಪಯೋಗ ಪಡಿಸುತ್ತಿದ್ದರು. ಪಾತ್ರೆ, ಅಡುಗೆ ಸಾಮಾಗ್ರಿಗಳು, ಟೇಬಲ್, ಚೇರ್ ಎಲ್ಲವನ್ನು ವಶಕ್ಕೆ ಪಡೆದಿದ್ದಾರೆ. ಖಡಕ್ ಅಧಿಕಾರಿಗಳ ನೇಮಕದಿಂದ ಜೈಲಿನ ಚಿತ್ರಣವೇ ಇದೀಗ ಬದಲಾಗಿದೆ.ಐಪಿಎಸ್ ಅಧಿಕಾರಿಯಾಗಿ ಅಂಶುಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹ ಡಿಜಿಪಿಯಾಗಿ ಅಂಶುಕುಮಾರ್ ನೇಮಕವಾದ ಬೆನ್ನಲ್ಲೆ, ಇದೀಗ ಪರಪ್ಪನ ಅಗ್ರಹಾರ ಜೈಲಿನ ಚಿತ್ರಣವೇ ಬದಲಾಗಿದೆ. ಜೈಲಿನಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು, ಇದೀಗ ಖಡಕ್ ಅಧಿಕಾರಿ ನೇಮಕದಿಂದ ಐಷಾರಾಮಿ ವಸ್ತುಗಳನ್ನೆಲ್ಲ ಇದೀಗ ವಶಕ್ಕೆ ಪಡೆಯಲಾಗಿದೆ.

Read More

ತುಮಕೂರು : ತುಮಕೂರಿನಲ್ಲಿ ಎಡೆಯೂರು ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಗಂಡು ಶಿಶು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಎಡೆಯೂರು ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದ ಬಳಿ ನವಜಾತ ಶಿಶು ಪತ್ತೆಯಾಗಿದೆ. ಬ್ಯಾಗ್ ನಲ್ಲಿ ಪೋಷಕರು ನವಜಾತ ಗಂಡು ಶಿಶು ಇಟ್ಟು ಪರಾರಿಯಾಗಿದ್ದಾರೆ. ಸಿದ್ದಲಿಂಗೇಶ್ವರ ದೇಗುಲದ ಸಮೀಪ ರಸ್ತೆ ಪಕ್ಕದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸಾರ್ವಜನಿಕರು ಸ್ಥಳಕ್ಕೆ ಹೋಗಿ ಬ್ಯಾಕ್ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ನವಜಾತ ಗಂಡು ಶಿಶು ಇರುವುದು ಪತ್ತೆಯಾಗಿದ್ದು, ತಕ್ಷಣ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Read More